AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಲ್ಲಿಯಿಂದ ಬೆಂಗಳೂರಿಗೆ ಬಂದಿಳಿದ ಜಗದೀಶ್ ಶೆಟ್ಟರ್​, ಬಿಜೆಪಿ ಸೇರ್ಪಡೆ ಬಗ್ಗೆ ಹೇಳಿದ್ದೇನು?

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ತೊರೆದು ವಾಪಸ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇಂದು(ಜನವರಿ 25) ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದು, ಇದೀಗ ದಿಲ್ಲಿಯಿಂದ ಬೆಂಗಳೂರಿಗೆ ಆಗಮಿಸಿದ್ದಾರೆ. ಇನ್ನು ಶೆಟ್ಟರ್​ ಹೇಳಿದ್ದೇನು? ಇಲ್ಲಿದೆ ವಿವರ

ದಿಲ್ಲಿಯಿಂದ ಬೆಂಗಳೂರಿಗೆ ಬಂದಿಳಿದ ಜಗದೀಶ್ ಶೆಟ್ಟರ್​, ಬಿಜೆಪಿ ಸೇರ್ಪಡೆ ಬಗ್ಗೆ ಹೇಳಿದ್ದೇನು?
ಮಾಜಿ ಸಿಎಂ ಜಗದೀಶ್ ಶೆಟ್ಟರ್
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Jan 25, 2024 | 10:43 PM

Share

ಬೆಂಗಳೂರು, (ಜನವರಿ 25): ದೆಹಲಿಯಲ್ಲಿ ಬಿಜೆಪಿ ಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಇದೀಗ ಬೆಂಗಳೂರಿಗೆ ಬಂದಿಳಿದಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಶೆಟ್ಟರ್ ಅವರನ್ನು ಬಿಜೆಪಿ ಕಾರ್ಯಕರ್ತರು ಸ್ವಾಗತಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶೆಟ್ಟರ್, ​ಬಿಜೆಪಿ ನಮ್ಮ ಮನೆ, ವಾಪಸ್ ಬಂದಿರುವುದು ಬಹಳ ಸಂತಸವಾಗುತ್ತಿದೆ.ಬಿಜೆಪಿ ರಾಷ್ಟ್ರೀಯ ನಾಯಕರು ಗೌರವದಿಂದ ಪಕ್ಷಕ್ಕೆ ಸ್ವಾಗತಿಸಿದ್ದಾರೆ. ನಾನು ಬಿಜೆಪಿಗೆ ಮರಳಲು ಪವರ್​ಫುಲ್ ನಾಯಕ ಮೋದಿಯೇ ಕಾರಣ ಎಂದಿದ್ದಾರೆ.

ಬಿಜೆಪಿ ರಾಷ್ಟ್ರೀಯ ನಾಯಕರು ಗೌರವದಿಂದ ಪಕ್ಷಕ್ಕೆ ಸ್ವಾಗತಿಸಿದ್ದಾರೆ. ನಾನು ಬಿಜೆಪಿಗೆ ಮರಳಲು ಪವರ್​ಫುಲ್ ನಾಯಕ ಮೋದಿಯೇ ಕಾರಣ. ಗೌರವ ಸಿಕ್ಕಿಲ್ಲವೆಂದು ಪಕ್ಷ ಬಿಟ್ಟಿದ್ದೆ, ಇಂದು ಪಕ್ಷ ಗೌರವ ಕೊಟ್ಟಿದೆ. ಕಾಂಗ್ರೆಸ್ ಪಕ್ಷದಲ್ಲೂ ಗೌರವವಿತ್ತು, ಆದರೆ ಅದು ನಮ್ಮ ಮನೆಯಲ್ಲ. ನಮ್ಮ ಮನೆಗೆ ವಾಪಸ್ ಬಂದಿರುವುದು ನನಗೆ ತುಂಬಾ ಖುಷಿಕೊಟ್ಟಿದೆ ಎಂದು ಹೇಳಿದರು.

ಇನ್ಮುಂದೆ ಕಾಂಗ್ರೆಸ್ ಪಕ್ಷದ ಕೈಚಳಕ ನಡೆಯಲ್ಲ ಎಂದ ವಿಜಯೇಂದ್ರ

ಇನ್ನು ಇದೇ ವೇಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾತನಾಡಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಮರಳಿದ್ದಾರೆ. ಕರ್ನಾಟಕದಲ್ಲಿ ಇನ್ಮುಂದೆ ಕಾಂಗ್ರೆಸ್ ಪಕ್ಷದ ಕೈಚಳಕ ನಡೆಯುವುದಿಲ್ಲ ಎಂಬ ಸ್ಪಷ್ಟ ಸಂದೇಶ ಇದರಿಂದ ಕೊಟ್ಟಂತಾಗಿದೆ. ರಾಜ್ಯದಲ್ಲಿ 28ಕ್ಕೆ 28 ಲೋಕಸಭಾ ಸ್ಥಾನ ಗೆಲ್ಲುವ ಸ್ಪಷ್ಟ ಸೂಚನೆ ಇದಾಗಿದೆ ಎಂದು ತಿಳಿಸಿದರು. ಮುಂದೆ ಯಾವಾಗ ವಿಧಾನಸಭಾ ಚುನಾವಣೆ ನಡೆದರೂ ಸ್ಪಷ್ಟ ಬಹುಮತದೊಂದಿಗೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಶ್ರಮಿಸುತ್ತೇವೆ. ಈ ರಾಜಕೀಯ ಬೆಳವಣಿಗೆ ವಿಚಾರದಲ್ಲಿ ನಮ್ಮ ಪಕ್ಷದ ಎಲ್ಲ ಕಾರ್ಯಕರ್ತರು, ಮುಖಂಡರು ಸಂತಸದಿಂದಿದ್ದಾರೆ ಎಂದೂ ಅವರು ತಿಳಿಸಿದರು. ಬಿಜೆಪಿ ಕರ್ನಾಟಕದ ಭದ್ರಕೋಟೆ ಎಂದು ಸಾಬೀತು ಪಡಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜೀನಾಮೆ ನೀಡಿದ ಶೆಟ್ಟರ್

ಬಳಿಕ ಶೆಟ್ಟರ್​ ಅವರು ಬೆಂಗಳೂರಿನ ಕುಮಾರಕೃಪಾ ದಕ್ಷಿಣದಲ್ಲಿರುವ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ನಿವಾಸಕ್ಕೆ ಭೇಟಿ ನೀಡಿ ರಾಜೀನಾಮೆ ಪತ್ರ ನೀಡಿದರು. ಖುದ್ದು ಬಂದು ರಾಜೀನಾಮೆ ಪತ್ರ ನೀಡುವಂತೆ ಹೊರಟ್ಟಿ ಸೂಚಿಸಿದ್ದರು. ಅದರಂತೆ ಇದೀಗ ಶೆಟ್ಟರ್ ಅವರು ತಮ್ಮ ಲೆಟರ್ ಹೆಡ್​ನಲ್ಲಿ ಟೈಪ್ ಮಾಡದೇ ಹಸ್ತಾಕ್ಷರದಲ್ಲಿ ಬರೆದ ರಾಜೀನಾಮೆ ಪತ್ರ ಸಲ್ಲಿಸಿದರು.

Published On - 10:31 pm, Thu, 25 January 24

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು