ಉರಿಗೌಡ, ನಂಜೇಗೌಡ ಗೊತ್ತಿಲ್ಲ, ದೇವೇಗೌಡ, ರಂಗೇಗೌಡ ಗೊತ್ತು: ಸಚಿವ ಡಾ ಕೆ ಸುಧಾಕರ್

ರಾಜ್ಯ ರಾಜಕಾರಣದಲ್ಲಿ ಉರಿಗೌಡ, ನಂಜೇಗೌಡ ವಿಚಾರ ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಿದೆ. ಈ ನಡುವೆ ಆರೋಗ್ಯ ಖಾತೆ ಸಚಿವ ಡಾ.ಕೆ.ಸುಧಾಕರ್​​ ಹೇಳಿಕೆ ನೀಡಿದ್ದು, ಉರಿಗೌಡ, ನಂಜೇಗೌಡ ಗೊತ್ತಿಲ್ಲ, ದೇವೇಗೌಡ, ರಂಗೇಗೌಡ ಗೊತ್ತು ಎಂದಿದ್ದಾರೆ.

ಉರಿಗೌಡ, ನಂಜೇಗೌಡ ಗೊತ್ತಿಲ್ಲ, ದೇವೇಗೌಡ, ರಂಗೇಗೌಡ ಗೊತ್ತು: ಸಚಿವ ಡಾ ಕೆ ಸುಧಾಕರ್
ಆರೋಗ್ಯ ಖಾತೆ ಸಚಿವ ಡಾ.ಕೆ.ಸುಧಾಕರ್ Image Credit source: thenewsminute.com
Follow us
ಗಂಗಾಧರ​ ಬ. ಸಾಬೋಜಿ
|

Updated on: Mar 20, 2023 | 2:58 PM

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದರೆ, ಇನ್ನೊಂದು ಕಡೆ ರಾಜ್ಯ ರಾಜಕಾರಣದಲ್ಲಿ ಉರಿಗೌಡ, ನಂಜೇಗೌಡ (Urigowda Nanjegowda) ವಿಚಾರ ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಿದೆ. ರಾಜಕೀಯ ನಾಯಕರು ವಾದ ಪ್ರತಿವಾದಗಳು ಮಾಡುತ್ತಿದ್ದಾರೆ. ಈ ನಡುವೆ ಆರೋಗ್ಯ ಖಾತೆ ಸಚಿವ ಡಾ.ಕೆ.ಸುಧಾಕರ್ (K Sudhakar)​ ಹೇಳಿಕೆ ನೀಡಿದ್ದು, ಉರಿಗೌಡ, ನಂಜೇಗೌಡ ಗೊತ್ತಿಲ್ಲ, ದೇವೇಗೌಡ, ರಂಗೇಗೌಡ ಗೊತ್ತು ಎಂದಿದ್ದಾರೆ. ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಅಮರಾವತಿ ಗ್ರಾಮದಲ್ಲಿ ಬೆಂಗಳೂರು ಉತ್ತರ ವಿ.ವಿ. ಕ್ಯಾಂಪಸ್​ ಶಂಕು ಸ್ಥಾಪನೆ ಮಾಡಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೊತ್ತಿರುವವರ ಬಗ್ಗೆ ಮಾತ್ರ ನಾನು ಮಾತನಾಡುತ್ತೇನೆ. ನನಗೆ ಗೊತ್ತಿಲ್ಲದವರ ಬಗ್ಗೆ ಮಾತನಾಡಲ್ಲ. ಉರಿಗೌಡ, ನಂಜೇಗೌಡ ವಿಷಯವನ್ನು ದೊಡ್ಡದು ಮಾಡಬೇಕಿಲ್ಲ. ದೇಶಕ್ಕಾಗಿ ಹೋರಾಟ ಮಾಡಿದರೆ ಅವರಿಗೆ ಗೌರವ ಸೂಚಿಸೋಣ ಎಂದು ಹೇಳಿದ್ದಾರೆ.

ರಾಜ್ಯದ ಅಭಿವೃದ್ಧಿ ಬಗ್ಗೆ ಚಿಂತನೆ ಮಾಡಿ: ಮುರಗೇಶ್ ನಿರಾಣಿ,

ನಿನ್ನೆ ಕಾರವಾದಲ್ಲಿ ಮಾತನಾಡಿರುವ ಬೃಹತ್​ ಕೈಗಾರಿಕಾ ಸಚಿವ ಮುರಗೇಶ್ ನಿರಾಣಿ, ಉರಿಗೌಡ ಮತ್ತು ನಂಜೇಗೌಡ ವಿಷಯ ಬಿಟ್ಟು ರಾಜ್ಯದ ಅಭಿವೃದ್ಧಿ ಬಗ್ಗೆ ಚಿಂತನೆ ಮಾಡಬೇಕು. ಇದರಲ್ಲಿ ರಾಜಕಾರಣ ಬೇಡ ಎಂದು ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಅಂಕೋಲದಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದವರನ್ನು ಸೇರಿ ಹೇಳುತ್ತಿದ್ದೇನೆ, ರಾಜ್ಯದ ಅಭಿವೃದ್ಧಿ ಬಗ್ಗೆ ಚಿಂತನೆ ಮಾಡಬೇಕು. ಅದನ್ನ ಬಿಟ್ಟು ಇದರಲ್ಲಿ ರಾಜಕಾರಣ ಸರಿ ಅಲ್ಲ. ಯುವಕರಿಗೆ ಉದ್ಯೋಗ ನೀಡುವುದರ ಬಗ್ಗೆ, ಕೃಷಿಕರ ಅಭಿವೃದ್ಧಿ ಬಗ್ಗೆ ಚಿಂತನೆ ಇರಬೇಕು. ಸುಮ್ಮನೆ ಟೈಮ್ ಹಾಳು ಮಾಡುವುದರ ಬಗ್ಗೆ ಹೇಳಿಕೆ ನೀಡಬಾರದು ಎಂದು ಸ್ವಪಕ್ಷದವರ ಹೇಳಿಕೆಯನ್ನು ಮುರಗೇಶ್ ನಿರಾಣಿ ಖಂಡಿಸಿದ್ದಾರೆ.

ಇದನ್ನೂ ಓದಿ: ಉರಿಗೌಡ, ನಂಜೇಗೌಡರ ಬಗ್ಗೆ ಸ್ವಪಕ್ಷದವರ ಹೇಳಿಕೆಯನ್ನೇ ಖಂಡಿಸಿರುವ ಮುರುಗೇಶ್‌ ನಿರಾಣಿ

ಮಾಜಿ ಸಿಎಂ H.D.ಕುಮಾರಸ್ವಾಮಿ ಜಾತಿ ರಾಜಕಾರಣ ಮಾಡಲ್ವಾ?

ಬಿಜೆಪಿಯವರು ಜಾತಿ ಧರ್ಮದ ಹೆಸರಲ್ಲಿ ಸಮಾಜ ಒಡೆಯುತ್ತಿದ್ದಾರೆ ಎಂಬ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆ ಪ್ರತಿಕ್ರಿಯಿಸಿದ್ದು, H.D.ಕುಮಾರಸ್ವಾಮಿ ಜಾತಿ ರಾಜಕಾರಣ ಮಾಡಲ್ವಾ ಎಂದು ತಿರುಗೇಟು ನೀಡಿದರು. ಜಾತಿ ರಾಜಕಾರಣ ಮಾಡಲ್ಲ ಎಂದು ಎದೆಮುಟ್ಟಿಕೊಂಡು ಹೇಳಲಿ. ಒಕ್ಕಲಿಗ‌ ಸಮಾವೇಶದಲ್ಲಿ ನಾನು ನಿಮ್ಮ ಮಗ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಮತ ಕೇಳುತ್ತಾರೆ. ದಲಿತ ನಾಯಕರು ದಲಿತ ಸಮುದಾಯದ ಮನವಿ ಮಾಡಿಕೊಳುತ್ತಾರೆ. ಆದರೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭಿನ್ನವಾಗಿ ಕಾಣುತ್ತಾರೆ. ಪ್ರಧಾನಿ ಮೋದಿ ಜಾತಿ, ಧರ್ಮದ ಆಧಾರದ ಮೇಲೆ ಮತ ಕೇಳಲ್ಲ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಟಿಪ್ಪು ನಿಜ ಕನಸುಗಳು ನಾಟಕ ನಿರ್ಮಾಣಕ್ಕೆ ಸಿದ್ದರಾಮಯ್ಯ ಪ್ರೇರಣೆ: ಅಡ್ಡಂಡ ಕಾರ್ಯಪ್ಪ

ನಾನು ಮೊದಲೇ ಹೇಳಿದ್ದೆ ಫಿರಂಗಿ ಇತ್ತ ಕಡೆ ತಿರುಗಿಸಿ ಬೇರೆ ಕಡೆ ಗುರಿ

ಇನ್ನು ಕೋಲಾರ ಕ್ಷೇತ್ರದಲ್ಲಿ ಸ್ಪರ್ಧಿಸದಂತೆ ಸಿದ್ದರಾಮಯ್ಯಗೆ ಸಲಹೆ ವಿಚಾರವಾಗಿ ಮಾತನಾಡಿ, ನಾನು ಮೊದಲೇ ಹೇಳಿದ್ದೆ ಫಿರಂಗಿ ಇತ್ತ ಕಡೆ ತಿರುಗಿಸಿ ಬೇರೆ ಕಡೆ ಗುರಿ ಎಂದು. ಸಿದ್ದರಾಮಯ್ಯ ವರುಣಾಗೆ ಹೋಗುತ್ತಾರೆ ಎಂದು ನಾನು ಮೊದಲೇ ಹೇಳಿದ್ದೆ. ಕೋಲಾರ ಕ್ಷೇತ್ರದಲ್ಲಿ ಬೇಡವೆಂದು ರಾಹುಲ್ ಗಾಂಧಿ ಹೇಳಿರುವುದಿಲ್ಲ. ಕೋಲಾರದಿಂದ ಏನೋ ಮಾಹಿತಿ ಬಂದಿರುತ್ತೆ. ರಾಹುಲ್ ಬೇಡವೆಂದರೂ ಕೋಲಾರದಿಂದ ಸ್ಪರ್ಧಿಸುತ್ತೇನೆ ಅಂದರು. ಸಿದ್ದರಾಮಯ್ಯ ವರುಣಾ ಕ್ಷೇತ್ರಕ್ಕೆ ಹೋದರೆ ಅವರಿಗೆ ಒಳ್ಳೆಯದಾಗುತ್ತೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ