ಜೆಡಿಎಸ್​ ಪಕ್ಷವನ್ನು ಪದೇ ಪದೇ ಕೆಣಕುತ್ತಿದ್ದಾರೆ, ಹೀಗೆ ಮಾಡಿದ್ರೆ ಸಿದ್ದರಾಮಯ್ಯ ಮನೆಗೆ ಹೋಗಬೇಕಾಗುತ್ತೆ: ಕುಮಾರಸ್ವಾಮಿ

ಜೆಡಿಎಸ್​ ಪಕ್ಷದ ಬಗ್ಗೆ ಸಿದ್ದರಾಮಯ್ಯ ಲಘುವಾಗಿ ಮಾತನಾಡಿದ್ದಾರೆ. ಜೆಡಿಎಸ್​ ಪಕ್ಷವನ್ನು ಹೀಗೆ ಕೆಣಕಿ ಕೆಣಕಿ ಮನೆಗೆ ಹೋಗುವ ಕಾಲ ಬಂದಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದರು.

ಜೆಡಿಎಸ್​ ಪಕ್ಷವನ್ನು ಪದೇ ಪದೇ ಕೆಣಕುತ್ತಿದ್ದಾರೆ, ಹೀಗೆ ಮಾಡಿದ್ರೆ ಸಿದ್ದರಾಮಯ್ಯ ಮನೆಗೆ ಹೋಗಬೇಕಾಗುತ್ತೆ: ಕುಮಾರಸ್ವಾಮಿ
ಕುಮಾರಸ್ವಾಮಿ, ಸಿದ್ಧರಾಮಯ್ಯ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Feb 13, 2023 | 6:05 PM

ಬೆಳಗಾವಿ: ಜೆಡಿಎಸ್​ ಪಕ್ಷದ ಬಗ್ಗೆ ಸಿದ್ದರಾಮಯ್ಯ (Siddaramaiah) ಲಘುವಾಗಿ ಮಾತನಾಡಿದ್ದಾರೆ. ಜೆಡಿಎಸ್​ ಪಕ್ಷವನ್ನು ಹೀಗೆ ಕೆಣಕಿ ಕೆಣಕಿ ಮನೆಗೆ ಹೋಗುವ ಕಾಲ ಬಂದಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದರು. ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಡಸಲೂರು ಗ್ರಾಮದಲ್ಲಿ ಮಾತನಾಡಿ, ಈ ಚುನಾವಣೆಯಲ್ಲಿ ಕೋಲಾರದಲ್ಲಿ ಏನಾಗುತ್ತೆ ಎಂದು ಕಾದುನೋಡಿ ಎಂದು ಹೆಚ್​.ಡಿ. ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಸುಪಾರಿ ತಗೊಂಡರು

ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧಿಸಲ್ಲ ಎಂಬ ಯಡಿಯೂರಪ್ಪ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಅವರಿಬ್ಬರು ಆತಂತರಿಕವಾಗಿ ಒಬ್ಬರಿಗೊಬ್ಬರು ವಿಶ್ವಾಸದಲ್ಲಿ ಇದ್ದಾರೆ. 2008ರಲ್ಲಿ ಉಪಚುನಾವಣೆಯಲ್ಲಿ ಆಪರೇಷನ್ ಕಮಲ ಚುನಾವಣೆಯಲ್ಲಿ ಸಿದ್ದರಾಮಯ್ಯ ಸುಪಾರಿ ತಗೊಂಡರು. ಸುಪಾರಿಗೆ ಎಷ್ಟು ತಗೊಂಡಿದ್ದಾರೆ ಎಂದು ನಾನು ಸಾವಿರ ಸಲ ಕೇಳಿದ್ದೇನೆ, ಈವರೆಗೂ ಉತ್ತರ ಸಿಕ್ಕಿಲ್ಲ.

ಇದನ್ನೂ ಓದಿ: ಏರ್​​ ಶೋ ಬಡತನ ನಿವಾರಿಸುವ ಕಾರ್ಯಕ್ರಮನಾ? : ಹೆಚ್​. ಡಿ ಕುಮಾರಸ್ವಾಮಿ

ರಾಜ್ಯದಲ್ಲಿ ಬಿಜೆಪಿ ಬೆಳೆಯಲು ಸಿದ್ದರಾಮಯ್ಯ ನಡುವಳಿಕೆ ಕಾರಣ 

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಕುಮಾರಸ್ವಾಮಿ ಕಾರಣ ಎನ್ನುತ್ತಾರೆ. ರಾಜ್ಯದಲ್ಲಿ ಬಿಜೆಪಿ ಸದೃಢವಾಗಿ ಬೆಳೆಯಲು ಸಿದ್ದರಾಮಯ್ಯ ನಡುವಳಿಕೆ ಕಾರಣ. ಮೊದಲು ಅವರು ಆತ್ಮವಾಲೋಕನೆ ಮಾಡಿಕೊಳ್ಳಬೇಕು. ಈಗಲೂ ಬಿಜೆಪಿ ಗೆಲ್ಲಿಸುವ ಸುಪಾರಿಯನ್ನು ಸಿದ್ದರಾಮಯ್ಯ ಪಡೆದಿದ್ದಾರೆ. ಅವರು ಸಿಎಂ ಆದ್ರೆ ಮಾತ್ರ ಕಾಂಗ್ರೆಸ್, ಇಲ್ಲವೇ ಪಕ್ಷ ಸಂಪೂರ್ಣವಾಗಿ ನಿರ್ಣಾಮ ಆಗಬೇಕು ಎನ್ನುವ ಉದ್ದೇಶ ಅಷ್ಟೇ ಅವರದು. ಸೂರ್ಯ, ಚಂದ್ರ ಇರೋದು ಎಷ್ಟು ನಿಜ ಕಾಂಗ್ರೆಸ್ ಅಧಿಕಾರಕ್ಕೆ ಬರೋದು ನಿಜ ಎನ್ನುತ್ತಾರೆ, ‌ನೀವು ಅಲ್ಲೇ ಅರ್ಥ ಮಾಡಿಕೊಳ್ಳಬಹುದು ಕಾಂಗ್ರೆಸ್ ಈ ಬಾರಿ ನೆಲ ಕಚ್ಚಲಿದೆ ಅಂತಾ ಎಂದು ವಾಗ್ದಾಳಿ ಮಾಡಿದರು.

ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕೆ

ಜೆಡಿಎಸ್​ನ ಪಂಚರತ್ನ ರಥಯಾತ್ರೆಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಎರಡನೇ ಹಂತದ ವೇಳೆ 10 ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಸಮರ್ಥವಾದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುತ್ತೇನೆ. 1994ರಲ್ಲಿ ಜಿಲ್ಲೆಯಲ್ಲಿ ಜನತಾ ದಳಕ್ಕೆ ಆಶೀರ್ವಾದ ಮಾಡಿದ್ದರು. ಅದೇ ರೀತಿಯ ವಾತಾವರಣ ಬೆಳಗಾವಿ ಜಿಲ್ಲೆಯಲ್ಲಿ ನಿರ್ಮಾಣವಾಗಿದೆ. ಸಾಲ ಮನ್ನಾದಿಂದ ಬೆಳಗಾವಿ ಜಿಲ್ಲೆಗೆ ಅತಿ ಹೆಚ್ಚು ಲಾಭ ಸಿಕ್ಕಿದೆ. ಅನುಕೂಲ ಮಾಡಿದ್ದೀಯಾ ನಿನ್ನ ಋಣ ತೀರಿಸ್ತಿವಿ ಅಂತಿದ್ದಾರೆ. ಪಂಚರತ್ನ ಯೋಜನೆಯ ಬಗ್ಗೆ ಜನರಲ್ಲಿ ವಿಶ್ವಾಸ ಮೂಡುತ್ತಿದೆ. ಸ್ವತಂತ್ರ ಸರ್ಕಾರ ರಚನೆ ಗುರಿ ಇಟ್ಟುಕೊಂಡು ಹೊರಟಿದ್ದೇನೆ. ಬೆಳಗಾವಿ ಜಿಲ್ಲೆಯ ದೊಡ್ಡ ನಾಯಕರು ಜೆಡಿಎಸ್​ಗೆ ಬರಲಿದ್ದಾರೆ. ಶೀಘ್ರದಲ್ಲೇ ದೊಡ್ಡ ನಾಯಕರು ಯಾರು ಅಂತಾ ಗೊತ್ತಾಗಲಿದೆ ಎಂದರು.

ಇದನ್ನೂ ಓದಿ: Siddaramaiah: ಸಾಲ ಮನ್ನಾ, ಮಹಿಳೆಯರಿಗೆ 1 ಲಕ್ಷ, ರೈತರಿಗೆ 5 ಲಕ್ಷ ರೂ ಬಡ್ಡಿರಹಿತ ಸಾಲ: ಸಿದ್ದರಾಮಯ್ಯ ಭರವಸೆ

ನಟಿ ರಮ್ಯಾ ಸೇರಿದಂತೆ ಯಾರು ಬೇಕಾದ್ರೂ ಸ್ಪರ್ಧಿಸಲಿ ತಲೆಕೆಡಿಸಿಕೊಳ್ಳಲ್ಲ

ಇನ್ನು ಚನ್ನಪಟ್ಟಣದಲ್ಲಿ ನಟಿ ರಮ್ಯಾ ಸೇರಿದಂತೆ ಯಾರು ಬೇಕಾದ್ರೂ ಸ್ಪರ್ಧಿಸಲಿ. ಇದು ಆಯಾಯ ಪಕ್ಷಕ್ಕೆ ಬಿಟ್ಟ ವಿಚಾರ, ಈ ಬಗ್ಗೆ ತಲೆಕೆಡಿಸಿಕೊಳ್ಳಲ್ಲ. ಈಗಲೂ ರಾಮನಗರ, ಚನ್ನಪಟ್ಟಣದಲ್ಲಿ ಜೆಡಿಎಸ್ ಬಗ್ಗೆ ವಿಶ್ವಾಸ ಇದೆ. ಈ ಸಲ ನನ್ನ ವಿರುದ್ಧ ಅಭ್ಯರ್ಥಿ ಯಾರು ಅನ್ನುವ ಪ್ರಶ್ನೆ ಇಲ್ಲ. ಚನ್ನಪಟ್ಟಣದಲ್ಲಿ ಮನೆ ಮಗನಿಗಿಂತ ಹೆಚ್ಚಾಗಿ ಪ್ರಿತಿಸುತ್ತಾರೆ ಎಂದು ಹೆಚ್​.ಡಿ ಕುಮಾರಸ್ವಾಮಿ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.