AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Election: ಬಿಜೆಪಿ, ಜೆಡಿಎಸ್​ ಹೊಂದಾಣಿಕೆ ಮಾತು; ಅಚ್ಚರಿ ಹೇಳಿಕೆ ನೀಡಿದ ಸಿಪಿ ಯೋಗೇಶ್ವರ

ಬಿಜೆಪಿ ಪ್ರಾದೇಶಿಕ ಪಕ್ಷ ಜೆಡಿಎಸ್​ ಜೊತೆ ಹೊಂದಾಣಿಕೆ ಮಾಡಿಕೊಂಡು ಲೋಕಸಭಾ ಚುನಾವಣೆಗೆ ಹೋಗಲು ಮುಂದಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ಪುಷ್ಠಿ ನೀಡುವಂತೆ ಬಿಜೆಪಿ ನಾಯಕ, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಮಹತ್ವದ ಹೇಳಿಕೆ ನೀಡಿದ್ದಾರೆ.

Lok Sabha Election: ಬಿಜೆಪಿ, ಜೆಡಿಎಸ್​ ಹೊಂದಾಣಿಕೆ ಮಾತು; ಅಚ್ಚರಿ ಹೇಳಿಕೆ ನೀಡಿದ ಸಿಪಿ ಯೋಗೇಶ್ವರ
ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ್
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Jun 23, 2023 | 5:30 PM

Share

ರಾಮನಗರ: 2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Election) ಭಾರತೀಯ ಜನತಾ ಪಾರ್ಟಿ (BJP) ಹೀನಾಯ ಸೋಲು ಕಂಡಿದೆ. ಬಿಜೆಪಿ ರಾಜ್ಯದಲ್ಲಿ 66 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ತೃಪ್ತಿಪಟ್ಟಿದೆ. ಸೋಲಿನ ಗುಂಗಿನಿಂದ ಹೊರ ಬಂದು ಮೈಕೊಡವಿಕೊಂಡು ಮತ್ತೆ ಪಕ್ಷ ಸಂಘಟನೆ ಮಾಡಲು ರಾಜ್ಯ ನಾಯಕರು ಮುಂದಾಗುತ್ತಿದ್ದಾರೆ. ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಮಾಡಿದಂತಹ ತಪ್ಪುಗಳು ಮರುಕಳಿಸದಂತೆ ನೋಡಿಕೊಂಡು ಮುಂಬರುವ ಲೋಕಸಭೆ ಚುನಾವಣೆಗೆ (Lok Sabha Election) ಸರಿಯಾದ ತಂತ್ರ ಹೆಣೆಯಲು ಯೋಚಿಸುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಜಯ ಸಾಧಿಸಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವ ನಿರೀಕ್ಷೆಯಲ್ಲಿ ಬಿಜೆಪಿ ಇದೆ. ಇದೀಗ ಬಿಜೆಪಿ ಪ್ರಾದೇಶಿಕ ಪಕ್ಷ ಜೆಡಿಎಸ್ (JDS)​ ಜೊತೆ ಹೊಂದಾಣಿಕೆ ಮಾಡಿಕೊಂಡು ಲೋಕಸಭಾ ಚುನಾವಣೆಗೆ ಹೋಗಲು ಮುಂದಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ಪುಷ್ಠಿ ನೀಡುವಂತೆ ಬಿಜೆಪಿ ನಾಯಕ, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ (CP Yogeshwar) ಮಾತನಾಡಿ ಜೆಡಿಎಸ್ ಜೊತೆ ಹೊಂದಾಣಿಕೆ ಆಗಬಹುದು ಎಂದಿದ್ದಾರೆ.

ಹೌದು ರಾಮನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾನಡಿದ ಅವರು ಮುಂದೆ ರಾಜ್ಯ ರಾಜಕಾರಣದಲ್ಲಿ ಬಹಳ ಬದಲಾವಣೆ ಆಗುತ್ತದೆ. ಮುಂದಿನ ಲೋಕಸಭಾ ಚುನಾವಣೆಗೆ ತಯಾರಿ ಆಗಲೇಬೇಕು. ಅತಿ ಹೆಚ್ಚು ಸಂಸದರನ್ನ ಲೋಕಸಭೆಗೆ ಕಳುಹಿಸಬೇಕು. ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಹೇಳಿದರೇ ಸ್ಪರ್ಧಿಸುತ್ತೇನೆ. ಮುಂದೆ ರಾಜ್ಯ ರಾಜಕಾರಣದಲ್ಲಿ ಬಹಳ ಬದಲಾವಣೆ ಆಗುತ್ತದೆ. ಜೆಡಿಎಸ್ ಜೊತೆ ಹೊಂದಾಣಿಕೆ ಆಗಬಹುದು. ಲೋಕಸಭೆ ಟಿಕೆಟ್​ ಬಗ್ಗೆ ಪಕ್ಷದ ವರಿಷ್ಠರು ನಿರ್ಧಾರ ಮಾಡುತ್ತಾರೆ ಎಂದರು.

ಇದನ್ನೂ ಓದಿ: ಹಿರಿಯ ನಾಯಕರು ಹೊಂದಾಣಿಕೆ ಮಾಡಿಕೊಂಡಿರುವುದು ನಿಜ: ಹೊಸ ಬಾಂಬ್ ಸಿಡಿಸಿದ ಮತ್ತೋರ್ವ ಬಿಜೆಪಿ ನಾಯಕ

ಅಲ್ಲಗಳೆದ ಹೆಚ್​ ಡಿ ಕುಮಾರಸ್ವಾಮಿ

ಬಿಜೆಪಿ ಜೆಡಿಎಸ್​ ಹೊಂದಾಣಿಕೆ ವಿಚಾರವಾಗಿ ನನ್ನ ಮುಂದೆ ಯಾವುದೇ ಚರ್ಚೆ ಆಗಿಲ್ಲ ರಾಜಕಾರಣದಲ್ಲಿ ಚರ್ಚೆ, ಊಹಾಪೋಹಗಳು ಸಹಜ. ಕೆಲವೊಮ್ಮೆ ಗಾಳಿ ಸುದ್ದಿಗಾಗಿ ಚರ್ಚೆ ಮಾಡುತ್ತಾರೆ. ಇದಕ್ಕೆಲ್ಲ ಚುನಾವಣೆಯ ಪ್ರಕ್ರಿಯೆ ಆರಂಭವಾದಾಗ ಉತ್ತರ ದೊರೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಹೇಳಿದ್ದರು.

ಸ್ಪಷ್ಟನೆ ನೀಡಿದ ದೌಡ್ಡಗೌಡರು

ಲೋಕಸಭೆ ಚುನಾವಣೆಗೆ ಸ್ವಂತ ಬಲದಲ್ಲಿ ಹೋರಾಟ ಮಾಡುತ್ತೇವೆ. ಸ್ವಂತ ಬಲದಿಂದ ಹೋರಾಟ ಮಾಡುವ ಶಕ್ತಿ‌ ನಮಗೆ ಇದೆ ಎಂದು ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡರು ಖಡಕ್​ ಸಂದೇಶ ರವಾನಿಸಿದ್ದರು. ಸದ್ಯ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ನಡೆಯಲಿದೆ. ಆ ಚುನಾವಣೆಗಳ ಬಗ್ಗೆ ನಾವು ತಯಾರಿ ಮಾಡಬೇಕು ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಿವೇಕ ಬಿರಾದಾರ
ವಿವೇಕ ಬಿರಾದಾರ

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ