ಅ.27,28ರಂದು ಕಾರ್ಯಕಾರಿ ಸಮಿತಿ ಸಭೆ: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರ ನೇಮಕವಾಗಲಿದೆ ಎಂದ ಎಚ್​ಡಿಕೆ

ಎರಡು ದಿನ ಜೆಡಿಎಸ್​ನ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಮಹತ್ವದ ಚರ್ಚೆಗಳ ಬಗ್ಗೆ ಮಾಜಿ ಸಿಎಂ ಎಚ್​ಡಿ ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.

ಅ.27,28ರಂದು ಕಾರ್ಯಕಾರಿ ಸಮಿತಿ ಸಭೆ:  ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರ ನೇಮಕವಾಗಲಿದೆ ಎಂದ ಎಚ್​ಡಿಕೆ
ಹೆಚ್ ಡಿ ಕುಮಾರಸ್ವಾಮಿ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Oct 26, 2022 | 3:35 PM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023) ಸಮೀಪಿಸುತ್ತಿದ್ದಂತೆಯೇ ಜೆಡಿಎಸ್​ ಸಹ ಎಲ್ಲಾ ರೀತಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಇದಕ್ಕೆ ಪೂಕರವೆಂಬಂತೆ ಪಂಚರತ್ನ ಎನ್ನುವ ವಿನೂತನ ಕಾರ್ಯಕ್ರಮ ಕೈಗೊಂಡಿದೆ. ಈ ಬಗ್ಗೆ ಚರ್ಚೆ ನಡೆಸಲು ಅ.27 ಹಾಗೂ ಅ.28ರಂದು ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಜೆಡಿಎಸ್​ ರಾಷ್ಟ್ರೀಯ ಅಧ್ಯಕ್ಷರ ನೇಮಕವಾಗಲಿದೆ. ಈ ಬಗ್ಗೆ ಸ್ವತಃ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್​ಡಿ ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.

ಜೆಪಿ ಭವನದಲ್ಲಿ ಇಂದು(ಅ.26) ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಪಕ್ಷದ ನಾಳೆ, ನಾಡಿದ್ದು ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸಭೆ ಇದೆ. 13 ರಾಜ್ಯಗಳಿಂದ ಕಾರ್ಯಕಾರಿ ಸಮಿತಿಯ ಸದಸ್ಯರು ಆಗಮಿಸಲಿದ್ದಾರೆ. ಜೆಡಿಎಸ್ ಕಾರ್ಯಕಾರಿ ಸಮಿತಿಯಲ್ಲಿ ರಾಷ್ಟ್ರೀಯ ಅಧ್ಯಕ್ಷರ ನೇಮಕ ಆಗಲಿದೆ ಎಂದು ಸ್ಪಷ್ಟಪಡಿಸಿದರು.

ಬರೋಬ್ಬರಿ ಮೂರುವರೆ ವರ್ಷಗಳ ಬಳಿಕ ಜೆಡಿಎಸ್​ ಕಚೇರಿಗೆ ಕಾಲಿಟ್ಟ ಜಿಟಿ ದೇವೇಗೌಡ

ಈಗಿರುವ ಜೆಡಿಎಸ್​ ರಾಷ್ಟ್ರೀಯ ಅಧ್ಯಕ್ಷ ಎಚ್​ಡಿ ದೇವೇಗೌಡ ಅವರನ್ನೇ ಮರುನೇಮಕ ಮಾಡಲಾಗುತ್ತೆ ಎನ್ನುವುದು ತಿಳಿದುಬಂದಿದೆ. ದೇವೇಗೌಡ್ರಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಬೇರೆಯವರನ್ನು ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಕ ಮಾಡುತ್ತಾರೆ ಎನ್ನುವ ಚರ್ಚೆಗಳು ನಡೆದಿದ್ದವು. ಆದ್ರೆ, ಮೂಲಗಳ ಪ್ರಕಾರ ಕಾರ್ಯಕಾರ್ಯ ಸಮಿತಿಯಲ್ಲಿ ದೇವೇಗೌಡ ಅವರನ್ನೇ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮರುನೇಮಕ ಮಾಡಲಾಗುತ್ತದೆ.

ನಾಡಿದ್ದು ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ರಾಷ್ಟ್ರ ಹಾಗೂ ರಾಜ್ಯದ ಸಮಸ್ಯೆಗಳ ಬಗ್ಗೆ ನಿರ್ಣಯ ತೆಗೆದುಕೊಳ್ಳಲಾಗುವುದು ಇದೇ ಅ. 27ಹಾಗೂ 28 ಹಲವಾರು ನಿರ್ಧಾರ ತೆಗೆದುಕೊಳ್ಳಲಾಗುವುದು. ನವಂಬರ್ 1ರಂದು ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ಅಭಿಷೇಕದ ಮೊದಲ ಸಭೆ ನಡೆಯಲಿದೆ. ನಾಳೆ ಅತ್ಯಂತ ಪ್ರಸಕ್ತವಾದ ದಿನ ಹಿನ್ನೆಲೆಯಲ್ಲಿ ಮೊದಲ ಕಾರ್ಯಕ್ರಮ ನಡೆಯಲಿದೆ. ನ.1ರಿಂದ ಮುಳಬಾಗಿಲಿನಲ್ಲಿ ರೈತರ ಸಭೆ ಇರಲಿದೆ ಎಂದು ಮಾಹಿತಿ ನೀಡಿದರು.

126 ಅಭ್ಯರ್ಥಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಚಾಮುಂಡೇಶ್ವರಿ ಸನ್ನಿಧಿಗೆ ಅಭ್ಯರ್ಥಿಗಳೂ ಭೇಟಿ ನೀಡಿದ್ರು. ನವೆಂಬರ್ 1ರಂದು ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

ಪಂಚರತ್ನ ಕಾರ್ಯಕ್ರಮಗಳು ನಾಡಿಗೆ ಹೇಗೆ ಪೂರಕ ಎಂದು ಮನವರಿಕೆ ಮಾಡಿಕೊಡಲಾಗುವುದು. ಪಂಚರತ್ನ ಕಾರ್ಯಕ್ರಮ ಹಿನ್ನೆಲೆಯಲ್ಲಿ ನಾನು ಈ ಬಾರಿ ಅಧಿವೇಶನದಲ್ಲಿ ಭಾಗವಹಿಸುವುದು ಅನುಮಾನ. ನಮ್ಮ ಪಕ್ಷದ ಶಾಸಕರಿಗೆ ಅಧಿವೇಶನದಲ್ಲಿ ಭಾಗವಹಿಸಲು ಸೂಚನೆ ನೀಡುವೆ. ಜೆಡಿಎಸ್ ನಿಂದ ಅಂತರ ಕಾಯ್ದುಕೊಂಡ ಶಾಸಕರನ್ನ ಕರೆ ತರುವ ಕೆಲಸ ನಡೆಯುತ್ತಿದೆ, ಎಲ್ಲರೂ ಬರ್ತಾರೆ ಎಂದು ತಿಳಿಸಿದರು.