AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ವಿರುದ್ಧ ಹೇಳಿಕೆ; ಸಚಿವ ಅಶ್ವತ್ಥ್ ನಾರಾಯಣ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಆಳಂದ ಮಾಜಿ ಶಾಸಕ ಬಿ.ಆರ್.ಪಾಟೀಲ್

ಐಪಿಸಿ ಸೆಕ್ಷನ್ 353, 504, 506ರ ಅಡಿಯಲ್ಲಿ ಸಚಿವ ಅಶ್ವಥ್ ನಾರಾಯಣ ಅವರು ಅಪರಾಧ ಎಸಗಿದ್ದಾರೆ. ಕೂಡಲೇ ಅಶ್ವತ್ಥ್ ನಾರಾಯಣರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ರಾಜ್ಯಪಾಲರಿಗೆ ಆಳಂದ ಮಾಜಿ ಶಾಸಕ ಬಿ.ಆರ್.ಪಾಟೀಲ್ ದೂರು ನೀಡಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಹೇಳಿಕೆ; ಸಚಿವ ಅಶ್ವತ್ಥ್ ನಾರಾಯಣ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಆಳಂದ ಮಾಜಿ ಶಾಸಕ ಬಿ.ಆರ್.ಪಾಟೀಲ್
ಬಿ.ಆರ್.ಪಾಟೀಲ್ ಮತ್ತು ಸಿ.ಎನ್.ಅಶ್ವತ್ಥ ನಾರಾಯಾಣ
TV9 Web
| Updated By: Rakesh Nayak Manchi|

Updated on: Feb 16, 2023 | 4:19 PM

Share

ಕಲಬುರಗಿ: ಸಿದ್ದರಾಮಯ್ಯ (Siddaramaiah) ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಸಚಿವ ಅಶ್ವಥ್ ನಾರಾಯಣ (CN Ashwath Narayan) ವಿರುದ್ದ ಕೊಲೆ ಯತ್ನ ಪ್ರಕರಣ ದಾಖಲಿಸಬೇಕು ಎಂದು ಮಲ್ಲೇಶ್ವರಂ ಪೊಲೀಸ್ ಸ್ಟೇಷನ್​​ಗೆ ಕಾಂಗ್ರೆಸ್ ಮುಖಂಡರು ದೂರು ಸಲ್ಲಿಸಿದ ಬೆನ್ನಲ್ಲೆ ಕಲಬುರಗಿ ಜಿಲ್ಲೆ ಆಳಂದ ಮಾಜಿ ಶಾಸಕ ಬಿ.ಆರ್.ಪಾಟೀಲ್ (B.R.Patil) ಅವರು​ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಅಶ್ವತ್ಥ್ ನಾರಾಯಣ ಅವರು ಸಿದ್ದರಾಮಯ್ಯರ ಕೊಲೆಗೆ ಪ್ರಚೋದನೆ ನೀಡಿದ್ದಾರೆ. ಸಂವಿಧಾನ‌ ಬದ್ಧವಾಗಿ ಕಾರ್ಯ ನಿರ್ವಹಿಸುವುದಾಗಿ ಪ್ರಮಾಣ ವಚನ ಸ್ವೀಕರಿಸಿದ ಮೂಲ ತಳಹದಿಯನ್ನೇ ಉಲ್ಲಂಘಿಸಿದ್ದಾರೆ. ಶಾಂತಿ ಸುವ್ಯವಸ್ಥೆಯನ್ನು ಕದಡುವ ಮೂಲಕ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿದ್ದಾರೆ. ಐಪಿಸಿ ಸೆಕ್ಷನ್ 353, 504, 506ರ ಅಡಿಯಲ್ಲಿ ಅಪರಾಧವೆಸಗಿದ್ದಾರೆ. ಕೂಡಲೇ ಅಶ್ವತ್ಥ್ ನಾರಾಯಣರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರಿ​ಗೆ ಪತ್ರದ ಮೂಲಕ ದೂರು ನೀಡಿದ್ದಾರೆ.

ಟಿಪ್ಪುನಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು ಎಂದು ಸಚಿವರು ವಿವಾದವನ್ನು ತಮ್ಮ ಮೈಮೇಲೆ ಎಳೆದುಕೊಂಡಿದ್ದರು. ಭಾರೀ ಟೀಕೆ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತ ಅವರು, ಮಂಡ್ಯದಲ್ಲಿ ಟಿಪ್ಪು ಸುಲ್ತಾನ್ ಮತ್ತು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಹೋಲಿಸಿ ಆಡಿರುವ ಮಾತುಗಳು ಸಾಂದರ್ಭಿಕ ಪ್ರಸ್ತಾಪವೇ ವಿನಃ ಯಾವುದೇ ದುರುದ್ದೇಶದ ಮಾತುಗಳಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಹೇಳಿಕೆಯು ಭಾರೀ ವಿವಾದದ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಸಚಿವರು ಟ್ವೀಟ್ ಮೂಲಕ ವಿಷಾದ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: Finish Siddaramaiah Comment: ತಮ್ಮ ಹೇಳಿಕೆಗೆ ಸದನದಲ್ಲಿ ವಿಷಾದ ವ್ಯಕ್ತಪಡಿಸಿದ ಡಾ ಸಿಎನ್ ಅಶ್ವಥ್ ನಾರಾಯಣ

ಪ್ರಧಾನಿಯವರನ್ನು ನರ ಹಂತಕ ಎನ್ನುವುದು, ಮುಖ್ಯಮಂತ್ರಿ ಅವರಿಗೆ ಮನೆ ಹಾಳಾಗ ಎನ್ನುವುದು ಸಿದ್ದರಾಮಯ್ಯ ಅವರ ಸಂಸ್ಕೃತಿ ಆಗಿರಬಹುದು. ಆದರೆ, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ಸನ್ನು ಸೋಲಿಸಬೇಕು ಎನ್ನುವ ಅರ್ಥದಲ್ಲಷ್ಟೇ ನಾನು ಆ ಮಾತು ಆಡಿದ್ದೇನೆ. ಅದರಿಂದ ಅವರಿಗೆ ನೋವುಂಟಾಗಿದ್ದಾರೆ ವಿಷಾದಿಸುತ್ತೇನೆ ಎಂದು ಸಚಿವರು ಟ್ವೀಟ್​​ನಲ್ಲಿ ಉಲ್ಲೇಖಿಸಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ