ಲೋಕಸಭೆ ಚುನಾವಣೆಗೆ ಸ್ವಂತ ಬಲದಲ್ಲಿ ಹೋರಾಟ ಮಾಡುತ್ತೇವೆ: ಹೆಚ್​​ಡಿ ದೇವೇಗೌಡ

ಲೋಕಸಭೆ ಚುನಾವಣೆಗೆ ಸ್ವಂತ ಬಲದಲ್ಲಿ ಹೋರಾಟ ಮಾಡುತ್ತೇವೆ. ಸ್ವಂತ ಬಲದಿಂದ ಹೋರಾಟ ಮಾಡುವ ಶಕ್ತಿ‌ ಇದೆ. ಸದ್ಯ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ನಡೆಯಲಿದೆ. ಆ ಚುನಾವಣೆಗಳ ಬಗ್ಗೆ ನಾವು ತಯಾರಿ ಮಾಡಬೇಕು ಎಂದು ಮಾಜಿ ಪ್ರಧಾನಿ ಹೆಚ್​​.ಡಿ ದೇವೇಗೌಡ ಹೇಳಿದ್ದಾರೆ.

ಲೋಕಸಭೆ ಚುನಾವಣೆಗೆ ಸ್ವಂತ ಬಲದಲ್ಲಿ ಹೋರಾಟ ಮಾಡುತ್ತೇವೆ: ಹೆಚ್​​ಡಿ ದೇವೇಗೌಡ
ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ
Follow us
ವಿವೇಕ ಬಿರಾದಾರ
|

Updated on: Jun 06, 2023 | 1:14 PM

ಬೆಂಗಳೂರು: ಲೋಕಸಭೆ ಚುನಾವಣೆಗೆ (Loksabha Election) ಸ್ವಂತ ಬಲದಲ್ಲಿ ಹೋರಾಟ ಮಾಡುತ್ತೇವೆ. ಸ್ವಂತ ಬಲದಿಂದ ಹೋರಾಟ ಮಾಡುವ ಶಕ್ತಿ‌ ಇದೆ. ಸದ್ಯ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ (Local Body Election) ನಡೆಯಲಿದೆ. ಆ ಚುನಾವಣೆಗಳ ಬಗ್ಗೆ ನಾವು ತಯಾರಿ ಮಾಡಬೇಕು. ಪಕ್ಷ ಉಳಿಯಬೇಕಾದರೇ ಏನು ಮಾಡಬೇಕೆಂದು ಚರ್ಚೆ ಮಾಡುತ್ತೇವೆ. ಪಕ್ಷ ಸಂಘಟನೆ ಬಗ್ಗೆ ನಮ್ಮ ಮುಖಂಡರ ಜತೆ ಚರ್ಚೆ ಮಾಡುತ್ತೇವೆ ಎಂದು ಮಾಜಿ ಪ್ರಧಾನಿ ಹೆಚ್​​.ಡಿ ದೇವೇಗೌಡ (HD Deve Gowda) ಹೇಳಿದ್ದಾರೆ.

ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಚ್​.ಡಿ.ದೇವೇಗೌಡ ಅವರು ಮುಂದಿನ ಲೋಕಸಭೆ ಚುನಾವಣೆ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ಲೋಕಸಭೆ ಚುನಾವಣೆ ಬಗ್ಗೆ ಈಗಲೇ ಚರ್ಚೆ ಮಾಡಲು ಹೋಗಲ್ಲ. ಲೋಕಸಭೆ ಚುನಾವಣೆಯಲ್ಲಿ ಎಷ್ಟು ಕಡೆ ಅಭ್ಯರ್ಥಿ ಹಾಕಬೇಕು. ಎಲ್ಲೆಲ್ಲಿ ಸ್ಪರ್ಧಿಸಬೇಕೆಂದು ಮುಂದಿನ ದಿನಗಳಲ್ಲಿ ನಿರ್ಧಾರ ಮಾಡುತ್ತೇವೆ. ಲೋಕಸಭೆ ಚುನಾವಣೆಗೂ ಮುನ್ನ ಸ್ಥಳೀಯ ಚುನಾವಣೆಗೆ ತಯಾರಿ ನಡೆಸುತ್ತೇವೆ ಎಂದರು.

ನಾವು ಎರಡು ಬಾರಿ ಕಾಂಗ್ರೆಸ್​​ಗೆ ಬೆಂಬಲ ಕೊಟ್ಟಿದ್ದೇವೆ. ಮುಂದೆ ಪಕ್ಷ ಹೇಗೆ ಅಭಿವೃದ್ಧಿ ಮಾಡಬೇಕು, ಪಕ್ಷ ಉಳಿಬೇಕಾದರೇ ಏನ್ ಮಾಡಬೇಕು. ಎಲ್ಲದರ ಬಗ್ಗೆ ಮುಖಂಡರು ಚರ್ಚೆ ಮಾಡುತ್ತೇವೆ. ನಮ್ಮ ಶಕ್ತಿ ನಮ್ಮ ಕಾರ್ಯಕರ್ತರು. ಯುವಕರಿಗೆ ಹೆಚ್ಚು ಶಕ್ತಿ ತುಂಬುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ? ಹೀಗಿದೆ ಕ್ಷೇತ್ರ ಹಂಚಿಕೆ ಲೆಕ್ಕಾಚಾರ

ಸಿಎಂ ಸಿದ್ದರಾಮಯ್ಯ ವಿರುದ್ಧ ಹೆಚ್​ ಡಿ ಕುಮಾರಸ್ವಾಮಿ ವಾಗ್ದಾಳಿ

ಗ್ಯಾರಂಟಿ ಕುರಿತಂತೆ ನಿನ್ನೆ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಯೊಂದನ್ನ ನೋಡಿದೆ, ವಿರೋಧ ಪಕ್ಷಗಳು ಜನರನ್ನು ದಾರಿ ತಪ್ಪಿಸಿ ದುರ್ಬಳಕೆ ಮಾಡಿಕೊಳ್ಳುತ್ತಿವೆ ಅಂತ ಹೇಳಿದ್ದಾರೆ. ಅವರಿಗೆ ಕೇಳಲು ಬಯಸುತ್ತೇನೆ ದುರ್ಬಳಕೆ ಮಾಡಲು ವೇದಿಕೆ ಸಿದ್ದ ಮಾಡಿರೋವವರು ನೀವು. 200 ಯುನಿಟ್ ಫ್ರೀ ಅಂದ್ರಿ ಆದರೆ ಈಗ ಗೊತ್ತಾಗುತ್ತಿದೆಯಾ? ಅದೇನು ಸಮಸ್ಯೆ ಅಂತ. ಫ್ರೀ ಅಂತ ಹೇಳುವಾಗ ಪರಿಜ್ಞಾನ ಇರಲಿಲ್ವಾ..? ಈಗ ನೀವು ಷರತ್ತು ಹಾಕಿದಿರಲ್ಲಾ..? ಷರತ್ತು ಹಾಕ್ತೀವಿ ಅಂತ ಅಂದೇ ಹೇಳಬೇಕಿತ್ತು ಎಂದು ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡಿದರು.

ವಿರೋಧ ಪಕ್ಷ ಯುದ್ಧ ಮಾಡೋಕೆ ತಯಾರಾಗಿದ್ದೀವೆ, ಸ್ನೇಹ ಮಾಡೋಕೆ ಅಲ್ಲ

ಸಿದ್ದರಾಮಯ್ಯ ಅವರೇ ಉಚಿತ ಅಂತ ಹೇಳಿದವರು ನೀವು. ಗ್ಯಾರಂಟಿ ಕಾರ್ಡ್ ಮೇಲೆ ಸಹಿ ಹಾಕಿದವರು ನೀವು, ನಾವಲ್ಲ. ಬಾಡಿಗೆದಾರರ ಪರಿಸ್ಥಿತಿ ಏನಾಗುತ್ತದೆ ಈಗ. ಬೇರೆ ಮನೆಗೆ ಶಿಫ್ಟ್ ಆಗುವವನ ಕಥೆ ಏನು, ಮಣ್ಣು ತಿನ್ನಬೇಕು. ಇದನ್ನು ಪ್ರಶ್ನೆ ಮಾಡ್ತಾ ಇರೋದು ನಾವು. ವಿರೋಧ ಪಕ್ಷ ಯುದ್ಧ ಮಾಡೋಕೆ ತಯಾರಾಗಿದ್ದೀವೆ, ಸ್ನೇಹ ಮಾಡೋಕೆ ಅಲ್ಲ. ಜನ ಅದನ್ನು ಕೇಳೋಕೆ ಅಂತಾನೇ ಕೂರಿಸಿರೋದು ನಮ್ಮನ್ನ ಎಂದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಿಜಾಮನ ರಜಾಕರು ಮುಸಲ್ಮಾನರಲ್ಲ ಅಂತ ಪ್ರಿಯಾಂಕ್ ಹೇಳುತ್ತಾರೆ: ಯತ್ನಾಳ್
ನಿಜಾಮನ ರಜಾಕರು ಮುಸಲ್ಮಾನರಲ್ಲ ಅಂತ ಪ್ರಿಯಾಂಕ್ ಹೇಳುತ್ತಾರೆ: ಯತ್ನಾಳ್
‘ಸುಮ್ಮನಿರುವ ಮಗ ನಾನಲ್ಲ’: ಸಿಡಿದೆದ್ದ ಧನರಾಜ್; ಸಮಾಧಾನ ಮಾಡಿದ ಹನುಮ
‘ಸುಮ್ಮನಿರುವ ಮಗ ನಾನಲ್ಲ’: ಸಿಡಿದೆದ್ದ ಧನರಾಜ್; ಸಮಾಧಾನ ಮಾಡಿದ ಹನುಮ
ಜೆಡಿಎಸ್ ಕೇವಲ ಒಂದು ಕುಟುಂಬದ ಪಕ್ಷವಾಗಿ ಉಳಿದುಬಿಟ್ಟಿದೆ: ಯೋಗೇಶ್ವರ್
ಜೆಡಿಎಸ್ ಕೇವಲ ಒಂದು ಕುಟುಂಬದ ಪಕ್ಷವಾಗಿ ಉಳಿದುಬಿಟ್ಟಿದೆ: ಯೋಗೇಶ್ವರ್
ಪ್ರತಿ ಹುಟ್ಟುಹಬ್ಬಕ್ಕೆ ಇಬ್ರಾಹಿಂ ನನಗೆ ವಿಶ್ ಮಾಡುತ್ತಾರೆ: ಜಿಟಿ ದೇವೇಗೌಡ
ಪ್ರತಿ ಹುಟ್ಟುಹಬ್ಬಕ್ಕೆ ಇಬ್ರಾಹಿಂ ನನಗೆ ವಿಶ್ ಮಾಡುತ್ತಾರೆ: ಜಿಟಿ ದೇವೇಗೌಡ
ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ, ಅನುಷಾ ರೈ ನಡುವೆ ಬ್ರೇಕಪ್ ಆಗಿತ್ತಾ?
ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ, ಅನುಷಾ ರೈ ನಡುವೆ ಬ್ರೇಕಪ್ ಆಗಿತ್ತಾ?
ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ
ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
‘ಯಾರೂ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಂಗಿಲ್ಲ’: ಉಗ್ರಂ ಮಂಜು ಆಜ್ಞೆ
‘ಯಾರೂ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಂಗಿಲ್ಲ’: ಉಗ್ರಂ ಮಂಜು ಆಜ್ಞೆ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ