ಖರ್ಗೆ ಕುಟುಂಬಕ್ಕೆ ಹತ್ಯೆ ಬೆದರಿಕೆ ಪ್ರಕರಣ: ಚಿತ್ತಾಪುರ ಬಿಜೆಪಿ ನಾಯಕ ಮಣಿಕಂಠ ಬಂಧನ, ಬಿಡುಗಡೆ

ಕಲಬುರಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರದ ಪರಾಜಿತ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ಅವರನ್ನು ಪೊಲೀಸರು ಬಂಧಿಸಿ ಠಾಣೆ ಬೇಲ್ ಮೇಲೆ ಬಿಡುಗಡೆ ಮಾಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಹತ್ಯೆ ಬೆದರಿಕೆ ಹಾಕಿದ್ದ ಆಡಿಯೋ ವೈರಲ್ ಆಗಿದ್ದ ಪ್ರಕರಣ ಸಂಬಂಧ ಬಂಧಿಸಲಾಗಿತ್ತು.

ಖರ್ಗೆ ಕುಟುಂಬಕ್ಕೆ ಹತ್ಯೆ ಬೆದರಿಕೆ ಪ್ರಕರಣ: ಚಿತ್ತಾಪುರ ಬಿಜೆಪಿ ನಾಯಕ ಮಣಿಕಂಠ ಬಂಧನ, ಬಿಡುಗಡೆ
ಮಣಿಕಂಠ ರಾಥೋಡ್ ಮತ್ತು ಮಲ್ಲಿಕಾರ್ಜುನ ಖರ್ಗೆ
Edited By: Rakesh Nayak Manchi

Updated on: Jul 15, 2023 | 8:17 AM

ಕಲಬುರಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರ ಕುಟುಂಬಕ್ಕೆ ಹತ್ಯೆ ಬೆದರಿಕೆ ಹಾಕಿದ್ದ ಆಡಿಯೋ ವೈರಲ್ ಪ್ರಕರಣ ಸಂಬಂಧ ಜಿಲ್ಲೆಯ ಚಿತ್ತಾಪುರ ಕ್ಷೇತ್ರದ ಪರಾಜಿತ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ (Manikanta Rathod) ಅವರನ್ನು ಪೊಲೀಸರು ನಿನ್ನೆ ರಾತ್ರಿ ಬಂಧಿಸಿದ್ದಾರೆ. ನಂತರ ಠಾಣೆ ಬೇಲ್ ಮೇಲೆ ಬಿಡುಗಡೆ ಮಾಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಸಚಿವ ಪ್ರಯಾಂಕ್ ಖರ್ಗೆ ಅವರ ವಿರುದ್ಧ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮಣಿಕಂಠ ಪರಾಭವಗೊಂಡಿದ್ದರು. ಇದಕ್ಕೂ ಮುನ್ನ, ಖರ್ಗೆ ಕುಟುಂಬವನ್ನು ಮುಗಿಸುತ್ತೇನೆ ಎಂದು ಚುನಾವಣಾ ಪ್ರಚಾರದ ವೇಳೆ ಮಣಿಕಂಠ ಹೇಳಿರುವ ಆರೋಪ ಕೇಳಿಬಂದಿತ್ತು. ಇದಕ್ಕೆ ಸಂಬಂಧಿಸಿದ ಆಡಿಯೋ ಕೂಡ ವೈರಲ್ ಆಗಿತ್ತು. ಈ ಸಂಬಂಧ ಮೇ 6 ರಂದು ಚಿತ್ತಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: Karnataka Politics: ಗಣಿ ಸಚಿವ ಮಲ್ಲಿಕಾರ್ಜುನ್ ಅವರನ್ನು ನಾಯಿಗೆ ಹೋಲಿಸಿದ ಸಂಸದ ಜಿಎಂ ಸಿದ್ದೇಶ್ವರ

ಮಣಿಕಂಠ ರಾಠೋಡ್ ವಿರುದ್ಧ ದಾಖಲಾಗಿರುವ ದೂರು ಇದು ಮೊದಲನೆಯದ್ದಲ್ಲ. ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಮಾತ್ರವಲ್ಲದೆ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸುಮಾರು 40 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಕೊಲೆ, ಡ್ರಗ್ಸ್ ಮತ್ತು ಮಾದಕವಸ್ತುಗಳ ಕಳ್ಳಸಾಗಣೆ, ಕ್ರಿಮಿನಲ್ ಬೆದರಿಕೆ, ಶಸ್ತ್ರಾಸ್ತ್ರಗಳನ್ನು ಅಕ್ರಮವಾಗಿ ಹೊಂದಿರುವುದು ಸೇರಿದಂತೆ ಅನೇಕ ವಿಚಾರಗಳಲ್ಲಿ ಪ್ರಕರಣ ದಾಖಲಾಗಿವೆ.

ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ಪ್ರಿಯಾಂಕ್ ಖರ್ಗೆ ಅವರ ಮೇಲೆ ಗುಂಡು ಹಾರಿಸಲು ಸಿದ್ಧ ಎಂದು ಮಣಿಕಂಠ ಅವರು ಹೇಳಿಕೆ ನೀಡಿದ್ದೆರು. ಈ ಪ್ರಕರಣ ಸಂಬಂಧ ದಾಖಲಾಗಿದ್ದ ದೂರಿನ ಅನ್ವಯ ಪೊಲೀಸರು ಮಣಿಕಂಠರನ್ನು ಬಂಧಿಸಿದ್ದರು. ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಿಯಾಗಿದ್ದರು.

ರಾಜಕೀಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್​ನಿಂದ ಆರಂಭವಾದ ವೃತ್ತಿ ಬದುಕು, ಕಲಬುರಗಿ, ಕೊಪ್ಪಳದಿಂದ ಇದೀಗ ಹುಬ್ಬಳ್ಳಿಗೆ ಬಂದಿದ್ದು, ಉತ್ತರ ಕರ್ನಾಟಕ ಪ್ರಮುಖ ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Loading...
Unable to load recommendations.
Follow Us