50 ಜನ ಕರೆದುಕೊಂಡು ಬರುವ ಬಗ್ಗೆ ಕೇಂದ್ರದ ನಾಯಕರ ಬಳಿ ಮಾತನಾಡಿದ್ದಾರೆ: ಹೊಸ ಬಾಂಬ್ ಸಿಡಿದ ಹೆಚ್​ಡಿಕೆ

ವಿಧಾನಸಭೆ ಚುನಾವನೆಯಲ್ಲಿ ಅಭೂತಪೂರ್ವವಾದ ಬಹುತದೊಂದಿಗೆ ಕಾಂಗ್ರೆಸ್ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದು ಆರು ತಿಂಗಳುಗಳೇ ಕಳೆದಿವೆ. ಆದ್ರೆ, ಪಕ್ಷದಲ್ಲಿ ಮುಸುಕಿನ ಗುದ್ದಾಟ ಮಾತ್ರ ಇನ್ನೂ ಕಡಿಮೆಯಾಗುತ್ತಿಲ್ಲ. ಸ್ವಲ್ಪ ದಿನ ತಣ್ಣವಾಗಿದ್ದ ಸಿದ್ದರಾಮಯ್ಯ ಹಾಗೂ ಬಿಕೆ ಹರಿಪ್ರಾಸದ್​ ನಡುವಿನ ತಿಕ್ಕಾಟ ಮತ್ತೆ ಮುನ್ನೆಲೆಗೆ ಬಂದಿದೆ. ಇದರ ಮಧ್ಯೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಎಂಟ್ರಿ ಕೊಟ್ಟಿದ್ದು, ಹೊಸ ಬಾಂಬ್ ಸಿಡಿಸಿದ್ದಾರೆ.

50 ಜನ ಕರೆದುಕೊಂಡು ಬರುವ ಬಗ್ಗೆ ಕೇಂದ್ರದ ನಾಯಕರ ಬಳಿ ಮಾತನಾಡಿದ್ದಾರೆ: ಹೊಸ ಬಾಂಬ್ ಸಿಡಿದ ಹೆಚ್​ಡಿಕೆ
ಹೆಚ್​ಡಿ ಕುಮಾರಸ್ವಾಮಿ
Follow us
ಮಂಜುನಾಥ ಕೆಬಿ
| Updated By: ರಮೇಶ್ ಬಿ. ಜವಳಗೇರಾ

Updated on:Dec 10, 2023 | 11:14 AM

ಹಾಸನ, (ಡಿಸೆಂಬರ್ 10): ನಾನು ಐವತ್ತು ಜನ ಕರೆದುಕೊಂಡು ನಿಮ್ಮ ಜತೆ ಬರುತ್ತೇನೆ ಎಂದು ಕೇಂದ್ರದ ನಾಯಕರ ಬಳಿ ಮಾತನಾಡಿರುವ ಬಗ್ಗೆ ಮಾಹಿತಿ ಇದೆ. ಇಲ್ಲಿ ಯಾರು ಯಾರಿಗೂ ನಿಷ್ಟೆ ಪ್ರಾಮಾಣಿಕತೆ ಇಲ್ಲ. ಅವರವರ ಅನುಕೂಲಕ್ಕೆ ತಕ್ಕಂತೆ ಮಾಡುತ್ತಾರೆ. ಈ ಸರ್ಕಾರ ಮುಂದೆ ಏನಾಗುತ್ತೆ ಲೋಕಸಭಾ ಚುನಾವಣಾ ಮುಗಿದ ಬಳಿಕ ಗೊತ್ತಾಗುತ್ತದೆ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ(HD Kumaraswamy) ಹೊಸ ಬಾಂಬ್ ಸಿಡಿಸಿದ್ದಾರೆ. ಇದರೊಂದಿಗೆ ಪರೋಕ್ಷವಾಗಿ ಕಾಂಗ್ರೆಸ್​ನ ಪ್ರಮುಖ ನಾಯಕರೇ ಐವತ್ತು ಶಾಸಕರನ್ನ ಕರೆತರುವ ಬಗ್ಗೆ ಬಿಜೆಪಿ ನಾಯಕರ ಜೊತೆ ಮಾತನಾಡಿದ್ದಾರೆ ಎಂದು ಹೇಳಿದ್ದಾರೆ. ಹಾಗಾದ್ರೆ, ಆ ರೀತಿ ಹೇಳಿರುವ ನಾಯಕರು ಯಾರು ಎನ್ನುವುದು ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ.

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಲೋಕಸಭಾ ಚುನಾವಣೆ ಆದಮೇಲೆ ಅರ್ಜಿ ಹಾಕಂಡು ಹೋಗಿದ್ದಾರೆ. ಇಲ್ಲ ನಾನು ಐವತ್ತು, ಅರವತ್ತು ಜನ ಕರೆದುಕೊಂಡು ಬಂದುಬಿಡುತ್ತೇನೆ ಏನು ತೊಂದರೆ ಆಗುವುದು ಬೇಡ ಅಂತ ಹೋಗಿದ್ದಾರೆ. ಐವತ್ತು, ಅರವತ್ತು ಜನ ಕರೆದುಕೊಂಡು ಸಣ್ಣಪುಟ್ಟವರಿಂದ ಹೋಗಲು ಆಗುತ್ತಾ? ಮೊನ್ನೆ ಯಾರೋ ಮಾಹಿತಿ ಹೇಳುತ್ತಿದ್ದರು. ಅಯ್ಯೋ ದಯವಿಟ್ಟು ನಿಮ್ಮ ಜೊತೆ ಬಂದು ಬಿಡುತ್ತೇನೆ. ಅಲ್ಲಿಯವರೆಗೂ ಐದಾರು ತಿಂಗಳು ರಿಲೀಫ್ ಕೊಡಿ ಅಂತ ಹೋಗಿದ್ದು ಗೊತ್ತು ಎಂದು ಹೆಸರು ಹೇಳದೇ ಡಿಕೆ ಶಿವಕುಮಾರ್ ದೆಹಲಿ ಭೇಟಿ ಬಗ್ಗೆಸ್ಪೋಟಕ ಮಾಹಿತಿ ಬಚ್ಚಿಟ್ಟಿದ್ದಾರೆ.

ಲೋಕಸಭಾ ಚುನಾವಣೆ ಕಳೆದ ಮೇಲೆ ಮಹಾರಾಷ್ಟ್ರದಲ್ಲಿ ಆಯ್ತು ಅಲ್ವಾ ಅದೇ ರೀತಿ ಇಲ್ಲಿ ಯಾರು ಹುಟ್ಕತರೋ ಗೊತ್ತಿಲ್ಲ. ಈ ದೇಶದಲ್ಲಿ ಇವತ್ತಿನ ರಾಜಕಾರಣ ನೋಡಿದಾಗ ಏನು ಬೇಕಾದರೂ ನಡೆಯಬಹುದು. ಇಲ್ಲಿ ಯಾರಿಗೂ ಪ್ರಮಾಣಿಕತೆ, ನಿಷ್ಠೆ ಎನ್ನುವುದೇ ಉಳಿದಿಲ್ಲ. ಅವರವರ ಸ್ವಾರ್ಥಕ್ಕೆ ಏನೇನು ಆಗಬೇಕು ಮಾಡಿಕೊಂಡು ಹೋಗುತ್ತಾರೆ ಅಷ್ಟೇ. ಇವತ್ತು ಇಲ್ಲಿ ಇರುತ್ತಾರೆ. ಅನುಕೂಲ ಆಗಬೇಕಾದರೆ ಇನ್ನೊಂದು ಕಡೆ ಹೋಗುತ್ತಾರೆ. ಇದು ರಾಜಕೀಯದಲ್ಲಿ ನಡೆದುಕೊಂಡು ಬಂದಿದೆ ಎಂದರು.

ಕೆಂಪಣ್ಣ ಏನು ಹೇಳಿದಾರೆ ಈ ಸರ್ಕಾರದಲ್ಲೂ ಕಮಿಷನ್ ಇದೆ ಎಂದಿದ್ದಾರೆ. ಅದನ್ನು ಯಾಕೆ ನಿಲ್ಲಿಸುವುದಕ್ಕೆ ಆಗಿಲ್ಲ. 135 ಗೆದ್ದಿದ್ದೇವೆ ಎಂದು ಹೇಳುತ್ತಿದ್ದೀರಿ, ಲೋಕಸಭಾ ಚುನಾವಣೆಯಲ್ಲಿ ನಿಮ್ಮ ಪರಿಸ್ಥಿತಿ ಏನೆಂದು ಗೊತ್ತಾಗುತ್ತೆ. ಎರಡನೇ ಬಾರಿ ಸಾಹಸ ಮಾಡಿ ಸಿಎಂ ಆಗಿದ್ದೀರಿ. ಸಮಾಜವನ್ನು ಎತ್ತಿ ಕಟ್ಟಿ ಏನು ಮಾಡುತ್ತೀರಾ? ಜಾತಿ ಗಣತಿ ಯಾಕೆ ಬೇಕು. ಆರ್ಥಿಕ ಸಾಮಾಜಿಕ ಗಣತಿ ಮಾಡಿಜಾತಿ ಗಣತಿ ಮಾಡಿ ವೈಶಮ್ಯ ಬಿತ್ತಲು ಹೋಗುತ್ತೀರಾ ಎಂದು ಸಿದ್ದರಾಮಯ್ಯನವರನ್ನು ಪ್ರಶ್ನಿಸಿದರು.

ಮುಸ್ಲಿಮರಿಗೆ ಹತ್ತು ಸಾವಿರ ಕೋಟಿ ರೂ. ಕೊಡಲು ನನ್ನ ವಿರೋಧ ಇಲ್ಲ. ಆದರೆ ಹಿಂದುಗಳು ಎಂದರೆ ಕೇವಲ ಮೇಲ್ವರ್ಗದ ಜನ ಅಲ್ಲ. ದಲಿತರು ಬಡವರು ಇದಾರೆ. ಅವರ ಪರಿಸ್ಥಿತಿ ಏನು? ಮತಕ್ಕಾಗಿ ಓಲೈಸಿಕೊಳ್ಳಿ, ನೀವು ಹತ್ತು ಸಾವಿರ ಕೋಟಿ ಕೊಟ್ಟರೆ ಅವರಿಗೇನು ತಲೆ ಮೇಲೆ ಹೊರಿಸ್ತೀರಾ. ಅದರಲ್ಲೂ ಲೂಟಿ ಹೊಡೆಯೋ ಯತ್ನ ಅಷ್ಟೇ ಎಂದು ಎಂದು ಸಿಎಂ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದರು.

ಇನ್ನು ಸಿಎಂ ವಿರುದ್ದ ಬಿಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿರುವ ಬಗ್ಗೆ ಕುಮಾರಸ್ವಾಮಿ ಪ್ರತಿಕ್ರಿಯಿಸಿ, ಬರೀ ಹರಿಪ್ರಸಾದ್ ಅಲ್ಲ. ಇನ್ನೂ ಸಾಕಷ್ಟು ಜನ ಇದ್ದಾರೆ. ಒಂದೊಂದೇ ಧ್ವನಿ ಹೊರ ಬರುತ್ತದೆ ಎಂದು ಹೇಳಿದ ಅವರು, ಈ ಸಲವಾದರೂ ಬೆಳಗಾವಿ ಅಧಿವೇಶನದಲ್ಲಿ ಒಳ್ಲೆ ಚರ್ಚೆ ಆಗಲಿ ಎಂದು ಸುಮ್ಮನಿದ್ದೇನೆ. ನಾನೇನು ಹಿಂದೆ ಸರಿಯಲ್ಲ. ದಾಖಲೆ ಇಟ್ಟೇ ಮಾತನಾಡುತ್ತೇನೆ ಎಂದು ತಿಳಿಸಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:04 am, Sun, 10 December 23

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ