ಡಿಸಿಎಂ, ಮಾಜಿ ಸಿಎಂ ಗೌಪ್ಯ ಮಾತುಕತೆ: ಸಭೆಯಲ್ಲಿ ಜಗದೀಶ್ ಶೆಟ್ಟರ್​ಗೆ ಮಹತ್ವದ ಭರವಸೆ ​​ನೀಡಿದ ಡಿಕೆ ಶಿವಕುಮಾರ್

ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಯಾಗಿ ವಿಧಾನಸಭೆ ಚುನಾವಣೆ ಸ್ಪರ್ಧಿಸಿ ಸೋತಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ ಅವರಿಗೆ ಉನ್ನತ ಸ್ಥಾನಮಾನ ನೀಡುವ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್​ ನಾಯಕ ಜಗದೀಶ್​ ಶೆಟ್ಟರ್​ ಅವರೊಂದಿಗೆ ಗೌಪ್ಯ ಸಭೆ ನಡೆಸಿದರು.

ಡಿಸಿಎಂ, ಮಾಜಿ ಸಿಎಂ ಗೌಪ್ಯ ಮಾತುಕತೆ: ಸಭೆಯಲ್ಲಿ ಜಗದೀಶ್ ಶೆಟ್ಟರ್​ಗೆ ಮಹತ್ವದ ಭರವಸೆ ​​ನೀಡಿದ ಡಿಕೆ ಶಿವಕುಮಾರ್
ಜಗದೀಶ್​ ಶೆಟ್ಟರ್ (ಎಡಚಿತ್ರ) ಡಿಕೆ ಶಿವಕುಮಾರ್​ (ಬಲಚಿತ್ರ)
Follow us
ವಿವೇಕ ಬಿರಾದಾರ
|

Updated on:May 31, 2023 | 12:03 PM

ಹುಬ್ಬಳ್ಳಿ: ಬಿಜೆಪಿ (BJP) ತ್ಯಜಿಸಿ ಕಾಂಗ್ರೆಸ್ (Congress) ಸೇರ್ಪಡೆಯಾಗಿ ವಿಧಾನಸಭೆ ಚುನಾವಣೆ (Assembly Election) ಸ್ಪರ್ಧಿಸಿ ಸೋತಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ (Jagadish Shettar) ಅವರಿಗೆ ಉನ್ನತ ಸ್ಥಾನಮಾನ ನೀಡುವ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ಇಂದು (ಮೇ.31) ಹುಬ್ಬಳ್ಳಿಯಲ್ಲಿ (Hubballi) ಕಾಂಗ್ರೆಸ್​ ನಾಯಕ ಜಗದೀಶ್​ ಶೆಟ್ಟರ್​ ಅವರೊಂದಿಗೆ ಗೌಪ್ಯ ಸಭೆ ನಡೆಸಿದರು. ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜಗದೀಶ್​ ಶೆಟ್ಟರ್​​, ಡಿಕೆ ಶಿವಕುಮಾರ ಅವರ ಜೊತೆ ಔಪಚಾರಿಕವಾದ ಮಾತುಕತೆಯಾಗಿದೆ. ಉತ್ತರ ಕರ್ನಾಟಕ ಭಾಗದ ಸಂಘಟನೆ ಬಗ್ಗೆ ಡಿಕೆಶಿ ಸಂತೋಷ ವ್ಯಕ್ತಪಡಿಸಿದರು. ಮುಂಬರುವ ಚುನಾವಣೆ ಕುರಿತು ಚರ್ಚೆ ಮಾಡಿದ್ದೇವೆ ಎಂದು ಹೇಳಿದರು.

ಹುಬ್ಬಳ್ಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಪಕ್ಷವನ್ನ ಇನ್ನೂ ಹೆಚ್ಚಿನ ರೀತಿಯಲ್ಲಿ ಬಲ‌ಪಡಿಸುವ ನಿಟ್ಟಿನಲ್ಲಿ ಚರ್ಚೆ ಮಾಡಿದ್ದೇವೆ. ಸೌಹಾರ್ದತೆಯಿಂದ ನಾವು ಚರ್ಚೆ ಮಾಡಿದ್ದೇವೆ. ಚುನಾವಣಾ ತಯಾರಿ ಬಗ್ಗೆ ಕೆಲ ಮಾತುಕತೆ ನಡೆಸಿದ್ದೇವೆ. ಅವರೂ ಸಹ ಕೆಲವು ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಪಕ್ಷ ನನ್ನ ಜೊತೆಗಿದೆ ಅನ್ನೋ ಭರವಸೆಯನ್ನ ನೀಡಿದ್ದಾರೆ ಎಂದು ತಿಳಿಸಿದರು.

ಲೋಕಸಭೆ ಚುನಾವಣೆಯಲ್ಲಿ ಜಗದೀಶ್​ ಶೆಟ್ಟರ್ ಕೂಡ​ ಅಭ್ಯರ್ಥಿ ಎಂಬ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು ನಾನು (ಜಗದೀಶ್​ ಶೆಟ್ಟರ್​) ಅಭ್ಯರ್ಥಿ ಅನ್ನುವ ಬಗ್ಗೆ ಯಾವುದೂ ಚರ್ಚೆ ಮಾಡಿಲ್ಲ. ತಾಲೂಕು ಹಾಗೂ ಜಿಲ್ಲಾ ಪಂಚಾಯತಿ ಚುನಾವಣೆ ತಯಾರಿ ಬಗ್ಗೆ ಚರ್ಚೆ ಮಾಡಿದ್ದೇವೆ. ಪಕ್ಷ ಸಂಘಟನೆ ಹಾಗೂ ಚುನಾವಣಾ ತಯಾರಿ ಬಗ್ಗೆ ಹಲವು ಚರ್ಚೆ ನಡೆಸಲಾಯಿತು ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಸಚಿವಗಿರಿ ಮಿಸ್, ನನಗೆ ತಾಳ್ಮೆ ದೂರದೃಷ್ಟಿ ಇದೆ ಎಂದ ಶಾಸಕ ಲಕ್ಷ್ಮಣ್​ ಸವದಿ

ರಾಷ್ಟ್ರೀಯ ಅಧ್ಯಕ್ಷರ ಆದೇಶದ ಮೇಲೆ ಕೆಲ ಸಂದೆಶ ಹೇಳಬೇಕಿತ್ತು: ಡಿಕೆ ಶಿವಕುಮಾರ್​

ಬಿ ಫಾರಂ ಕೊಟ್ಟ ಮೇಲೆ ನಾನು ಜಗದೀಶ್ ಶೆಟ್ಟರ್ ಅವರ ಜೊತೆ ಮಾತಾಡಿರಲಿಲ್ಲ. ನಾನು ಪ್ರಚಾರದಲ್ಲಿ ಬ್ಯೂಸಿ ಆಗಿದ್ದೆ. ಹೀಗಾಗಿ ಮಾತಾಡೋಕೆ ಆಗಿರಲಿಲ್ಲ. ಜಗದೀಶ್​ ಶೆಟ್ಟರ್, ಲಕ್ಷ್ಮಣ ಸವದಿ, ಗುಬ್ಬಿ ಶ್ರೀನಿವಾಸ ಅವರಿಂದ ನಮಗೆ ಶಕ್ತಿ ಬಂದಿದೆ. ಸೋಲು ಗೆಲವು ಇರೋದೆ. ಅವರು ನಮಗೆ ಮಾರ್ಗದರ್ಶನ ಕೊಟ್ಟಿದ್ದಾರೆ ಅವರಿಂದ ಬದಲಾವಣೆ ಆಯ್ತು. ಜಗದೀಶ್​ ಶೆಟ್ಟರ್ ಅವರ ಜೊತೆ ನಾವು ಇರುತ್ತೇವೆ. ನಮಗೆ ವರಿಷ್ಠರ ಆದೇಶ ಇದೆ. ರಾಷ್ಟ್ರೀಯ ಅಧ್ಯಕ್ಷರ ಆದೇಶದ ಮೇಲೆ ಕೆಲ ಸಂದೆಶ ಹೇಳಬೇಕಿತ್ತು. ಶೆಟ್ಟರ್​​ಗೆ ಸಂದೇಶ ತಲುಪಿಸಿದ್ದೇನೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.

ನಾವು ಪ್ರತಿಯೊಂದು ಹಂತದಲ್ಲೂ ಸರಕಾರದ ತಪ್ಪು ಮುಂದಿಟ್ಟಿದ್ದೇವೆ. ಇವತ್ತು ನಮಗೆ ದೊಡ್ಡ ಅವಕಾಶ ನಮಗೆ ಸಿಕ್ಕುದೆ. ದೇವರೂ ವರನೂ ಕೊಡಲ್ಲ, ಶಾಪನೂ ಕೊಡಲ್ಲ, ಅವಕಾಶ ಮಾತ್ರ ಕೊಡುತ್ತಾನೆ. ನಾವು ಅದನ್ನು ಉಪಯೋಗಿಸಿಕೊಳ್ಳಬೇಕು ಎಂದರು.

ಇವತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ಕರೆದಿದ್ದಾರೆ. ನಾಳೆ (ಜೂನ್​.1) ರಂದು ಸಚಿವ ಸಂಪುಟ ಸಭೆ ಇದೆ, ನಾವು ನುಡಿದಂತೆ ನಡೆಯುತ್ತೇವೆ. ಜಗದೀಶ್​ ಶೆಟ್ಟರ್ ಅವರ ಜೊತೆ ನಾವು ಇರುತ್ತೇವೆ. ಕಾಂಗ್ರೆಸ್ ಪಕ್ಷ ಅವರ ಜೊತೆ ಇದೆ. ಜಗದೀಶ್​ ಶೆಟ್ಟರ್ ಅವರಿಗೆ ಸ್ಥಾನ ಮಾನ ಕೊಡುವ ವಿಚಾರವಾಗಿ ಮಾತನಾಡಿ ನಾನು ಒಂದೇ ಮಾತಿನಲ್ಲಿ ಹೇಳುತ್ತೇನೆ, ಪಕ್ಷ ಅವರ ಜೊತೆ ಇದೆ ನಾವೇನು ಗೌಪ್ಯವಾಗಿ ಇಡಲ್ಲ, ನಿಮಗೆ ಹೇಳುತ್ತೇವೆ ಎಂದು ಮಾತನಾಡಿದರು.

ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:01 pm, Wed, 31 May 23