ರಾಷ್ಟ್ರ ರಾಜಕಾರಣಕ್ಕೆ ಜಯದೇವ ಮಾಜಿ ನಿರ್ದೇಶಕ ಡಾ ಮಂಜುನಾಥ್ ಕರೆತರಲು ಜೆಡಿಎಸ್ ಕಸರತ್ತು

ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕರಾಗಿದ್ದ ಡಾ. ಮಂಜುನಾಥ್ ಅವರನ್ನು ರಾಜಕಾರಣಕ್ಕೆ ಸೆಳೆಯುವ ಮೂಲಕ ಲೋಕಸಭೆ ಚುನಾವಣೆಯಲ್ಲಿ ಲಾಭ ಪಡೆಯಲು ಜೆಡಿಎಸ್ , ಬಿಜೆಪಿ ಮೈತ್ರಿ ಚಿಂತನೆ ನಡೆಸಿದೆ. ಮಂಜುನಾಥ್​ರನ್ನು ರಾಜಕಾರಣಕ್ಕೆ ಕರೆತರುವ ಮತ್ತು ಲೋಕಸಭೆ ಚುನಾವಣೆಯಲ್ಲಿ ಕಣಕ್ಕಿಳಿಸುವ ವಿಚಾರವಾಗಿ ಜೆಡಿಎಸ್​​ ತೆರೆಯ ಮರೆಯ ಯತ್ನ ನಡೆಸುತ್ತಿದೆ.

ರಾಷ್ಟ್ರ ರಾಜಕಾರಣಕ್ಕೆ ಜಯದೇವ ಮಾಜಿ ನಿರ್ದೇಶಕ ಡಾ ಮಂಜುನಾಥ್ ಕರೆತರಲು ಜೆಡಿಎಸ್ ಕಸರತ್ತು
ಡಾ. ಸಿಎನ್ ಮಂಜುನಾಥ್
Follow us
Sunil MH
| Updated By: Ganapathi Sharma

Updated on: Feb 06, 2024 | 9:51 AM

ಬೆಂಗಳೂರು, ಫೆಬ್ರವರಿ 6: ಜಯದೇವ ಹೃದ್ರೋಗ ಆಸ್ಪತ್ರೆಯ ಮಾಜಿ ನಿರ್ದೇಶಕರಾಗಿದ್ದ ಡಾ. ಸಿಎನ್ ಮಂಜುನಾಥ್ (Dr CN Manjunath) ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಕರೆತರಲು ಜೆಡಿಎಸ್ (JDS) ನಾಯಕರು ಕಸರತ್ತು ನಡೆಸುತ್ತಿರುವುದು ತಿಳಿದುಬಂದಿದೆ. ಈ ನಿಟ್ಟಿನಲ್ಲಿ ಮಂಜುನಾಥ್ ಮನವೊಲಿಕೆಗೆ ದಳಪತಿಗಳು ಮುಂದಾಗಿದ್ದಾರೆ. ಜತೆಗೆ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಜುನಾಥ್ ಅವರನ್ನು ಸ್ಪರ್ಧಿಸುವಂತೆ ಮಾಡಲು ತೆರೆಮರೆಯ ಕಸರತ್ತು ನಡೆಸುತ್ತಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಜೆಡಿಎಸ್ ಅಥವಾ ಬಿಜೆಪಿಯಿಂದ ಲೋಕಸಭಾ ಅಭ್ಯರ್ಥಿಯನ್ನಾಗಿ ಮಾಡುವುದು ದಳಪತಿಗಳ ಲೆಕ್ಕಾಚಾರವಾಗಿದೆ. ಬೆಂಗಳೂರು ಗ್ರಾಮಾಂತರ ಅಥವಾ ಬೆಂಗಳೂರು ಉತ್ತರದಿಂದ ಮಂಜುನಾಥ್ ಅವರನ್ನು ಅಭ್ಯರ್ಥಿ ಮಾಡಲು ಕಮಲದಳ ನಾಯಕರು ತೀರ್ಮಾನ ಮಾಡಿದ್ದಾರೆ ಎನ್ನಲಾಗಿದೆ. ಈ ಎರಡು ಲೋಕಸಭಾ ಕ್ಷೇತ್ರಗಳ ಪೈಕಿ ಒಂದರಿಂದ ಜೆಡಿಎಸ್ ಅಥವಾ ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಮಂಜುನಾಥ್ ಕಣಕ್ಕಿಳಿದರೆ ಗೆಲುವಿನ ಹಾದಿ ಸುಗಮ ಎಂಬುದು ಉಭಯ ಪಕ್ಷಗಳ ನಾಯಕರ ಅಂದಾಜು.

ಡಾ. ಮಂಜುನಾಥ್ ರಾಜ್ಯದಾದ್ಯಂತ ಮನೆಮಾತಾಗಿದ್ದಾರೆ. ಮಂಜುನಾಥ್ ಅವರದು ಉತ್ತಮವಾದ ವ್ಯಕ್ತಿತ್ವ. ಮಂಜುನಾಥ್ ರಾಜಕೀಯಕ್ಕೆ ಬಂದರೆ ಎನ್​​ಡಿಎ ಮೈತ್ರಿಗೆ ಒಂದು ಆಸ್ತಿ ಆದಂತೆ ಎಂಬ ಲೆಕ್ಕಾಚಾರ ಬಿಜೆಪಿ, ಜೆಡಿಎಸ್ ನಾಯಕರದ್ದಾಗಿದೆ.

ಬಿಜೆಪಿ ಜತೆ ಜೆಡಿಎಸ್ ಚರ್ಚೆ

ಡಾ. ಮಂಜುನಾಥ್ ಅವರನ್ನು ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿ ಮಾಡುವ ಬಗ್ಗೆ ಬಿಜೆಪಿ ನಾಯಕರ ಜೊತೆ ಜೆಡಿಎಸ್ ನಾಯಕರು ಈಗಾಗಲೇ ಚರ್ಚೆ ನಡೆಸಿದ್ದಾರೆ. ಮಂಜುನಾಥ್ ಮನವೊಲಿಕೆಗೆ ದಳಪತಿಗಳು ಸಾಕಷ್ಟು ಪ್ರಯತ್ನವನ್ನೂ ನಡೆಸುತ್ತಿದ್ದಾರೆ. ಆದರೆ, ಸದ್ಯ ರಾಜಕೀಯ ಪ್ರವೇಶಿಸುವ ಬಗ್ಗೆ ಅವರು ಯಾವುದೇ ನಿರ್ಧಾರ ತಿಳಿಸಿಲ್ಲ. ಆದರೆ, ಸದ್ಯದ ಬೆಳವಣಿಗೆಗಳು ಕುತೂಹಲ ಕೆರಳಿಸಿವೆ.

ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ. ಸಿಎನ್ ಮಂಜುನಾಥ್ ಅವರ ಅಧಿಕಾರವಧಿ ಜನವರಿ 30ರಂದ ಕೊನೆಗೊಂಡಿತ್ತು. ಅವರನ್ನು ಸಂಸ್ಥೆಯಿಂದ ಗೌರವ ಪೂರ್ವಕವಾಗಿ ಬೀಳ್ಕೊಡಲಾಗಿತ್ತು. ಬೀಳ್ಕೊಡುಗೆ ಸಮಾರಂಭದ ಬಳಿಕ ಮಾತನಾಡಿದ್ದ ಅವರು, ಜಯದೇವ ಹೃದ್ರೋಗ ಆಸ್ಪತ್ರೆಯು ಜನರ ಆಸ್ಪತ್ರೆಯಾಗಿದೆ. ಇದನ್ನು ಪಂಚಾತಾರ ಖಾಸಗಿ ಆಸ್ಪತ್ರೆಯಂತೆ ಮಾಡುವ ಗುರಿ ಹೊಂದಿದ್ದೆವು. ಇಲ್ಲಿ ಪ್ರತಿಯೋಬ್ಬರಿಗೂ ಸೇವಾ ಮನೋಭಾವವನ್ನು ಬೆಳಸಲಾಗಿದೆ. ಇಷ್ಟು ವರ್ಷದ ಸೇವೆ ಸಂತೋಷ ತಂದಿದೆ. ನಿವೃತ್ತಿ ಬಳಿಕವೂ ವೈದ್ಯಕೀಯ ಸೇವೆ ಮುಂದುವರಿಸುತ್ತೇನೆ. ಸದಾ ಜನರ ಸೇವೆ ಮಾಡುತ್ತೇನೆ ಎಂದು ಹೇಳಿದ್ದರು.

ಇದನ್ನೂ ಓದಿ: ಬೆಂಗಳೂರು ಜಯದೇವ ನಿರ್ದೇಶಕ ಮಂಜುನಾಥ್ ಅಧಿಕಾರವಧಿ ಅಂತ್ಯ, ಹೊಸ ನಿರ್ದೇಶಕರು ಯಾರು?

ಸದ್ಯ ನಿವೃತ್ತರಾಗಿರುವ ಅವರು ರಾಜಕೀಯಕ್ಕೆ ಧುಮುಕಲಿದ್ದಾರೆಯೇ ಎಂಬ ಕುತೂಹಲಕ್ಕೆ ನಂತರದ ದಿನಗಳಲ್ಲಿ ನಡೆದ ವಿದ್ಯಮಾನಗಳು ಕಾರಣವಾಗಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್