ಶುರುವಾಯ್ತು ಪಕ್ಷಾಂತರ: ಕಾಂಗ್ರೆಸ್​ ತೊರೆದು ವಾಪಸ್ ಬಿಜೆಪಿ ಸೇರ್ಪಡೆಗೆ ಮುಂದಾದ ಮಾಜಿ ಶಾಸಕ!

ಲೋಕಾಯುಕ್ತ ಬಲೆಗೆ ಬಿದ್ದು ಪಕ್ಷದಿಂದ ಉಚ್ಛಾಟನೆಗೊಂಡಿರುವ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಲ್ಲಿಕಾರ್ಜುನ ಅವರು ನಾಳೆ ಅಂದರೆ ಫೆಬ್ರವರಿ 07ರಂದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಇದರ ಮಧ್ಯೆ ದಾವಣಗೆರೆ ಜಿಲ್ಲೆಯ ಮತ್ತೋರ್ವ ಕಾಂಗ್ರೆಸ್ ಮಾಜಿ ಶಾಸಕರೊಬ್ಬರು ಬಿಜೆಪಿಯತ್ತ ಮುಖ ಮಾಡಿದ್ದಾರೆ.

ಶುರುವಾಯ್ತು ಪಕ್ಷಾಂತರ: ಕಾಂಗ್ರೆಸ್​ ತೊರೆದು ವಾಪಸ್ ಬಿಜೆಪಿ ಸೇರ್ಪಡೆಗೆ ಮುಂದಾದ ಮಾಜಿ ಶಾಸಕ!
Edited By:

Updated on: Feb 06, 2024 | 10:20 PM

ದಾವಣಗೆರೆ, (ಫೆಬ್ರವರಿ 06): ಚನ್ನಗಿರಿಯ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರ ಪುತ್ರ ಮತ್ತೆ ಬಿಜೆಪಿ ಸೇರ್ಪಡೆಗೆ ವೇದಿಕೆ ಸಿದ್ಧವಾಗಿದೆ. ಲೋಕಾಯುಕ್ತ ಬಲೆಗೆ ಬಿದ್ದು ಪಕ್ಷದಿಂದ ಉಚ್ಛಾಟನೆಗೊಂಡಿರುವ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಲ್ಲಿಕಾರ್ಜುನ ಅವರು ನಾಳೆ ಅಂದರೆ ಫೆಬ್ರವರಿ 07ರಂದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಇದರ ಮಧ್ಯೆ ಕಾಂಗ್ರೆಸ್​​ ಮಾಜಿ ಶಾಸಕ ಎಚ್. ಪಿ. ರಾಜೇಶ್ ಬಿಜೆಪಿಯತ್ತ ಮುಖ ಮಾಡಿದ್ದಾರೆ.

ದಾವಣಗೆರೆ ಜಿಲ್ಲೆಯ ಜಗಳೂರು ಪರಿಶಿಷ್ಟ ಪಂಗಡ ಮೀಸಲು‌‌ ಕ್ಷೇತ್ರದ ಕಾಂಗ್ರೆಸ್​ನ ಮಾಜಿ ಶಾಸಕ ಎಚ್. ಪಿ. ರಾಜೇಶ್ ಅವರು ಬಿಜೆಪಿ ಸೇರ್ಪಡೆಗೆ ಮುಂದಾಗಿದ್ದಾರೆ.  ಆದ್ರೆ, ಯಾವಾಗ ಸೇರ್ಪಡೆ ಎಂದು ದಿನಾಂಕ ನಿಗದಿಯಾಗಿಲ್ಲ.  ಎಚ್.ಪಿ.ರಾಜೇಶ್ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದಿದ್ದಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಅಲ್ಪ ಮತಗಳಿಂದ ಸೋಲು ಕಂಡಿದ್ದರು.

ರೇಷ್ಮೆ ಇಲಾಖೆಯಲ್ಲಿ ಸಹಾಯಕ ನಿರ್ದೇಶಕ ಆಗಿದ್ದ ಎಚ್ ಪಿ ರಾಜೇಶ್, 2008ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ಬಳಿಕ 2013ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಬಳಿಕ 2018ರಲ್ಲಿ ಕಾಂಗ್ರೆಸ್​ನಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ಆದ್ರೆ, 2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಹಿನ್ನಲೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಅಲ್ಪ ಮತಗಳಿಂದ ಪರಭಾವಗೊಂಡಿದ್ದರು. ಇದೀಗ ಮತ್ತೆ ಕಾಂಗ್ರೆಸ್​ ತೊರೆದು ಕೇಸರಿ ಪಾಳೆಯ ಸೇರಲು ಮುಂದಾಗಿದ್ದಾರೆ.

ನಾಳೆ ಮಾಡಾಳ್ ಪುತ್ರ ಬಿಜೆಪಿಗೆ

ಇನ್ನು ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಲ್ಲಿಕಾರ್ಜು ಅವರು ನಾಳೆ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಪಕ್ಷ ಸೇರ್ಪಡೆಯಾಗಲಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಕಳೆದ ವರ್ಷ ವಿಧಾನಸಭೆ ಚುನಾವಣೆಗೂ ಮುನ್ನ ಮಾಡಾಳ್ ವಿರೂಪಾಕ್ಷಪ್ಪ ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದರು. ಬಳಿಕ ಅವರ ಪುತ್ರ ಮಲ್ಲಿಕಾರ್ಜುನ್ ವಿಧಾನಸಭೆ ಟಿಕೆಟ್​ ಆಕಾಂಕ್ಷಿಯಾಗಿದ್ದರು. ಆದ್ರೆ, ಬಿಜೆಪಿಯಿಂದ ಟಿಕೆಟ್ ನಿರಾಕರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಅವರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾಗಿದ್ದರು. ಇದರಿಂದ ಬಿಜೆಪಿ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿತ್ತು. ಬಳಿಕ ಮಲ್ಲಿಕಾರ್ಜುನ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದ್ರೆ, ಕಾಂಗ್ರೆಸ್​ನಿಂದ ಸ್ಪರ್ಧಿಸಿದ್ದ ಶಿವಗಂಗಾ ಬಸವರಾಜ್​ ವಿರುದ್ಧ ಸೋಲನುಭವಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

TV9 Web

TV9 Kannada

Read More
Loading...
Unable to load recommendations.
Follow Us