ಅಳಿಯ ಜಾಣ ಆದರೇನು, ನಿಮ್ಮಂತೆ ಇನ್ನೊಬ್ಬರ ಜೀವನಕ್ಕೆ ಎರವಾಗೋದು ತಪ್ಪಲ್ಲವೇ: ಡಿಕೆ ಸುರೇಶ್​ಗೆ ಜೆಡಿಎಸ್ ಪ್ರಶ್ನೆ

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸಿಎನ್ ಮಂಜುನಾಥ್ ಬಗ್ಗೆ ವ್ಯಂಗ್ಯವಾಗಿ ಹೇಳಿಕೆ ನೀಡಿರುವ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ವಿರುದ್ಧ ಜೆಡಿಎಸ್ ತೀವ್ರ ವಾಗ್ದಾಳಿ ನಡೆಸಿದೆ. ಇದರೊಂದಿಗೆ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಲೋಕಸಭೆ ಚುನಾವಣೆ ಅಖಾಡ ಈಗಲೇ ಕಳೆಗಟ್ಟುವ ಲಕ್ಷಣ ಕಾಣಿಸುತ್ತಿದೆ.

ಅಳಿಯ ಜಾಣ ಆದರೇನು, ನಿಮ್ಮಂತೆ ಇನ್ನೊಬ್ಬರ ಜೀವನಕ್ಕೆ ಎರವಾಗೋದು ತಪ್ಪಲ್ಲವೇ: ಡಿಕೆ ಸುರೇಶ್​ಗೆ ಜೆಡಿಎಸ್ ಪ್ರಶ್ನೆ
ಡಿಕೆ ಸುರೇಶ್ & ಡಾ. ಸಿಎನ್ ಮಂಜುನಾಥ್
Follow us
Ganapathi Sharma
|

Updated on: Mar 14, 2024 | 2:11 PM

ಬೆಂಗಳೂರು, ಮಾರ್ಚ್​ 14: ಡಾ. ಸಿಎನ್ ಮಂಜುನಾಥ್ (Dr CN Manjunath) ಬಿಜೆಪಿ ಸೇರುತ್ತಿರುವ ಬಗ್ಗೆ ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ (DK Suresh) ‘ಜಾಣ ಅಳಿಯ’ ಎಂದು ವ್ಯಂಗ್ಯವಾಡಿರುವುದಕ್ಕೆ ಜೆಡಿಎಸ್ (JDS) ಆಕ್ರೋಶ ವ್ಯಕ್ತಪಡಿಸಿದೆ. ಸಾಮಾಜಿಕ ಮಾಧ್ಯಮ ಎಕ್ಸ್​​ ಮೂಲಕ ಡಿಕೆ ಸುರೇಶ್ ವಿರುದ್ಧ ಟೀಕಾ ಪ್ರಹಾರ ನಡೆಸಿರುವ ಜೆಡಿಎಸ್, ‘ಅಳಿಯ ಜಾಣ ಆಗೋದರಲ್ಲಿ ತಪ್ಪಿಲ್ಲ. ನಿಮ್ಮಂತೆ ಇನ್ನೊಬ್ಬರ ಜೀವನಕ್ಕೆ ಎರವಾಗೋದು ತಪ್ಪಲ್ಲವೇ’ ಎಂದು ಪ್ರಶ್ನಿಸಿದೆ.

ಮಂಜುನಾಥ್ ಅವರು ದೇವೇಗೌಡ ಕುಟುಂಬದ ಮತ್ತೊಂದು ಭಾಗ. ದೇವೇಗೌಡರ ಪಾರ್ಟಿ, ಕುಮಾರಸ್ವಾಮಿ ಪಾರ್ಟಿ ಸರಿ ಇಲ್ಲ ಅಂತ ಬುದ್ಧಿವಂತ ಅಳಿಯ ತೀರ್ಮಾನ ಮಾಡಿದ್ದಾರೆ. ಅವರಿಗೆಲ್ಲಾ ದೇವರು ಒಳ್ಳೆಯದು ಮಾಡಲಿ ಎಂದು ಡಿಕೆ ಸುರೇಶ್ ಹೇಳಿದ್ದರು.

ಸುರೇಶ್ ಹೇಳಿಕೆಗೆ ತಿರುಗೇಟು ನೀಡಿರುವ ಜೆಡಿಎಸ್, ‘ದೇವೇಗೌಡರ ಪಾರ್ಟಿ ಕಥೆ ಇರಲಿ, ನಿಮ್ಮ ಪಾರ್ಟಿ ಹಣೆಬರಹ ನೋಡಿಕೊಳ್ಳಿ. ದೇಶದ ಉದ್ದಗಲಕ್ಕೂ ಕಾಂಗ್ರೆಸ್ ಕರ್ಮಕಾಂಡದ ಬಗ್ಗೆ ಹೇಳುತ್ತಾ ಹೋದರೆ ಅದೇ ಮಹಾ ಕಾದಂಬರಿ ಆಗುತ್ತದೆ. ನಿಮ್ಮ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ, ಪಕ್ಕದವರ ತಟ್ಟೆಯಲ್ಲಿ ನೊಣ ಹುಡುಕುವ ದಡ್ಡತನವೇಕೆ? ಅಕ್ವರ್ಡ್ ಪದಕ್ಕೆ ನಿಮಗಿಂತ ಸರಿಯಾದ ಅನ್ವರ್ಥ ಇದೆಯೇ? ಏನಂತೀರಿ’ ಎಂದು ಪ್ರಶ್ನಿಸಿದೆ.

ಜೆಡಿಎಸ್​​ ಎಕ್ಸ್ ಸಂದೇಶ

ಅಳಿಯ ಜಾಣ ಆಗೋದು ತಪ್ಪಲ್ಲ. ನಿಮ್ಮಂತೆ ಇನ್ನೊಬ್ಬರ ಜೀವನಕ್ಕೆ ಎರವಾಗೋದು ತಪ್ಪಲ್ಲವೇ? ಡಾ. ಮಂಜುನಾಥ್ ಅವರು ಯಾವ ಪಕ್ಷದಿಂದ ಸ್ಪರ್ಧಿಸಿದರೆ ನಿಮಗೇನು? ಅವರು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ನಿಮ್ಮ ಎದುರಾಳಿ, ಸೆಣಸಿ. ಅದು ಬಿಟ್ಟು ವ್ಯರ್ಥ ಆಲಾಪ ಏಕೆ ಸುರೇಶ್ ಅವರೇ ಎಂದು ಜೆಡಿಎಸ್ ಪ್ರಶ್ನಿಸಿದೆ.

ದೇವೇಗೌಡರ ಕುಟುಂಬದ ಬಗ್ಗೆ ಮಾತನಾಡುವ ನೈತಿಕತೆ ನಿಮಗೆಲ್ಲಿದೆ? ಇಡೀ ಕರ್ನಾಟಕ ಕಾಂಗ್ರೆಸ್ ನಿಮ್ಮ ಕಬಂಧಬಾಹುಗಲ್ಲಿ ಬಂಧಿಯಾಗಿದೆ. ಅಣ್ಣ ಡಿಸಿಎಂ, ತಮ್ಮ ಎಂಪಿ, ಸಹೋದರಿಯ ಗಂಡ ವಿಧಾನ ಪರಿಷತ್ ಸದಸ್ಯ, ಇನ್ನೊಬ್ಬರು ಕುಣಿಗಲ್ ಶಾಸಕ. ಇದೇನು ಫ್ಯಾಮಿಲಿ ಪಾಲಿಟಿಕ್ಸೋ ಅಥವಾ ಫ್ಯಾಮಿಲಿ ಪ್ಯಾಕೇಜೋ? ನೀವು ಏನೆಂದು ಕರೀತೀರಿ ಡಿಕೆ ಸುರೇಶ್ ಅವರೇ ಎಂದು ಜೆಡಿಎಸ್ ವ್ಯಂಗ್ಯವಾಡಿದೆ.

ಇದನ್ನೂ ಓದಿ: ಡಾ.ಮಂಜುನಾಥ್ H.D.ದೇವೇಗೌಡ ಕುಟುಂಬದ ಮತ್ತೊಂದು ಭಾಗ, JDS ಬಿಟ್ಟು ಅಳಿಯ ಬಿಜೆಪಿ ಸೇರಿದ್ದೇಕೋ? -ಡಿಕೆ ಸುರೇಶ್

ಆರೋಗ್ಯ ಕ್ಷೇತ್ರದಲ್ಲಿ ಎಣೆ ಇಲ್ಲದಷ್ಟು ಸೇವೆ ಮಾಡಿ ಲಕ್ಷಾಂತರ ಬಡಜನರ ಹೃದಯದಲ್ಲಿ ನೆಲೆಸಿರುವ ಡಾ. ಸಿಎನ್ ಮಂಜುನಾಥ್ ಅವರ ಬಗ್ಗೆ ಅನಾರೋಗ್ಯಕರ ಅಪಪ್ರಚಾರದಲ್ಲಿ ನೀವು ನಿರತರಾಗಿದ್ದೀರಿ. ಸೋಲಿನ ದುಃಸ್ವಪ್ನದಿಂದ ನೀವು ಬಳಲುತ್ತಿರುವುದು ಸ್ಪಷ್ಟ. ಡಿಕೆ ಸುರೇಶ್ ಅವರೇ ನೀವೇನು? ಡಾ. ಸಿಎನ್ ಮಂಜುನಾಥ್ ಅವರೇನು ಎನ್ನುವುದು ರಾಜ್ಯಕ್ಕಷ್ಟೇ ಅಲ್ಲ, ಇಡೀ ಭಾರತ ದೇಶಕ್ಕೇ ಗೊತ್ತಿದೆ. ಅನಗತ್ಯವಾಗಿ ನಾಲಿಗೆ ಜಾರಿ ಗುಣ ಹಾಳು ಮಾಡಿಕೊಳ್ಳಬೇಡಿ ಎಂದು ಜೆಡಿಎಸ್ ಟೀಕಾ ಪ್ರಹಾರ ನಡೆಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ