AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಸಭಾ ಚುನಾವಣೆ: ಜೆಡಿಎಸ್ ನಿಯೋಗದಿಂದ ಸಿದ್ದರಾಮಯ್ಯ ಭೇಟಿ

ಜೂನ್ 10ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಯ ಕದನ ಕಣವು ಕ್ಷಣಕ್ಷಣಕ್ಕೂ‌ ಕುತೂಹಲ ಹೆಚ್ಚಿಸುತ್ತಿದೆ. ಜೂನ್​ 10ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆ ಸಂಬಂಧ ಯಾರು ಯಾರ ಹತ್ತಿರ ಮಾತನಾಡಿದ್ದಾರೋ ಗೊತ್ತಿಲ್ಲ. ನನ್ನ ಬಳಿ ಯಾರೂ ಮಾತನಾಡಿಲ್ಲ. ನಾವು ಪಕ್ಷದ ಹಿತದೃಷ್ಟಿಯಿಂದ ಕೆಲವು ತೀರ್ಮಾನಗಳನ್ನು ಮಾಡಿದ್ದೇೆವೆ. ನಮ್ಮ ಮತಗಳನ್ನು ನಾವು ಭದ್ರಮಾಡಿಕೊಳ್ಳಬೇಕು. ಆರೋಪ ಮಾಡುತ್ತಿರುವವರ ಬಳಿ ನಾನು ಕೈಮುಗಿದು ಕೇಳಿಕೊಳ್ಳುತ್ತೇನೆ. ಯುವಕನಿಗೆ ಅವಕಾಶ ಮಾಡಿಕೊಡಿ.

ರಾಜ್ಯಸಭಾ ಚುನಾವಣೆ: ಜೆಡಿಎಸ್ ನಿಯೋಗದಿಂದ ಸಿದ್ದರಾಮಯ್ಯ ಭೇಟಿ
ಸಿದ್ದರಾಮಯ್ಯ
Vinay Bhat
| Edited By: |

Updated on:Sep 08, 2026 | 10:40 AM

Share

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಬೆಂಬಲ ಕೋರಿ ಜೆಡಿಎಸ್​ ನಾಯಕರ ನಿಯೋಗವು ಬುಧವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ (Siddaramiah) ನಿವಾಸಕ್ಕೆ ಭೇಟಿ ನೀಡಿದರು. ಜೆಡಿಎಸ್ (JDS) ಮುಖಂಡರಾದ ಟಿ.ಎ.ಶರವಣ ಮತ್ತು ಬಿ.ಎಂ.ಫಾರೂಕ್ ನಿಯೋಗದಲ್ಲಿದ್ದರು. ಜೂನ್ 10ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಯ ಕದನ ಕಣವು ಕ್ಷಣಕ್ಷಣಕ್ಕೂ‌ ಕುತೂಹಲ ಹೆಚ್ಚಿಸುತ್ತಿದೆ. ಜೆಡಿಎಸ್ ನಾಯಕರ ಸಿದ್ದರಾಮಯ್ಯ ಭೇಟಿ ಬೆನ್ನಲ್ಲೇ ಕಾಂಗ್ರೆಸ್ ನಾಯಕ ‌ಮನ್ಸೂರ್ ಅಲಿ ಖಾನ್ ಸಿದ್ದರಾಮಯ್ಯ ‌ಮನೆಗೆ ಭೇಟಿ ನೀಡಿದರು. ಸಿದ್ದರಾಮಯ್ಯ ಅವರ ನಿವಾಸವು ರಾಜಕೀಯ ಚಟುವಟಿಕೆಗಳ ಕೇಂದ್ರವಾಗಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲ ನನಗೆ ಸಿಗಬಹುದು ಎಂದು ಜೆಡಿಎಸ್​​​​ ರಾಜ್ಯಸಭಾ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಹೇಳಿದರು. ಸಿದ್ದರಾಮಯ್ಯ ಅವರಿಗೆ ನನ್ನ ಮೇಲೆ ಪ್ರೀತಿ, ವಿಶ್ವಾಸ ಇದೆ. ನಮಗೆ ಬೆಂಬಲ ನೀಡುವ ವಿಶ್ವಾಸ ಇದೆ ಎಂದು ತಿಳಿಸಿದರು. ಅಲ್ಪಸಂಖ್ಯಾತ ಅಭ್ಯರ್ಥಿಯನ್ನು ಮೊದಲನೆ ಅಭ್ಯರ್ಥಿಯಾಗಿ ಕಾಂಗ್ರೆಸ್ ಕಣಕ್ಕಿಳಿಸಿದ್ದರೆ ತೊಂದರೆ ಇರಲಿಲ್ಲ. ನಮ್ಮ ವರಿಷ್ಠರು ಮತ್ತು ಕಾಂಗ್ರೆಸ್ ವರಿಷ್ಡರು ಮಾತನಾಡಿಕೊಂಡಿದ್ದರು. ಆ ಕಾರಣಕ್ಕೆ ಅಭ್ಯರ್ಥಿ ಕಣಕ್ಕಿಳಿಸಿದೆವು ಎಂದು ಹೇಳಿದರು.

ನಮ್ಮ ಮತ ಭದ್ರಪಡಿಸಿಕೊಳ್ಳುತ್ತೇವೆ

ಜೂನ್​ 10ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆ ಸಂಬಂಧ ಯಾರು ಯಾರ ಹತ್ತಿರ ಮಾತನಾಡಿದ್ದಾರೋ ಗೊತ್ತಿಲ್ಲ. ನನ್ನ ಬಳಿ ಯಾರೂ ಮಾತನಾಡಿಲ್ಲ. ನಾವು ಪಕ್ಷದ ಹಿತದೃಷ್ಟಿಯಿಂದ ಕೆಲವು ತೀರ್ಮಾನಗಳನ್ನು ಮಾಡಿದ್ದೇೆವೆ. ನಮ್ಮ ಮತಗಳನ್ನು ನಾವು ಭದ್ರಮಾಡಿಕೊಳ್ಳಬೇಕು. ಆರೋಪ ಮಾಡುತ್ತಿರುವವರ ಬಳಿ ನಾನು ಕೈಮುಗಿದು ಕೇಳಿಕೊಳ್ಳುತ್ತೇನೆ. ಯುವಕನಿಗೆ ಅವಕಾಶ ಮಾಡಿಕೊಡಿ. ನಾವು ಜಾತ್ಯತೀತ ತತ್ವ ಇರಿಸಿಕೊಂಡು ಎಚ್​.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದ್ದೆವು. ಇಂದು ಅವರು ಯುವಕನಿಗೆ ಅವಕಾಶ ಮಾಡಿಕೊಡಬೇಕು ಎಂದರು.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:12 pm, Wed, 1 June 22

Follow Us
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು