ಸಿದ್ದರಾಮಯ್ಯ ಭೇಟಿಯಾದ ಜೆಡಿಎಸ್​ ಶಾಸಕ: ವಿಮಾನ ನಿಲ್ದಾಣದಲ್ಲಿ ರಹಸ್ಯ ಮಾತುಕತೆ, ಕಾಂಗ್ರೆಸ್ ಸೇರಲು ಸಜ್ಜಾದ್ರಾ?

ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದರಿಂದ ಕೆಲ ಜೆಡಿಎಸ್ ಶಾಸಕರು ಅಸಮಾಧಾನಗೊಂಡಿದ್ದು, ಪಕ್ಷ ತೊರೆಯುವ ಚಿಂತನೆ ನಡೆಸಿದ್ದಾರೆ. ಮತ್ತೊಂದೆಡೆ ದೇವೇಗೌಡ ಹಾಗೂ ಕುಮಾರಸ್ವಾಮಿ ತಮ್ಮ ಪಕ್ಷದ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಜೆಡಿಎಸ್ ಶಾಸಕರೊಬ್ಬರು ಗೌಪ್ಯವಾಗಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕಾಂಗ್ರೆಸ್ ಸೇರ್ಪಡೆ ಸಂಬಂಧ ರಹಸ್ಯ ಮಾತುಕತೆ ನಡೆಸಿದ್ದಾರೆ.

ಸಿದ್ದರಾಮಯ್ಯ ಭೇಟಿಯಾದ ಜೆಡಿಎಸ್​ ಶಾಸಕ: ವಿಮಾನ ನಿಲ್ದಾಣದಲ್ಲಿ ರಹಸ್ಯ ಮಾತುಕತೆ, ಕಾಂಗ್ರೆಸ್ ಸೇರಲು ಸಜ್ಜಾದ್ರಾ?
ಸಿಎಂ ಸಿದ್ದರಾಮಯ್ಯ
Edited By:

Updated on: Oct 04, 2023 | 2:13 PM

ಬೆಂಗಳೂರು/ಬೆಳಗಾವಿ, (ಅಕ್ಟೋಬರ್ 04): ಬಿಜೆಪಿ ಜೊತೆ ಜೆಡಿಎಸ್​ ಮೈತ್ರಿ (JDS Bjp alliance) ಮಾಡಿಕೊಂಡ ಬೆನ್ನಲ್ಲೇ ಇತ್ತ ಕಾಂಗ್ರೆಸ್ ಸಹ ಸದ್ದಿಲ್ಲದೇ ಆಪರೇಷನ್ ಹಸ್ತ (Congress Operation Hastha)ಶುರು ಮಾಡಿಕೊಂಡಿದೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ (Loksabha Electiosn2024) ಹೇಗಾದರೂ ಮಾಡಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲು ಕಾಂಗ್ರೆಸ್​ ಇನ್ನಿಲ್ಲದ ಕಸರತ್ತು ನಡೆಸಿದೆ. ಹೀಗಾಗಿ ಬಿಜೆಪಿ ಹಾಗೂ ಜೆಡಿಎಸ್​ ನಾಯಕರನ್ನು ಸೆಳೆಯಲು ಮುಂದಾಗಿದ್ದು, ರಾಜ್ಯ ರಾಜಕಾರಣದಲ್ಲಿ ಆಪರೇಷನ್ ಹಸ್ತು ಸದ್ದು ಜೋರಾಗಿದೆ. ಇದರ ಮಧ್ಯೆ ಜೆಡಿಎಸ್​ ಶಾಸಕರೊಬ್ಬರು ಗೌಪ್ಯವಾಗಿ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸಚಿವ ಭೈರತಿ ಸುರೇಶ್ ಮಧ್ಯಸ್ಥಿಕೆಯಲ್ಲಿ ಜೆಡಿಎಸ್ ಶಾಸಕ ಮಂಜುನಾಥ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ರಹಸ್ಯ ಮಾತುಕತೆ ನಡೆಸಿದ್ದಾರೆ. ಯಾರಿಗೂ ಪ್ರವೇಶವಕಾಶ ನೀಡದೆ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಸಿಎಂ ಸಿದ್ದರಾಮಯ್ಯ ಜೊತೆ ಸಮಾಲೋಚನೆ ಮಾಡಿದ್ದಾರೆ. ಮಂಜುನಾಥ್ ಅವರನ್ನು ಕಾಂಗ್ರೆಸ್​ಗೆ ಸೇರಿಸಿಕೊಳ್ಳು ಬಗ್ಗೆ ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ.​

ಇದನ್ನೂ ಓದಿ: ಮುಂದುವರೆದ ಆಪರೇಷನ್ ಹಸ್ತ: ಕಾಂಗ್ರೆಸ್ ಕೊಟ್ಟ ಆಹ್ವಾನ ಬಹಿರಂಗಪಡಿಸಿದ ಜೆಡಿಎಸ್ ಶಾಸಕ

ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವುದಕ್ಕೆ ಜೆಡಿಎಸ್​ನಲ್ಲೇ ಅಪಸ್ವರಗಳು ಕೇಳಿಬಂದಿವೆ. ಅದರಲ್ಲೂ ಕೆಲ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಪಕ್ಷ ತೊರೆಯುವ ಮಾತುಗಳನ್ನಾಡುತ್ತಿದ್ದಾರೆ. ಇದರಿಂದ ಕಂಗಾಲದ ಕುಮಾರಸ್ವಾಮಿ ಹಾಗೂ ದೇವೇಗೌಡ ತಮ್ಮೆಲ್ಲ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಇನ್ನಿಲ್ಲದ ಕಸರತ್ತು ನಡೆಸಿದೆ. ಮೊನ್ನೇ ಅಷ್ಟೇ ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ಅಸಮಾಧಾನಿತ ನಾಯಕರ ಸಭೆ ಮಾಡಿ ಯಾರು ಪಕ್ಷ ಬಿಟ್ಟು ಹೋಗದಂತೆ ಪ್ರಮಾಣ ಮಾಡಿಸಿದ್ದಾರೆ. ಇವೆಲ್ಲದರ ಮಧ್ಯೆ ಇದೀಗ ಹಾನೂರು ಜೆಡಿಎಸ್​ ಶಾಸಕ ಮಂಜುನಾಥ್​, ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಕಾಂಗ್ರೆಸ್ ಸೇರುವ ಬಗ್ಗೆ ಚರ್ಚೆ ಮಾಡಿದ್ದು ರಾಜ್ಯ ರಾಜಕಾರಣದಲ್ಲಿ ಹಲ್​ ಚಲ್​ ಎಬ್ಬಿಸಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ