ಡಿಕೆ ಬ್ರದರ್ಸ್ ಆಪರೇಷನ್ ಹಸ್ತಕ್ಕೆ ಹೆಚ್​ಡಿಕೆ ಕೌಂಟರ್: ಇಲ್ಲಿದೆ ಜೆಡಿಎಸ್​ ರೆಸಾರ್ಟ್​ ರಾಜಕೀಯದ ಇನ್​​ಸೈಡ್​ ಮಾಹಿತಿ

ಬಿಜೆಪಿ ಜತೆಗಿನ ಮೈತ್ರಿ ವಿಚಾರದಲ್ಲಿ ಅಪಸ್ವರ ಮತ್ತು ಕೆಲ ನಾಯಕರು ಕಾಂಗ್ರೆಸ್‌ ಜತೆ ಸಂರ್ಪಕದಲ್ಲಿರುವ ವದಂತಿ ದಳಪತಿಗಳಿಗೆ ತಲೆಬಿಸಿ ಉಂಟು ಮಾಡಿದ್ದು, ಎಲ್ಲರನ್ನೂ ಹಿಡಿತದಲ್ಲಿಟ್ಟುಕೊಳ್ಳಲು ಜೆಡಿಎಸ್‌ ವರಿಷ್ಠರು ಕಸರತ್ತು ಆರಂಭಿಸಿದ್ದಾರೆ. ಹೀಗಾಗಿ ಕುಮಾರಸ್ವಾಮಿ, ಖಾಸಗಿ ರೆಸಾರ್ಟ್​ನಲ್ಲಿ ಶಾಸಕರ ಮಹತ್ವದ ಸಭೆ ನಡೆಸಿದ್ದಾರೆ. ಹಾಗಾದ್ರೆ, ಸಭೆಯಲ್ಲಿ ಏನೆಲ್ಲಾ ಆಯ್ತು ಎನ್ನುವ ಇನ್​​ಸೈಡ್​ ವಿವರ ಇಲ್ಲಿದೆ.

ಡಿಕೆ ಬ್ರದರ್ಸ್ ಆಪರೇಷನ್ ಹಸ್ತಕ್ಕೆ ಹೆಚ್​ಡಿಕೆ ಕೌಂಟರ್: ಇಲ್ಲಿದೆ ಜೆಡಿಎಸ್​ ರೆಸಾರ್ಟ್​ ರಾಜಕೀಯದ ಇನ್​​ಸೈಡ್​ ಮಾಹಿತಿ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Nov 08, 2023 | 8:21 AM

ಹಾಸನ, (ನವೆಂಬರ್ 08): ಲೋಕಸಭೆ ಚುನಾವಣೆಗೂ (Loksabha Elections 2024)ಮುನ್ನ ರಾಜ್ಯ ರಾಜಕೀಯದಲ್ಲಿ ಆಪರೇಷನ್ ಹಸ್ತ (Operation Hastha) ಶುರುವಾಗಿದೆ. ಜೆಡಿಎಸ್ (JDS)ಶಾಸಕರನ್ನೇ ಟಾರ್ಗೆಟ್ ಮಾಡಿರುವ ಡಿಕೆ ಬ್ರದರ್ಸ್, ಜೆಡಿಎಸ್ ಶಾಸಕರನ್ನ ಸೆಳೆಯಲು ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ. ಅತ್ತ ಡಿಕೆ ಬ್ರದರ್ಸ್ ನಾಗಲೋಟಕ್ಕೆ ಬ್ರೇಕ್ ಹಾಕಲು ಕುಮಾರಸ್ವಾಮಿ ಪ್ಲ್ಯಾನ್ ಮಾಡಿದ್ದು, ರೆಸಾರ್ಟ್ ರಾಜಕೀಯ (resort politics) ಶುರು ಮಾಡಿದ್ದಾರೆ. ಅದಕ್ಕೆ ಪುಷ್ಠಿ ಕೊಡುವಂತೆ 3 ದಿನಗಳ ಕಾಲ ಹಾಸನದ ಖಾಸಗಿ ರೆಸಾರ್ಟ್​​​​ನಲ್ಲಿ ಕುಮಾರಸ್ವಾಮಿ ಜೆಡಿಎಸ್ ಶಾಸಕರ ಸಭೆ ಮಾಡಲು ಮುಂದಾಗಿದ್ದಾರೆ.

ಕಳೆದ ನಾಲ್ಕೈದು ದಿನಗಳಿಂದ ಹಾಸನದಲ್ಲಿ ಹಾಸನಾಂಬ ಜಾತ್ರೆ ನಡೆಯುತ್ತಿದೆ. ಹೀಗಾಗಿ ಇಂದು ಜೆಡಿಎಸ್‍ ಶಾಸಕರು ಹಾಸನಾಂಬೆಯ ದರ್ಶನ ಪಡೆಯಲು ಹೋಗುತ್ತಿದ್ದಾರೆ. ಹಾಸನಾಂಬೆಯ ದರ್ಶನದ ಜೊತೆಗೆ ಒಗ್ಗಟ್ಟಿನ ಸಂದೇಶ ನೀಡಲು ಹೆಚ್​​ಡಿ.ಕುಮಾರಸ್ವಾಮಿ ಮುಂದಾಗಿದ್ದಾರೆ.

ಇದನ್ನೂ ಓದಿ: ಸತೀಶ್ ಜಾರಕಿಹೊಳಿ ಜತೆ ಗುಪ್ತ್​ ಗುಪ್ತ್​ ಮಾತುಕತೆ ನಡೆಸಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್

ಶಾಸಕರ ಜೊತೆ ಹೆಚ್​ಡಿಕೆ ಮಹತ್ವದ ಚರ್ಚೆ

ಇನ್ನು ಮಂಗಳವಾರ ರಾತ್ರಿ ನಡೆದ ಭೋಜನಕೂಟದ ವೇಳೆ ಮಾತುಕತೆಯಲ್ಲಿ ಕುಮಾರಸ್ವಾಮಿ ಅವರು ಪ್ರತ್ಯೇಕವಾಗಿ ಶಾಸಕರ ಜತೆ ಚರ್ಚಿಸಿ ಅವರ ಅಭಿಪ್ರಾಯಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್‌ನಿಂದ ಯಾವುದಾದರೂ ಕರೆಗಳು ಬಂದಿವೆಯೇ, ಬಿಜೆಪಿ ಜತೆಗಿನ ಮೈತ್ರಿಗೆ ಸಮಸ್ಯೆ ಇದೆಯೇ ಎಂಬುದರ ಕುರಿತು ಮುಕ್ತವಾಗಿ ಚರ್ಚಿಸಿದ್ದಾರೆ. ಅಲ್ಲದೇ ಇದೇ ವೇಳೆ ಯಾರು ಆಪರೇಷನ್ ಹಸ್ತಕ್ಕೆ ಒಳಗಾಗದಂತೆ ಶಾಸಕರಿಗೆ ಕುಮಾರಸ್ವಾಮಿ ನೀತಿಪಾಠ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಒಟ್ಟು 19 ಶಾಸಕರ ಪೈಕಿ ಶರಣಗೌಡ ಕಂದಕೂರು ಒಬ್ಬರನ್ನು ಬಿಟ್ಟು ಇನ್ನುಳಿದ ಎಲ್ಲಾ ಶಾಸಕರು ಮಂಗಳವಾರ ಹಾಸನದ ರೆಸಾರ್ಟ್‌ವೊಂದರಲ್ಲಿ ಸೇರಿದ್ದಾರೆ. ದೇವದುರ್ಗ ಶಾಸಕಿ ಕರೆಮ್ಮ ಅವರು ಇಂದು ಬೆಳಗ್ಗೆ ಹಾಸನ ತಲುಪುವ ನಿರೀಕ್ಷೆಯಿದೆ. ಬಿಜೆಪಿ ಜತೆಗಿನ ಮೈತ್ರಿಗೆ ಶರಣಗೌಡ ಮತ್ತು ಕರೆಮ್ಮ ಸೇರಿದಂತೆ ಕೆಲವು ಶಾಸಕರು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಸಭೆಯು ಮಹತ್ವ ಪಡೆದುಕೊಂಡಿದ್ದು, ಕುಮಾರಸ್ವಾಮಿ ಅವರು ಭಿನ್ನಮತಕ್ಕೆ ತೆರೆ ಎಳೆಯುವ ಪ್ರಯತ್ನಕ್ಕೆ ಮುಂದಾಗಿದ್ದಾರೆ ಎಂದು ಹೇಳಲಾಗಿದೆ.

ಇಂದು ಮತ್ತೆ ಶಾಸಕರ ಜೊತೆ ಕುಮಾರಸ್ವಾಮಿ ಮುಕ್ತವಾಗಿ ಒನ್ ಟು ಒನ್ ಮಾತುಕತೆ ನಡೆಸುತ್ತಿದ್ದು, ಶಾಸಕರಿಗೆ ಕಾಂಗ್ರೆಸ್ ನಾಯಕರಿಂದ ಒತ್ತಡ ಹಾಕುತ್ತಿರುವ ಬಗ್ಗೆ ಚರ್ಚಿಸಲಿದ್ದಾರೆ. ಕೈ ನಾಯಕರ ಆಮಿಷಕ್ಕೆ ಒಳಗಾಗದಂತೆ ತಡೆಯಲು ಕುಮಾರಸ್ವಾಮಿ ಪ್ಲ್ಯಾನ್ ಮಾಡಿದ್ದಾರೆ. ಇದರೊಂದಿಗೆ ಡಿಕೆ ಬ್ರದರ್ಸ್ ಆಪರೇಷನ್ ಆಟಕ್ಕೆ ಬ್ರೇಕ್ ಹಾಕಲು ಹೆಚ್​ಡಿಕೆ ಒಗ್ಗಟ್ಟಿನ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಆದ್ರೆ, ಕಾಂಗ್ರೆಸ್ ನಾಯಕರು ಈಗಾಗಲೇ ಜೆಡಿಎಸ್ ಶಾಸಕರಿಗೆ ಸೂಕ್ತ ಸ್ಥಾನಮಾನ ಕೊಡುವ ಭರವಸೆ ನೀಡಿ ಗಾಳ ಹಾಕಿದ್ದಾರೆ.

ಅದೇನೇ ಇರಲಿ ಡಿಕೆ ಬ್ರದರ್ಸ್ ಆಟಕ್ಕೆ ಕುಮಾರಸ್ವಾಮಿ ಬ್ರೇಕ್ ಹಾಕುತ್ತಾರಾಅಥವಾ ಡಿಕೆ ಬ್ರದರ್ಸ್​​​​ ಆಪರೇಷನ್ ಆಟ ಮತ್ತೆ ಮುಂದುವರಿಸುತ್ತಾರಾ ಎಂದು ಕಾದು ನೋಡಬೇಕಾಗಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ