AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್‌ ಕಣ್ಣೀರೋತ್ಸವ ಎಂದ ಬಿಜೆಪಿಗೆ ತಿರುಗೇಟು ನೀಡಿದ ಜನತಾದಳ

ಕುಮಾರಸ್ವಾಮಿ ಅವರಿಗೆ ಶುಭಾಶಯಗಳು. ನಿಮ್ಮ ಜನತಾ ಜಲಧಾರೆ ಕಾರ್ಯಕ್ರಮವನ್ನು ಮೀರಿಸುವ ರೀತಿ ಇನ್ನೊಂದು ಯೋಜನೆ ರೂಪಿಸಿದ್ದೀರಿ. ಜೆಡಿಎಸ್ ಕಣ್ಣೀರಧಾರೆ ಯಶಸ್ವಿಯಾಗಲಿ! ಎಂದು ಬಿಜೆಪಿ ಕರ್ನಾಟಕ ಟ್ವೀಟ್ ಪೇಜ್ ವ್ಯಂಗ್ಯವಾಡಿದೆ. ಜೊತೆಗೆ ಜೆಡಿಎಸ್‌ ಕಣ್ಣೀರೋತ್ಸವ ಎಂದು ಹ್ಯಾಶ್‌ಟ್ಯಾಗ್​ನ್ನು ಬಳಸಿದೆ.

ಜೆಡಿಎಸ್‌ ಕಣ್ಣೀರೋತ್ಸವ ಎಂದ ಬಿಜೆಪಿಗೆ ತಿರುಗೇಟು ನೀಡಿದ ಜನತಾದಳ
jds Vs Bjp
TV9 Web
| Edited By: |

Updated on:Aug 02, 2022 | 3:06 PM

Share

ಮಂಡ್ಯದ ನಾಗಮಂಗಲದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಎಚ್‌. ಡಿ. ದೇವೇಗೌಡರ ಆರೋಗ್ಯ ಸ್ಥಿತಿಯನ್ನು ನೆನೆದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಮತ್ತು ಎಚ್. ಡಿ ರೇವಣ್ಣ ಕಣ್ಣೀರು ಹಾಕಿದ್ದರು. ಇದನ್ನು ಬಿಜೆಪಿ  ವ್ಯಂಗ್ಯವಾಗಿ ಟ್ವೀಟ್ ಮಾಡಿದೆ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಶುಭಾಶಯಗಳು. ನಿಮ್ಮ ಜನತಾ ಜಲಧಾರೆ ಕಾರ್ಯಕ್ರಮವನ್ನು ಮೀರಿಸುವ ರೀತಿ ಇನ್ನೊಂದು ಯೋಜನೆ ರೂಪಿಸಿದ್ದೀರಿ. ಜೆಡಿಎಸ್ ಕಣ್ಣೀರಧಾರೆ ಯಶಸ್ವಿಯಾಗಲಿ! ಎಂದು ಬಿಜೆಪಿ ಕರ್ನಾಟಕ ಟ್ವೀಟ್ ಪೇಜ್ ವ್ಯಂಗ್ಯವಾಡಿದೆ. ಜೊತೆಗೆ ಜೆಡಿಎಸ್‌ ಕಣ್ಣೀರೋತ್ಸವ ಎಂದು ಹ್ಯಾಶ್‌ಟ್ಯಾಗ್​ನ್ನು ಬಳಸಿದೆ. ಒಂದೆಡೆ ಜನತಾ ಜಲಧಾರೆ, ಮತ್ತೊಂದೆಡೆ ಕಣ್ಣೀರಧಾರೆ ಒಟ್ಟಿನಲ್ಲಿ ನೀರೋ, ನೀರು! ಮುಂದಿನ ಚುನಾವಣೆಯ ನಂತರ ಜೆಡಿಎಸ್‌ ಪಕ್ಷ ಮುಳುಗುವ ಸೂಚನೆಯಿದು. ಜೆಡಿಎಸ್ ದೋಣಿಯಲ್ಲಿ ಅಪ್ಪ, ಮಕ್ಕಳು, ಮೊಮ್ಮಕ್ಕಳಷ್ಟೇ ದಡ ಸೇರಬಹುದು, ಮಿಕ್ಕವರು ಮುಳುಗುವುದು ಪಕ್ಕಾ! ಎಂದು ಜೆಡಿಎಸ್ ನಾಯಕ ಕಾಲೆಳೆದಿದೆ.

ಈ ಟ್ವೀಟ್​ ಗೆ ತಿರುಗೇಟು ನೀಡಿರುವ ಜನತಾ ದಳ ಟ್ವೀಟ್ ಪೇಜ್, ಅರವತ್ತು ವರ್ಷಗಳಿಂದ ರಾಜಕೀಯದಲ್ಲಿ ಸಕ್ರಿಯವಾಗಿದ್ದ ತಂದೆಯ ವಯೋ ಸಹಜ ಅನಾರೋಗ್ಯ ಕಂಡು ಯಾವುದೇ ಮಕ್ಕಳಿಗೂ ನೋವಾಗದೇ ಇರದು, ಇಂತಹ‌ ಸನ್ನಿವೇಶದಲ್ಲಿ ಕುಮಾರಸ್ವಾಮಿ ಅವರು ಒಂದೆರಡು ಹನಿ ಕಣ್ಣೀರು ಹಾಕಿದ್ದಾರೆ, ಇದರಲ್ಲಿ ವ್ಯಂಗ್ಯ ಮಾಡುವಂತದ್ದೇನೂ ಇಲ್ಲ. ಆದರೆ ಎಲ್ಲದಕ್ಕೂ ವ್ಯಂಗ್ಯ ಮಾಡೋದು ಈ ಮಾನಗೆಟ್ಟ ಬಿಜೆಪಿ (BJP4Karnataka) ಕ್ಕೇ ಹೊಸದೇನೂ ಅಲ್ಲ ಎಂದು ಬರೆದುಕೊಂಡಿದ್ದಾರೆ.

Published On - 3:04 pm, Tue, 2 August 22

ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್