ಕಾಂಗ್ರೆಸ್ ಸೇರಿ ಆರೇ ತಿಂಗಳಿಗೆ ವಿಧಾನಸಭೆ ಚುನಾವಣೆ ಟಿಕೆಟ್​ಗಾಗಿ​ ಅರ್ಜಿ ಸಲ್ಲಿಸಿದ ​ನಟ, ನಿರ್ದೇಶಕ ಎಸ್. ನಾರಾಯಣ್

ಕನ್ನಡ ಚಲನಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಎಸ್. ನಾರಾಯಣ್ ಅವರು ಮುಂಬರುವ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಟಿಕೆಟ್​ಗಾಗಿ ಅರ್ಜಿ ಸಲ್ಲಿಸಿದ್ದಾರೆ.

ಕಾಂಗ್ರೆಸ್ ಸೇರಿ ಆರೇ ತಿಂಗಳಿಗೆ ವಿಧಾನಸಭೆ ಚುನಾವಣೆ ಟಿಕೆಟ್​ಗಾಗಿ​ ಅರ್ಜಿ ಸಲ್ಲಿಸಿದ ​ನಟ, ನಿರ್ದೇಶಕ ಎಸ್. ನಾರಾಯಣ್
S Narayan And DK Shivakumar
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Nov 16, 2022 | 7:10 PM

ಬೆಂಗಳೂರು: ಕನ್ನಡದ ಖ್ಯಾತ ಚಲನಚಿತ್ರ ನಿರ್ಮಾಪಕ, ನಿರ್ದೇಶಕ, ನಟ ಎಸ್. ನಾರಾಯಣ್ (s narayan) ಅವರು ಈಗಾಗಲೇ ರಾಜಕೀಯ (Politics) ಅಖಾಡಕ್ಕೆ ಧುಮುಕಿದ್ದು, ಇದೀಗ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Election 2023) ಸ್ಪರ್ಧೆ ಮಾಡಲು ಮುಂದಾಗಿದ್ದಾರೆ. ಕಾಂಗ್ರೆಸ್ ಸೇರಿದ ಆರೇ ತಿಂಗಳಿಗೆ 2023ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ಟಿಕೆಟ್ ನೀಡುವಂತೆ ಅರ್ಜಿ ಸಲ್ಲಿಸಿದ್ದಾರೆ.

S Narayan: ನಟ, ನಿರ್ದೇಶಕ ಎಸ್ ನಾರಾಯಣ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಆರು ತಿಂಗಳ ಹಿಂದೆ ಅಷ್ಟೇ ಕಾಂಗ್ರೆಸ್ ಸೇರಿರುವ ನಿರ್ದೇಶಕ, ನಟ ಎಸ್. ನಾರಾಯಣ್ ಅವರು ಬೆಂಗಳೂರಿನ ರಾಜಾಜಿನಗರ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಆಸಕ್ತಿ ತೋರಿದ್ದು, ಇಂದು (ನವೆಂಬರ್ 16) ಟಿಕೆಟ್​ಗಾಗಿ ಎರಡು ಲಕ್ಷ ರೂಪಾಯಿ ಡಿಡಿ ತುಂಬಿ ​ಅರ್ಜಿ ಸಲ್ಲಿದರು.

1981ರ ವರ್ಷದಲ್ಲಿ ನಟನಾಗಬೇಕು ಎಂದುಕೊಂಡು ಬೆಂಗಳೂರಿಗೆ ಬಂದ ನಾರಾಯಣ್, ಕಳೆದ ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಚಿತ್ರರಂಗದಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಇದರೊಂದಿಗೆ ತಮ್ಮ ಕನಸನ್ನು ನನಸು ಮಾಡಿಕೊಂಡಿದ್ದಾರೆ. ನಿರ್ದೇಶಕ, ನಿರ್ಮಾಪಕ, ನಟನಾಗಿ ಜನರನ್ನು ರಂಜಿಸಿದ್ದಾರೆ.ಇದೀಗ ರಾಜಕೀಯಕ್ಕೆ ಧುಮುಕಿದಲ್ಲದೇ ಮುಂಬರುವ ವಿಧಾನಸಭೆ ಚುನಾವಣೆ ಅಖಾಡಕ್ಕಿಯಲು ತಯಾರಿ ನಡೆಸಿದ್ದಾರೆ.​

ಡಿಕೆಶಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ

ಕನ್ನಡ ಚಲನಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಎಸ್. ನಾರಾಯಣ್ ಹಾಗೂ ರಾಜ್ಯ ಶಿಕ್ಷಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಮಾರ್ಚ್ 16 ಕಾಂಗ್ರೆಸ್​ಗೆ ಸೇರ್ಪಡೆಯಾಗಿದ್ದರು.

ಕಳೆದ ಮೂರು ದಶಕಗಳಿಂದ ಸಿನಿಮಾ ಕ್ಷೇತ್ರದಲ್ಲಿ ಕೆಲಸ‌ ಮಾಡಿರುವೆ. ರಾಜ್​ಕುಮಾರ್, ವಿಷ್ಣುವರ್ಧನ್, ಅಂಬರೀಶ್ ಸೇರಿದಂತೆ ದೊಡ್ಡ ಸ್ಟಾರ್​ಗಳ ಜೊತೆ ಕೆಲಸ ಮಾಡಿರುವೆ. ಸಿನಿಮಾ ಕ್ಷೇತ್ರ ನನಗೆ ಎಲ್ಲವನ್ನೂ ಕೊಟ್ಟಿದೆ. ನನಗೆ ಬಹಳಷ್ಟು ಮಂದಿ ರಾಜಕೀಯ ಯಾಕೆ ಅಂತ ಪ್ರಶ್ನೆ ಮಾಡಿದರು‌. ಆ ಪ್ರಶ್ನೆ ಹಾಗೇ ಇರಲಿ‌ ಮುಂದೆ ಉತ್ತರ ಸಿಗುತ್ತೆ ಎಂದು ಕಾಂಗ್ರೆಸ್ ಸೇರ್ಪಡೆ ಬಳಿಕ ಎಸ್. ನಾರಾಯಣ್ ಹೇಳಿದ್ದರು.

​ಬಿಜೆಪಿಯಿಂದ ಸುರೇಶ್ ಕುಮಾರ್ ಕಣಕ್ಕಿಳಿಯುತ್ತಿದ್ದರೆ, ಕಾಂಗ್ರೆಸ್​ನಿಂದ ಎಸ್. ನಾರಾಯಣ್ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಆದ್ರೆ, ಕಾಂಗ್ರೆಸ್ ಹೈಕಮಾಂಡ್​ ಟಿಕೆಟ್ ನೀಡುತ್ತೋ ಇಲ್ಲೋ ಎನ್ನುವುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 7:08 pm, Wed, 16 November 22