AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಗ್ಲೆಕ್ಟ್ ಮಾಡ್ತೀನಿ ಅನ್ನುತ್ತಾ ಕುಮಾರಸ್ವಾಮಿ ಸುತ್ತಲೇ ಯಾಕೆ ಗಿರಕಿ ಹೊಡೆಯುತ್ತೀರಿ? ಸಿದ್ದರಾಮಯ್ಯಗೆ ಹೆಚ್​ಡಿಕೆ ಪ್ರಶ್ನೆ

HD Kumaraswamy: ನನ್ನನ್ನು, ದೇವೇಗೌಡರನ್ನು ಟೀಕೆ ಮಾಡುವುದು ನಿಮಗೆ ಅನಿವಾರ್ಯ. ಅದು ತಪ್ಪಿದರೆ ನಿಮಗೆ ಬೇರೆ ವಿಧಿ ಇಲ್ಲ. ಕಾಂಗ್ರೆಸ್‌ನಲ್ಲಿ ನಿಮಗೆ ಮೂರು ಕಾಸಿನ ಬೆಲೆ ಇಲ್ಲ ಎಂದು ಟೀಕಿಸಿದ್ದಾರೆ.

ನೆಗ್ಲೆಕ್ಟ್ ಮಾಡ್ತೀನಿ ಅನ್ನುತ್ತಾ ಕುಮಾರಸ್ವಾಮಿ ಸುತ್ತಲೇ ಯಾಕೆ ಗಿರಕಿ ಹೊಡೆಯುತ್ತೀರಿ? ಸಿದ್ದರಾಮಯ್ಯಗೆ ಹೆಚ್​ಡಿಕೆ ಪ್ರಶ್ನೆ
ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ
TV9 Web
| Updated By: ganapathi bhat|

Updated on:Oct 10, 2021 | 7:31 PM

Share

ಬೆಂಗಳೂರು: ‘ಸಿದ್ದಕಲೆ’ಯ ನಿಷ್ಣಾತರಿಗೆ ಹೊಸ ಕನಸು ಬಿದ್ದ ಹಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ವೀಕ್ ಆಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಹಗಲು ಕನಸು ಕಾಣುವವರಿಗೆ ನನ್ನ ಅನುಕಂಪವಿದೆ. ಜೆಡಿಎಸ್ ಮತ್ತು ಹೆಚ್.ಡಿ. ಕುಮಾರಸ್ವಾಮಿ ಬಗ್ಗೆ ಮಾತನಾಡುವುದಿಲ್ಲ ಎನ್ನುತ್ತಲೇ ಮತ್ತೆ ಮತ್ತೆ ಅವರು ಅದೇ ಜಪ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ನಾಯಕ ಹೆಚ್​.ಡಿ. ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ. ಮಂಡ್ಯದಲ್ಲಿ ಇಂದು (ಅಕ್ಟೋಬರ್ 10) ಸಿದ್ದರಾಮಯ್ಯ ನೀಡಿದ್ದ ಹೇಳಿಕೆಗೆ ಸರಣಿ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.

ನಮ್ಮ ಸೋಲಿನ ಕಾರಣ ಮಂಡ್ಯ ಜನತೆಗೆ ಗೊತ್ತಿದೆ. ನಿಖಿಲ್ 6 ಲಕ್ಷ ಮತ ಗಳಿಸಿದ್ದರು. ರೈತಸಂಘ, ಕಾಂಗ್ರೆಸ್, ಬಿಜೆಪಿ, ಕೆಲ ಮಾಧ್ಯಮಗಳು ಸೇರಿ ‘ಮ್ಯಾನೇಜ್’ ಮಾಡಿದ ಚುನಾವಣೆ ಅದು. ಕೌರವರು ಮಹಾಭಾರತದಲ್ಲಿ ರಚಿಸಿದ್ದ ಚಕ್ರವ್ಯೂಹದಲ್ಲಿ ಅಭಿಮನ್ಯು ಹೇಗೆ ಸಿಲುಕಿದ್ದನೋ ಹಾಗೇ ಇವರೆಲ್ಲರ ಷಡ್ಯಂತ್ರದ ಚಕ್ರವ್ಯೂಹದಲ್ಲಿ ನಿಖಿಲ್ ಸಿಲುಕಿದ್ದರು ಎಂದು ಕುಮಾರಸ್ವಾಮಿ ಟ್ವೀಟ್​ ಮೂಲಕ ಹೇಳಿದ್ದಾರೆ.

ಸಮ್ಮಿಶ್ರ ಸರಕಾರದ ಮೈತ್ರಿಯ ಭಾಗವಾಗಿದ್ದುಕೊಂಡೇ ಬೆನ್ನಿಗಿರಿದ ನಿಮ್ಮ ಹೀನ ರಾಜಕೀಯ ಯಾರಿಗೆ ಗೊತ್ತಿಲ್ಲ ಹೇಳಿ? ನಿಮ್ಮ ಕುತಂತ್ರ ಹೆಜ್ಜೆಗಳು ಎಲ್ಲೆಲ್ಲಿ ಮೂಡಿದವು ಎಂಬುದು ಜನರಿಗೆ ಗೊತ್ತಿಲ್ಲದ ಸಂಗತಿ ಏನಲ್ಲ. ಅಂತಹ ಚಕ್ರವ್ಯೂಹ ರಚಿಸಿರಲಿಲ್ಲ ಎಂದಾದರೆ ‘ಬ್ರೂಟಸ್’ ಪಾಲಿಟಿಕ್ಸ್ ಮಾಡಿ ನಮ್ಮ ಅಭ್ಯರ್ಥಿಯನ್ನು ಸೋಲಿಸಿದ್ದು ಏಕೆ ಎಂದು ಪ್ರಶ್ನಿಸಿದ್ದಾರೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ನಮಗಾದ ಸೋಲು ಕುತಂತ್ರ ರಾಜಕಾರಣಕ್ಕಾದ ಗೆಲುವು. ಅದನ್ನೇ ಇಟ್ಟುಕೊಂಡು ಜೆಡಿಎಸ್ ದುರ್ಬಲವಾಗಿದೆ ಎಂದು ಹೇಳುವುದು ಮೂರ್ಖತನದ ಪರಮಾವಧಿ ಎಂದು ಆಕ್ರೋಶ ಹೊರಹಾಕಿದ್ದಾರೆ.

ಜೆಡಿಎಸ್ ಬಗ್ಗೆ ಮಾತನಾಡಲ್ಲ ಅಂತೀರಿ. ಕುಮಾರಸ್ವಾಮಿ, ದೇವೇಗೌಡರ ಬಗ್ಗೆ ಮಾತನಾಡುವುದನ್ನೇ ಬಿಟ್ಟಿದ್ದೇನೆ ಅನ್ನುತ್ತೀರಿ. ಕುಮಾರಸ್ವಾಮಿ ಕಾಲು ಕೆರೆದುಕೊಂಡು ಬರುತ್ತಾರೆ ಎಂದು ಗೋಳಾಡುತ್ತೀರಿ. ಮತ್ಯಾಕೆ ನಮ್ಮ ಬಗ್ಗೆ ಮಾತು? ಬಿಜೆಪಿಯವರು ನಿಮ್ಮ ಹೇಳಿಕೆಗಳಿಗೆ ಕ್ಯಾರೇ ಅನ್ನುವುದಿಲ್ಲ. ನಮ್ಮ ಬಗ್ಗೆ ಮಾತನಾಡದಿದ್ದರೆ ನಿಮಗೆ ಗತಿಯೇ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಕುಮಾರಸ್ವಾಮಿಯವರ ಟೀಕೆಗಳನ್ನು ನೆಗ್ಲೆಕ್ಟ್ ಮಾಡ್ತೀನಿ ಅನ್ನುತ್ತಲೇ ಕುಮಾರಸ್ವಾಮಿ ಸುತ್ತಲೇ ಯಾಕೆ ಗಿರಕಿ ಹೊಡೆಯುತ್ತೀರಿ ಸಿದ್ದರಾಮಯ್ಯನವರೇ? ನಿಮ್ಮ ರಾಜಕೀಯ ಉಳಿಗಾಲಕ್ಕಾಗಿ ನನ್ನನ್ನು, ದೇವೇಗೌಡರನ್ನು ಟೀಕೆ ಮಾಡುವುದು ನಿಮಗೆ ಅನಿವಾರ್ಯ. ಅದು ತಪ್ಪಿದರೆ ನಿಮಗೆ ಬೇರೆ ವಿಧಿ ಇಲ್ಲ. ಕಾಂಗ್ರೆಸ್‌ನಲ್ಲಿ ನಿಮಗೆ ಮೂರು ಕಾಸಿನ ಬೆಲೆ ಇಲ್ಲ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ವೀಕ್ ಆಗಿದೆ: ವಿಪಕ್ಷ ನಾಯಕ ಸಿದ್ದರಾಮಯ್ಯ

ಇದನ್ನೂ ಓದಿ: ರಾಜಕೀಯ ಬದುಕು ಕೊಟ್ಟ ಪಕ್ಷವನ್ನೇ ನಿಂದಿಸುತ್ತಿದ್ದಾರೆ; ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಸರಣಿ ಟ್ವೀಟ್

Published On - 7:11 pm, Sun, 10 October 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ