ಕಲಬುರಗಿಯಲ್ಲಿ ನಮ್ಮ ಅಭ್ಯರ್ಥಿಯೇ ಮೇಯರ್: ಯುಟಿ ಖಾದರ್, ಜಗದೀಶ್ ಶೆಟ್ಟರ್ ವಿಶ್ವಾಸ!

Kalaburagi: ನಾವು 80 ಶಾಸಕರಿದ್ರೂ 30 ಸ್ಥಾನದ ಜೆಡಿಎಸ್​ಗೆ ಈ ಮೊದಲು ಸಿಎಂ ಸ್ಥಾನ ನೀಡಿದ್ದೆವು. 30 ಸ್ಥಾನದ ಜೆಡಿಎಸ್​ಗೆ ಮುಖ್ಯಮಂತ್ರಿ ಸ್ಥಾನ ಕೊಟ್ಟಿದ್ದೆವು ಎಂದು ಯು.ಟಿ. ಖಾದರ್ ತಿಳಿಸಿದ್ದಾರೆ.

ಕಲಬುರಗಿಯಲ್ಲಿ ನಮ್ಮ ಅಭ್ಯರ್ಥಿಯೇ ಮೇಯರ್: ಯುಟಿ ಖಾದರ್, ಜಗದೀಶ್ ಶೆಟ್ಟರ್ ವಿಶ್ವಾಸ!
ಜಗದೀಶ್ ಶೆಟ್ಟರ್, ಯುಟಿ ಖಾದರ್
Follow us
TV9 Web
| Updated By: ganapathi bhat

Updated on: Sep 12, 2021 | 10:18 PM

ಮಂಗಳೂರು: ಕಲಬುರಗಿ ಪಾಲಿಕೆಯಲ್ಲಿ ಜೆಡಿಎಸ್- ಕಾಂಗ್ರೆಸ್ ಮೈತ್ರಿ ವಿಚಾರವಾಗಿ ಮಂಗಳೂರಿನಲ್ಲಿ ಮಾಜಿ ಸಚಿವ ಯು.ಟಿ. ಖಾದರ್ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯೇ ಮೇಯರ್ ಆಗುವ ವಿಶ್ವಾಸವಿದೆ. ಜನಸಾಮಾನ್ಯರು ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಕೊಟ್ಟಿದ್ದಾರೆ. ಸಿದ್ಧಾಂತದ ಪ್ರಕಾರ ಜೆಡಿಎಸ್​ನವರು ಕಾಂಗ್ರೆಸ್ ಬೆಂಬಲಿಸಬೇಕು. ಜೆಡಿಎಸ್ ಕಾಂಗ್ರೆಸ್ ಮಾಡಿದ ಉಪಕಾರ ಮರೆಯಲು ಸಾಧ್ಯವಿಲ್ಲ. ಜೆಡಿಎಸ್​ನವರು ಅದನ್ನು ಮರೀತಾರೆ ಅಂತಾನೂ ಹೇಳೋಕೆ ಸಾಧ್ಯವಿಲ್ಲ. ನಾವು 80 ಶಾಸಕರಿದ್ರೂ 30 ಸ್ಥಾನದ ಜೆಡಿಎಸ್​ಗೆ ಈ ಮೊದಲು ಸಿಎಂ ಸ್ಥಾನ ನೀಡಿದ್ದೆವು. 30 ಸ್ಥಾನದ ಜೆಡಿಎಸ್​ಗೆ ಮುಖ್ಯಮಂತ್ರಿ ಸ್ಥಾನ ಕೊಟ್ಟಿದ್ದೆವು ಎಂದು ಯು.ಟಿ. ಖಾದರ್ ತಿಳಿಸಿದ್ದಾರೆ.

ರಾಜ್ಯಸಭಾ ಚುನಾವಣೆ ಸಂದರ್ಭದಲ್ಲೂ ಹೆಚ್.ಡಿ. ದೇವೇಗೌಡಗೆ ಅವಕಾಶ ನೀಡಲಾಗಿದೆ. ಕಾಂಗ್ರೆಸ್ ಉಪಕಾರ ಖಂಡಿತವಾಗಿಯೂ ಜೆಡಿಎಸ್ ಮರೆಯಲ್ಲ. ಉಪಕಾರ ಮಾಡಿದವರನ್ನು ಮರೆಯಲ್ಲ ಎಂಬ ವಿಶ್ವಾಸವಿದೆ. ಕಲಬುರಗಿಯಲ್ಲಿ ಜೆಡಿಎಸ್​​ ನಮ್ಮನ್ನ ಬೆಂಬಲಿಸುವ ವಿಶ್ವಾಸ ಇದೆ ಎಂದು ಯು.ಟಿ. ಖಾದರ್ ತಿಳಿಸಿದ್ದಾರೆ.

ಕಲಬುರಗಿಯಲ್ಲಿ ಮೇಯರ್, ಉಪಮೇಯರ್ ನಾವೇ ಆಗ್ತೇವೆ: ಜಗದೀಶ್ ಶೆಟ್ಟರ್ ಇತ್ತ ಬೆಳಗಾವಿಯಲ್ಲಿ ಮೇಯರ್​, ಉಪಮೇಯರ್​ ನಾವೇ ಆಗ್ತೇವೆ. ಜನರು ಈ ಬಾರಿಯೂ ನಮಗೆ ಆಶೀರ್ವಾದ ಮಾಡಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದಾರೆ. ಕಲಬುರಗಿಯಲ್ಲಿ ಜೆಡಿಎಸ್ ಬೆಂಬಲಕ್ಕೆ ಪ್ರಯತ್ನ ಮಾಡುತ್ತಿದ್ದೇವೆ. ಅಲ್ಲಿಯೂ ಮೇಯರ್, ಉಪಮೇಯರ್ ನಾವೇ ಆಗುತ್ತೇವೆ ಎಂದು ಜಗದೀಶ್ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ಬರಲು ಹಣದ ಆಫರ್ ಕೊಟ್ಟಿರಲಿಲ್ಲ: ಯುಟರ್ನ್ ಹೊಡೆದ ಶ್ರೀಮಂತ ಪಾಟೀಲ್

ಇದನ್ನೂ ಓದಿ: ಬೆಳಗಾವಿ ಪಾಲಿಕೆ ಚುನಾವಣೆ: ಕಾಂಗ್ರೆಸ್​ಗೆ ಬಿಜೆಪಿಗಿಂತ ಹೆಚ್ಚು ಮತ, ಆದರೆ ಗೆದ್ದ ಅಭ್ಯರ್ಥಿಗಳಲ್ಲಿ ಅವರ ಸಂಖ್ಯೆ ಹೆಚ್ಚು: ಡಿಕೆ ಶಿವಕುಮಾರ್

ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್