ರಾಮನಗರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜ್ ಹೈಜಾಕ್ ಮಾಡಿದ ಕಾಂಗ್ರೆಸ್: ನಿಖಿಲ್ ಕುಮಾರಸ್ವಾಮಿ

| Updated By: Rakesh Nayak Manchi

Updated on: Sep 08, 2023 | 3:15 PM

ರಾಮನಗರದಲ್ಲಿರುವ ರಾಜೀವ್‌ ಗಾಂಧಿ ಮೆಡಿಕಲ್‌ ಕಾಲೇಜು ಅನ್ನು ಕನಕಪುರಕ್ಕೆ ಸ್ಥಳಾಂತರಿಸಲು ಡಿಸಿಎಂ ಡಿಕೆ ಶಿವಕುಮಾರ್ ಯತ್ನಿಸುತ್ತಿದ್ದಾರೆ. ಇದನ್ನು ಖಂಡಿಸಿ ರಾಮನಗರದ ಜನರು, ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ಇಂದು ಬಂದ್​ಗೆ ಕರೆ ಕೊಡಲಾಗಿದೆ. ಇದನ್ನು ಬೆಂಬಲಿಸಿ ಜೆಡಿಎಸ್ ನಾಯಕ, ನಟ ನಿಖಿಲ್ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ರಾಮನಗರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜ್ ಹೈಜಾಕ್ ಮಾಡಿದ ಕಾಂಗ್ರೆಸ್: ನಿಖಿಲ್ ಕುಮಾರಸ್ವಾಮಿ
ನಿಖಿಲ್ ಕುಮಾರಸ್ವಾಮಿ ಮತ್ತು ಡಿಕೆ ಶಿವಕುಮಾರ್
Follow us on

ಬೆಂಗಳೂರು, ಸೆ.8: ರಾಮನಗರದಲ್ಲಿರುವ (Ramanagara) ರಾಜೀವ್‌ ಗಾಂಧಿ ಮೆಡಿಕಲ್‌ ಕಾಲೇಜು ಅನ್ನು ಕನಕಪುರಕ್ಕೆ ಸ್ಥಳಾಂತರಿಸಲು ಡಿಸಿಎಂ ಡಿಕೆ ಶಿವಕುಮಾರ್ (D.K.Shivakumar) ಯತ್ನಿಸುತ್ತಿದ್ದಾರೆ. ಇದನ್ನು ಖಂಡಿಸಿ ರಾಮನಗರದ ಜನರು, ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ಇಂದು ಬಂದ್​ಗೆ ಕರೆ ಕೊಡಲಾಗಿದೆ. ಇದನ್ನು ಬೆಂಬಲಿಸಿ ಜೆಡಿಎಸ್ ನಾಯಕ, ನಟ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಟ್ವೀಟ್ ಮಾಡಿದ್ದಾರೆ.

ಮೆಡಿಕಲ್ ಕಾಲೇಜು ರಾಮನಗರ ಜಿಲ್ಲೆಯ ಜನತೆಯ ಹಕ್ಕು. ಅದಕ್ಕಾಗಿ ಹೋರಾಟ ಮಾಡುವ ಹಕ್ಕೂ ಅವರಿಗಿದೆ. ಹೀಗಾಗಿ ಪಕ್ಷಾತೀತವಾಗಿ ನಡೆಯುತ್ತಿರುವ ರಾಮನಗರ ಬಂದ್ ಗೆ ನನ್ನ ಸಂಪೂರ್ಣ ಬೆಂಬಲವಿದೆ. ನೇರವಾಗಿ ಭಾಗವಹಿಸಿ ರಾಜಕೀಯ ಬೆರೆಸುವುದು ನನಗೆ ಇಷ್ಟವಿಲ್ಲ. ಮೆಡಿಕಲ್ ಕಾಲೇಜು ಬೇಕೆನ್ನುವ ರಾಮನಗರ ಜನರ ಒತ್ತಾಯಕ್ಕೆ ನನ್ನ ಸಹಮತ ಇದೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

2006-07ರಲ್ಲೇ 310 ಕೋಟಿ ರೂ. ವೆಚ್ಚದಲ್ಲಿ ವೈದ್ಯಕೀಯ ಕಾಲೇಜು ಸೇರಿ ರಾಮನಗರದಲ್ಲಿ ರಾಜೀವ್ ಗಾಂಧಿ ವಿವಿ ಸಮುಚ್ಚಯ ಸ್ಥಾಪನೆಗೆ ಅಂದಿನ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರು ಆಡಳಿತಾತ್ಮಕ ಮಂಜೂರಾತಿ ನೀಡಿದ್ದರು. ಮತ್ತೆ 25-3-2019 ರಂದು ಸಿಎಂ ಆಗಿದ್ದ ಕುಮಾರಣ್ಣ ಅವರು ಆ ಯೋಜನೆಯ ವೆಚ್ಚವನ್ನು 540 ಕೋಟಿ ರೂ.ಎ ಹೆಚ್ಚಿಸಿದ್ದರು ಎಂದರು.

ಇದನ್ನೂ ಓದಿ: ರೈತರು ಸಾವಿಗೆ ಶರಣಾಗುತ್ತಿರುವ ಬಗ್ಗೆ ಶಿವಕುಮಾರ್, ಇನ್ನೊಬ್ಬ ಮಂತ್ರಿ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ: ಬಸನಗೌಡ ಯತ್ನಾಳ್

ಮೈತ್ರಿ ಸರಕಾರದ ಅವಧಿಯಲ್ಲಿ ಕನಕಪುರಕ್ಕೂ ಪ್ರತ್ಯೇಕ ಮೆಡಿಕಲ್ ಕಾಲೇಜು ಬೇಕು ಎಂದು ಅಂದು ಡಿಕೆ ಶಿವಕುಮಾರ್ ಅವರೇ ಒತ್ತಡ ಹೇರಿದ್ದರು. 13-12-2018 ರಲ್ಲಿ 450 ಕೋಟಿ ರೂ. ವೆಚ್ಚದ ಮೆಡಿಕಲ್ ಕಾಲೇಜನ್ನು ಕುಮಾರಣ್ಣ ಅವರು ಕನಕಪುರಕ್ಕೂ ಮಂಜೂರು ಮಾಡಿದ್ದರು ಎಂದರು.

ಬಳಿಕ ಬಿಜೆಪಿ ಸರಕಾರವು ರಾಮನಗರ ಮೆಡಿಕಲ್ ಕಾಲೇಜು ಹಾಗೂ ರಾಜೀವ್ ಗಾಂಧಿ ವಿವಿ ಸಮುಚ್ಚಯ ನಿರ್ಮಾಣಕ್ಕೆ 610 ಕೋಟಿ ರೂ. ವೆಚ್ಚದಲ್ಲಿ ಗುದ್ದಲಿಪೂಜೆ ನೆರವೇರಿಸಿತ್ತು. ಎರಡು ತಿಂಗಳ ಹಿಂದೆ ಬಂದ ಕಾಂಗ್ರೆಸ್ ಸರಕಾರವು ರಾಮನಗರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜನ್ನು ಹೈಜಾಕ್ ಮಾಡುವ ಮೂಲಕ ರಾಮನಗರ ಜನತೆಗೆ ದ್ರೋಹ ಎಸಗಿದೆ ಎಂದರು.

ಡಿಸಿಎಂ ಡಿಕೆ ಶಿವಕುಮಾರ್ ಅವರ ಒತ್ತಡದಿಂದಲೇ ರಾಮನಗರ ಮೆಡಿಕಲ್ ಕಾಲೇಜನ್ನು ಕನಕಪುರಕ್ಕೆ ಸ್ಥಳಾಂತರ ಮಾಡುವುದಾಗಿ ಸ್ವತಃ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರೇ ಹೇಳಿದ್ದರು. ಹಾಗಾದರೆ, ಈ ಸರಕಾರ ಯಾರನ್ನು ಯಾಮಾರಿಸಲು ಹೊರಟಿದೆ. ಡಬಲ್ ಗೇಮ್ ಆಡುತ್ತಿರುವುದು ಯಾವ ಪುರುಷಾರ್ಥಕ್ಕೆ? ಸುಖಾ ಸುಮ್ಮನೆ ಗೊಂದಲ ಯಾಕೆ? ಎಂದು ನಿಖಿಲ್ ಪ್ರಶ್ನಿಸಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:13 pm, Fri, 8 September 23