ನಾಳೆ ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ಸ್ಥಾನಕ್ಕೆ ಚುನಾವಣೆ: ಖರ್ಗೆ ತವರಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ಕಸರತ್ತು

ನಾಳೆ ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಪಾಲಿಕೆ ಮೇಯರ್ ಆಯ್ಕೆ ತೀವ್ರ ಕುತೂಹಲ ಮೂಡಿಸಿದೆ. ಎಐಸಿಸಿ ಅಧ್ಯಕ್ಷ ಖರ್ಗೆ ತವರಲ್ಲಿ ಮೊದಲ ಬಾರಿಗೆ ಸ್ವಂತ ಬಲದಿಂದ ಅಧಿಕಾರ ಹಿಡಿಯಲು ಬಿಜೆಪಿ ಕಸರತ್ತು ನಡೆಸಿದೆ.

ನಾಳೆ ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ಸ್ಥಾನಕ್ಕೆ ಚುನಾವಣೆ: ಖರ್ಗೆ ತವರಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ಕಸರತ್ತು
ಕಲಬುರಗಿ ಮಹಾನಗರ ಪಾಲಿಕೆImage Credit source: prajavani.net
Follow us
ಗಂಗಾಧರ​ ಬ. ಸಾಬೋಜಿ
|

Updated on:Mar 22, 2023 | 2:53 PM

ಕಲಬುರಗಿ: ನಾಳೆ ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ಸ್ಥಾನಕ್ಕೆ ಚುನಾವಣೆ (Municipal Corporation Mayor’s Election) ನಡೆಯಲಿದ್ದು, ಪಾಲಿಕೆ ಮೇಯರ್ ಆಯ್ಕೆ ತೀವ್ರ ಕುತೂಹಲ ಮೂಡಿಸಿದೆ. ಎಐಸಿಸಿ ಅಧ್ಯಕ್ಷ ಖರ್ಗೆ ತವರಲ್ಲಿ ಮೊದಲ ಬಾರಿಗೆ ಸ್ವಂತ ಬಲದಿಂದ ಅಧಿಕಾರ ಹಿಡಿಯಲು ಬಿಜೆಪಿ ಕಸರತ್ತು ನಡೆಸಿದೆ. ವಿಧಾನಸಭೆ ಚುನಾವಣೆಗೂ ಮುನ್ನವೇ ಶಾಕ್ ನೀಡಲು ಬಿಜೆಪಿ ಮುಂದಾಗಿದೆ. 2021ರ ಸೆಪ್ಟೆಂಬರ್​​ ತಿಂಗಳಲ್ಲಿ ಕಲಬುರಗಿ ಪಾಲಿಕೆ ಚುನಾವಣೆ ನಡೆದಿತ್ತು. BJP 23, ಕಾಂಗ್ರೆಸ್ 27, JDS 4, ಓರ್ವ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದರು. ಅಧಿಕಾರಕ್ಕೆ ಬರಲು MLCಗಳ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಲಾಗಿದೆ. ಅಧಿಕಾರ ಚುಕ್ಕಾಣಿ ಹಿಡಿಯಲು ಜೆಡಿಎಸ್ ಬೆಂಬಲದೊಂದಿಗೆ ಅಧಿಕಾರಕ್ಕೇರಲು ಕಾಂಗ್ರೆಸ್ ಕೂಡ ತಂತ್ರ ರೂಪಿಸುತ್ತಿದೆ. ಈಗಾಗಲೇ ಕೈ ಮುಖಂಡರು ಜೆಡಿಎಸ್ ನಾಯಕರ ಸಂಪರ್ಕದಲ್ಲಿದ್ದು, ಪಾಲಿಕೆಯ ಗದ್ದುಗೆ ಹಿಡಿಯಲು ಬಿಜೆಪಿಗೆ ಬಿಡದಂತೆ ಕೈ ತಂತ್ರ ಹೆಣಿಯುತ್ತಿದೆ.

ಕಳೆದ ಅನೇಕ ದಶಕಗಳಿಂದ ಕಾಂಗ್ರೆಸ್ ಪಾಲಿಕೆಯಲ್ಲಿ ಅಧಿಕಾರದಲ್ಲಿತ್ತು. ಈ ಬಗ್ಗೆ ಕಲಬುರಗಿ ನಗರದಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಪಾಲಿಕೆ ಸದಸ್ಯರು ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಹಾಗೂ ಶಾಸಕರು, ರಾಜ್ಯಸಭೆ ಸದಸ್ಯರ ಮತ‌ ಸೇರಿದ್ರೆ ಕೈ ಬಲ 34ಕ್ಕೆ ತಲುಪುತ್ತದೆ.

ಇದನ್ನೂ ಓದಿ: Congress Candidates List: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇಂದು ಬಿಡುಗಡೆಯಾಗಲ್ಲ

ಕಾಂಗ್ರೆಸ್ ಅರ್ಜಿಯನ್ನು ಎತ್ತಿಹಿಡಿದ ಹೈಕೋರ್ಟ್

ಇಲ್ಲಿನ ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ ಸಂಬಂಧಿಸಿ ಹಳೆ ಮತದಾರರ ಪಟ್ಟಿಯಂತೆ ಚುನಾವಣೆ ನಡೆಸಲು ಆದೇಶ ನೀಡಲಾಗಿದೆ. ಈ ಬಗ್ಗೆ ಕಾಂಗ್ರೆಸ್ ಅರ್ಜಿಯನ್ನು ಕಲಬುರಗಿ ಹೈಕೋರ್ಟ್ ಎತ್ತಿ ಹಿಡಿದಿದೆ. ಕಲಬುರಗಿ ಹೈಕೋರ್ಟ್ ನ್ಯಾ. ಇಂದರೇಶ್‌ ಪೀಠ ಆದೇಶ ನೀಡಿದೆ. ಹೈಕೋರ್ಟ್​ ಆದೇಶದಿಂದ ಬಿಜೆಪಿ ನಾಯಕರಿಗೆ ಹಿನ್ನಡೆ ಉಂಟಾಗಿದೆ.

63 ಮತದಾರರ ಪಟ್ಟಿಯಂತೆ ಚುನಾವಣೆ ನಡೆಸಲು ಆದೇಶ ನೀಡಲಾಗಿದೆ. ನವೆಂಬರ್​ನಲ್ಲಿ ಹೊರಡಿಸಿದ್ದ ಮತದಾರರ ಪಟ್ಟಿಯಂತೆ ಚುನಾವಣೆ ನಡೆಸುವಂತೆ ಹೈಕೋರ್ಟ್​​ನಿಂದ ಸೂಚನೆ ಲಭಿಸಿದೆ. ಬಿಜೆಪಿ ಅಧಿಕಾರಕ್ಕೆ ಬರಲು ಐವರ ಹೆಸರನ್ನು ಸೇರಿಸಿತ್ತು. ಪರಿಷತ್​ನ ಐವರು ಸದಸ್ಯರ ಹೆಸರನ್ನು ಬಿಜೆಪಿ ಸೇರಿಸಿತ್ತು. ಕಲಬುರಗಿ ಜಿಲ್ಲೆಗೆ ಸಂಬಂಧ ಇಲ್ಲದಿದ್ದವರ ಹೆಸರು ಸೇರಿಸಿತ್ತು. ಮತದಾರರ ಪಟ್ಟಿಯಲ್ಲಿ ಐವರ ಹೆಸರು ಸೇರಿಸಿದ್ದ ಬಿಜೆಪಿ ಕ್ರಮವನ್ನು ಪ್ರಶ್ನಿಸಿ ಕಾಂಗ್ರೆಸ್ ಹೈಕೋರ್ಟ್​​ ಮೊರೆಹೋಗಿತ್ತು.

ಇದನ್ನೂ ಓದಿ: ಯುಗಾದಿ ಹಬ್ಬದ ಸಂದರ್ಭದಲ್ಲಿ ಈ ಕೆಟ್ಟ ಆಡಳಿತ ತೊಲಗಲಿ; ಕಾಂಗ್ರೆಸ್ ಸರ್ಕಾರ ಜನಪರವಾಗಿದೆ -ಡಿಕೆ ಶಿವಕುಮಾರ್

ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಹಳೆ ಮತದಾರರ ಪಟ್ಟಿಯಂತೆ ಚುನಾವಣೆ ನಡೆಸಲು ಆದೇಶ ನೀಡಲಾಗಿದೆ. ಕಲಬುರಗಿ ಹೈಕೋರ್ಟ್ ಕಾಂಗ್ರೆಸ್ ಅರ್ಜಿ ಎತ್ತಿ ಹಿಡಿದ ಹಿನ್ನೆಲೆ ಬಿಜೆಪಿ ನಾಯಕರಿಗೆ ಹಿನ್ನಡೆ ಉಂಟಾಗಿದೆ. ಈ ಕಾರಣದಿಂದ ಹೈಕೋರ್ಟ್ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸಲಾಗಿದೆ. ಬಿಜೆಪಿಯ ಪರ ವಕೀಲರು ಮೇಲ್ಮನವಿ ಸಲ್ಲಿಸಲಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:53 pm, Wed, 22 March 23

ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ