ಬೆಂಗಳೂರು: ಮಾಜಿ ಪ್ರಧಾನ ಮಂತ್ರಿ ಹೆಚ್. ಡಿ. ದೇವೇಗೌಡ (HD Deve Gowda) ಅವರಿಗೆ ಇಂದು 91ನೇ ಹುಟ್ಟುಹಬ್ಬದ ಸಂಭ್ರಮ. ಭಾರತದ 11ನೇ ಪ್ರಧಾನ ಮಂತ್ರಿ ಆಗಿದ್ದ ಹೆಚ್. ಡಿ. ದೇವೇಗೌಡ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಹಿಡಿದು ಹಲವು ಗಣ್ಯರು ಗುರುವಾರ ಶುಭಾಶಯ ಕೋರಿದ್ದಾರೆ. ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ ಕೂಡ ಇಂದು ಸಂಜೆ ಪದ್ಮನಾಭನಗರದ ಹೆಚ್. ಡಿ. ದೇವೇಗೌಡ ನಿವಾಸಕ್ಕೆ ಹೋಗಿ ಜನ್ಮದಿನದ ಶುಭಾಶಯ ತಿಳಿಸಿದರು. ಈ ವೇಳೆ ಮಾಜಿ ಸಚಿವರಾದ ಆರ್. ಅಶೋಕ್ ಮತ್ತು ಗೋವಿಂದ ಕಾರಜೋಳ ಸಾಥ್ ನೀಡಿದರು.
ಬಳಿಕ ಮಾಧ್ಯಮದವರೊಂದಿಗೆ ಮಾಡಿದ ಹಂಗಾಮಿ ಸಿಎಂ ಬೊಮ್ಮಾಯಿ, ಪ್ರತಿ ವರ್ಷವೂ ದೇವೇಗೌಡರ ಹುಟ್ಟುಹಬ್ಬಕ್ಕೆ ಬಂದು ಶುಭಾಶಯ ಕೋರುತ್ತಿದ್ದೇವೆ. ಅದೇ ರೀತಿ ಇಂದೂ ಕೂಡಾ ಬಂದು ಶುಭಾಶಯ ಕೋರಿದ್ದೇವೆ ಎಂದು ಹೇಳಿದರು.
ಇಂದು ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಶ್ರೀ @H_D_Devegowda ಅವರ ನಿವಾಸಕ್ಕೆ ತೆರಳಿ ಅವರ ಹುಟ್ಟು ಹಬ್ಬದ ಶುಭಾಶಯ ಕೋರಿದೆನು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ @RAshokaBJP, @GovindKarjol, ಎಚ್. ಡಿ. ರೇವಣ್ಣ ಜೊತೆಗಿದ್ದರು. pic.twitter.com/hDYjyO2z93
— Basavaraj S Bommai (@BSBommai) May 18, 2023
ಕಾಂಗ್ರೆಸ್ ವಿರುದ್ಧ ಹೋರಾಟಕ್ಕೆ ಜೆಡಿಎಸ್ ಬೆಂಬಲ ಕೋರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದು, ಇವತ್ತು ಹುಟ್ಟುಹಬ್ಬಕ್ಕೆ ಶುಭ ಕೋರಲು ಅಷ್ಟೇ ಬಂದಿದ್ದೇವೆ. ಬೇರೆ ಏನೂ ಚರ್ಚೆ ನಡೆಸಿಲ್ಲ. ಇನ್ನೂ ಕೂಡಾ ಸರ್ಕಾರವೇ ರಚನೆ ಆಗಿಲ್ಲ ಎಂದರು.
ಭಾರತದ 11ನೇ ಪ್ರಧಾನಮಂತ್ರಿಗಳು, ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಹಾಗೂ ನನ್ನ ಪೂಜ್ಯ ತಂದೆಯವರಾದ ಹೆಚ್. ಡಿ. ದೇವೇಗೌಡ ಅವರಿಗೆ 91ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು ಹಾಗೂ ನನ್ನ ಭಕ್ತಿಪೂರ್ವಕ ಪ್ರಣಾಮಗಳು ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಶುಭ ಕೋರಿದ್ದಾರೆ.
ಭಾರತದ 11ನೇ ಪ್ರಧಾನಮಂತ್ರಿಗಳು, @JanataDal_S ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಹಾಗೂ ನನ್ನ ಪೂಜ್ಯ ತಂದೆಯವರಾದ ಶ್ರೀ @H_D_Devegowda ಅವರಿಗೆ 91ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು ಹಾಗೂ ನನ್ನ ಭಕ್ತಿಪೂರ್ವಕ ಪ್ರಣಾಮಗಳು. 1/2 pic.twitter.com/hRdkTDQouA
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 18, 2023
ನನ್ನ ಶಕ್ತಿ, ಪ್ರೇರಣೆ, ದಾರಿದೀಪ ಆಗಿರುವ ಅವರು, ಜೆಡಿಎಸ್ನ ಪಾಲಿನ ಮಹಾನ್ ಚೈತನ್ಯ. ದೇಶ ಮತ್ತು ಕನ್ನಡನಾಡಿಗೆ ಅವರ ಕೊಡುಗೆ ಅವಿಸ್ಮರಣೀಯ. ಅವರ ಅನುಭವಧಾರೆ ನಮಗೆಲ್ಲ ಅಮೃತಧಾರೆ. ಆ ಭಗವಂತ ಶ್ರೀಯುತರಿಗೆ ಇನ್ನೂ ಹೆಚ್ಚಿನ ಆಯುರಾರೋಗ್ಯ ಕರುಣಿಸಲಿ. ಅವರು ನಮ್ಮೆಲ್ಲರನ್ನು ಇನ್ನೂ ದೀರ್ಘಕಾಲ ಮುನ್ನಡೆಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ ಮಾಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.