ಜೆಡಿಎಸ್​-ಬಿಜೆಪಿ ಅಪವಿತ್ರ ಮೈತ್ರಿ ಮಾಡಿಕೊಂಡಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೋಮುವಾದಿಗಳ ಜೊತೆ ಹೋಗೊಲ್ಲ. ಅವರ ವಿರುದ್ಧ ಇರುತ್ತೇವೆ, ಅವರ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇವೆ ಅಂದಿದ್ದರು. ಈಗ ಪಕ್ಷ ಉಳಿಸಿಕೊಳ್ಳಲು‌ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ಮಾಡಿದರು.

ಜೆಡಿಎಸ್​-ಬಿಜೆಪಿ ಅಪವಿತ್ರ ಮೈತ್ರಿ ಮಾಡಿಕೊಂಡಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Follow us
Anil Kalkere
| Updated By: ವಿವೇಕ ಬಿರಾದಾರ

Updated on: Mar 10, 2024 | 1:45 PM

ಬೆಂಗಳೂರು, ಮಾರ್ಚ್​ 10: ಜೆಡಿಎಸ್​-ಬಿಜೆಪಿ (JDS-BJP) ಅಪವಿತ್ರ ಮೈತ್ರಿ ಮಾಡಿಕೊಂಡಿವೆ. ಮುಂದಿನ ಜನ್ಮ ಇದ್ದರೇ ಮುಸ್ಲಿಂ ಆಗಿ ಹುಟ್ಟುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡರು (HD Devegowda) ಹೇಳಿದ್ದರು. ಈಗ ಪಕ್ಷ ಉಳಿಸಲು ಬಿಜೆಪಿ ಜೊತೆಗೆ ಅಪವಿತ್ರ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಾಗ್ದಾಳಿ ಮಾಡಿದರು. ಬೆಂಗಳೂರಿನ ಸೂಲಿಕೆರೆ ಮೈದಾನದಲ್ಲಿ ನಡೆದ ಶಿಕ್ಷಕರ ಕೃತಜ್ಞತೆ ಸಭೆಯಲ್ಲಿ ಮಾತನಾಡಿದ ಅವರು, ಕೋಮುವಾದಿಗಳ ಜೊತೆ ಹೋಗೊಲ್ಲ. ಅವರ ವಿರುದ್ಧ ಇರುತ್ತೇವೆ, ಅವರ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇವೆ ಅಂದಿದ್ದರು. ಈಗ ಪಕ್ಷ ಉಳಿಸಿಕೊಳ್ಳಲು‌ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹೆಚ್​ಡಿ ಕುಮಾರಸ್ವಾಮಿಯನ್ನು ಯಾರು ಅಧಿಕಾರದಿಂದ ಇಳಿಸಿದರೂ ಅವರ ಜೊತೆಯೇ ಸೇರಿಕೊಂಡಿದ್ದಾರೆ. ದೇವೇಗೌಡರು, ಅವರ ಕುಟುಂಬದ ರಾಜಕಾರಣ ಉಳಿಯಬೇಕಾದರೆ ಏನು ಬೇಕಾದರೂ ಮಾಡುತ್ತಾರೆ. ಪಕ್ಷ ಉಳಿಸುವ ನಿಟ್ಟಿನಲ್ಲಿ ಬಿಜೆಪಿ ಜತೆ ಅಪವಿತ್ರ ಮೈತ್ರಿ ಮಾಡಿಕೊಂಡಿದ್ದಾರೆ. ನಾವು ಏನೇ ತೀರ್ಮಾನ ಮಾಡಿದರೂ ಜನ ಕಣ್ಣು ಮುಚ್ಕೊಂಡು ಬೆಂಬಲಿಸುತ್ತಾರೆ ಅಂದುಕೊಂಡಿದ್ದಾರೆ ಎಂದರು.

ನಮ್ಮ ಗೌಡರಿಗೆ ಅದೇನು ಆಗಿದ್ಯೋ‌ ಗೊತ್ತಿಲ್ಲ. ಮೋದಿ ಗೆದ್ದರೆ ವಿದೇಶಕ್ಕೆ ಹೋಗುತ್ತೇನೆ ಅಂದಿದ್ದರು. ಈಗ ಅದೇನ್ ಹೊಗಳುವುದು, ಹಳೇ ಸಂಬಂಧ ಅಂತೆ. ನೆವರ್ ಎಕ್ಸಪೆಕ್ಟೆಡ್ ಫ್ರಾಮ್ ದೇವೇಗೌಡ. ಅವರು ಪ್ರಧಾನಿಯಾಗಿದ್ದವರು. ಈ ರೀತಿ ಮಾಡುತ್ತಾರೆ ಅಂತ ಅಂದುಕೊಂಡಿರಲಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಗ್ಯಾರೆಂಟಿ ಸಮಾವೇಶ: ಸಿದ್ದರಾಮಯ್ಯ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ

ಶಿಕ್ಷಕರ ಚುನಾವಣೆ ಬಹಳ ಪ್ರಮುಖ ಚುನಾವಣೆ. ಈ ಚುನಾವಣೆ ಲೋಕಸಭೆ ಚುನಾವಣೆಯ ದಿಕ್ಸೂಚಿ ಚುನಾವಣೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದರು. ನರೇಂದ್ರ ಮೋದಿ ಹೆಸರಲ್ಲಿ ಗೆದ್ದು ಬಿಡುತ್ತೇವೆ ಅಂತ ಬಿಜೆಪಿ ನಾಯಕರು ಅಂದುಕೊಂಡಿದ್ದಾರೆ. ಪಿ ರಾಜೀವ್​ ಹೇಳಿದ್ದ, ಅಭ್ಯರ್ಥಿ ಮುಖ್ಯವಲ್ಲ ಮೋದಿ ಹೆಸರಲ್ಲಿ ಗೆಲ್ಲುತ್ತೇವೆ ಎಂದಿದ್ದರು. ಆದರೆ ಈಗ ಏನಾಯ್ತು? ಎಂದು ಪ್ರಶ್ನಿಸಿದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿಯವರು ರಾಜ್ಯ ಪ್ರವಾಸ ಮಾಡಿದ್ದೇ ಮಾಡಿದ್ದು, ಆದರೆ ಏನಾಯ್ತು, ನಾವು 136‌ ಸೀಟು ಗೆದ್ವಿ. ಇವರು 4 ವರ್ಷ ಲೂಟಿ ಮಾಡಿದ್ದಾರೆ. 28ಕ್ಕೆ 28 ಗೆದ್ದು ಬಿಡುತ್ತೇವೆ ಅಂತಿದ್ದಾರೆ. 2023-24 ರಲ್ಲಿ ಕರ್ನಾಟಕದಲ್ಲಿ 4 ಲಕ್ಷ 36 ಸಾವಿರ ಕೋಟಿ ತೆರಿಗೆ ಸಂಗ್ರಹವಾಗಿದೆ. ರಾಜ್ಯಕ್ಕೆ ವಾಪಾಸ್ 50 ಸಾವಿರ ಕೋಟಿ ವಾಪಾಸ್ ಬಂದಿದೆ. ಅಂದರೆ 100 ರೂಪಾಯಿ ನೀಡಿದರೇ 13 ರೂ. ವಾಪಸ್​ ಬರುತ್ತೆ. ನಮ್ಮ ದುಡ್ಡನ್ನು ಉತ್ತರ ಭಾರತದ ರಾಜ್ಯಗಳಿಗೆ ಕೊಡುತ್ತಾರೆ. ಕೊಡಿ ನಾನೇನು ಬೇಡ ಅನ್ನಲ್ಲ. ಆದರೆ ಈ ತಾರತಮ್ಯ ಏಕೆ? ಎಂದು ಪ್ರಶ್ನೆ ಮಾಡಿದರು.

ಪುಟ್ಟಣ್ಣ ಶಿಕ್ಷಕರ ಸಮಸ್ಯೆ ಬಗ್ಗೆ ಹೇಳಿದ್ದಾರೆ. ಕೂಡಲೇ ಸಭೆ ಮಾಡಿ ನಿಮ್ಮ ಸಮಸ್ಯೆ ಬಗ್ಗೆ ಚರ್ಚಿಸುತ್ತೇವೆ. 7ನೇ ವೇತನ ಆಯೋಗ, ಪಿಂಚಣಿ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ