ಬಿಜೆಪಿ ಜತೆ ಸಮನ್ವಯ ಸಭೆ ಬಳಿಕ ಜೆಡಿಎಸ್ ಅಭ್ಯರ್ಥಿಗಳ ಅಧಿಕೃತ ಪಟ್ಟಿ ಪ್ರಕಟ, ಕೋಲಾರ ಅಭ್ಯರ್ಥಿ ಯಾರು?

ಬಿಜೆಪಿ ಜೊತೆಗಿನ ಸಮನ್ವ ಸಭೆ ಬಳಿಕ ಜೆಡಿಎಸ್​ ತನ್ನ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಹಾಗಾದ್ರೆ, ಕೋಲಾರ, ಹಾಸನ ಮತ್ತು ಮಂಡ್ಯ ಟಿಕೆಟ್ ಯಾರಿಗೆ ಎನ್ನುವ ವಿವರ ಇಲ್ಲಿದೆ.

ಬಿಜೆಪಿ ಜತೆ ಸಮನ್ವಯ ಸಭೆ ಬಳಿಕ ಜೆಡಿಎಸ್ ಅಭ್ಯರ್ಥಿಗಳ ಅಧಿಕೃತ ಪಟ್ಟಿ ಪ್ರಕಟ, ಕೋಲಾರ ಅಭ್ಯರ್ಥಿ ಯಾರು?
ಬಿಜೆಪಿ-ಜೆಡಿಎಸ್ ಸಮನ್ವಯ ಸಭೆ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Mar 29, 2024 | 8:13 PM

ಬೆಂಗಳೂರು, (ಮಾರ್ಚ್ 29): ಕರ್ನಾಟಕದ ಮೂರು ಲೋಕಸಭಾ (Loksabha Elections 2024) ಕ್ಷೇತ್ರಗಳಿಗೆ ಜೆಡಿಎಸ್​ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ, ಇಂದು (ಮಾರ್ಚ್ 29) ಬಿಜೆಪಿ ಜೊತೆಗಿನ ಸಮನ್ವಯ ಸಭೆ ಬಳಿಕ ಜೆಡಿಎಸ್ ಸಾಮಾಜಿಕ ಜಾಲತಾಣದಲ್ಲಿ ತನ್ನ ಅಭ್ಯರ್ಥಿ ಪಟ್ಟಿಯನ್ನು ಬಿಡುಗಡೆ ಮಾಡಿದೆ. ನಿರೀಕ್ಷೆಯಂತೆ ಹಾಸನದಿಂದ ಪ್ರಜ್ವಲ್ ರೇವಣ್ಣ ಅವರಿಗೆ ಟಿಕೆಟ್ ನೀಡಲಾಗಿದೆ. ಇನ್ನು ಮಂಡ್ಯದಿಂದ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಸ್ಪರ್ಧಿಸುತ್ತಿದ್ದಾರೆ. ಇನ್ನು ಕೋಲಾರದಲ್ಲಿ ಮಲ್ಲೇಶ್‌ ಬಾಬುಗೆ ಟಿಕೆಟ್‌ ನೀಡಲಾಗಿದೆ.

ಇತ್ತೀಚೆಗೆ ನಡೆದ ಜೆಡಿಎಸ್‌ ಕೋರ್‌ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳನ್ನು ಅಂತಿಮ ಮಾಡಲಾಗಿದೆ. ಆದರೆ, ಕಾರಣಾಂತರಗಳಿಂದ ಪಟ್ಟಿ ಘೋಷಣೆ ಮುಂದೂಡಿಕೆಯಾಗಿತ್ತು. ಇದೀಗ ಮಾಜಿ ಸಿಎಂ ಎಚ್‌ಡಿಕೆ ಅವರು, ಜೆಡಿಎಸ್‌ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಮೂಲಕ ಕಾರ್ಯಕರ್ತರ ಕುತೂಹಲಕ್ಕೆ ತೆರೆ ಎಳೆದಿದ್ದಾರೆ.

ಇದನ್ನೂ ಓದಿ: ಸಮನ್ವಯ ಸಮಿತಿ ರಚನೆಗೆ ತೀರ್ಮಾನ: ಜೆಡಿಎಸ್​-ಬಿಜೆಪಿ ಸಭೆಯಲ್ಲಿ ಕೈಗೊಂಡ ತೀರ್ಮಾನಗಳು ಇಂತಿವೆ

ಕೋಲಾರ ಕ್ಷೇತ್ರದಲ್ಲಿ ಮುಳಬಾಗಿಲು ಶಾಸಕ ಸಮೃದ್ಧಿ ಮಂಜುನಾಥ, ಬಂಗಾರಪೇಟೆ ವಿಧಾನಸಭೆ ಚುನಾವಣೆಯ ಪರಾಜಿತ ಅಭ್ಯರ್ಥಿ ಮಲ್ಲೇಶ್ ಬಾಬು, ದೇವನಹಳ್ಳಿ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಪ್ರಬಲ ಆಕಾಂಕ್ಷಿಗಳಾಗಿದ್ದರು. ಈ ಪೈಕಿ ಸಮೃದ್ಧಿ ಮಂಜುನಾಥ್ ಹೆಸರು ಮುಂಚೂಣಿಯಲ್ಲಿತ್ತು. ಆದರೆ, ಅಂತಿಮವಾಗಿ ಮಲ್ಲೇಶ್ ಬಾಬು ಅವರಿಗೆ ಪಕ್ಷ ಮಣೆ ಹಾಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 8:08 pm, Fri, 29 March 24

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ