ಮತ್ತೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಿಖಿಲ್​​ಗೆ ಆಹ್ವಾನ, ಹಳೇ ಸೇಡು ತೀರಿಸಿಕೊಳ್ಳಲು ಪ್ಲ್ಯಾನ್

ಜೆಡಿಎಸ್​ ಹಾಗೂ ಬಿಜೆಪಿ ನಡುವೆ ಮಂಡ್ಯ ಲೋಕಸಭಾ ಕ್ಷೇತ್ರಕ್ಕಾಗಿ ಹಗ್ಗಜಗ್ಗಾಟ ನಡೆದಿದೆ. ಒಂದೆಡೆ ಸುಮಲತಾ ಅಂಬರೀಶ್​ ಅವರನ್ನು ಕಣಕ್ಕಿಳಿಸಲು ಬಿಜೆಪಿ ಪ್ಯ್ಲಾನ್ ಮಾಡಿದ್ದರೆ, ಮತ್ತೊಂದೆಡೆ ಜೆಡಿಎಸ್​ ತಮಗೆ ಬೇಕೆಂದು ಪಟ್ಟು ಹಿಡಿದಿದೆ, ಇದರ ಮಧ್ಯೆ ಮತ್ತೆ ಮಂಡ್ಯದಿಂದ ಸ್ಪರ್ಧಿಸುವಂತೆ ನಿಖಿಲ್ ,ಕುಮಾರಸ್ವಾಮಿಗೆ ಆಹ್ವಾನ ನೀಡಲಾಗಿದೆ.

ಮತ್ತೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಿಖಿಲ್​​ಗೆ ಆಹ್ವಾನ, ಹಳೇ ಸೇಡು ತೀರಿಸಿಕೊಳ್ಳಲು ಪ್ಲ್ಯಾನ್
ನಿಖಿಲ್ ಕುಮಾರಸ್ವಾಮಿ
Edited By:

Updated on: Nov 23, 2023 | 3:54 PM

ಮಂಡ್ಯ, (ನವೆಂಬರ್ 23): ಜೆಡಿಎಸ್​ ಹಾಗೂ ಬಿಜೆಪಿ (JDS And BJP) ಮೂತ್ರಿಯಾಗಿದ್ದರಿಂದ ಮಂಡ್ಯ ಲೋಕಸಭಾ ಕ್ಷೇತ್ರ ಯಾರಿಗೆ ಎನ್ನುವುದೇ ನಿಗೂಢವಾಗಿದೆ. ಇತ್ತ ಬಿಜೆಪಿ ಸುಮಲತಾ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದರೆ, ಇತ್ತ ಜೆಡಿಎಸ್​ ಮಂಡ್ಯವನ್ನು ತಮಗೆ ಬಿಟ್ಟುಕೊಡುವಂತೆ ಪಟ್ಟು ಹಿಡಿದಿದೆ. ಹೀಗಾಗಿ ಎರಡೂ ನಾಯಕರ ಮಧ್ಯೆ ಮಂಡ್ಯ ಕಗ್ಗಂಟಾಗಿ ಉಳಿದಿದೆ. ಆದ್ರೆ, ಇದರ ಮಧ್ಯೆ ಮತ್ತೆ ಮಂಡ್ಯದಿಂದ ಸ್ಪರ್ಧಿಸುವಂತೆ ನಿಖಿಲ್ ಕುಮಾರಸ್ವಮಿಗೆ (Nikhil Kumaraswamy) ಆಹ್ವಾನ ಬಂದಿದೆ. ಮಂಡ್ಯ ಜಿಲ್ಲಾ ಜೆಡಿಎಸ್​ ನಾಯಕರು ಸೇರಿದಂತೆ ನಿಖುಲ್ ಕುಮಾರಸ್ವಾಮಿಗೆ ಆಹ್ವಾನ ಕೊಟ್ಟಿದ್ದಾರೆ.

ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಿ.ಎಸ್​.ಪುಟ್ಟರಾಜು, ಲೋಕಸಭೆ ಚುನಾವಣೆಗೆ ಬಿಜೆಪಿ, JDS​ ಮೈತ್ರಿ ಫೈನಲ್ ಆಗಬೇಕಿದ್ದು, ಮಂಡ್ಯದಲ್ಲಿ ನಿಖಿಲ್​ ಕಣಕ್ಕಿಳಿಸಲು ನಮ್ಮ ವರಿಷ್ಠರಿಗೆ ಕೇಳಿದ್ದೇವೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ನಿಖಿಲ್​​ಗೆ ಸೋಲಾಗಿತ್ತು. ಈ ಬಾರಿ ಸ್ಪರ್ಧೆಗೆ ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ: ನೋ ವೇ ಚಾನ್ಸೆ ಇಲ್ಲ: ಜೆಡಿಎಸ್​-ಬಿಜೆಪಿ ಮೈತ್ರಿಗೆ ಖಡಕ್ ಸಂದೇಶ ರವಾನಿಸಿದ ಸುಮಲತಾ ಅಂಬರೀಶ್

ಹೆಚ್​ಡಿ ದೇವೇಗೌಡ, ಹೆಚ್​ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಈ ಮೂವರಲ್ಲಿ​ ಯಾರಾದರೂ ಸ್ಪರ್ಧೆ ಮಾಡಲಿ. ಆದ್ರೆ, ಆದ್ರೆ ಮಂಡ್ಯ ಕ್ಷೇತ್ರದಲ್ಲಿ ನಮ್ಮ ಮೊದಲ ಆದ್ಯತೆ ನಿಖಿಲ್​ ಕುಮಾರಸ್ವಾಮಿಗೆ ಎಂದು ಹೇಳಿದ್ದಾರೆ. ಈ ಮೂಲಕ ಕಳೆದ ಚುನಾವಣೆ ಸೋಲಿಗೆ ಸೇಡು ತೀರಿಸಿಕೊಳ್ಳಲು ಜೆಡಿಎಸ್​ ನಾಯಕರು ಪ್ಲ್ಯಾನ್ ಮಾಡಿದ್ದಾರೆ.

ಮತ್ತೊಂದೆಡೆ ಹಾಲಿ ಸಂಸದೆ ಸುಮಲತಾ ಅಂಬರೀಶ್ ಅವರು ಸಹ ಮಂಡ್ಯ ಬಿಟ್ಟು ಹೋಗುವುದಿಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ. ಅಲ್ಲದೇ ಮಂಡ್ಯದಿಂದಲೇ ಸ್ಪರ್ಧೆ ಮಾಡುವೆ. ಬಿಟ್ಟು ಕೊಡುವ ಮಾತೇ ಇಲ್ಲ ಎಂದು  ಪರೋಕ್ಷವಾಗಿ ಮೈತ್ರಿ ನಾಯಕರುಗಳಿಗೆ ಸಂದೇಶ ರವಾನಿಸಿದ್ದಾರೆ.

ಈ ಎಲ್ಲಾ ಗೊಂದಲಗಳಿಂದಾಗಿ ಜೆಡಿಎಸ್ ಹಾಗೂ ಬಿಜೆಪಿ ನಡುವೆ ಸೀಟು ಹಂಚಿಕೆ ಇನ್ನೂ ಅಧಿಕೃತವಾಗಿಲ್ಲ. ಹಾಸನ, ಮಂಡ್ಯ, ರಾಮನಗರ ಸೇರಿದಂತೆ ಆರೇಳು ಕ್ರ್ಷೇತ್ರಗಳನ್ನು ಬಿಟ್ಟು ಕೊಡುವಂತೆ ಜೆಡಿಎಸ್ ಬೇಡಿಕೆ ಇಟ್ಟಿದ್ದಾರೆ. ಆದ್ರೆ, ಬಿಜೆಪಿ, ಈ ಬಗ್ಗೆ ಚಿಂತನೆ ನಡೆಸಿದೆ. ಯಾವುದನ್ನು ಬಿಟ್ಟು ಕೊಟ್ಟರೆ ಪಕ್ಷಕ್ಕೆ ಅನುಕೂಲ, ಅನಾನುಕೂಲವಾಗಲಿದೆ ಎನ್ನುವ ಕುರಿತು ಚರ್ಚೆ ನಡೆಸಿದೆ.

ಒಟ್ಟಿನಲ್ಲಿ ಮೈತ್ರಿಯಿಂದ ಮಂಡ್ಯ ಲೋಕಸಭಾ ಕ್ಷೇತ್ರ ಯಾರಾ ಪಾಲಾಗಲಿದೆ ಎನ್ನುವುದು ತೀವ್ರ ಕುತೂಃಲ ಮೂಡಿಸಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ