ಸಾಲದ ವಿವರ ನೀಡಿದ ಶಿಕ್ಷಕ ಅಮಾನತು, ಕಾಂಗ್ರೆಸ್ ಆಡಳಿತದಲ್ಲಿ ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ: ಅಶ್ವತ್ಥನಾರಾಯಣ್

ಕಾಂಗ್ರೆಸ್ ಸರಕಾರದಲ್ಲಿ ಯಾರೂ ಸಹ ಸರಕಾರ ಟೀಕಿಸುವ ಹಾಗಿಲ್ಲ, ವ್ಯಕ್ತಿ ಸ್ವಾತಂತ್ರ್ಯ ಮತ್ತು ವಾಕ್ ಸ್ವಾತಂತ್ರ್ಯ ಇಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ್ ಆರೋಪಿಸಿದ್ದಾರೆ.

ಸಾಲದ ವಿವರ ನೀಡಿದ ಶಿಕ್ಷಕ ಅಮಾನತು, ಕಾಂಗ್ರೆಸ್ ಆಡಳಿತದಲ್ಲಿ ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ: ಅಶ್ವತ್ಥನಾರಾಯಣ್
ಸಾಲದ ವಿವರ ನೀಡಿದ ಶಿಕ್ಷಕ ಅಮಾನತು, ಕಾಂಗ್ರೆಸ್ ಆಡಳಿತದಲ್ಲಿ ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಎಂದ ಬಿಜೆಪಿ ವಕ್ತಾರ ಅಶ್ವತ್ಥನಾರಾಯಣ್
Follow us
Rakesh Nayak Manchi
|

Updated on: May 22, 2023 | 7:04 PM

ಬೆಂಗಳೂರು: ಕಾಂಗ್ರೆಸ್ (Congress) ಸರಕಾರದಲ್ಲಿ ಯಾರೂ ಸಹ ಸರಕಾರ ಟೀಕಿಸುವ ಹಾಗಿಲ್ಲ ಎಂಬಂಥ ಪರಿಸ್ಥಿತಿ ಇದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ್ (Ashwathnarayan) ಅವರು ಆರೋಪಿಸಿದ್ದಾರೆ. ವಿಧಾನಸೌಧದ ಆವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರದಲ್ಲಿ ಯಾರೂ ಸಹ ಸರಕಾರ ಟೀಕಿಸುವ ಹಾಗಿಲ್ಲ. ವ್ಯಕ್ತಿ ಸ್ವಾತಂತ್ರ್ಯ ಮತ್ತು ವಾಕ್ ಸ್ವಾತಂತ್ರ್ಯ ಇಲ್ಲ ಎಂಬಂತಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಇಂದು ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಸರಕಾರಿ ಶಾಲೆಯ ಒಬ್ಬ ಶಿಕ್ಷಕ ರಾಜ್ಯದಲ್ಲಿ ಯಾವ್ಯಾವ ಮುಖ್ಯಮಂತ್ರಿ ಅವಧಿಯಲ್ಲಿ ಎಷ್ಟು ಸಾಲ ಮಾಡಿದ್ದಾರೆ ಎಂಬ ವಿವರವನ್ನು ತನ್ನ ಫೇಸ್‍ಬುಕ್ ಖಾತೆಯಲ್ಲಿ ಪ್ರಕಟಿಸಿದ್ದಾರೆ. ಎಸ್.ಎಂ.ಕೃಷ್ಣ ಅವರ ಅವಧಿಯಲ್ಲಿ ಮಾಡಿದ್ದ ಸಾಲ, ಜೆ.ಎಚ್.ಪಟೇಲ್, ಸಿದ್ದರಾಮಯ್ಯ, ಯಡಿಯೂರಪ್ಪ ಮತ್ತಿತರ ಸಿಎಂಗಳ ಅವಧಿಯಲ್ಲಿ ರಾಜ್ಯದ ಮೇಲೆ ಮಾಡಲಾದ ಸಾಲದ ವಿವರ ನೀಡಿದ್ದಾರೆ. ಇದನ್ನು ಬಿಇಒ ಜಯಪ್ಪರ ಗಮನಕ್ಕೆ ತಂದ ಸರಕಾರವು ಶಿಕ್ಷಕ ಶಾಂತಮೂರ್ತಿಯವರನ್ನು ಅಮಾನತು ಮಾಡಿಸಿದೆ ಎಂದು ಟೀಕಿಸಿದರು.

ಇದನ್ನೂ ಓದಿ: ರಾಹುಲ್ ಗಾಂಧಿ ಕೆಟ್ಟ ಶಕುನ, ದೇಶದಲ್ಲಿ ಐತಿಹಾಸಿಕ ಕ್ಷಣ ಬಂದಾಗಲೆಲ್ಲಾ ಅವರು ಎದೆ ಹೊಡೆದುಕೊಳ್ಳುತ್ತಾರೆ: ಬಿಜೆಪಿ ವಕ್ತಾರ

ಈ ಹಿಂದೆ ಮನೆಯಲ್ಲಿ ವಿದ್ಯುತ್ ಇಲ್ಲ ಎಂದು ಕೇಳಿದ್ದ ಸುಳ್ಯದ ಗ್ರಾಹಕರೊಬ್ಬರ ಮೇಲೆ ಹಲ್ಲೆ ಮಾಡಿ ಪೊಲೀಸ್ ಠಾಣೆಗೆ ದೂರು ನೀಡಿ ಅವರನ್ನು ಒಳಗಡೆ ಹಾಕಿಸಿದ್ದರು. ಅಂದಿನ ವಿದ್ಯುತ್ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಅವರ ಸೂಚನೆಯಂತೆ ಇದು ಆಗಿತ್ತು ಎಂದು ಆಕ್ಷೇಪಿಸಿದರು. ಅಲ್ಲದೆ, ಹಿಂದೆ ಇಂದಿರಾ ಗಾಂಧಿಯವರ ಆಡಳಿತದಲ್ಲೂ ಪತ್ರಕರ್ತರು ಸೇರಿದಂತೆ ಎಲ್ಲರ ಮೇಲೆ ದೌರ್ಜನ್ಯಗಳು, ದಬ್ಬಾಳಿಕೆಗಳು ನಡೆದಿದ್ದವು. ಇದು ಸರಿ ಇಲ್ಲ. ಈ ಪ್ರವೃತ್ತಿಯನ್ನು ಬಿಜೆಪಿ ಖಂಡಿಸುತ್ತದೆ ಎಂದು ಹೇಳಿದರು.

10 ಕೆಜಿ ಅಕ್ಕಿ ಬಗ್ಗೆ ಸಿದ್ದರಾಮಯ್ಯರನ್ನು ಪ್ರಶ್ನಿಸಿದ ಅಶ್ವತ್ಥನಾರಾಯಣ

ಪ್ರಮಾಣವಚನ ಸ್ವೀಕಾರದ ಬಳಿಕ ಗ್ಯಾರಂಟಿಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿ ಅನುಷ್ಠಾನಕ್ಕೆ ತರುವುದಾಗಿ ಸಿದ್ದರಾಮಯ್ಯ ಹೇಳಿದ್ದರು. ಅನ್ನ ಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ಕೊಡುವುದಾಗಿ ತಿಳಿಸಿದ್ದೀರಿ. ಕೇಂದ್ರ ಈಗಾಗಲೇ 5 ಕೆಜಿ ಅಕ್ಕಿ ಕೊಡುತ್ತಿದೆ. ಬಸವರಾಜ ಬೊಮ್ಮಾಯಿ ಅವರು ಒಂದು ಕೆಜಿ ಅಕ್ಕಿ ಸೇರಿಸಿ 6 ಕೆಜಿ ಕೊಡುತ್ತಿದ್ದರು. 6 ಕೆಜಿ ಜೊತೆ ನಿಮ್ಮ 10 ಕೆಜಿ ಸೇರಿಸಿ 16 ಕೆಜಿ ಕೊಡುತ್ತೀರಾ ಅಥವಾ ಮೋದಿಯವರ 5 ಕೆಜಿಗೆ 5 ಕೆಜಿ ಸೇರಿಸಿ 10 ಕೆಜಿ ಕೊಡುತ್ತೀರಾ ಎಂದು ಸ್ಪಷ್ಟಪಡಿಸುವಂತೆ ಸೂಚಿಸಿದರು.

ಕೇಂದ್ರದ 5 ಕೆಜಿಗೆ 5 ಕೆಜಿ ಸೇರಿಸಿದರೆ ನಿಮ್ಮದು 5 ಕೆಜಿ ಆಗಲಿದೆ. 10 ಕೆಜಿ ಆಗುವುದಿಲ್ಲ. ಮಾತು ಕೊಟ್ಟಂತೆ ನಡೆಯುವುದಾದರೆ 15 ಕೆಜಿ ಕೊಡಬೇಕು. ಈ ಕುರಿತು ಬಿಜೆಪಿ ನಿಮ್ಮಿಂದ ತಕ್ಷಣ ಸ್ಪಷ್ಟನೆ ಬಯಸುತ್ತದೆ. ಜನರನ್ನು ದಾರಿತಪ್ಪಿಸುವ ಕೆಲಸವಾಗುತ್ತಿದೆ, ಈ ರೀತಿ ಮಾಡಬೇಡಿ ಎಂದು ಹೇಳಿದರು.

ಈ ಬಾರಿ ಮಾವು ಫಸಲು ಕಡಿಮೆ ಇತ್ತು. ಆಲಿಕಲ್ಲು ಮಳೆ ಮತ್ತು ಅಕಾಲಿಕ ಮಳೆಯಿಂದ ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಮಾವು ಬೆಳೆಗಾರರಿಗೆ ಅಪಾರ ನಷ್ಟವಾಗಿದೆ. ಕಂಪೆನಿಗಳು ಪ್ರತಿ ಟನ್‍ಗೆ 45 ಸಾವಿರದಿಂದ 55 ಸಾವಿರ ಬೆಲೆ ನೀಡಿ ಖರೀದಿ ಮಾಡುತ್ತಿದ್ದವು. ಸರ್ಕಾರ ಎಚ್ಚತ್ತುಕೊಂಡು ಅಧಿಕಾರಿಗಳಿಂದ ಪರಿಶೀಲನೆ ಮಾಡಿಸಿ ಬೆಳೆ ಪರಿಹಾರ ಬಿಡುಗಡೆ ಮಾಡಬೇಕು ಎಂದು ಅಶ್ವತ್ಥನಾರಾಯಣ ಆಗ್ರಹಿಸಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ