ನಿತೀಶ್ ಕುಮಾರ್​​ನ್ನು ಉಪರಾಷ್ಟ್ರಪತಿ ಮಾಡಿ ಎಂದಿದ್ದರು ಜೆಡಿಯು ನಾಯಕರು: ಬಿಜೆಪಿ

ರಾಜ್ಯಸಭಾ ಸಂಸದರಾಗುವ ಮೊದಲು ನಿತೀಶ್ ಕುಮಾರ್ ಅವರ ಉಪ ಮುಖ್ಯಮಂತ್ರಿಯಾಗಿದ್ದ ಮೋದಿ, ಜನತಾ ದಳ (ಯುನೈಟೆಡ್) ನಾಯಕರು ಕುಮಾರ್ ಅವರು ಉಪರಾಷ್ಟ್ರಪತಿಯಾಗಿ ದೆಹಲಿಗೆ ಹೋದರೆ ನೀವು ಬಿಹಾರ ಮುಖ್ಯಮಂತ್ರಿಯಾಗಬಹುದು ಎಂಬ...

ನಿತೀಶ್ ಕುಮಾರ್​​ನ್ನು ಉಪರಾಷ್ಟ್ರಪತಿ ಮಾಡಿ ಎಂದಿದ್ದರು ಜೆಡಿಯು ನಾಯಕರು: ಬಿಜೆಪಿ
ನಿತೀಶ್ ಕುಮಾರ್- ತೇಜಸ್ವಿ ಯಾದವ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Aug 10, 2022 | 5:59 PM

ಪಟನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಉಪರಾಷ್ಟ್ರಪತಿಯಾಗಬೇಕೆಂದು ಅವರ ಪಕ್ಷದ ಕೆಲವರು ಬಯಸಿದ್ದರು ಎಂದು ಬಿಜೆಪಿ ಸಂಸದ ಸುಶೀಲ್ ಕುಮಾರ್ ಮೋದಿ (Sushil Kumar Modi) ಹೇಳಿದ್ದಾರೆ. ರಾಜ್ಯಸಭಾ ಸಂಸದರಾಗುವ ಮೊದಲು ನಿತೀಶ್ ಕುಮಾರ್ ಅವರ ಉಪ ಮುಖ್ಯಮಂತ್ರಿಯಾಗಿದ್ದ ಮೋದಿ, ಜನತಾ ದಳ (ಯುನೈಟೆಡ್) (Janata Dal (United) ನಾಯಕರು ಕುಮಾರ್ ಅವರು ಉಪರಾಷ್ಟ್ರಪತಿಯಾಗಿ ದೆಹಲಿಗೆ ಹೋದರೆ ನೀವು ಬಿಹಾರ ಮುಖ್ಯಮಂತ್ರಿಯಾಗಬಹುದು ಎಂಬ ಯೋಜನೆಯೊಂದಿಗೆ ನನ್ನನ್ನು ಸಂಪರ್ಕಿಸಿದ್ದರು ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಮೋದಿ ಹೇಳಿದ್ದಾರೆ. ಆದಾಗ್ಯೂ ಮೋದಿಯವರ ಈ ಆರೋಪಗಳಿಗೆ ಜನತಾ ದಳ (ಯುನೈಟೆಡ್) ಅಥವಾ ಜೆಡಿಯು ಇನ್ನೂ ಪ್ರತಿಕ್ರಿಯಿಸಿಲ್ಲ. ಕೆಲವು ಜೆಡಿಯು ನಾಯಕರು ಬಂದು, ನಿತೀಶ್ ಕುಮಾರ್ ಅವರನ್ನು ಉಪ ರಾಷ್ಟ್ರಪತಿಯನ್ನಾಗಿ ಮಾಡಿ. ಹಾಗಾದರೆ ನೀವು ಬಿಹಾರದಲ್ಲಿ ಅಧಿಕಾರಕ್ಕೇರಬಹುದು ಎಂದು ಹೇಳಿರುವುದಾಗಿ ಮೋದಿ ಹೇಳಿದ್ದಾರೆ. ಎಂಟನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸುವ ಮುನ್ನ ಮೋದಿ ಈ ಮಾತನ್ನು ಹೇಳಿದ್ದಾರೆ.

ಯಾವುದೇ ರಾಷ್ಟ್ರೀಯ ಮಹತ್ವಾಕಾಂಕ್ಷೆಯನ್ನು ಹೊಂದಿಲ್ಲ ಎಂದು ಹೇಳಿದ ನಿತೀಶ್ ಕುಮಾರ್, ಬಿಜೆಪಿಯ ತಂತ್ರದಿಂದ ತಮ್ಮ ಪಕ್ಷವನ್ನು ಉಳಿಸಲು ಈ ರೀತಿ ಮಾಡಿದ್ದೇನೆ ಎಂದು ಹೇಳಿದ್ದಾರೆ. “ನಾನು ಇರುತ್ತೇನೆ ಅಥವಾ ಬಿಡುತ್ತೇನೆ, ಜನರು ಏನು ಬೇಕಾದರೂ ಹೇಳಿಕೊಳ್ಳಲಿ. ನಾನು ಪ್ರಧಾನಿ ಹುದ್ದೆಯ ಆಕಾಂಕ್ಷಿಯಲ್ಲ, 2014 ರಲ್ಲಿ ಬಂದವರು 2024 ರಲ್ಲಿ ಗೆಲ್ಲುತ್ತಾರೆಯೇ ಎಂಬುದು ಪ್ರಶ್ನೆ. ಕಳೆದ ಒಂದೂವರೆ ತಿಂಗಳಲ್ಲಿ ನಾನು ಮಾಧ್ಯಮಗಳೊಂದಿಗೆ ಮಾತನಾಡುವುದನ್ನು ನಿಲ್ಲಿಸಿದೆ” ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.

ಎನ್‌ಡಿಎಗೆ ಮತ ಹಾಕಿದ ಬಿಹಾರದ ಜನತೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ನಿತೀಶ್ ಕುಮಾರ್ ಅವಮಾನಿಸಿದ್ದಾರೆ ಎಂದು ಮೋದಿ ಹೇಳಿದರು. “ತೇಜಸ್ವಿ (ಯಾದವ್) ಅವರು ಉಪ ಮುಖ್ಯಮಂತ್ರಿಯಾಗಿ ಬಿಹಾರದ ಹೊಸ ಸರ್ಕಾರವು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ನಾವು ನೋಡಲು ಬಯಸುತ್ತೇವೆ. ಮುಂದಿನ ಚುನಾವಣೆಯ ಮೊದಲು ಸರ್ಕಾರವು ಪತನವಾಗಲಿದೆ ಎಂದಿದ್ದಾರೆ ಮೋದಿ.

ಇದನ್ನೂ ಓದಿ
Image
Big News: ಬಿಹಾರದ ಮುಖ್ಯಮಂತ್ರಿಯಾಗಿ 8ನೇ ಬಾರಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ
Image
ಬಿಹಾರದ ಮುಖ್ಯಮಂತ್ರಿಯಾಗಿ ಇಂದು ನಿತೀಶ್ ಕುಮಾರ್​​ ಪ್ರಮಾಣವಚನ ಸ್ವೀಕಾರ; ತೇಜಸ್ವಿ ಯಾದವ್​ಗೆ ಡಿಸಿಎಂ ಪಟ್ಟ
Image
Nitish Kumar: ನಿತೀಶ್ ಕುಮಾರ್​ಗೆ ಪ್ರಧಾನಿ ಗಾದಿಯ ಕನಸು; ‘ಪಲ್ಟಿ ರಾಮ’ನ ನಂಬಲು ಪ್ರತಿಪಕ್ಷಗಳಿಗೆ ಭಯ
Image
ಬಿಹಾರದಲ್ಲಿ ಬಿಜೆಪಿ-ಜೆಡಿಯು ಮೈತ್ರಿ ಸರ್ಕಾರ ಪತನ; ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

ಮಹಾರಾಷ್ಟ್ರದಲ್ಲಿ ಶಿವಸೇನಾಯನ್ನು ವಿಭಜಿಸಲು ನಾವು ಪ್ರಯತ್ನಿಸಲಿಲ್ಲ ಎಂದು ಹೇಳಿದ ಮೋದಿ, ಜೆಡಿಯುವನ್ನು ವಿಭಜಿಸಲು ಬಿಜೆಪಿ ಕೆಲಸ ಮಾಡುತ್ತಿದೆ ಎಂಬ ಜೆಡಿಯು ಆರೋಪಗಳನ್ನು ನಿರಾಕರಿಸಿದರು. ನಿತೀಶ್ ಅವರು ಆರ್‌ಜೆಡಿ (ರಾಷ್ಟ್ರೀಯ ಜನತಾ ದಳ)ವನ್ನು ತೊಡೆದುಹಾಕುತ್ತಾರೆ ಮತ್ತು ಲಾಲು ಯಾದವ್ ಅವರ ಅನಾರೋಗ್ಯದ ಲಾಭವನ್ನು ಪಡೆದುಕೊಂಡು ಅದನ್ನು ವಿಭಜಿಸಲು ಪ್ರಯತ್ನಿಸುತ್ತಾರೆ” ಎಂದು ಬಿಜೆಪಿ ಸಂಸದರು ಹೇಳಿದ್ದಾರೆ.

ಆರ್‌ಜೆಡಿಯ ತೇಜಸ್ವಿ ಯಾದವ್ ನಿತೀಶ್ ಕುಮಾರ್ ಅವರ ಸಚಿವ ಸಂಪುಟದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದಾರೆ. 2020ರ ಫಲಿತಾಂಶದ ನಂತರ ನನಗೆ ಮುಖ್ಯಮಂತ್ರಿಯಾಗಲು ಇಷ್ಟವಿರಲಿಲ್ಲ. ಆದರೆ ನನ್ನ ಮೇಲೆ ಒತ್ತಡ ಹೇರಲಾಯಿತು. ಯಾವ ಮಟ್ಟಕ್ಕೆ ಇಳಿದಿದ್ದಾರೆ ಎಂದು ಪಕ್ಷದ ಜನರನ್ನು ಕೇಳಿ. ನಂತರ ಏನಾಯಿತು ಎಂದು ನೀವು ನೋಡುತ್ತೀರಿ. ನಾನು ಎರಡು ತಿಂಗಳಿನಿಂದ ನಿಮ್ಮೊಂದಿಗೆ ಮಾತನಾಡಿಲ್ಲ ಎಂದು ಪ್ರಮಾಣ ವಚನ ಸ್ವೀಕರಿಸಿದ ನಂತರ ಮಾಧ್ಯಮವರ ಜತೆ ಮಾತನಾಡಿದ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ