ರಾಜ್ಯಸಭಾ ಚುನಾವಣೆ: ಜೆಡಿಎಸ್ ನಿಯೋಗದಿಂದ ಸಿದ್ದರಾಮಯ್ಯ ಭೇಟಿ

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jun 01, 2022 | 3:12 PM

ಜೂನ್ 10ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಯ ಕದನ ಕಣವು ಕ್ಷಣಕ್ಷಣಕ್ಕೂ‌ ಕುತೂಹಲ ಹೆಚ್ಚಿಸುತ್ತಿದೆ.

ರಾಜ್ಯಸಭಾ ಚುನಾವಣೆ: ಜೆಡಿಎಸ್ ನಿಯೋಗದಿಂದ ಸಿದ್ದರಾಮಯ್ಯ ಭೇಟಿ
ಸಿದ್ದರಾಮಯ್ಯ
Follow us on

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಬೆಂಬಲ ಕೋರಿ ಜೆಡಿಎಸ್​ ನಾಯಕರ ನಿಯೋಗವು ಬುಧವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ (Siddaramiah) ನಿವಾಸಕ್ಕೆ ಭೇಟಿ ನೀಡಿದರು. ಜೆಡಿಎಸ್ (JDS) ಮುಖಂಡರಾದ ಟಿ.ಎ.ಶರವಣ ಮತ್ತು ಬಿ.ಎಂ.ಫಾರೂಕ್ ನಿಯೋಗದಲ್ಲಿದ್ದರು. ಜೂನ್ 10ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಯ ಕದನ ಕಣವು ಕ್ಷಣಕ್ಷಣಕ್ಕೂ‌ ಕುತೂಹಲ ಹೆಚ್ಚಿಸುತ್ತಿದೆ. ಜೆಡಿಎಸ್ ನಾಯಕರ ಸಿದ್ದರಾಮಯ್ಯ ಭೇಟಿ ಬೆನ್ನಲ್ಲೇ ಕಾಂಗ್ರೆಸ್ ನಾಯಕ ‌ಮನ್ಸೂರ್ ಅಲಿ ಖಾನ್ ಸಿದ್ದರಾಮಯ್ಯ ‌ಮನೆಗೆ ಭೇಟಿ ನೀಡಿದರು. ಸಿದ್ದರಾಮಯ್ಯ ಅವರ ನಿವಾಸವು ರಾಜಕೀಯ ಚಟುವಟಿಕೆಗಳ ಕೇಂದ್ರವಾಗಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲ ನನಗೆ ಸಿಗಬಹುದು ಎಂದು ಜೆಡಿಎಸ್​​​​ ರಾಜ್ಯಸಭಾ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಹೇಳಿದರು. ಸಿದ್ದರಾಮಯ್ಯ ಅವರಿಗೆ ನನ್ನ ಮೇಲೆ ಪ್ರೀತಿ, ವಿಶ್ವಾಸ ಇದೆ. ನಮಗೆ ಬೆಂಬಲ ನೀಡುವ ವಿಶ್ವಾಸ ಇದೆ ಎಂದು ತಿಳಿಸಿದರು. ಅಲ್ಪಸಂಖ್ಯಾತ ಅಭ್ಯರ್ಥಿಯನ್ನು ಮೊದಲನೆ ಅಭ್ಯರ್ಥಿಯಾಗಿ ಕಾಂಗ್ರೆಸ್ ಕಣಕ್ಕಿಳಿಸಿದ್ದರೆ ತೊಂದರೆ ಇರಲಿಲ್ಲ. ನಮ್ಮ ವರಿಷ್ಠರು ಮತ್ತು ಕಾಂಗ್ರೆಸ್ ವರಿಷ್ಡರು ಮಾತನಾಡಿಕೊಂಡಿದ್ದರು. ಆ ಕಾರಣಕ್ಕೆ ಅಭ್ಯರ್ಥಿ ಕಣಕ್ಕಿಳಿಸಿದೆವು ಎಂದು ಹೇಳಿದರು.

ನಮ್ಮ ಮತ ಭದ್ರಪಡಿಸಿಕೊಳ್ಳುತ್ತೇವೆ

ಜೂನ್​ 10ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆ ಸಂಬಂಧ ಯಾರು ಯಾರ ಹತ್ತಿರ ಮಾತನಾಡಿದ್ದಾರೋ ಗೊತ್ತಿಲ್ಲ. ನನ್ನ ಬಳಿ ಯಾರೂ ಮಾತನಾಡಿಲ್ಲ. ನಾವು ಪಕ್ಷದ ಹಿತದೃಷ್ಟಿಯಿಂದ ಕೆಲವು ತೀರ್ಮಾನಗಳನ್ನು ಮಾಡಿದ್ದೇೆವೆ. ನಮ್ಮ ಮತಗಳನ್ನು ನಾವು ಭದ್ರಮಾಡಿಕೊಳ್ಳಬೇಕು. ಆರೋಪ ಮಾಡುತ್ತಿರುವವರ ಬಳಿ ನಾನು ಕೈಮುಗಿದು ಕೇಳಿಕೊಳ್ಳುತ್ತೇನೆ. ಯುವಕನಿಗೆ ಅವಕಾಶ ಮಾಡಿಕೊಡಿ. ನಾವು ಜಾತ್ಯತೀತ ತತ್ವ ಇರಿಸಿಕೊಂಡು ಎಚ್​.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದ್ದೆವು. ಇಂದು ಅವರು ಯುವಕನಿಗೆ ಅವಕಾಶ ಮಾಡಿಕೊಡಬೇಕು ಎಂದರು.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:12 pm, Wed, 1 June 22