ಬೆಳಗಾವಿ ವಿವಾದ: ಉದ್ಧವ್ ಠಾಕ್ರೆ ಹೇಳಿಕೆಗೆ ಎಚ್​ಡಿಕೆ ಖಂಡನೆ, ಎಂಇಎಸ್ ನಿಷೇಧವಿಲ್ಲ ಎಂದ ಸೋಮಣ್ಣ

ಶಿವಾಜಿ ಪ್ರತಿಮೆ ವಿರೂಪ ಮಾಡಿದ ವಿಷಯವನ್ನು ಪ್ರಸ್ತಾಪ ಮಾಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಅನಗತ್ಯ ಹೇಳಿಕೆ ಒಪ್ಪಲು ಸಾಧ್ಯವಿಲ್ಲ ಎಂದು ಜೆಡಿಎಸ್ ನಾಯಕ ಎಚ್​.ಡಿ.ಕುಮಾರಸ್ವಾಮಿ ಹೇಳಿದ್ದಾರೆ

ಬೆಳಗಾವಿ ವಿವಾದ: ಉದ್ಧವ್ ಠಾಕ್ರೆ ಹೇಳಿಕೆಗೆ ಎಚ್​ಡಿಕೆ ಖಂಡನೆ, ಎಂಇಎಸ್ ನಿಷೇಧವಿಲ್ಲ ಎಂದ ಸೋಮಣ್ಣ
ವಸತಿ ಸಚಿವ ವಿ.ಸೋಮಣ್ಣ ಮತ್ತು ಜೆಡಿಎಸ್ ನಾಯಕ ಎಚ್​.ಡಿ.ಕುಮಾರಸ್ವಾಮಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Dec 19, 2021 | 3:08 PM

ಬೆಂಗಳೂರು: ಬೆಳಗಾವಿಯಲ್ಲಿ ಬೇರೆಯವರು ಬೇಳೆ ಬೇಯಿಸಿಕೊಳ್ಳುವುದು ಬೇಡ. ನಮ್ಮ ಹೆಮ್ಮೆಯ ಕಲಿ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ದೇಶದ್ರೋಹಿಗಳಿಗೆ ತಕ್ಕ ಪಾಠ ಕಲಿಸುವುದು ಬಿಟ್ಟು ಕನ್ನಡಪರ ಹೋರಾಟಗಾರರ ಮೇಲೆ ರಾಜ್ಯ ಸರಕಾರ ಪ್ರತಾಪ ತೋರಿಸುವುದು ಬೇಡ ಎಂದು ಜೆಡಿಎಸ್ ನಾಯಕ ಎಚ್​.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಎಂಇಎಸ್​ ಕಾರ್ಯಕರ್ತರ ಆಕ್ಷೇಪಾರ್ಹ ವರ್ತನೆಯನ್ನು ಟ್ವೀಟ್​ನಲ್ಲಿ ಖಂಡಿಸಿರುವ ಅವರು, ಶಿವಾಜಿ ಪ್ರತಿಮೆ ವಿರೂಪ ಮಾಡಿದ ವಿಷಯವನ್ನು ಪ್ರಸ್ತಾಪ ಮಾಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಅನಗತ್ಯ ಹೇಳಿಕೆ ಒಪ್ಪಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಪದವಿಯಲ್ಲಿದ್ದು ಒಕ್ಕೂಟ ವ್ಯವಸ್ಥೆ ಆಶಯವನ್ನು ಗಾಳಿಗೆ ತೂರುವ ಉದ್ಧಟತನದ ಮಾತೇಕೆ ಎಂದು ಪ್ರಶ್ನಿಸಿದ್ದಾರೆ.

ಶಿವಾಜಿ ಮಹಾರಾಜರ ಬಗ್ಗೆ ಗೌರವ ಕೊಡೋಣ. ಹಾಗಂತ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಅವರ ಬಗ್ಗೆ ಮರಾಠಿಗರಿಗೆ ಅಸಡ್ಡೆ ಯಾಕೆ? ಇಡೀ ದೇಶಕ್ಕೆ ಸ್ವಾತಂತ್ರ್ಯ ಸಿಗಲಿ ಎಂದು ಹೋರಾಟ ನಡೆಸಿದ ರಾಯಣ್ಣ ಅವರ ಪ್ರತಿಮೆ ಹಾಳು ಮಾಡಿದ ಕೆಟ್ಟ ಮನಸ್ಸುಗಳಿಗೆ ಏನು ಹೇಳುವುದು. ವಿಕೃತ ಮನಸ್ಸು ಯಾರದ್ದು ಎನ್ನುವುದು ಉದ್ಧವ್ ಠಾಕ್ರೆ ಅವರು ಅರ್ಥ ಮಾಡಿಕೊಂಡರೆ ಉತ್ತಮ. ನಿಮಗೆ ಶಿವಾಜಿ ಹೇಗೆ ಮುಖ್ಯರೋ, ನಮಗೆ ಸಂಗೊಳ್ಳಿ ರಾಯಣ್ಣ ಅವರು ಹಾಗೆಯೇ ಪೂಜ್ಯರು. ಈ ವಿಷಯ ನಿಮಗೆ ಅರ್ಥವಾಗಲಿಲ್ಲ, ಯಾಕೆ ಎಂದು ಕೇಳಿದ್ದಾರೆ.

ಕತ್ತಲಾದ ಮೇಲೆ ಕಳ್ಳರಂತೆ ನುಸುಳಿ ವಾಹನಗಳಿಗೆ ಕಲ್ಲು ಹೊಡೆಯುವುದು ಹೇಡಿತನ. ಮಹಾನ್ ರಾಷ್ಟ್ರಪ್ರೇಮಿ, ಕೆಚ್ಚದೆಯ ವೀರರಾದ ರಾಯಣ್ಣ ಅವರ ಪ್ರತಿಮೆಗೆ ಹಾನಿ ಮಾಡಿದ್ದು ನಿಜವಾದ ವಿಕೃತ ಕೃತ್ಯ. ಮಹಾರಾಷ್ಟ್ರ ಮುಖ್ಯಮಂತ್ರಿಗಳು ಇದನ್ನೆಲ್ಲ ಸಮರ್ಥನೆ ಮಾಡಿಕೊಳ್ಳುತ್ತಿರುವುದು ವಿಪರ್ಯಾಸ ಎಂದು ಅವರು ಆಕ್ಷೇಪಿಸಿದ್ದಾರೆ.

ಎಂಇಎಸ್ ನಿಷೇಧಿಸುವ ಚಿಂತನೆ ಸರ್ಕಾರಕ್ಕಿಲ್ಲ: ವಸತಿ ಸಚಿವ ಸೋಮಣ್ಣ ರಾಮನಗರ: ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಎಸ್) ನಿಷೇಧಿಸುವ ಚಿಂತನೆ ನಮಗೆ ಇಲ್ಲ ಎಂದು ವಸತಿ ಸಚಿವ ಸೋಮಣ್ಣ ಹೇಳಿದರು. ಕನಕಪುರ ತಾಲ್ಲೂಕಿನ ಚಿಕ್ಕಮುದುವಾಡಿ ಗ್ರಾಮದಲ್ಲಿ ಮಾತನಾಡಿದರು. ಅವರು ನಮ್ಮವರೇ, ನಮ್ಮಲ್ಲೇ ಇದ್ದಾರೆ, ಅವರ ಹಕ್ಕನ್ನು ಕೇಳಲಿ. ಆದರೆ ಆದರೆ ಎಂಇಎಸ್​ನವರು​ ಪುಂಡಾಟ ಮಾಡುವುದು ಸರಿಯಲ್ಲ. ಅಧಿವೇಶನ ಮುಗಿದ ನಂತರ ಎಲ್ಲ ರೀತಿ ಕ್ರಮ ಕೈಗೊಳ್ಳುತ್ತೇವೆ. ಬೆಳಗಾವಿಯು ಎಂಇಎಸ್​ನವರ ಕೈತಪ್ಪುತ್ತಿರುವ ಹಿನ್ನೆಲೆ ಹೀಗಾಗುತ್ತಿದೆ. ಎಂಇಎಸ್​ನ ಪ್ರಭಾವ ಈ ಹಿಂದೆ ಇದ್ದಂತೆ ಇಲ್ಲ ಎಂದು ಅಭಿಪ್ರಾಯಪಟ್ಟರು. ಹಿಂದೆ ಬೆಳಗಾವಿ ಪಾಲಿಕೆಯಲ್ಲಿ ಎಂಇಎಸ್​ನವರು ಇದ್ದರು. ಈಗ ಬಿಜೆಪಿ ಪಕ್ಷದವರು ಇದ್ದಾರೆ. ಊರು ಇದ್ದ ಮೇಲೆ ಕೆಲವರು ಇದ್ದೇ ಇರುತ್ತಾರೆ. ಪುಂಡರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಲಾಗುತ್ತದೆ ಎಂದರು.

ಇದನ್ನೂ ಓದಿ: ಎಂಇಎಸ್ ಸಂಘಟನೆ ನಿಷೇಧಿಸಲು ಸರ್ಕಾರಕ್ಕೆ 2 ದಿನ ಗಡುವು ನೀಡಿದ ವಾಟಾಳ್ ನಾಗರಾಜ್ ಇದನ್ನೂ ಓದಿ: ಬೆಳಗಾವಿ ಜನಪ್ರತಿನಿಧಿಗಳು ಫುಲ್ ಸೈಲೆಂಟ್! ಆದರೆ ಶಿವಾಜಿ ಪುತ್ಥಳಿಗೆ ಎಂಇಎಸ್ ಕಾರ್ಯಕರ್ತೆಯರಿಂದ ಕ್ಷೀರಾಭಿಷೇಕ!

Published On - 3:02 pm, Sun, 19 December 21

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?