AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್​ ಶಾಸಕರಿಗೆ ರಾಜ್ಯ ಸರ್ಕಾರ ಶಾಕ್, ಕಾಂಗ್ರೆಸ್​ ಶಾಸಕರ ಕ್ಷೇತ್ರಕ್ಕೆ ಮನೆಗಳು ವರ್ಗಾವಣೆ

ಜೆಡಿಎಸ್​ ಶಾಸಕರ ಕ್ಷೇತ್ರಕ್ಕೆ ಮಂಜೂರಾಗಿದ್ದ ಅಂಬೇಡ್ಕರ್ ವಸತಿ ಯೋಜನೆ ಮನೆಗಳನ್ನು ಇದೀಗ ಏಕಾಏಕಿ ಕಾಂಗ್ರೆಸ್ ಶಾಸಕರಿರುವ ಕ್ಷೇತ್ರಕ್ಕೆ ವರ್ಗಾವಣೆ ಮಾಡಲಾಗಿದೆ. ಇದರಿಂದ ಕೆರಳಿದ ಜೆಡಿಎಸ್ ಶಾಸಕ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ. ಅಲ್ಲದೇ ವಿಧಾನಸೌಧದಲ್ಲಿ ಧರಣಿಗೆ ತೀರ್ಮಾನಿಸಿದ್ದಾರೆ.

ಜೆಡಿಎಸ್​ ಶಾಸಕರಿಗೆ ರಾಜ್ಯ ಸರ್ಕಾರ ಶಾಕ್, ಕಾಂಗ್ರೆಸ್​ ಶಾಸಕರ ಕ್ಷೇತ್ರಕ್ಕೆ ಮನೆಗಳು ವರ್ಗಾವಣೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Aug 31, 2023 | 2:47 PM

Share

ಬೆಂಗಳೂರು, (ಆಗಸ್ಟ್ 31): ಜೆಡಿಎಸ್​ (JDS) ಶಾಸಕರಿಗೆ ರಾಜ್ಯ ಸರ್ಕಾರ ಶಾಕ್​ ಕೊಟ್ಟಿದೆ. ಜೆಡಿಎಸ್​ ಶಾಸಕರ ಕ್ಷೇತ್ರಕ್ಕೆ ಮಂಜೂರಾಗಿದ್ದ ಮನೆಗಳನ್ನು ಕಾಂಗ್ರೆಸ್(Congress)ಶಾಸಕರು ಗೆದ್ದಿರುವ ಕ್ಷೇತ್ರಕ್ಕೆ ವರ್ಗಾವಣೆ ಮಾಡಲಾಗಿದೆ. ತುರುವೇಕೆರೆಗೆ ಮಂಜೂರು ಆಗಿದ್ದ 3,375 ಮನೆಗಳನ್ನು ಕಾಂಗ್ರೆಸ್ ಶಾಸಕ ರಂಗನಾಥ್​ ಅವರ ಕುಣಿಗಲ್​ ವಿಧಾನಸಭಾ ಕ್ಷೇತ್ರಕ್ಕೆ ಶಿಫ್ಟ್ ಮಾಡಲಾಗಿದೆ. ಇದರಿಂದ ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್​ ವಿರುದ್ಧ ತುರುವೇಕೆರೆ ಶಾಸಕ ಎಂಟಿ ಕೃಷ್ಣಪ್ಪ ಸಿಡಿದೆದ್ದಿದ್ದು, ಹೋರಾಟಕ್ಕೆ ಮುಂದಾಗಿದ್ದಾರೆ. ನಾಳೆ(ಸೆಪ್ಟೆಂಬರ್ 01) ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ವಿಧಾನಸೌಧ ಸಚಿವರ ಕಚೇರಿ ಎದುರು ಧರಣಿ ನಡೆಸಲು ತೀರ್ಮಾನಿಸಿದ್ದಾರೆ.

ಚುನಾವಣೆಗೂ ಮುಂಚೆ ತುರುವೆಕೆರೆ ಕ್ಷೇತ್ರಕ್ಕೆ ಮಂಜೂರಾಗಿದ್ದ ಅಂಬೇಡ್ಕರ್ ವಸತಿ ಯೋಜನೆ ಮನೆಗಳು ಈ ಸಂದರ್ಭದಲ್ಲಿ ಬಿಜೆಪಿ ಶಾಸಕಕರಿದ್ದು. ವಿಧಾನಸಭೆ ಚುನಾವಣೆ ಬಳಿಕ ಜೆಡಿಎಸ್ ಶಾಸಕ ಎಂಟಿ ಕೃಷ್ಣಪ್ಪ ಅವರು ಆ ಮನೆಗಳನ್ನು ಹಂಚಿಕೆ ಮಾಡಿದ್ದರು. ಆದ್ರೆ, ಆ ಮನೆಗಳನ್ನು ಇದೀಗ ಏಕಾಏಕಿ ಬೇರೆ ವಿಧಾನಸಭಾ ಕ್ಷೇತ್ರಕ್ಕೆ ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ: ಮೈಸೂರಿನಲ್ಲೇ ‘ಗೃಹಲಕ್ಷ್ಮೀ’ಗೆ ಚಾಲನೆ ಹಿಂದೆ ‘ಕೈ’ ಮಾಸ್ಟರ್ ಪ್ಲ್ಯಾನ್, ಈ 4 ಕ್ಷೇತ್ರಗಳು ಟಾರ್ಗೆಟ್!

ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ತುರುವೇಕೆರೆ ಶಾಸಕ ಎಂಟಿ ಕೃಷ್ಣಪ್ಪ, ನನ್ನ ಕ್ಷೇತ್ರದಲ್ಲಿ ವಿಚಾರದಲ್ಲಿ ತಲೆ ಹಾಕಲು ಅವರು ಯಾರು? ಆಡಳಿತ ಪಕ್ಷ ಶಾಸಕ ಕೀಳುಮಟ್ಟಕ್ಕೆ ಇಳಿಯಬಾರದು. ತಮ್ಮ ಕ್ಷೇತ್ರಗಳಿಗೆ ಮನೆ ತೆಗೆದುಕೊಂಡು ಹೋಗುವ ತಾಕತ್ ಅವರಿಗಿಲ್ಲವಾ ಎಂದು ಕುಣಿಗಲ್ ಶಾಸಕ ಡಾ ರಂಗನಾಥ್ ವಿರುದ್ಧ ವಾಗ್ದಾಳಿ ನಡೆಸಿದರು.

ಇತ್ತೀಚೆಗೆ ಸಿಎಂ ನಡುವಳಿಕೆ ಸರಿಯಾಗಿಲ್ಲ. ಸೌಜನ್ಯಕ್ಕೂ ನಾನು ಕೊಟ್ಟ ಪತ್ರಕ್ಕೆ ಸಹಿ ಹಾಕಿಲ್ಲ. ಜಿಲ್ಲಾವರು ಶಾಸಕರ ಸಭೆ ಮಾಡಿದ್ದಾರೆ. ತುಮಕೂರು ಜಿಲ್ಲೆಯ ಶಾಸಕರ ಸಭೆಗೆ ನಮ್ಮನ್ನು ಕರೆಯಬೇಕಿತ್ತು. ಅವರ ಪಕ್ಷದ ಶಾಸಕರ ಸಭೆ ಎನ್ನುವುದಾದರೆ ಕಾಂಗ್ರೆಸ್ ಕಚೇರಿಯಲ್ಲಿ ಮಾಡಿಕೊಳ್ಳಬೇಕಿತ್ತು ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್