ಕಟುಕರ ರೀತಿ ಮಾತನಾಡುವುದು ಸರಿಯಲ್ಲ: ಸಚಿವ ವೆಂಕಟೇಶ್​ಗೆ ಆರಗ ಜ್ಞಾನೇಂದ್ರ ತಿರುಗೇಟು

ಗೋವು ಕಡಿಯುವುದರಲ್ಲಿ ಸಾರ್ಥಕತೆ ಇಲ್ಲ. ಬದಲಿಗೆ ಗೋವು ಸಾಕುವುದರಲ್ಲಿ ಸಾರ್ಥಕತೆ ಇದೆ ಎಂದು ಪಶು ಸಂಗೋಪನ ಇಲಾಖೆ ಸಚಿವ ವೆಂಕಟೇಶ್ ಹೇಳಿಕೆಗೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿರುಗೇಟು ನೀಡಿದ್ದಾರೆ.

ಕಟುಕರ ರೀತಿ ಮಾತನಾಡುವುದು ಸರಿಯಲ್ಲ: ಸಚಿವ ವೆಂಕಟೇಶ್​ಗೆ ಆರಗ ಜ್ಞಾನೇಂದ್ರ ತಿರುಗೇಟು
ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ
Follow us
|

Updated on: Jun 05, 2023 | 5:36 PM

ಶಿವಮೊಗ್ಗ: ಗೋವು ಕಡಿಯುವುದರಲ್ಲಿ ಸಾರ್ಥಕತೆ ಇಲ್ಲ. ಬದಲಿಗೆ ಗೋವು ಸಾಕುವುದರಲ್ಲಿ ಸಾರ್ಥಕತೆ ಇದೆ ಎಂದು ಪಶು ಸಂಗೋಪನ ಇಲಾಖೆ ಸಚಿವ ವೆಂಕಟೇಶ್ ಹೇಳಿಕೆಗೆ ಮಾಜಿ ಗೃಹ ಸಚಿವ ಮತ್ತು ತೀರ್ಥಹಳ್ಳಿ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ (Araga Jnanendra) ತಿರುಗೇಟು ನೀಡಿದರು. ನಗರದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಪಶುಸಂಗೋಪನಾ ಸಚಿವರು ಕಟುಕರ ರೀತಿ ಮಾತನಾಡುವುದು ಸರಿಯಲ್ಲ, ಮೊದಲು ಅದನ್ನು ನಿಲ್ಲಿಸುವಂತೆ ಎಚ್ಚರಿಕೆ ನೀಡಿದರು. ಯಾರನ್ನು ತೃಪ್ತಿಪಡಿಸಬೇಕೆಂದು ಈ ರೀತಿ ಹೇಳಿಕೆ ನೀಡಿದ್ದಾರೆ ಗೊತ್ತಿಲ್ಲ. ಇದು ಎಲ್ಲರಿಗೂ ಗೊತ್ತಿರುವ ವಿಷಯ. ಇದು ತುಂಬಾ ದಿನ ನಡೆಯುವುದಿಲ್ಲ ಎಂದು ಕಿಡಿಕಾರಿದ್ದಾರೆ.

ಎಲ್ಲರೂ ತಾಯಿಯ ಎದೆಹಾಲು ನಿಲ್ಲಿಸಿದ ಬಳಿಕ ಹಸುವಿನ ಹಾಲನ್ನು ಕುಡಿಯುತ್ತಾರೆ. ಹೀಗಾಗಿಯೇ ಗೋ ಅನ್ನು ತಾಯಿ ಎಂದು ಕರೆಯುತ್ತಾರೆ. ಇತ್ತೀಚೆಗೆ ನಾವು ಸಾವಯವ ಕೃಷಿಯತ್ತ ವಾಲುತ್ತಿದ್ದೇವೆ. ಇದಕ್ಕಾಗಿ ಜಾನುವಾರುಗಳು ಬೇಕೇ ಬೇಕು. ಇಂದು ಜಾನುವಾರು ಗೊಬ್ಬರಕ್ಕೆ ಬೆಲೆ ಎಷ್ಟಾಗಿದೆ ಎಂಬುದನ್ನು ಎಲ್ಲರೂ ಯೋಚಿಸಬೇಕಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Anti-Cow Slaughter Act :ಕರ್ನಾಟಕದಲ್ಲಿ ಶುರುವಾಯ್ತು ಗೋವು ಗಲಾಟೆ: ಬಿಜೆಪಿ-ಕಾಂಗ್ರೆಸ್‌ ಮಧ್ಯೆ ‘ಗೋಹತ್ಯೆ’ ಸಮರ

ಪಶು ಸಂಗೋಪನೆ ‌ಸಚಿವ ಮೆಂಟಲ್ ಎಂದ ಪ್ರಭು ಚೌಹಾನ್

ಬೀದರ್​ನಲ್ಲಿ ಮಾಜಿ ಪಶು ಸಂಗೋಪನೆ ಸಚಿವ ಪ್ರಭು ಚೌಹಾನ್ ಹೇಳಿಕೆ ನೀಡಿದ್ದು, ಕಾಂಗ್ರೆಸ್​ನವರಿಗೆ ಕಾನೂನಿನ ಬಗ್ಗೆ ಅರಿವಿಲ್ಲ. ಅವರೆ 1964 ರಲ್ಲಿ ಗೋ ಹತ್ಯೆ ಕಾನೂನು ಜಾರಿಗೆ ತಂದಿದ್ದಾರೆ. ಕಾಂಗ್ರೆಸ್​ನವರು ಜಾರಿ ಮಾಡಿದ ಕಾನೂನನ್ನ ನಾವು ಕಠಿಣ ಮಾಡಿದ್ದೇವೆ. ಕಾಂಗ್ರೆಸ್​ನ ಪಶು ಸಂಗೋಪನೆ ‌ಸಚಿವರು ಮೆಂಟಲ್ ಆಗಿದ್ದಾರೆ. ಅವರ ಖಾತೆ ಬದಲಾವಣೆ ಮಾಡಬೇಕು. ಇಲ್ಲಾ ಅವರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಸಿಎಂಗೆ ಪ್ರಭು‌ ಚೌಹಾನ್​ ಮನವಿ ಮಾಡಿದರು.

ಇದನ್ನೂ ಓದಿ: ನಾನು ಪ್ರಾಣಿಹತ್ಯೆ ನಿಷೇಧ ಪರ, ಆದ್ರೆ ಸಂಪುಟದಲ್ಲಿ ಮಾತಾಡಲ್ಲ: ರಾಮಲಿಂಗಾ ರೆಡ್ಡಿ

ಗೋ ಹತ್ಯೆ ಕಾನೂನು ರದ್ದಾದ್ರೆ ಉಗ್ರ ಹೋರಾಟ 

ಒಂದು‌ ಸಮುದಾಯಕ್ಕೆ ಖುಷಿ ಪಡಿಸಲು ಗೋ ಹತ್ಯೆ ಕಾನೂನು ನಿಷೇಧ ರದ್ದತಿ ಬಗ್ಗೆ ಮಾತಾನಾಡುತ್ತಿದ್ದಾರೆ. ಜನರು ಕಾಂಗ್ರೆಸ್​ ಪಕ್ಷಕ್ಕೆ ಆಶಿರ್ವಾದ ಮಾಡಿದ್ದಾರೆ. ಅಂಹಕಾರ ಬಿಟ್ಟು ಜನರ ಸೇವೆ ಮಾಡಿ. ಒಂದು ವೇಳೆ ಕಾಂಗ್ರೆಸ್​ ಗೋ ಹತ್ಯೆ ಕಾನೂನು ರದ್ದು ಮಾಡಿದರೆ ರಾಜ್ಯದಲ್ಲಿ ಉಗ್ರವಾದ ಹೋರಾಟ ಮಾಡುತ್ತೇವೆ. ತಾವೇ ಕಾನೂನು ಮಾಡಿದ್ದನ್ನ ಈಗ ಅವರೇ ರದ್ದು ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ ಇದು ಆಶ್ಚರ್ಯ ಸಂಗತಿ ಎಂದರು.

ಜನ ಸಾಮಾನ್ಯರು ಕೂಡ ಬೀದಿಗಿಳಿದು ಹೋರಾಟ ಮಾಡುತ್ತಾರೆ: ಬಿ.ವೈ ವಿಜಯೇಂದ್ರ 

ಮೈಸೂರಿನಲ್ಲಿ ಈ ಕುರಿತಾಗಿ ಶಾಸಕ ಬಿ.ವೈ ವಿಜಯೇಂದ್ರ ಹೇಳಿಕೆ ನೀಡಿದ್ದು, ಸಚಿವರ ಹೇಳಿಕೆಯನ್ನು ನೋಡಿದರೆ ದೇಶದ ಸಂಸ್ಕೃತಿ ಅರಿವು, ಕಾಳಜಿ ಇಲ್ಲದ ವ್ಯಕ್ತಿ. ಈ ರೀತಿಯ ಉಡಾಫೆ ಹೇಳಿಕೆಯನ್ನ ರಾಜ್ಯದ ಜನರು ನಿರೀಕ್ಷೆ ಮಾಡಿರಲಿಲ್ಲ. ಅನೇಕ ಸಚಿವರು ಗೆದ್ದಿರುವ ವಿಶ್ವಾಸದಲ್ಲಿ ಅನೇಕ ಹೇಳಿಕೆ ಕೊಡುತ್ತಿದ್ದಾರೆ. ರಾಜ್ಯದಲ್ಲಿ ಅಶಾಂತಿ ಸೃಷ್ಟಿಯಾಗುವ ರೀತಿ ನಡೆದುಕೊಳ್ಳುತ್ತಾರೆ. ನಮ್ಮ ಹಿಂದು ಸಂಸ್ಕೃತಿ ಪರಂಪರೆ ಗೊತ್ತಿದ್ದರೆ ಈ ರೀತಿ ಹೇಳಿಕೆ ಕೊಡುತ್ತಿರಲಿಲ್ಲ. ನಾಳೆಯಿಂದ ಬಿಜೆಪಿ ಜಿಲ್ಲಾ ಮಟ್ಟದಲ್ಲಿ ಹೋರಾಟ ನಡೆಸುತ್ತೇವೆ. ಜನ ಸಾಮಾನ್ಯರು ಕೂಡ ಬೀದಿಗಿಳಿದು ಹೋರಾಟ ಮಾಡುತ್ತಾರೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ