ಹೆಚ್​ಡಿಕೆ ಉಚ್ಚಾಟಿಸುವ ಅಧಿಕಾರ ಪಕ್ಷದ ಅಧ್ಯಕ್ಷರಿಗಿರುತ್ತೆ: ಇಬ್ರಾಹಿಂ ಹೇಳಿಕೆಗೆ ಕುಮಾರಸ್ವಾಮಿ ಖಡಕ್ ಪ್ರತಿಕ್ರಿಯೆ

ನಮ್ಮದೇ ಒರಿಜಿನಲ್ ಜೆಡಿಎಸ್ ಬಿಜೆಪಿಗೆ ಬೆಂಬಲ ಇಲ್ಲ ಎಂದಿರುವ ಇಬ್ರಾಹಿಂ, ನಾನೇ ರಾಜ್ಯಾಧ್ಯಕ್ಷ.. ನಾನೇಕೆ ಪಕ್ಷ ಬಿಡಲಿ. ನಾನು ಪಕ್ಷ ಬಿಡಲ್ಲ, ಬಿಜೆಪಿ ಜೊತೆಗೂ ಹೋಗಲ್ಲ ಶಾಸಕರ ನಿರ್ಧಾರ ಏನು ಕಾದು ನೋಡಿ ಎಂದು ಟ್ವಿಸ್ಟ್ ಕೊಟ್ಟಿದ್ದಾರೆ. ಇದೀಗ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಇಬ್ರಾಹಿಂಗೆ ಟಾಂಗ್ ಕೊಟ್ಟಿದ್ದಾರೆ.

ಹೆಚ್​ಡಿಕೆ ಉಚ್ಚಾಟಿಸುವ ಅಧಿಕಾರ ಪಕ್ಷದ ಅಧ್ಯಕ್ಷರಿಗಿರುತ್ತೆ: ಇಬ್ರಾಹಿಂ ಹೇಳಿಕೆಗೆ ಕುಮಾರಸ್ವಾಮಿ ಖಡಕ್ ಪ್ರತಿಕ್ರಿಯೆ
ಇಬ್ರಾಹಿಂ-ಕುಮಾರಸ್ವಾಮಿ
Follow us
Sunil MH
| Updated By: ರಮೇಶ್ ಬಿ. ಜವಳಗೇರಾ

Updated on: Oct 17, 2023 | 8:50 AM

ಬೆಂಗಳೂರು, (ಅಕ್ಟೋಬರ್ 17): ಬಿಜೆಪಿ-ದಳದ ಮೈತ್ರಿಯಿಂದ (jds bjp alliance) ಮುನಿಸಿಕೊಂಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ(C.M Ibrahim)  ಇದೀಗ ಹೊಸದೊಂದು ದಾಳ ಉರುಳಿಸಿದ್ದಾರೆ. ಸಿಎಂ ಇಬ್ರಾಹಿಂ ಜೆಡಿಎಸ್‌ನಿಂದ ಈಗಾಗಲೇ ಒಂದು ಕಾಲು ಹೊರಗಿಟ್ಟಿದ್ದು, ಯಾವುದೇ ಸಂದರ್ಭದಲ್ಲಿ ಪಕ್ಷ ತೊರೆಯಬಹುದು ಎನ್ನಲಾಗಿತ್ತು. ಅದ್ರೆ ಇದೀಗ ಸಿಎಂ ಇಬ್ರಾಹಿಂ ಶುರುಮಾಡಿರುವ ಹೊಸ ಆಟ ದಳಪತಿಗಳಿಗೆ ಸವಾಲ್ ಎಸೆದಿದೆ. ನಮ್ಮದೇ ಒರಿಜಿನಲ್ ಜೆಡಿಎಸ್ ಬಿಜೆಪಿಗೆ ಬೆಂಬಲ ಇಲ್ಲ ಎಂದಿರುವ ಇಬ್ರಾಹಿಂ, ನಾನೇ ರಾಜ್ಯಾಧ್ಯಕ್ಷ.. ನಾನೇಕೆ ಪಕ್ಷ ಬಿಡಲಿ. ನಾನು ಪಕ್ಷ ಬಿಡಲ್ಲ, ಬಿಜೆಪಿ ಜೊತೆಗೂ ಹೋಗಲ್ಲ ಶಾಸಕರ ನಿರ್ಧಾರ ಏನು ಕಾದು ನೋಡಿ ಎಂದು ಟ್ವಿಸ್ಟ್ ಕೊಟ್ಟಿದ್ದಾರೆ. ಹೀಗಾಗಿ ಈ ಬಗ್ಗೆ ಜೆಡಿಎಸ್​ನಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ.

ಬಿಜೆಪಿ-ಜೆಡಿಎಸ್ ಮೈತ್ರಿ ವಿರೋಧಿಸಿ ತಮ್ಮ ಮುಂದಿನ ನಡೆ ಬಗ್ಗೆ ಚರ್ಚಿಸಲು ಸಿಎಂ ಇಬ್ರಾಹಿಂ ಬೆಗಳೂರಿನಲ್ಲಿ ನಿನ್ನೆ(ಅಕ್ಟೋಬರ್ 16) ಬೆಂಬಲಿಗರು, ಕಾರ್ಯಕರ್ತರ ಜತೆ ಸಭೆ ನಡೆಸಿದ್ದು, ಸಭೆಯಲ್ಲಿ ಕೈಗೊಂಡ ನಿರ್ಣಯ ಅಚ್ಚರಿಗೆ ಕಾರಣವಾಗಿದೆ. ನಮ್ಮದೇ ಒರಿಜಿನಲ್ ಜೆಡಿಎಸ್ ಬಿಜೆಪಿಗೆ ಬೆಂಬಲ ಇಲ್ಲ ಎಂದಿರುವ ಇಬ್ರಾಹಿಂ, ನಾನೇ ರಾಜ್ಯಾಧ್ಯಕ್ಷ.. ನಾನೇಕೆ ಪಕ್ಷ ಬಿಡಲಿ. ನಾನು ಪಕ್ಷ ಬಿಡಲ್ಲ, ಬಿಜೆಪಿ ಜೊತೆಗೂ ಹೋಗಲ್ಲ ಶಾಸಕರ ನಿರ್ಧಾರ ಏನು ಕಾದು ನೋಡಿ ಎಂದು ಟ್ವಿಸ್ಟ್ ಕೊಟ್ಟಿದ್ದಾರೆ. ಇನ್ನು ಇದೀಗ ಇದಕ್ಕೆ ಸ್ವತಃ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಇಬ್ರಾಹಿಂಗೆ ಟಾಂಗ್ ಕೊಟ್ಟಿದ್ದಾರೆ.

ಇದನ್ನೂ ಓದಿ: ಜೆಡಿಎಸ್ ಕುಟುಂಬದ ಸ್ವತ್ತಲ್ಲ: ದೇವೇಗೌಡ, ಕುಮಾರಸ್ವಾಮಿ ವಿರುದ್ಧ ತಿರುಗಿಬಿದ್ದ ಸಿಎಂ ಇಬ್ರಾಹಿಂ

ಇಂದು(ಅಕ್ಟೋಬರ್ 17) ಬೆಂಗಳೂರಿನ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಿಮಗೆ ಅದು ದೊಡ್ಡದಾಗಿ ಕಾಣುತ್ತಿದೆ. ಏನು ಸರಿ ಮಾಡಬೇಕೋ ಅದನ್ನು ನಾವು ಮಾಡುತ್ತೇವೆ.. ಅವರೇ ಒರಿಜಿನಲ್ ಎಂದು ಬೋರ್ಡ್ ಹಾಕಿಕೊಳ್ಳಲಿ. ಅವರೇ ಒರಿಜಿನಲ್ ಎಂದು ಬರೆದುಕೊಳ್ಳಲಿ ಎಂದು ಟಾಂಗ್ ಕೊಟ್ಟರು.

ಕುಮಾರಸ್ವಾಮಿ ಹಾಗೂ ನಿಖಿಲ್ ಪಕ್ಷದಿಂದ ಉಚ್ಚಾಟನೆ ಪ್ರಸ್ತಾಪದ ಬಗ್ಗೆ ಪ್ರತಿಕ್ರಿಯಿಸಿದ ಹೆಚ್​ಡಿಕೆ, ಅವರು ಏನು ಬೇಕಾದರೂ ಮಾಡಿಕೊಳ್ಳಲಿ, ಅವರಿಗೆ ಬಿಟ್ಟಿದ್ದು. ದಯವಿಟ್ಟು ಇಂತಾ ಸಿಲ್ಲಿ ವಿಚಾರಕ್ಕೆ ಬರಬೇಡಿ. ನಮಗೆ ಏನು ಮಾಡಬೇಕೊ, ಸರಿ ಮಾಡುತ್ತೇವೆ. ನೀವು ತಲೆಕೆಡಿಸಿಕೊಂಡು ಬಂದಿದ್ದೀರಾ? ಅವರು ಫ್ರೀ ಇದ್ದಾರೆ ಮಾತಾಡ್ಕೊಳ್ಳಿ. ನಮ್ಮ ಪಕ್ಷದಲ್ಲಿ ಇರುವ ಹಿರಿಯರು ತೀರ್ಮಾನ ತೆಗೆದುಕೊಳ್ಳುತ್ತಾರೆ. ನೀವು ಯಾಕೆ ವರಿ ಮಾಡಿಕೊಳ್ಳುತ್ತೀರಿ ಎಂದರು.

ಇಬ್ರಾಹಿಂ ಹೇಳಿದ್ದೇನು?

ನಾನು ರಾಜ್ಯಾಧ್ಯಕ್ಷ ಏನೇ ತೀರ್ಮಾನ ಆದರೂ ನನ್ನಿಂದಲೇ ಆಗಬೇಕು ಎಂದಿದ್ದಾರೆ, ಇನ್ನು ಸಭೆಯಲ್ಲಿ ಹೆಚ್‌ಡಿ ಕುಮಾರಸ್ವಾಮಿ ಉಚ್ಛಾಟನೆ ಪ್ರಸ್ತಾಪದ ಬಗ್ಗೆ ಮಾತನಾಡಿ ಉಚ್ಛಾಟನೆಗೆ ಕಾಲ ಪಕ್ವವಾಗಿಲ್ಲ. ಎನ್‌ಡಿಎ ಸೋಲಿಸುವವರಿಗೆ ನಮ್ಮ ಬೆಂಬಲ ಎಂದು ಹೇಳುವ ಮೂಲಕ ಪರೋಕ್ಷವಾಗಿ ಇಂಡಿಯಾ ಮೈತ್ರಿಕೂಟಕ್ಕೆ ಜೈ ಎಂದಿದ್ದಾರೆ. ಅಲ್ಲದೇ ಕೋರ್‌ಕಮಿಟಿ ರಚನೆ ಮಾಡಿ, ದೇವೇಗೌಡರ ಮುಂದೆ ನಮ್ಮ ನಿರ್ಧಾರ ತಿಳಿಸೋಣ ಎನ್ನುವ ಬಗ್ಗೆಯೂ ಸಿಎಂ ಇಬ್ರಾಹಿಂ ಕರೆದಿದ್ದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಒಟ್ಟಿನಲ್ಲಿ ಇಬ್ರಾಹಿಂ ನಡೆ ತಮಗೆ ದೇವೇಗೌಡ್ರು ಬೇಕು ಕುಮಾರಸ್ವಾಮಿ ಬೇಡ ಎಂಬಂತೆ ಇದೆ.. ನಿಜಕ್ಕೂ ಇಬ್ರಾಹಿಂ ಮಾತಿಗೆ ಅದೆಷ್ಟು ಜೆಡಿಎಸ್ ಶಾಸಕರು ಜೈ ಅಂತಾರೋ, ಅವರ ಕ್ಯಾಂಪ್‌ನಲ್ಲಿ ಯಾರ್ಯಾರು ಇದ್ದಾರೋ ಗೊತ್ತಿಲ್ಲ. ಆದ್ರೆ, ಜೆಡಿಎಸ್​ನ ಕ್ಷಣ ಕ್ಷಣದದ ಬೆಳವಣಿಗೆಗಳು ಕುತೂಹಲಕ್ಕೆಕಾರಣವಾಗಿದೆ.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್