ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆ: ಇಲ್ಲಿದೆ ರಾಜಕೀಯ ಲೆಕ್ಕಾಚಾರ

Karnataka Rajya Sabha Election: ಕರ್ನಾಟಕದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ದಿನಾಂಕ ನಿಗದಿಯಾಗಿದೆ. ಇದೇ ಫೆಬ್ರವರಿ 27 ಮತದಾನ ಮತ್ತು ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಹಾಗಾದ್ರೆ, ಕರ್ನಾಟಕದಲ್ಲಿ ಯಾವ ಪಕ್ಷದ ಬಲಾಬಲ ಹೇಗಿದೆ? ಯಾರು ಎಷ್ಟು ಸ್ಥಾನಗಳಲ್ಲಿ ಗೆಲ್ಲಬಹುದು? ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಲೆಕ್ಕಾಚಾರವೇನು? ಈ ಎಲ್ಲಾ ಸಂಪೂರ್ಣ ವಿವರ ಈ ಕೆಳಗಿನಂತಿದೆ.

ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆ: ಇಲ್ಲಿದೆ ರಾಜಕೀಯ ಲೆಕ್ಕಾಚಾರ
Follow us
ರಮೇಶ್ ಬಿ. ಜವಳಗೇರಾ
|

Updated on: Jan 29, 2024 | 4:52 PM

ಬೆಂಗಳೂರು, (ಜನವರಿ 29): ದೇಶದ 15 ರಾಜ್ಯಗಳ ಒಟ್ಟು 56 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. ಈ ಪೈಕಿ ಕರ್ನಾಟಕದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ (Karnataka Rajya Sabha Election) ನಡೆಯಲಿದೆ. ಬಿಜೆಪಿಯ ರಾಜೀವ್ ಚಂದ್ರಶೇಖರ್, ಕಾಂಗ್ರೆಸ್​​ನ ಡಾ.‌ ಎಲ್. ಹನುಮಂತಯ್ಯ, ಜಿ.ಸಿ. ಚಂದ್ರಶೇಖರ್ ಮತ್ತು ಸೈಯದ್ ನಾಸಿರ್ ಹುಸೇನ್ ಅವರ ಅವಧಿ ಏಪ್ರಿಲ್ 2 ರಂದು ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗವು, ಚುನಾವಣೆ ದಿನಾಂಕ ಘೋಷಿಸಿದ್ದು, ಇದೇ ಫೆಬ್ರವರಿ 27 ಮತದಾನ ಮತ್ತು ಮತ ಎಣಿಕೆ ನಡೆಯಲಿದೆ.

ಫೆಬ್ರವರಿ 8 ರಂದು ಚುನಾವಣಾ ಅಧಿಸೂಚನೆ ಹೊರಬೀಳಲಿದ್ದು, ಫೆಬ್ರವರಿ 15 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಇನ್ನು ಫೆಬ್ರವರಿ 27 ಮತದಾನ ಮತ್ತು ಮತ ಎಣಿಕೆ ಕಾರ್ಯ ನಡೆಯಲಿದೆ. ಫೆಬ್ರವರಿ 27 ರ ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅಂದೇ ಸಂಜೆ 5 ಗಂಟೆಯಿಂದ ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ: Rajya Sabha Election: ಫೆಬ್ರವರಿ 27ರಂದು 15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ

ರಾಜ್ಯಗಳಲ್ಲಿ ಗೆದ್ದವರದ್ದೇ ಪಾರುಪತ್ಯ

ರಾಜ್ಯ ವಿಧಾನಸಭೆಯಲ್ಲಿ ಹೆಚ್ಚಿನ ಸ್ಥಾನ ಹೊಂದಿರುವ ಪಕ್ಷವೇ ರಾಜ್ಯಸಭೆಯಲ್ಲಿ ಪಾರುಪತ್ಯ ಸಾಧಿಸುತ್ತದೆ. ಹೀಗಾಗಿ ರಾಜ್ಯಗಳಲ್ಲಿ ಬಹುಮತ ಸಾಧಿಸಿದ ಪಕ್ಷವೇ ಸಹಜವಾಗಿ ಹೆಚ್ಚು ಸದಸ್ಯರನ್ನು ತನ್ನ ಪಕ್ಷದಿಂದ ರಾಜ್ಯಸಭೆಗೆ ಕಳಿಸಬಹುದು.

ಮತದಾನ ಪ್ರಕ್ರಿಯೆ ನಡೆಯುವುದು ಹೇಗೆ?

ರಾಜ್ಯಸಭಾ ಚುನಾವಣೆಯಲ್ಲಿ ತಮ್ಮತಮ್ಮ ಪಕ್ಷದ ಅಧಿಕೃತ ಪ್ರತಿನಿಧಿ/ಏಜೆಂಟ್‌ಗಳಿಗೆ ತೋರಿಸಿಯೇ ಮತ ಚಲಾಯಿಸಬೇಕು. ಹಾಗಂತ, ವಿಪ್ ಉಲ್ಲಂಘಿಸಿ ಕ್ರಾಸ್ ವೋಟಿಂಗ್ ಮಾಡಬಾರದು ಎನ್ನುವ ಕಾನೂನೇನೂ ಇಲ್ಲ. ಒಂದು ವೇಳೆ ಅಡ್ಡಮತದಾನ ಮಾಡಿದರೆ ಆಯಾ ಪಕ್ಷದಿಂದ ಪಕ್ಷ ವಿರೋಧಿ ಚಟುವಟಿಕೆ ಅಡಿಯಲ್ಲಿ ಕ್ರಮಕೈಗೊಳ್ಳುವ ಅವಕಾಶವೂ ಇದೆ.

ಕರ್ನಾಟಕದಲ್ಲಿ ಹೇಗಿದೆ ಬಲಾಬಲ?

ರಾಜ್ಯಸಭೆಯ ಸದಸ್ಯರನ್ನು ರಾಜ್ಯ ವಿಧಾನಸಭೆಯ ಸದಸ್ಯರು ಆಯ್ಕೆ ಮಾಡುತ್ತಾರೆ. ಓರ್ವ ರಾಜ್ಯಸಭಾ ಅಭ್ಯರ್ಥಿ ಗೆಲ್ಲಲು 45 ಬೇಕು. ಈಗಾಗಲೇ ಕಾಂಗ್ರೆಸ್​ ಕಾಂಗ್ರೆಸ್​ ಬಳಿ 136 ವಿಧಾನಸಭಾ ಸ್ಥಾನಗಳು ಇದ್ದರೆ, ಬಿಜೆಪಿ ಬಳಿ 66 ಹಾಗೂ ಜೆಡಿಎಸ್​ 16 ಸ್ಥಾನಗಳನ್ನು ಹೊಂದಿದೆ. ಹಾಗಾಗಿ ಕಾಂಗ್ರೆಸ್​ ಮತ್ತೆ ಮೂರು ಸ್ಥಾನ ಹಾಗೂ ಬಿಜೆಪಿ 1 ಸ್ಥಾನದಲ್ಲಿ ನಿರಾಯಾಸವಾಗಿ ಗೆಲ್ಲಲಿದೆ. ಒಂದು ವೇಳೆ ಐದನೇ ಅಭ್ಯರ್ಥಿ ಕಣಕ್ಕಿಳಿದರೆ ಮಾತ್ರ ಚುನಾವಣೆ ನಡೆಯಲಿದೆ.

ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಲೆಕ್ಕಾಚಾರವೇನು?

ಕಾಂಗ್ರೆಸ್​ನ ಮೂವರು ಅಭ್ಯರ್ಥಿಗಳಿಗೆ ತಲಾ 45 ಮತಗಳ ಹಂಚಿಕೆಯಾದರೆ ಅಲ್ಲಿಗೆ ಬರೋಬ್ಬರಿ 135 ಮತಗಳು ಪೂರ್ಣಗೊಂಡು ಕೇವಲ 1 ಮತ ಮಾತ್ರ ಹೆಚ್ಚುವರಿಯಾಗಿ ಉಳಿಯಲಿದೆ. ಇನ್ನು ಬಿಜೆಪಿಯ 66 ಸ್ಥಾನಗಳ ಪೈಕಿ ಓರ್ವ ಅಭ್ಯರ್ಥಿಗೆ 45 ಮತ ಬಿದ್ದರೆ, ಇನ್ನೂ ಹೆಚ್ಚುವರಿಯಾಗಿ 21 ಮತಗಳು ಉಳಿಯಲಿವೆ. ಇನ್ನು ಜೆಡಿಎಸ್​ ಬಳಿ 16 ಮತಗಳು ಇವೆ. ಹೀಗಾಗಿ ಬಿಜೆಪಿ ತನ್ನ ಮೊದಲ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬಳಿಕ ಜೆಡಿಎಸ್​ನ 19 ಮತಗಳ ಬೆಂಬಲದೊಂದಿಗೆ 2ನೇ ಅಭ್ಯರ್ಥಿ ಗೆಲುವಿಗಾಗಿ ಕಸರತ್ತು ನಡೆಸಬಹುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ