ಗ್ಯಾರಂಟಿ ಅನುಷ್ಠಾನಕ್ಕಾಗಿ ವಿದ್ಯುತ್​ ದರ ಏರಿಕೆ ಮಾಡಿದ್ದಾರೆ; ಹೆಚ್​ಡಿ ಕುಮಾರಸ್ವಾಮಿ ಆರೋಪ

ಕೊವಿಡ್​ನಿಂದ ಇನ್ನೂ ಸಣ್ಣ ಕೈಗಾರಿಕಾ ವಲಯ ಚೇತರಿಸಿಕೊಂಡಿಲ್ಲ. ಈಗ ಮತ್ತೆ ಹೊರೆ ಹಾಕಿದ್ರೆ ಎಂಎಸ್​ಎಂಇ ಚೇತರಿಸಿಕೊಳ್ಳಲು ಹೇಗೆ ಸಾಧ್ಯ? ಈಗಾಗಲೇ ನಿರುದ್ಯೋಗ ಸಮಸ್ಯೆ ಜಾಸ್ತಿಯಾಗುತ್ತಿದೆ. ಇದನ್ನು ರಾಜ್ಯ ಸರ್ಕಾರ ಕೂಡಲೇ ಗಂಭೀರವಾಗಿ ಪರಿಗಣಿಸಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಗ್ಯಾರಂಟಿ ಅನುಷ್ಠಾನಕ್ಕಾಗಿ ವಿದ್ಯುತ್​ ದರ ಏರಿಕೆ ಮಾಡಿದ್ದಾರೆ; ಹೆಚ್​ಡಿ ಕುಮಾರಸ್ವಾಮಿ ಆರೋಪ
ಹೆಚ್​ಡಿ ಕುಮಾರಸ್ವಾಮಿ

Updated on: Jun 22, 2023 | 4:49 PM

ಬೆಂಗಳೂರು: ಕರ್ನಾಟಕ ಕಾಂಗ್ರೆಸ್​​ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ (HD Kumaraswamy), ಗ್ಯಾರಂಟಿ ಅನುಷ್ಠಾನ ಮಾಡಲು ವಿದ್ಯುತ್​ ದರ (Electricity Bill) ಏರಿಕೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ದೇಶದ ಪ್ರಮುಖ ಬೆನ್ನೆಲುಬು ಸಣ್ಣ ಕೈಗಾರಿಕೆಗಳು. ರಾಜ್ಯ ಸರ್ಕಾರದ ಬಳಿ ಸಂಕಷ್ಟ ಹೇಳಿಕೊಳ್ಳಲು ಸಣ್ಣ ಕೈಗಾರಿಕೆಗಳ ನಿಯೋಗ ಹೋಗಿತ್ತು. ಆದರೆ ಕೈಗಾರಿಕೋದ್ಯಮಿಗಳ ಸಂಕಷ್ಟ ಕೇಳದೆ ಪಾಠ ಮಾಡಿ ಕಳಿಸಿದ್ದಾರೆ ಎಂದು ದೂರಿದ್ದಾರೆ.

ವಿದ್ಯುತ್​ ದರ ಏರಿಕೆ ಬಗ್ಗೆ ಕೆಇಆರ್​ಸಿ ಸ್ವಂತ ನಿರ್ಧಾರ ಕೈಗೊಳ್ಳಲು ಆಗುವುದಿಲ್ಲ. ಕಾಂಗ್ರೆಸ್​, ಬಿಜೆಪಿ ನಾಯಕರು ಪರಸ್ಪರ ಆರೋಪ ಮಾಡಿಕೊಳ್ತಿದ್ದಾರೆ. ಈಗ ಹಾಲಿನ ದರ ಸಹ 5 ರೂಪಾಯಿ ಜಾಸ್ತಿ ಮಾಡಲು ಹೊರಟಿದ್ದಾರೆ. ಶಾಲಾ ಮಕ್ಕಳಿಗೆ ನೀಡುವ ಮೊಟ್ಟೆ ಕಡಿತ ಮಾಡಲೂ ಮುಂದಾಗಿದ್ದಾರೆ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊವಿಡ್​ನಿಂದ ಇನ್ನೂ ಸಣ್ಣ ಕೈಗಾರಿಕಾ ವಲಯ ಚೇತರಿಸಿಕೊಂಡಿಲ್ಲ. ಈಗ ಮತ್ತೆ ಹೊರೆ ಹಾಕಿದ್ರೆ ಎಂಎಸ್​ಎಂಇ ಚೇತರಿಸಿಕೊಳ್ಳಲು ಹೇಗೆ ಸಾಧ್ಯ? ಈಗಾಗಲೇ ನಿರುದ್ಯೋಗ ಸಮಸ್ಯೆ ಜಾಸ್ತಿಯಾಗುತ್ತಿದೆ. ಇದನ್ನು ರಾಜ್ಯ ಸರ್ಕಾರ ಕೂಡಲೇ ಗಂಭೀರವಾಗಿ ಪರಿಗಣಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಅಕ್ಕಿ ಗ್ಯಾರಂಟಿಗೆ ದಿನಕ್ಕೊಂದು ನೆಪ; ಕೇಂದ್ರದ ಮೇಲೆ ಗೂಬೆ ಕೂರಿಸಿದ್ದಕ್ಕೆ ಕಾಂಗ್ರೆಸ್ ವಿರುದ್ಧ ಹೆಚ್​​ಡಿ ಕುಮಾರಸ್ವಾಮಿ ಕಿಡಿ

ಅನ್ನಭಾಗ್ಯ ಯೋಜನೆಯಡಿ ಅಕ್ಕಿ ನೀಡಲು ರಾಜ್ಯ ಸರ್ಕಾರ ವಿಳಂಬ ಮಾಡುತ್ತಿರುವ ಬಗ್ಗೆ ಬುಧವಾರವಷ್ಟೇ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಚುನಾವಣಾ ತಂತ್ರಜ್ಞರ ಮಾತು ಕೇಳಿಕೊಂಡು ಉಚಿತ ಗ್ಯಾರಂಟಿಗಳನ್ನು ಕಾಂಗ್ರೆಸ್​​ನವರು ಘೋಷಿಸಿದ್ದರು. ಯೋಜನೆ ಜಾರಿಗೆ ಅಗತ್ಯವಾದ ಸಿದ್ಧತೆ ಮಾಡಿಕೊಳ್ಳಲಿಲ್ಲ ಎಂದು ಟೀಕಿಸಿದ್ದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 4:49 pm, Thu, 22 June 23

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us