Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಾರಸ್ವಾಮಿ ಹೆಂಗೆ ಅಂದ್ರೆ ಬುಸ್…ಬುಸ್…ಎಂದ ಜಮೀರ್ ಅಹಮದ್​ಗೆ ಜೆಡಿಎಸ್ ಸರಣಿ ಟ್ವೀಟ್ ಏಟು

ಕುಮಾರಸ್ವಾಮಿ ಹೆಂಗೆ ಅಂದ್ರೆ ಬುಸ್… ಬುಸ್… ತರ ಎಂದು ಹಾವಿನ ಹೆಡೆ ತರ ಕೈತೋರಿಸಿ ವ್ಯಂಗ್ಯವಾಡಿದ್ದ ಜಮೀರ್ ಅಹಮದ್ ಖಾನ್​ಗೆ ಜೆಡಿಎಸ್​ ಸರಣಿ ಟ್ವೀಟ್ ಮೂಲಕ ತಿರುಗೇಟು ನೀಡಿದೆ.

ಕುಮಾರಸ್ವಾಮಿ ಹೆಂಗೆ ಅಂದ್ರೆ ಬುಸ್…ಬುಸ್…ಎಂದ ಜಮೀರ್ ಅಹಮದ್​ಗೆ ಜೆಡಿಎಸ್ ಸರಣಿ ಟ್ವೀಟ್ ಏಟು
ಕುಮಾರಸ್ವಾಮಿ, ಜಮೀರ್ ಅಹಮದ್​
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Feb 05, 2023 | 3:53 PM

ಬೆಂಗಳೂರು: ಕುಮಾರಸ್ವಾಮಿ )HD Kumaraswamy) ಹೆಂಗೆ ಅಂದ್ರೆ ಬುಸ್… ಬುಸ್… ತರ, ಅವನು ಯಾವಾಗ ಕಚ್ಚುತ್ತಾನೊ ಗೊತ್ತಿಲ್ಲ ಎಂದು ಕೈಯಿಂದ ಹಾವಿನ ಹೆಡೆ ತೋರಿಸಿ ಶಾಸಕ ಜಮೀರ್ ಅಹಮದ್ ಖಾನ್(zameer ahmed khan) ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲಿಯೇ ಕಿಡಿಕಾರಿದ್ದರು. ಹುಮ್ನಾಬಾದ್​ನಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯ ಬಹಿರಂಗ ಸಮಾವೇಶದಲ್ಲಿ ಹೆಚ್ಡಿಕೆ ವಿರುದ್ಧ ಕಿಡಿ ಕಾರಿದ ಜಮೀರ್, ನಾನು ದಿನದ 24 ಗಂಟೆಯಲ್ಲಿ 16 ಗಂಟೆ ಅವನ ಜೊತೆ ಇದ್ದವನು, ಇವತ್ತು ಸಿ.ಎಂ ಇಬ್ರಾಹಿಂ ಮತ್ತು ಅವರ ಪುತ್ರನನ್ನ ಕುಮಾರಸ್ವಾಮಿ ಮುಗಿಸಲು ಹೊರಟಿದ್ದಾರೆ ಎಂದಿದ್ದರು. ಇದಕ್ಕೆ ಇದೀಗ ಜೆಡಿಎಸ್​ ಸರಣಿ ಟ್ವೀಟ್ ಮೂಲಕ ಜಮೀರ್ ಅಹಮದ್ ಗೆ ತಿರುಗೇಟು ನೀಡಿದೆ.

ಸರಣಿ ಟ್ವೀಟ್ ಮಾಡಿರುವ ಜೆಡಿಎಸ್, ನಾಲಗೆಯ ಮೇಲೆ ಸದಾ ಕಂಡವರ ಎಂಜಲು ಚಪ್ಪರಿಸುವ ಜಮೀರ್ ಅಹಮದ್, ನಿಮಗೆ ಮುಸ್ಲಿಂ ಸಮುದಾಯದ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ?ರಾಜಕಾರಣಕ್ಕಾಗಿ ನೀವು ಆ ಸಮುದಾಯವನ್ನು ಹೇಗೆ ನಡೆಸಿಕೊಂಡಿದ್ದಿರಿ? ಶ್ರೀ ಹೆಚ್.ಡಿ.ದೇವೇಗೌಡರ ಕುಟುಂಬ ಹೇಗೆ ನಡೆಸಿಕೊಳ್ಳುತ್ತಿದೆ ಎನ್ನುವುದು ದೇಶಕ್ಕೇ ಗೊತ್ತಿದೆ. ಭೂತದ ಬಾಯಲ್ಲಿ ಭಗವದ್ಗೀತೆ ಚೆನ್ನಾಗಿರಲ್ಲ ಎಂದು ಟಾಂಗ್ ಕೊಟ್ಟಿದೆ.

ಇಬ್ರಾಹಿಂ ಅವರನ್ನು ಕಾಂಗ್ರೆಸ್ ಪಕ್ಷದಲ್ಲಿ ಮುಗಿಸಲು ಹೊರಟಿದ್ದು ಸುಳ್ಳಾ? ನಿಮ್ಮ ರೀತಿ ಇಬ್ರಾಹಿಂ ಅವರು ರಾಜಕೀಯದಲ್ಲಿ ಸಭ್ಯತೆಯ ಎಲ್ಲೆ ಮೀರಿದವರಲ್ಲ. ಆದರೆ, ಸಭ್ಯತೆಯ ಗಂಧಗಾಳಿ ಗೊತ್ತಿಲ್ಲದ ನಿಮಗೆ ರಾಜಕೀಯ ಜನ್ಮಕೊಟ್ಟ ಮಾತೃಪಕ್ಷದ ಬಗ್ಗೆ ಇರುವ ಮತ್ಸರ ನಿಮ್ಮ ಕೊಳಕು ಮನಃಸ್ಥಿತಿಗೆ ಹಿಡಿದ ಕನ್ನಡಿ.

ಇಬ್ರಾಹಿಂ ಅವರನ್ನು ಕಾಂಗ್ರೆಸ್ ನಲ್ಲಿ ಮುಗಿಸಲು ಷಡ್ಯಂತ್ರ ರೂಪಿಸಿದಂತೆ, ಈಗ ಅವರ ಮಗನ ವಿಷಯದಲ್ಲೂ ದುಷ್ಟತಂತ್ರ ಹೂಡಲು ಹೊರಟಿದ್ದೀರಿ. ಸಿದ್ದಹಸ್ತನ ಜತೆ ಸೇರಿ ಮುಸ್ಲಿಂ ನಾಯಕರನ್ನು ಒಬ್ಬೊಬ್ಬರನ್ನಾಗಿಯೇ ಮುಗಿಸಿದ ಮಿಸ್ಟರ್ ಜಮೀರ್, ಮುಸ್ಲಿಂ ಸಮುದಾಯಕ್ಕೆ ನಿಮಗಿಂತ ದೊಡ್ಡ ಶತ್ರು ಬೇರೆ ಯಾರೂ ಇಲ್ಲ. ಸಮುದಾಯಕ್ಕೆ ಈ ಸತ್ಯ ಅರ್ಥವಾಗಿದೆ ಎಂದು ತಿರುಗೇಟು ನೀಡಿದೆ.

ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ