ವರ್ಚ್ಯೂವಲ್ ಮೂಲಕ ಜಿಲ್ಲಾ ಬಿಜೆಪಿ ಕಾರ್ಯಾಲಯಗಳ ಉದ್ಘಾಟನೆ; ಮಧ್ಯಾಹ್ನ ಕೊಪ್ಪಳಕ್ಕೆ ಜೆಪಿ ನಡ್ಡಾ ಆಗಮನ

ಜೆಪಿ ನಡ್ಡಾ ಅವರು ಇಂದು ಕೊಪ್ಪಳಕ್ಕೆ ಆಗಮಿಸಿ ಬಿಜೆಪಿ ಬೃಹತ್ ಸಮಾವೇಶದಲ್ಲಿ ಭಾಗಿಯಾಗಿ ನೂತನ ಕಚೇರಿ ಉದ್ಘಾಟನೆ ಮಾಡಲಿದ್ದಾರೆ. ಹೀಗಾಗಿ ಕೊಪ್ಪಳ ನಗರದ ತಾಲೂಕು ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ವರ್ಚ್ಯೂವಲ್ ಮೂಲಕ ಜಿಲ್ಲಾ ಬಿಜೆಪಿ ಕಾರ್ಯಾಲಯಗಳ ಉದ್ಘಾಟನೆ; ಮಧ್ಯಾಹ್ನ ಕೊಪ್ಪಳಕ್ಕೆ ಜೆಪಿ ನಡ್ಡಾ ಆಗಮನ
ಕೊಪ್ಪಳದಲ್ಲಿ ಸಿದ್ದವಾದ ಬೃಹತ್ ವೇದಿಕೆ
Follow us
TV9 Web
| Updated By: ಆಯೇಷಾ ಬಾನು

Updated on:Dec 15, 2022 | 1:58 PM

ವಿಜಯಪುರ: ರಾಜ್ಯದ 10 ಜಿಲ್ಲೆಗಳಲ್ಲಿ ನೂತನವಾಗಿ ನಿರ್ಮಿಸಿರುವ ಜಿಲ್ಲಾ ಬಿಜೆಪಿ ಕಾರ್ಯಾಲಯಗಳ ಉದ್ಘಾಟನೆ ಹಾಗೂ 03 ಜಿಲ್ಲೆಗಳ ನೂತನ ಕಾರ್ಯಾಲಯಗಳ ಶಂಕುಸ್ಥಾಪನೆಗೆ ಬಿಜೆಪಿ ಭರದ ಸಿದ್ಧತೆ ನಡೆಸಿದೆ. ಇಂದು (ಡಿ 15) ಮಧ್ಯಾಹ್ನ 2 ಗಂಟೆ ಸುಮಾರಿಗೆ ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರು ಆಗಮಿಸಲಿದ್ದಾರೆ. ಕೊಪ್ಪಳದಲ್ಲಿ ನಡೆಯುವ ಸಮಾವೇಶ ಕಾರ್ಯಕ್ರಮದಲ್ಲಿ ವರ್ಚ್ಯೂವಲ್ ಮೂಲಕ ಜಿಲ್ಲಾ ಬಿಜೆಪಿ ನೂತನ ಕಚೇರಿ ಉದ್ಘಾಟನೆ ಮಾಡಲಾಗುತ್ತೆ.

ಕೊಪ್ಪಳಕ್ಕೆ ಆಗಮಿಸಿ ನಡ್ಡಾ ಅವರು ವರ್ಚ್ಯೂವಲ್ ಮೂಲಕ ವಿಜಯಪುರ, ಬಾಗಲಕೋಟೆ, ಗದಗ, ಬಳ್ಳಾರಿ, ಬೀದರ್, ರಾಯಚೂರು, ಬಳ್ಳಾರಿ, ಚಾಮರಾಜನಗರ, ಹಾವೇರಿ, ಕೋಲಾರದಲ್ಲಿ ಏಕಕಾಲಕ್ಕೆ ಜಿಲ್ಲಾ ಬಿಜೆಪಿ ನೂತನ ಕಚೇರಿ ಉದ್ಘಾಟನೆ ಮಾಡಲಿದ್ದಾರೆ.

ಕೊಪ್ಪಳಕ್ಕೆ ಆಗಮಿಸಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ

ಇನ್ನು ಜೆಪಿ ನಡ್ಡಾ ಅವರು ಇಂದು ಕೊಪ್ಪಳಕ್ಕೆ ಆಗಮಿಸಿ ಬಿಜೆಪಿ ಬೃಹತ್ ಸಮಾವೇಶದಲ್ಲಿ ಭಾಗಿಯಾಗಿ ನೂತನ ಕಚೇರಿ ಉದ್ಘಾಟನೆ ಮಾಡಲಿದ್ದಾರೆ. ಹೀಗಾಗಿ ಕೊಪ್ಪಳ ನಗರದ ತಾಲೂಕು ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವೇದಿಕೆ ಮೇಲೆ ಸಿಎಂ ಬಸವರಾಜ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೇರಿ ಸಚಿವರು, ಸ್ಥಳೀಯ ಶಾಸಕರು ಆಸೀನರಾಗಿದ್ದಾರೆ.

ಒಂದೇ ವೇದಿಕೆ ಮೇಲಿದ್ದರೂ ಮಾತನಾಡದ ಬೊಮ್ಮಾಯಿ, ಯಡಿಯೂರಪ್ಪ

ಕೊಪ್ಪಳದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಒಂದೇ ವೇದಿಕೆ ಮೇಲಿದ್ದರೂ ಬಸವರಾಜ ಬೊಮ್ಮಾಯಿ ಹಾಗೂ ಯಡಿಯೂರಪ್ಪ ಅವರು ನಾನೊಂದು ದಿಕ್ಕು ನೀನೊಂದು ದಿಕ್ಕಿನಂತೆ ಮುನಿಸಿಕೊಂಡಿದ್ದಾರೆ. ಪಕ್ಕ ಪಕ್ಕ ಕೂತ್ರು ದೂರ ದೂರವಾಗಿದ್ದಾರೆ. ಒಬ್ಬರಿಗೊಬ್ಬರು ಮಾತನಾಡುತ್ತಿಲ್ಲ. ಕೆಲ ಹೊತ್ತಿನ ಹಿಂದೆ ನನ್ನ ಹಾಗೂ ಯಡಿಯೂರಪ್ಪ ಅವರ ಸಂಬಂಧ ತಂದೆ-ಮಗನಂತೆ ಎಂದಿದ್ದ ಬೊಮ್ಮಾಯಿಯವರು ವೇದಿಕೆ ಮೇಲೆ ಬಂದು ಯಡಿಯೂರಪ್ಪ ಅವರನ್ನು ಮಾತನಾಡಿಸದೆ ಮೊಬೈಲ್​ನಲ್ಲಿ ಬಿಜಿಯಾಗಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:30 pm, Thu, 15 December 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್