ಮುಸ್ಲಿಂ ಅಭ್ಯರ್ಥಿಗೆ ಬಿಜೆಪಿ ಟಿಕೆಟ್ ನೀಡಲು ಕರ್ನಾಟಕದ ಪ್ರಭಾವಿ ಮಠಗಳಿಂದ ಶಿಫಾರಸು

ಕರಾವಳಿ, ಮಧ್ಯ ಮತ್ತು ಉತ್ತರ ಕರ್ನಾಟಕದ ಪ್ರಭಾವಿ ಮಠಾಧೀಶರು ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ.

ಮುಸ್ಲಿಂ ಅಭ್ಯರ್ಥಿಗೆ ಬಿಜೆಪಿ ಟಿಕೆಟ್ ನೀಡಲು ಕರ್ನಾಟಕದ ಪ್ರಭಾವಿ ಮಠಗಳಿಂದ ಶಿಫಾರಸು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jul 26, 2022 | 3:06 PM

ದೆಹಲಿ: ಮುಂಬರುವ ಕರ್ನಾಟಕ ವಿಧಾನಪರಿಷತ್ ಚುನಾವಣೆಗೆ ಮುಸ್ಲಿಂ ಅಭ್ಯರ್ಥಿಯೊಬ್ಬರಿಗೆ ಟಿಕೆಟ್ ನೀಡುವಂತೆ ಕರ್ನಾಟಕ ಮೂರು ಪ್ರಭಾವಿ ಮಠಗಳು ಬಿಜೆಪಿ ಹೈಕಮಾಂಡ್​ಗೆ ಪತ್ರ ಬರೆದಿವೆ. ಸಿಎಂ ಇಬ್ರಾಹಿಂ ರಾಜೀನಾಮೆಯಿಂದ ತೆರವಾಗಿರುವ ಸ್ಥಾನವನ್ನು ಇತ್ತೀಚೆಗಷ್ಟೇ ಕಾಂಗ್ರೆಸ್‌ನಿಂದ ಬಿಜೆಪಿಗೆ ಸೇರ್ಪಡೆಯಾಗಿರುವ ದಾವಣಗೆರೆ ಮೂಲದ ಡಾ.ಸಿ.ಆರ್.ನಸೀರ್ ಅಹ್ಮದ್ ಅವರಿಗೆ ಟಿಕೆಟ್ ನೀಡಬೇಕು ಎಂದು ಕರಾವಳಿ, ಮಧ್ಯ ಮತ್ತು ಉತ್ತರ ಕರ್ನಾಟಕದ ಪ್ರಭಾವಿ ಮಠಾಧೀಶರು ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಜೆ.ಪಿ.ನಡ್ಡಾ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರಿಗೆ ಪತ್ರ ಬರೆದಿದ್ದಾರೆ. ಡಾ.ಸಿ.ಆರ್.ನಸೀರ್ ಅಹ್ಮದ್ ಅವರು ಪ್ರಸ್ತುತ ರಾಜ್ಯ ಯೋಜನಾ ಆಯೋಗದ ಸದಸ್ಯರಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.

ಹಿರಿಯರಲ್ಲಿ ತಳಮಳ ಮೂಡಿಸಿದ ಯಡಿಯೂರಪ್ಪ ನಿರ್ಧಾರ

ಶಿಕಾರಿಪುರ ಕ್ಷೇತ್ರದಲ್ಲಿ (Shikaripura Constituency) ಮುಂದಿನ ಚುನಾವಣೆಯಲ್ಲಿ ತಮ್ಮ ಪುತ್ರ ಬಿ.ವೈ.ವಿಜಯೇಂದ್ರ (BY Vijayendra) ಸ್ಪರ್ಧಿಸುತ್ತಾರೆ ಎನ್ನುವ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ (BS Yediyurappa) ಅವರ ಹೇಳಿಕೆಯು ಹಲವು ಹಿರಿಯ ನಾಯಕರಿಗೆ ಟಿಕೆಟ್ ಕೈತಪ್ಪುವ ಭೀತಿ ಉಂಟು ಮಾಡಿದೆ. 2023ರಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ವಯಸ್ಸಿನ ಕಾರಣದಿಂದ ಟಿಕೆಟ್ ಸಿಗುವುದು ಅನುಮಾನ ಎಂಬ ಮಾತುಗಳು ಕೇಳಿಬರುತ್ತಿದ್ದ ಹಲವು ನಾಯಕರು ಇದೀಗ ನಿರಾಶೆಗೆ ಜಾರಿದ್ದಾರೆ.

ಯಡಿಯೂರಪ್ಪ ಅವರಿಗೆ ವಯಸ್ಸು ಪರಿಗಣಿಸದೆ 2023ರಲ್ಲಿ ಟಿಕೆಟ್‌ ನೀಡಿದ್ದರೆ ಅದನ್ನೇ ಪ್ರಸ್ತಾಪಿಸಿ ತಾವೂ ಟಿಕೆಟ್​ ಗಿಟ್ಟಿಸಿಕೊಳ್ಳಬಹುದು ಎಂದು ಹಲವರು ಆಸೆ ಇರಿಸಿಕೊಂಡಿದ್ದರು. ಒಂದು ವೇಳೆ ಬಿ.ಎಸ್.ಯಡಿಯೂರಪ್ಪ ಸ್ಪರ್ಧಿಸದಿದ್ದರೆ ತಮಗೂ ಟಿಕೆಟ್ ಸಿಗುವುದು ಅನುಮಾನ ಎಂದು ಹಲವರು ಸ್ವತಃ ವಿಶ್ಲೇಷಿಸಿಕೊಳ್ಳುತ್ತಿದ್ದಾರೆ. ಯಡಿಯೂರಪ್ಪ ಅವರ ನಿರ್ಧಾರದಿಂದ 2023ಕ್ಕೆ 75 ವರ್ಷ ದಾಟುವ ಹಿರಿಯ ನಾಯಕರಿಗೆ ಟಿಕೆಟ್ ಸಿಗುವ ಸಾಧ್ಯತೆಯ ಬಗ್ಗೆ ಆತಂಕ ಉಂಟಾಗಿದೆ.

Published On - 11:46 am, Tue, 26 July 22

ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್