ಜೆಡಿಎಸ್​ನಿಂದ ಸಿಎಂ‌ ಇಬ್ರಾಹಿಂ ಅಮಾನತು: ಹೆಚ್​​ಡಿ ದೇವೇಗೌಡ ಆದೇಶ

ಬಿಜೆಪಿ ಜತೆಗಿನ ಮೈತ್ರಿ ನಿರ್ಧಾರ ತೆಗೆದುಕೊಂಡ ಸಭೆಗಳಲ್ಲಿ ಸಿಎಂ ಇಬ್ರಾಹಿಂ ಅವರು ಉಪಸ್ಥಿತರಿದ್ದು ಚರ್ಚೆಯಲ್ಲಿ ಮತ್ತು ತೀರ್ಮಾನದಲ್ಲಿ ಪಾಲುದಾರರಾಗಿದ್ದರು. ತದನಂತರ ಈ ತೀರ್ಮಾನದ ವಿರುದ್ಧ ವಿರೋಧಭಾಸ ಹೇಳಿಕೆ ನೀಡುತ್ತಿರುವುದಾಗಿ ವರದಿಯಾಗಿದೆ. ಹೀಗಾಗಿ ಕ್ರಮ ಕೈಗೊಳ್ಳಲಾಗಿದೆ ಎಂದು ಹೆಚ್​ಡಿ ದೇವೇಗೌಡ ತಿಳಿಸಿದ್ದಾರೆ.

ಜೆಡಿಎಸ್​ನಿಂದ ಸಿಎಂ‌ ಇಬ್ರಾಹಿಂ ಅಮಾನತು: ಹೆಚ್​​ಡಿ ದೇವೇಗೌಡ ಆದೇಶ
ಹೆಚ್​​ಡಿ ದೇವೇಗೌಡ & ಸಿಎಂ ಇಬ್ರಾಹಿಂ
Follow us
| Updated By: ಗಣಪತಿ ಶರ್ಮ

Updated on:Nov 17, 2023 | 6:57 PM

ಬೆಂಗಳೂರು, ನವೆಂಬರ್ 17: ಜೆಡಿಎಸ್​​ ಪಕ್ಷದಿಂದ ಸಿಎಂ ಇಬ್ರಾಹಿಂ (CM Ibrahim) ಅವರನ್ನು ಅಮಾನತುಗೊಳಿಸಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್​​ಡಿ ದೇವೇಗೌಡ (HD Deve Gowda) ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ರಾಜ್ಯ ಘಟಕದ ಪ್ರಸ್ತುತ ಕಾರ್ಯಕಾರಿ ಸಮಿತಿಯು ಪಕ್ಷದ ಸಂಘಟನೆ ಮತ್ತು ಬಲವರ್ಧನೆ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಿರುವುದಿಲ್ಲ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಕೈಗೊಂಡಿರುವುದಿಲ್ಲ. ಇದು ಮತ್ತು ಇನ್ನೂ ಕೆಲವು ಕಾರಣಗಳಿಗಾಗಿ ಈ ನಿರ್ಧಾರ ಕೈಗೊಂಡಿರುವುದಾಗಿ ಆದೇಶದಲ್ಲಿ ಅವರು ತಿಳಿಸಿದ್ದಾರೆ.

ಜೆಡಿಎಸ್ ಕರ್ನಾಟಕ ಘಟಕದ ಹಿಂದಿನ ಮಹಾ ಪ್ರಧಾನ ಕಾರ್ಯದರ್ಶಿಗಳು ಮತ್ತು ವಿಧಾನ ಪರಿಷತ್ ಶಾಸಕರಾದ ಎಸ್ಎಲ್ ಬೋಜೇಗೌಡ ರವರು 19-10-2023ರಂದು ಸಲ್ಲಿಸಿರುವ ವರದಿಯಲ್ಲಿ ಕರ್ನಾಟಕ ರಾಜ್ಯ ಪರಿಷತ್‌ನ ಪ್ರಸ್ತುತ ಕಾರ್ಯಕಾರಿ ಸಮಿತಿ, ಪಕ್ಷದ ಸಂಘಟನೆ ಮತ್ತು ಬಲವರ್ಧನೆ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಿರುವುದಿಲ್ಲ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಕೈಗೊಂಡಿರುವುದಿಲ್ಲ ಎಂದು ತಿಳಿಸಿದ್ದಾರೆ. ಮುಂದುವರೆದು, ಪಕ್ಷದ ಕಾರ್ಯಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿಲ್ಲ. ರಾಜ್ಯಾಧ್ಯಕ್ಷರು ಒಳಗೊಂಡಂತೆ ರಾಜ್ಯ ಪರಿಷತ್‌ನ ಕಾರ್ಯಕಾರಿ ಸಮಿತಿ ನಿಷ್ಕ್ರಿಯವಾಗಿರುವುದಾಗಿಯೂ ಸಹ ತಿಳಿಸಿರುತ್ತಾರೆ.

ಅಲ್ಲದೆ ಪಕ್ಷದ ಹಿತದೃಷ್ಟಿಯಿಂದ ಮತ್ತು ಪಕ್ಷವನ್ನು ಸಂಘಟನೆ ಮಾಡಲು, ಬಲವರ್ಧಿಸಲು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಜತೆ ಮೈತ್ರಿ/ಹೊಂದಾಣಿಕೆ ಮಾಡಿಕೊಳ್ಳಬೇಕೆಂದು ಸರ್ವಾನುಮತದಿಂದ ತೀರ್ಮಾನಿಸಲಾಗಿದೆ. ಈ ಹೊಂದಾಣಿಕ ಬಗ್ಗೆ ಬಿಜೆಪಿ ಮುಖಂಡರೊಂದಿಗೆ ಚರ್ಚಿಸಲು ಪಕ್ಷದ ರಾಷ್ಟ್ರಾಧ್ಯಕ್ಷರು, ರಾಜ್ಯಾಧ್ಯಕ್ಷರು ಹಾಗೂ ಶಾಸಕಾಂಗ ಪಕ್ಷದ ನಾಯಕರಿಗೆ ಅಧಿಕಾರ ನೀಡಲು ತೀರ್ಮಾನಿಸಲಾಗಿದೆ. ಈ ವಿಚಾರವಾಗಿ ನಡೆದ ಸಭೆಗಳಲ್ಲಿ ಸಿಎಂ ಇಬ್ರಾಹಿಂ ಅವರು ಉಪಸ್ಥಿತರಿದ್ದು ಚರ್ಚೆಯಲ್ಲಿ ಮತ್ತು ತೀರ್ಮಾನದಲ್ಲಿ ಪಾಲುದಾರರಾಗಿದ್ದರು. ತದನಂತರ ಈ ತೀರ್ಮಾನದ ವಿರುದ್ಧ ವಿರೋಧಭಾಸ ಹೇಳಿಕೆ ನೀಡುತ್ತಿರುವುದಾಗಿ ವರದಿಯಾಗಿದೆ. ಈ ಕಾರಣಗಳಿಗಾಗಿ ರಾಜ್ಯಾಧ್ಯಕ್ಷರನ್ನೊಳಗೊಂಡ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಜೆಡಿಎಸ್ ಸಂವಿಧಾನದ ಸೆಕ್ಷನ್ 10ರ ಅನ್ವಯ ನವೆಂಬರ್ 19ರಿಂದ ಅನ್ವಯವಾಗುವಂತೆ ವಿಸರ್ಜನೆ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಆದೇಶದಲ್ಲಿ ದೇವೇಗೌಡರು ತಿಳಿಸಿದ್ದಾರೆ.

ಇದನ್ನೂ ಓದಿ: 3 ಸ್ಥಾನಕ್ಕಾಗಿ ಅಮಿತ್​ ಶಾಗೆ ನಿಮ್ಮನ್ನು ಅಡ ಇಡುತ್ತಿದ್ದಾರೆ ಕುಮಾರಸ್ವಾಮಿ: ದೇವೇಗೌಡರ ಉದ್ದೇಶಿಸಿ ಇಬ್ರಾಹಿಂ ಹೇಳಿಕೆ

ಸಿಎಂ ಇಬ್ರಾಹಿಂರಿಂದ ಪಕ್ಷ ವಿರೋಧಿ ಚಟುವಟಿಕೆ: ತಕ್ಷಣದಿಂದಲೇ ಅಮಾನತು

‘07-11-2023ರಂದು ಜೆಡಿಎಸ್ ಜಿಲ್ಲಾಧ್ಯಕ್ಷರು ಮತ್ತು ಪಕ್ಷದ ರಾಜ್ಯ ಮಟ್ಟದ ವಿಭಾಗ ಮುಖ್ಯಸ್ಥರನ್ನು ಉದ್ದೇಶಿಸಿ ಇಬ್ರಾಹಿಂ ಅವರು ಬರೆದಿರುವ ಪತ್ರದಲ್ಲಿ ದಿನಾಂಕ: 19-10-2023ರಂದು ರಾಜ್ಯ ಕಾರ್ಯಕಾರಿ ಸಮಿತಿಯ ರಾಜ್ಯಾಧ್ಯಕ್ಷರನ್ನು ಒಳಗೊಂಡಂತೆ ಪದಾಧಿಕಾರಿಗಳನ್ನು ವಿಸರ್ಜನೆ ಮಾಡಿರುವುದು ಕಾನೂನು ಬಾಹಿರ ಮತ್ತು ಏಕಪಕ್ಷೀಯ ನಿರ್ಧಾರವೆಂದು ತಿಳಿಸಿ, ತಾನು ಇನ್ನೂ ರಾಜ್ಯಾಧ್ಯಕ್ಷನಾಗಿ ಮುಂದುವರೆದು, ಕಾರ್ಯನಿರ್ವಹಿಸುತ್ತಿರುವುದಾಗಿ, ಹಾಗಾಗಿ ಪಕ್ಷದ ಜಿಲ್ಲಾಧ್ಯಕ್ಷರು ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ತಮ್ಮ ಹುದ್ದೆಗಳಲ್ಲಿ ಮುಂದುವರೆದಿದ್ದಾರೆಂದು ತಿಳಿಸುತ್ತಾ, ಬಿಜೆಪಿ ಪಕ್ಷದೊಂದಿಗೆ ಹೊಂದಾಣಿಕೆ ಬಗ್ಗೆ ಒಲವು ಹೊಂದಿರುವವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕೆಂದು ಸೂಚಿಸಿರುತ್ತಾರೆ. ಅಲ್ಲದೇ, 15-11-2023ರಂದು, ಕೇರಳ ರಾಜ್ಯದ ತಿರುವನಂತಪುರಂದಲ್ಲಿ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರಾದ ಸಿ.ಕೆ. ಅವರು ಪಕ್ಷದ ಹೆಸರಿನಲ್ಲಿ ಅನಧಿಕೃತವಾಗಿ ಕರೆದಿದ್ದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಿ, ರಾಜ್ಯದಲ್ಲಿನ ಜೆಡಿಎಸ್‌-ಬಿಜೆಪಿ ಹೊಂದಾಣಿಕೆ ಬಗ್ಗೆ ವಿರೋಧಬಾಸ ಹೇಳಿಕೆ ನೀಡಿ, ಪಕ್ಷದ ಶಿಸ್ತನ್ನು ಉಲ್ಲಂಘಿಸಿದ್ದಾರೆ. ಈ ಮೇಲಿನ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿದಾಗ ಪಕ್ಷದ ಹಿಂದಿನ ರಾಜ್ಯಾಧ್ಯಕ್ಷರಾದ ಸಿಎಂ ಇಬ್ರಾಹಿಂ ಅವರು ಸಾರ್ವಜನಿಕವಾಗಿ ಪಕ್ಷದ ರಾಷ್ಟ್ರಧ್ಯಕ್ಷರ, ರಾಜ್ಯ ಶಾಸಕಾಂಗ ಪಕ್ಷದ ನಾಯಕರ ವಿರುದ್ಧ ಹಾಗೂ ರಾಜ್ಯದಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದೊಂದಿಗೆ ಹೊಂದಾಣಿಕೆ ಬಗ್ಗೆ (ಒಮ್ಮತವಾದ ನಿರ್ಣಯವಾಗಿದ್ದರೂ ಸಹ) ಬಹಿರಂಗವಾಗಿ ಪಕ್ಷ ವಿರೋಧಿ ಹೇಳಿಕೆ ನೀಡಿ, ಪಕ್ಷದ ಹಿತಕ್ಕೆ ಧಕ್ಕೆ ತಂದಿರುತ್ತಾರೆ. ಇಂತಹ ನಡವಳಿಕೆ ಮತ್ತು, ಹೇಳಿಕೆಗಳು ಪಕ್ಷದ ವಿರೋಧಿ ಚಟುವಟಿಕೆಗಳಾಗಿರುತ್ತವೆ’ ಎಂದು ಆದೇಶದಲ್ಲಿ ದೇವೇಗೌಡರು ಉಲ್ಲೇಖಿಸಿದ್ದಾರೆ.

ಈ ಎಲ್ಲ ಕಾರಣಗಳಿಗಾಗಿ ಜೆಡಿಎಸ್ ಸಂವಿಧಾನ ಮತ್ತು ನಿಯಮಾವಳಿಗಳ ಅಡಿಯಲ್ಲಿ ಸಿಎಂ ಇಬ್ರಾಹಿಂ ಅವರನ್ನು ತಕ್ಷಣದಿಂದಲೇ ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:49 pm, Fri, 17 November 23

ತಾಜಾ ಸುದ್ದಿ
ನೋಕಿಯಾ ಫೋನ್ ಹೋಗಿ HMD Mobile ಮಾರುಕಟ್ಟೆಗೆ ಬಂತು!
ನೋಕಿಯಾ ಫೋನ್ ಹೋಗಿ HMD Mobile ಮಾರುಕಟ್ಟೆಗೆ ಬಂತು!
ಹತ್ತಾರು ಊರು ಸುತ್ತಿದರೂ ನಿಮಗೆ ಮನಯೇ ಶ್ರೇಷ್ಠ ಎನ್ನಿಸಬಹುದು
ಹತ್ತಾರು ಊರು ಸುತ್ತಿದರೂ ನಿಮಗೆ ಮನಯೇ ಶ್ರೇಷ್ಠ ಎನ್ನಿಸಬಹುದು
ಮಕ್ಕಳ ಹೆಸರು ಪೂರ್ತಿಯಾಗಿ ಕರೆಯದಿದ್ದರೆ ಏನಾಗುತ್ತೆ ಗೊತ್ತಾ? ವಿಡಿಯೋ ನೋಡಿ
ಮಕ್ಕಳ ಹೆಸರು ಪೂರ್ತಿಯಾಗಿ ಕರೆಯದಿದ್ದರೆ ಏನಾಗುತ್ತೆ ಗೊತ್ತಾ? ವಿಡಿಯೋ ನೋಡಿ
‘ಪವಿತ್ರಾ ಗೌಡಗೆ ಲೋ ಬಿಪಿ’: ಆರೋಪಿಗಳ ತಪಾಸಣೆ ನಡೆಸಿದ ವೈದ್ಯರ ಪ್ರತಿಕ್ರಿಯೆ
‘ಪವಿತ್ರಾ ಗೌಡಗೆ ಲೋ ಬಿಪಿ’: ಆರೋಪಿಗಳ ತಪಾಸಣೆ ನಡೆಸಿದ ವೈದ್ಯರ ಪ್ರತಿಕ್ರಿಯೆ
‘ಯಾರೇ ದೊಡ್ಡವರಾದ್ರೂ ಕಾನೂನಿಗೆ ಹೊರತಲ್ಲ’: ವಸಿಷ್ಠ ಸಿಂಹ ಪ್ರತಿಕ್ರಿಯೆ
‘ಯಾರೇ ದೊಡ್ಡವರಾದ್ರೂ ಕಾನೂನಿಗೆ ಹೊರತಲ್ಲ’: ವಸಿಷ್ಠ ಸಿಂಹ ಪ್ರತಿಕ್ರಿಯೆ
‘ಮೆಜೆಸ್ಟಿಕ್’ ಸಿನಿಮಾ ಬಗ್ಗೆ ಭಾಮಾ ಹರೀಶ್ ಮಾತು, ದರ್ಶನ್​ಗೆ ಎಚ್ಚರಿಕೆ
‘ಮೆಜೆಸ್ಟಿಕ್’ ಸಿನಿಮಾ ಬಗ್ಗೆ ಭಾಮಾ ಹರೀಶ್ ಮಾತು, ದರ್ಶನ್​ಗೆ ಎಚ್ಚರಿಕೆ
ಮೈಸೂರು: ಆಕ್ಸೆಲ್ ಕಟ್ ಆಗಿ ಜಮೀನಿಗೆ ನುಗ್ಗಿದ ಕೆಎಸ್​ಆರ್​ಟಿಸಿ ಬಸ್
ಮೈಸೂರು: ಆಕ್ಸೆಲ್ ಕಟ್ ಆಗಿ ಜಮೀನಿಗೆ ನುಗ್ಗಿದ ಕೆಎಸ್​ಆರ್​ಟಿಸಿ ಬಸ್
ಕೊಲೆ ಆರೋಪಿ ಪವಿತ್ರಾ ಗೌಡ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ಶಿಫ್ಟ್​
ಕೊಲೆ ಆರೋಪಿ ಪವಿತ್ರಾ ಗೌಡ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ಶಿಫ್ಟ್​
ಬೆಂಗಳೂರಿನಲ್ಲಿ ಸದ್ಯದಲ್ಲೇ ನೀರಿನ‌ ದರ ಏರಿಕೆ? ಡಿಕೆಶಿ ಹೇಳಿದ್ದಿಷ್ಟು
ಬೆಂಗಳೂರಿನಲ್ಲಿ ಸದ್ಯದಲ್ಲೇ ನೀರಿನ‌ ದರ ಏರಿಕೆ? ಡಿಕೆಶಿ ಹೇಳಿದ್ದಿಷ್ಟು
ರೀಲ್ಸ್​ಗೆ ಯುವತಿ ಬಲಿ, 15 ಸೆಕೆಂಡ್‌ನಲ್ಲೇ ಹಾರಿ ಹೋಯ್ತು ಪ್ರಾಣ ಪಕ್ಷಿ
ರೀಲ್ಸ್​ಗೆ ಯುವತಿ ಬಲಿ, 15 ಸೆಕೆಂಡ್‌ನಲ್ಲೇ ಹಾರಿ ಹೋಯ್ತು ಪ್ರಾಣ ಪಕ್ಷಿ