ಜೆಡಿಎಸ್ಗೆ ಬಿಗ್ ಶಾಕ್, ಸಾಮೂಹಿಕವಾಗಿ ಪಕ್ಷ ತೊರೆಯಲು ತೀರ್ಮಾನಿಸಿದ ಮುಸ್ಲಿಂ ನಾಯಕರು
ಕಳೆದ ಹಲವು ದಿನಗಳಿಂದ ರಾಜ್ಯದ ರಾಜಕೀಯ ಪಡಸಾಲೆಯಲ್ಲಿ ಚರ್ಚೆಯಲ್ಲಿದ್ದ ಬಿಜೆಪಿ (BJP)-ಜೆಡಿಎಸ್ (JDS) ಮೈತ್ರಿಗೆ ಅಧಿಕೃತ ಮುದ್ರೆ ಬಿದ್ದಿದೆ. ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷವು ಎನ್‌ಡಿಎ ಮೈತ್ರಿ ಕೂಟಕ್ಕೆ ಸೇರ್ಪಡೆಯಾಗಿದೆ. ಇತ್ತ ಜೆಡಿಎಸ್ನಲ್ಲಿದ್ದ ನಾಯಕರು ಸಾಮೂಹಿಕವಾಗಿ ಪಕ್ಷ ನಿರ್ಧರಿಸಿದ್ದು, ಈ ಬಗ್ಗೆ ಇಂದು ನಡೆದ ಸಭೆಯಲ್ಲಿ ಸಾಮೂಹಿಕ ರಾಜೀನಾಮೆ ನೀಡಲು ತೀರ್ಮಾನಿಸಿದ್ದಾರೆ.
ಬೆಂಗಳೂರು, (ಸೆಪ್ಟೆಂಬರ್ 24): ಮುಂಬರುವ ಲೋಕಸಭಾ ಚುನಾವಣೆಗೆ Loksabha Elections 2024) ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಹೀಗಾಗಿ ಜೆಡಿಎಸ್ನ ಅಲ್ಪಸಂಖ್ಯಾತ ನಾಯಕರು ಪಕ್ಷ ತೊರೆಯಲು ತೀರ್ಮಾನಿಸಿದ್ದಾರೆ. ಬೆಂಗಳೂರಿನ ಕೆ.ಕೆ ಗೆಸ್ಟ್ ಹೌಸನಲ್ಲಿ ಇಂದು (ಸೆ.24) ನಡೆದ ಜೆಡಿಎಸ್ ಅಲ್ಪಸಂಖ್ಯಾತ ನಾಯಕರ ಸಭೆ ಅಂತ್ಯವಾಗಿದ್ದು, ಮುಸ್ಲಿಂ ಮುಖಂಡರು ಜೆಡಿಎಸ್ಗೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಜೆಡಿಎಸ್ ಕಾರ್ಯಾಧ್ಯಕ್ಷ ಎನ್ ಎಂ ನಬಿ, ಮುಖಂಡರಾದ ಮೋಹಿದ್ ಅಲ್ತಾಫ್,ನಾಸೀರ್ ಉಸ್ತಾದ್,ವಕ್ತಾರ ನೂರ್ ಅಹಮ್ಮದ್ ಸೇರಿದಂತೆದಾವಣಗೆರೆ, ಮೈಸೂರು, ರಾಮನಗರ, ರಾಯಚೂರು, ತುಮಕೂರು ನಾಯಕರು ಸಭೆಯಲ್ಲಿ ಉಪಸ್ಥಿತರಿದ್ದು, ರಾಜ್ಯದಲ್ಲಿ ಪ್ರವಾಸ ಮಾಡಿ ಸಾಮೂಹಿಕ ರಾಜೀನಾಮೆ ನೀಡಲು ನಿರ್ಣಯಿಸಿದ್ದಾರೆ.
ಇದನ್ನೂ ಓದಿ: ಬಿಜೆಪಿ-ಜೆಡಿಎಸ್ ದೋಸ್ತಿ: ಜನತಾದಳದಿಂದ ದೂರ ಉಳಿಯಲು ಮುಸ್ಲಿಂ ಮುಖಂಡರ ನಿರ್ಧಾರ
ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡ ಬೆನ್ನಲ್ಲೇ ದಳದಿಂದ ದೂರ ಉಳಿಯಲು ಮುಸ್ಲಿಂ ಮುಖಂಡರ ನಿರ್ಧರಿಸಿದ್ದಾರೆ. ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ಬೆನ್ನಲ್ಲೇ ಜೆಡಿಎಸ್ ರಾಜ್ಯ ಉಪಾಧ್ಯಕ್ಷ, ರಾಜ್ಯ ಕಚೇರಿ ಉಸ್ತುವಾರಿ ಸೈಯದ್ ಶಫಿಉಲ್ಲ ಸಾಹೇಬ್ ತಮ್ಮ ಹುದ್ದೆಗೆ ಈಗಾಗಲೇ ರಾಜಿನಾಮೆ ನೀಡಿದ್ದಾರೆ. ಇನ್ನುಳಿದಂತೆ ಮುಂದಿನ ದಿನಗಳಲ್ಲಿ ಎಲ್ಲಾ ಮುಸ್ಲಿಂ ನಾಯಕರು ಜೆಡಿಎಸ್ಗೆ ಗುಡ್ಬೈ ಹೇಳಲಿದ್ದಾರೆ. ಆದ್ರೆ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಈ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ. ಆರ್ಎಸ್ಎಸ್ ಹಾಗೂ ಬಿಜೆಪಿ ಸಿದ್ಧಾಂತಗಳನ್ನು ಇಬ್ರಾಹಿಂ ಟೀಕಿಸುತ್ತಾ ಬಂದಿದ್ದಾರೆ. ಆದ್ರೆ, ಇದೀಗ ಜೆಡಿಎಸ್, ಎನ್‌ಡಿಎ ಮೈತ್ರಿಕೂಟಕ್ಕೆ ಸೇರಿದ್ದು, ಇಬ್ರಾಹಿಂ ನಡೆ ತೀರ್ವ ಕುತೂಹಲಕ್ಕೆ ಕಾರಣವಾಗಿದೆ.
ಮೂಲಗಳ ಪ್ರಕಾರ ಇಬ್ರಾಹಿಂ ಸಹ ಜೆಡಿಎಸ್ ತೊರೆಯಲಿದ್ದಾರೆ ಎಂದು ತಿಳಿದುಬಂದಿದೆ. ಈಗಾಗಲೇ ಕಾಂಗ್ರೆಸ್ನಿಂದ ಆಚೆ ಬಂದಿರುವ ಇಬ್ರಾಹಿಂದ ಇದೀಗ ಜೆಡಿಎಸ್ ತೊರೆದು ಯಾವ ಪಕ್ಷಕ್ಕೆ ಹೋಗಲಿದ್ದಾರೆ ಎನ್ನುವುದು ಕೌತುಕ. ಮತ್ತೆ ಅವರು ಕಾಂಗ್ರೆಸ್ಗೆ ಮರಳುವ ಸಾಧ್ಯತೆಗಳು ಹೆಚ್ಚಿವೆ ಎಂದು ತಿಳಿದುಬಂದಿದೆ. ಮುಂಬರವ ಲೋಕಸಭಾ ಚುನಾವಣೆ ದೃಷ್ಟಿಯಿಂದ ಕಾಂಗ್ರೆಸ್ ಸಹ ಇಬ್ರಾಹಿಂ ಅವರನ್ನು ಸೇರಿಸಿಕೊಳ್ಳಲು ಚಿಂತನೆ ನಡೆಸಿದೆ ಎನ್ನಲಾಗಿದೆ. ಮತ್ತೊಂದೆಡೆ ಅವರು ಜೆಡಿಎಸ್ಗೆ ರಾಜೀನಾಮೆ ನೀಡಿ ಯಾವುದೇ ಪಕ್ಷಕ್ಕೆ ಸೇರದ ರಾಜಕೀಯದಿಂದ ದೂರು ಉಳಿಯಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.
ಒಟ್ಟಿನಲ್ಲಿ ಇಬ್ರಾಹಿಂ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು, ಅವರು ಯಾವ ತೀರ್ಮಾನ ಕೈಗೊಳ್ಳಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ.
ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 4:20 pm, Sun, 24 September 23