ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿಎಂ ಇಬ್ರಾಹಿಂ ಉಚ್ಚಾಟನೆ: ಕೋರ್ ಕಮಿಟಿ ಸಭೆಯಲ್ಲಿ ಒಮ್ಮತದ ನಿರ್ಧಾರ
CM Ibrahim Expelled from JDS: ನಮ್ಮದೇ ಒರಿಜಿನಲ್ ಜೆಡಿಎಸ್, ನಾನೇಕೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಗುಡುಗಿದ್ದ ಇಬ್ರಾಹಿಂಗೆ ಇದೀಗ ದಳಪತಿಗಳು ಶಾಕ್ ಕೊಟ್ಟಿದ್ದಾರೆ.
ಬೆಂಗಳೂರು, (ಅಕ್ಟೋಬರ್ 19): ನಮ್ಮದೇ ಒರಿಜಿನಲ್ ಜೆಡಿಎಸ್, ಬಿಜೆಪಿಗೆ ಬೆಂಬಲ ಇಲ್ಲ ಎಂದು ಸ್ವಪಪಕ್ಷದ ವರಿಷ್ಠರ ವಿರುದ್ಧವೇ ಗುಡುಗಿದ್ದ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ (C.M Ibrahim) ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಇಂದು (ಅಕ್ಟೋಬರ್ 19) ಬೆಂಗಳುರಿನ ಜೆಪಿ ಭವನದಲ್ಲಿ ನಡೆದ ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ (JDS core committee Meeting) ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿದೆ.
ಕೋರ್ ಕಮಿಟಿ ಸಭೆ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ, ಹಿಂದಿನ ಅಧ್ಯಕ್ಷರ ಹೇಳಿಕೆಯನ್ನು ನಾನು ಪ್ರಸ್ತಾಪ ಮಾಡುವುದಿಲ್ಲ. ಜೆಡಿಎಸ್ ಕೋರ್ ಕಮಿಟಿ ಸದಸ್ಯರ ಸಭೆ ಕರೆದು ಚರ್ಚೆ ನಡೆಸಿದ್ದೇವೆ, ಎಲ್ಲರ ಅಭಿಪ್ರಾಯ ಪಡೆದು ಸಿ.ಎಂ.ಇಬ್ರಾಹಿಂ ಉಚ್ಚಾಟಿಸಿದ್ದೇವೆ ಎಂದು ಅಧಿಕೃತವಾಗಿ ಘೋಷಣೆ ಮಾಡಿದರು
ನಮ್ಮದೇ ಒರಿಜಿನಲ್ ಜೆಡಿಎಸ್. ನಾನೇ ಪಕ್ಷದ ರಾಜ್ಯಾಧ್ಯಕ್ಷ ನಾನ್ಯಾಕೆ ಪಕ್ಷ ಬಿಟ್ಟು ಹೋಗಲಿ ಎಂದು ಸಿ.ಎಂ.ಇಬ್ರಾಹಿಂ ಗುಡುಗಿದ್ದರು. ಇಬ್ರಾಹಿಂ ಮಾತಿಗೆ ದೇವೇಗೌಡ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಇತರೆ ಜೆಡಿಎಸ್ ನಾಯಕರು ಸಿಡಿಮಿಡಿಗೊಂಡಿದ್ದರು. ಅಲ್ಲದೇ ಕೆಲ ಜೆಡಿಎಸ್ ನಾಯಕರು ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡುವಂತೆ ಪಟ್ಟು ಹಿಡಿದಿದ್ದರು. ಅದರಂತೆ ಇದೀಗ ಅಂತಿಮವಾಗಿ ಇಬ್ರಾಹಿಂ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟನೆ ಮಾಡಿದೆ.
ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:00 pm, Thu, 19 October 23