AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆಗೆ ಮೊದಲೇ ಪ್ರಲ್ಹಾದ್ ಜೋಶಿಯನ್ನು ಸಿಎಂ ಅಭ್ಯರ್ಥಿಯೆಂದು ಘೋಷಿಸಿ: ಬಿಜೆಪಿಗೆ ಎಚ್​ಡಿ ಕುಮಾರಸ್ವಾಮಿ ಮತ್ತೊಂದು ಸವಾಲು

Karnataka Politics: ‘ಬೇರೆ ಮುಖಗಳನ್ನು ಮುಂದಿಟ್ಟು ಚುನಾವಣೆಯಲ್ಲಿ ಮತ ಪಡೆದು, ಆ ಮೇಲೆ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬರುವ ಹುನ್ನಾರ ನಡೆಯುತ್ತಿದೆ‘ ಎಂದು ಎಚ್​.ಡಿ.ಕುಮಾರಸ್ವಾಮಿ ಹೇಳಿದರು.

ಚುನಾವಣೆಗೆ ಮೊದಲೇ ಪ್ರಲ್ಹಾದ್ ಜೋಶಿಯನ್ನು ಸಿಎಂ ಅಭ್ಯರ್ಥಿಯೆಂದು ಘೋಷಿಸಿ: ಬಿಜೆಪಿಗೆ ಎಚ್​ಡಿ ಕುಮಾರಸ್ವಾಮಿ ಮತ್ತೊಂದು ಸವಾಲು
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮತ್ತು ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ
TV9 Web
| Edited By: |

Updated on:Feb 07, 2023 | 11:39 AM

Share

ಬೆಂಗಳೂರು: ಬಿಜೆಪಿ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದರೆ ಪ್ರಲ್ಹಾದ್ ಜೋಶಿ (Pralhad Joshi) ಮುಖ್ಯಮಂತ್ರಿ ಆಗಬಹುದು. ಪ್ರಲ್ಹಾದ್ ಜೋಶಿ ಕರ್ನಾಟಕದ ಬ್ರಾಹ್ಮಣ ಮೂಲದವರಲ್ಲ. ಮಹಾರಾಷ್ಟ್ರದಿಂದ ವಲಸೆ ಬಂದ ಪೇಶ್ವೆಗಳ ವಂಶಸ್ಥರು ಜೆಡಿಎಸ್ ನಾಯಕ ಎಚ್​.ಡಿ.ಕುಮಾರಸ್ವಾಮಿ (HD Kumaraswamy) ಹೇಳಿಕೆ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಈ ಹೇಳಿಕೆಗೆ ಸಮರ್ಥನೆ ಮತ್ತು ವಿರೋಧಗಳು ನಿರಂತರವಾಗಿ ಬರುತ್ತಲೇ ಇವೆ. ‘ನಮ್ಮ ಪಕ್ಷದ ಬಗ್ಗೆ ಇವರಿಗೆ ಯಾವಾಗ ಏನು ಕನಸು ಬೀಳುತ್ತೋ ಗೊತ್ತಿಲ್ಲ. ಏನೇನೋ ಹೇಳುತ್ತಿರುತ್ತಾರೆ’ ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ಕುಮಾರಸ್ವಾಮಿ ಅವರನ್ನು ಮತ್ತಷ್ಟು ಕೆರಳಿಸಿದೆ. ತಮ್ಮ ಹೇಳಿಕೆಯಿಂದ ಬ್ರಾಹ್ಮಣ ಸಮುದಾಯಕ್ಕೆ ಇರಿಸುಮುರಿಸು ಉಂಟಾಗಿದೆ ಎಂಬುದು ಮನವರಿಕೆಯಾದ ನಂತರ ಸಮಾಧಾನಪಡಿಸಲು ಒಂದಿಷ್ಟು ಹೇಳಿಕೆಗಳನ್ನು ನೀಡಿದರು. ‘ಬ್ರಾಹ್ಮಣ ಸಮುದಾಯಕ್ಕೆ ಸೇರಿದವರು ಮುಖ್ಯಮಂತ್ರಿಯಾದರೆ ಆಕ್ಷೇಪವಿಲ್ಲ’ ಎಂದು ಯೂಟರ್ನ್​ ಹೊಡೆದರು.

ವಿವಾದಕ್ಕೆ ಸಂಬಂಧಿಸಿದಂತೆ ಇಂದು ಮುಂಜಾನೆ ‘ಟಿವಿ9’ಗೆ ಪ್ರತಿಕ್ರಿಯಿಸಿದ ಅವರು, ‘ನಾನು ಪ್ರಲ್ಹಾದ್ ಜೋಶಿ ವಿರೋಧಿ ಅಲ್ಲ. ಜೋಶಿ ಅವರನ್ನು ಮುಖ್ಯಮಂತ್ರಿ ಮಾಡುವುದಾದರೆ ಚುನಾವಣೆಗೆ ಮೊದಲೇ ಘೋಷಣೆ ಮಾಡಲಿ. ನಾನು ಯಾವುದೇ ಸಮುದಾಯದ ವಿರೋಧಿ ಅಲ್ಲ. ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಯಾರೊಬ್ಬರು ಮುಖ್ಯಮಂತ್ರಿಯಾಗಲೂ ನನ್ನ ವಿರೋಧವಿಲ್ಲ. ಮುಖ್ಯಮಂತ್ರಿ ಆಗಲು ಅರ್ಹತೆ ಇರುವವರು ಬ್ರಾಹ್ಮಣರಲ್ಲೂ ಇದ್ದಾರೆ’ ಎಂದು ಕುಮಾರಸ್ವಾಮಿ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದರು.

‘ಬಿಜೆಪಿಯಲ್ಲಿ ಈಗಾಗಲೇ ಬಿ.ಎಸ್​.ಯಡಿಯೂರಪ್ಪರನ್ನು ಸೈಡ್​​ಲೈನ್ ಮಾಡಲಾಗಿದೆ. ಜಗದೀಶ್ ಶೆಟ್ಟರ್ ಅವರನ್ನು ಅಮಿತ್ ಶಾ ಕಾರ್ಯಕ್ರಮದ ವೇದಿಕೆಯಿಂದ ಹೊರಗಿಡಲಾಗಿತ್ತು. ಚುನಾವಣೆ ಮುಗಿದ ಮೇಲೆ ಜೋಶಿ ಸಿಎಂ ಆಗುತ್ತಾರೆಂಬ ಮಾಹಿತಿ ನನಗೆ ಸಿಕ್ಕಿದೆ. ಬಿಜೆಪಿ ಸರ್ಕಾರದಲ್ಲಿ 8 ಮಂದಿಯನ್ನು ಉಪಮುಖ್ಯಮಂತ್ರಿ ಮಾಡುವ ಬಗ್ಗೆಯೂ ಚರ್ಚೆಯಾಗಿದೆ. ಆ 8 ಜನ ಯಾಱರು ಎಂಬುದೂ ನನಗೆ ಗೊತ್ತಿದೆ ಎಂದರು.

‘ನಾನು ಪ್ರಲ್ಹಾದ್ ಜೋಶಿ ವಿರೋಧಿಯಲ್ಲ’ ಎಂದು ಸ್ಪಷ್ಟಪಡಿಸಿದ ಅವರು, ಪ್ರಲ್ಹಾದ್ ಜೋಶಿ ಅವರನ್ನು ಮುಖ್ಯಮಂತ್ರಿ ಮಾಡುವುದಾದರೆ ಈಗಲೇ, ಅಂದರೆ ಚುನಾವಣೆ ಮುಂಚಿತವಾಗಿ ಆ ಸಂಬಂಧ ಘೋಷಣೆ ಪ್ರಕಟವಾಗಬೇಕು. ನಾನು ಬ್ರಾಹ್ಮಣ ಸಮುದಾಯದವರು ಮುಖ್ಯಮಂತ್ರಿ ಆಗಲೇಬಾರದು ಎನ್ನುವ ಭಾವನೆ ನನ್ನದಲ್ಲ. ಬ್ರಾಹ್ಮಣ ಸಮಾಜದಲ್ಲಿ ಮುಖ್ಯಮಂತ್ರಿ ಆಗುವ ಅರ್ಹತೆ ಇರುವವರು ಇದ್ದಾರೆ. ರಾಜ್ಯದಲ್ಲಿ ಚುನಾವಣೆ ಆದಮೇಲೆ ಬ್ರಾಹ್ಮಣ ಮುಖ್ಯಮಂತ್ರಿ ಮಾಡುವ ವಿಚಾರ ನನಗೆ ಬಿಜೆಪಿಯ ಮೂಲದಿಂದ ಬಂದಿರುವುದು’ ಎಂದು ಹೇಳಿದರು.

‘ನಾನು ಪ್ರಲ್ಹಾದ ಜೋಶಿ ಅವರ ಹೆಸರು ಪ್ರಸ್ತಾಪಿಸಲು ಮುಖ್ಯ ಕಾರಣ ಅವರು ಬ್ರಾಹ್ಮಣರು ಎಂಬುದಲ್ಲ. ಶೃಂಗೇರಿ ಮಠ ಒಡೆದ ಹಾಗೂ ಮಹಾತ್ಮ ಗಾಂಧಿ ಅವರನ್ನು ಹತ್ಯೆ ಮಾಡಿದ ವರ್ಗದ ಡಿಎನ್​ಎ ಹೊಂದಿರುವ ಬ್ರಾಹ್ಮಣ ವಂಶಕ್ಕೆ ಸೇರಿದವರು ಅವರು. ನಮ್ಮ ಕರ್ನಾಟಕದ ಬ್ರಾಹ್ಮಣರು ಅತ್ಯಂತ ಸಂಸ್ಕೃತಿ ಹೊಂದಿದವರು. ನನಗೆ ಬಿಜೆಪಿ ಕಟ್ಟಿಗೆ ಸಿಲುಕಿಸಬೇಕು ಅನ್ನೋದಲ್ಲ. ನಾಡಿನ ಜನರು ಇಕ್ಕಟ್ಟಿಗೆ ಸಿಲುಕಬಾರದು ಎಂಬುದು ಮುಖ್ಯ ಉದ್ದೇಶ’ ಎಂದು ಕುಮಾರಸ್ವಾಮಿ ಹೇಳಿದರು.

‘ನಾನು ಪೇಜಾವರ ಶ್ರೀಗಳಿಗೆ ಮನವಿ ಮಾಡುತ್ತೇನೆ. ಬ್ರಾಹ್ಮಣರು ಮುಖ್ಯಮಂತ್ರಿ ಆಗಬಾರದು ಎಂದು ನಾನು ಎಲ್ಲೂ ಹೇಳಿಲ್ಲ. ನನಗೂ ಬ್ರಾಹ್ಮಣ ಸ್ನೇಹಿತರಿದ್ದಾರೆ ಬ್ರಾಹ್ಮಣ ಸಮುದಾಯದ ಬಗ್ಗೆ ಅತ್ಯಂತ ಗೌರವ ಹೊಂದಿರುವುದು ನಮ್ಮ ಕುಟುಂಬ. ಹುಬ್ಬಳ್ಳಿ ಈದ್ಗಾ ಮೈದಾನದ ಗಲಭೆ ಶುರು ಮಾಡಿದ್ದು ಇದೇ ವರ್ಗಕ್ಕೆ ಸೇರಿದ ಜನ. ಬಿಜೆಪಿಯಲ್ಲಿ ನೂರಕ್ಕೆ ಎಪ್ಪತ್ತು ಜನರಿಗೆ ಉಸಿರು ಕಟ್ಟಿದ ವಾತಾವರಣದ ಅನುಭವವಾಗುತ್ತಿದೆ. ಇಲ್ಲಿ ನಡೆಯುತ್ತಿರುವ ಬೆಳವಣಿಗೆ ಬಗ್ಗೆ ಸಮಾಧಾನ ಇಲ್ಲ. 2006ರಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುತ್ತಿದ್ದ ಬಿಜೆಪಿ ಈಗ ಇಲ್ಲ. ದೆಹಲಿ ಹೈಕಮಾಂಡ್, ಆ ಎಸ್ಎಸ್ ಪ್ರಚಾರಕರ ಕಪಿಮುಷ್ಠಿಯಲ್ಲಿ ನಡೆಯುತ್ತಿರುವ ಪಕ್ಷ ಇದು. ನಾನು ಪ್ರಲ್ಹಾದ್ ಜೋಶಿ ಅವರ ವಿರೋಧಿಯೂ ಅಲ್ಲ. ಅವರನ್ನು ಮುಖ್ಯಮಂತ್ರಿ ಮಾಡುವುದಾದರೆ ಈಗಲೇ ಚುನಾವಣೆ ಮುಂಚಿತವಾಗಿ ಘೋಷಣೆ ಮಾಡಿ. ಜನ ತೀರ್ಮಾನ ಮಾಡುತ್ತಾರೆ’ ಎಂದು ಸವಾಲು ಹಾಕಿದರು.

‘ಬೇರೆ ಮುಖಗಳನ್ನು ಮುಂದಿಟ್ಟು ಚುನಾವಣೆಯಲ್ಲಿ ಮತ ಪಡೆದು, ಆ ಮೇಲೆ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬರುವ ಹುನ್ನಾರ ನಡೆಯುತ್ತಿದೆ. ಇಂಥ ಹುನ್ನಾರಗಳಿಂದ ರಾಜ್ಯ ಹಾಳಾಗಬಾರದು ಎಂಬ ಕಾರಣಕ್ಕೆ ನಾನು ಮಾತನಾಡುತ್ತಿದ್ದೇನೆ’ ಎಂದು ಹೇಳಿದರು.

ಇದನ್ನೂ ಓದಿ: HD Kumaraswamy: ಬ್ರಾಹ್ಮಣ ಸಮುದಾಯದ ಕ್ಷಮೆ ಕೇಳಲ್ಲ, ಅಂಥ ತಪ್ಪು ನನ್ನಿಂದ ಆಗಿಲ್ಲ; ಎಚ್​ಡಿ ಕುಮಾರಸ್ವಾಮಿ

ರಾಜಕೀಯಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:39 am, Tue, 7 February 23

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್