Bhaskar Rao: ಬಿಜೆಪಿ ಸೇರ್ಪಡೆಯಾದ ಮಾಜಿ IPS ಅಧಿಕಾರಿ ಭಾಸ್ಕರ್ ರಾವ್, ಯಾವ ಕ್ಷೇತ್ರದಿಂದ ಕಣಕ್ಕೆ?

IPS ಹುದ್ದೆಗೆ ರಾಜೀನಾಮೆ ನೀಡಿ ಆಮ್ ಆದ್ಮಿ ಪಕ್ಷದ ಮೂಲಕ ರಾಜಕೀಯಕ್ಕೆ ಎಂಟ್ರಿಕೊಟ್ಟಿರುವ ಭಾಸ್ಕರ್ ರಾವ್ ಇದೀಗ ದಿಢೀರ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ಬೆಳವಣಿಗೆ ತೀವ್ರ ಕುತೂಹಲ ಮೂಡಿಸಿದೆ.

Bhaskar Rao: ಬಿಜೆಪಿ ಸೇರ್ಪಡೆಯಾದ ಮಾಜಿ IPS ಅಧಿಕಾರಿ ಭಾಸ್ಕರ್ ರಾವ್, ಯಾವ ಕ್ಷೇತ್ರದಿಂದ ಕಣಕ್ಕೆ?
ಭಾಸ್ಕರ್ ರಾವ್ ಬಿಜೆಪಿ ಸೇರ್ಪಡೆ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Mar 01, 2023 | 10:56 AM

ಬೆಂಗಳೂರು: ಮಾಜಿ IPS ಅಧಿಕಾರಿ ಭಾಸ್ಕರ್ ರಾವ್(bhaskar rao) ಅವರು ಆಮ್ ಆದ್ಮಿ ಪಕ್ಷ ತೊರೆದು ಇಂದು (ಮಾರ್ಚ್ 01) ಅಧಿಕೃತವಾಗಿ ಬಿಜೆಪಿ(BJP) ಸೇರಿದರು. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕಚೇರಿಯಲ್ಲಿ ರಾಜ್ಯ ಬಿಜೆಪಿ ಘಟಕ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾದರು. ಎಎಪಿಯಲ್ಲಿ ಪ್ರಬಲ ಹಾಗೂ ಮುಂಚೂಣಿ ನಾಯಕರಾಗಿ ಗುರುತಿಸಿಕೊಂಡಿದ್ದ ಭಾಸ್ಕರ್ ರಾವ್ ಅವರು ಬಿಜೆಪಿ ವಿರುದ್ಧ ಹಲವು ಭ್ರಷ್ಟಾಚಾರದ ಆರೋಪಗಳನ್ನು ಮಾಡಿದ್ದರು. ಆದ್ರೆ, ಇದೀಗ ಅದೇ ಬಿಜೆಪಿಗೆ ಸೇರ್ಪಡೆಯಾಗಿದ್ದು ಅಚ್ಚರಿಗೆ ಕಾರಣವಾಗಿದೆ. ಅಲ್ಲದೇ ಹಲವು ಚರ್ಚೆಗಳಿಗೆ ಗ್ರಾಸವಾಗಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮಾರ್ಚ್ 4ಕ್ಕೆ ದಾವಣಗೆರೆಯಲ್ಲಿ ನಡೆಯುವ ಸಮಾವೇಶಕ್ಕೆ ಆಗಮಿಸುತ್ತಿದ್ದಾರೆ. ಇದರ ಮೊದಲೇ ರಾಜ್ಯ ಉಪಾಧ್ಯಕ್ಷ ಪಕ್ಷ ತೊರೆದಿದ್ದು, ಎಎಪಿಗೆ ಬಿಗ್​ ಶಾಕ್​ ಆಗಿದೆ. ಇನ್ನು ಇದೇ ವೇಳೆ ಮಾತನಾಡಿದ ನಳೀನ್ ಕುಮಾರ್ ಕಟೀಲ್, ಭಾಸ್ಕರ್ ರಾವ್ ಅವರು ನಿವೃತ್ತಿ ನಂತರ ಆಪ್ ಸೇರಿ ರಾಜಕೀಯ ಅನುಭವ ಪಡೆದಿದ್ದಾರೆ. ಡಬಲ್ ಇಂಜಿನ್ ಸರ್ಕಾರದಿಂದ ಕಲ್ಯಾಣ ಕರ್ನಾಟಕ ಸಾಧ್ಯ ಎಂದು ಪಕ್ಷಕ್ಕೆ ಬಂದಿದ್ದಾರೆ. ಇವತ್ತು ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ ಪರವಾದ ಅಲೆ ಇದೆ. ಬೇರೆ ಬೇರೆ ನಾಯಕರು ಇನ್ನೂ ಬಿಜೆಪಿ ಸೇರಲು ರೆಡಿ ಆಗಿದ್ದಾರೆ. ಅವರ ಆಡಳಿತಾತ್ಮಕ ಅನುಭವ ಗಳನ್ನು ಪಾರ್ಟಿ ಸ್ವೀಕಾರ ಮಾಡುತ್ತದೆ. ಅವರು ಯಾವುದೇ ಆಸೆ ಆಕಾಂಕ್ಷೆಗಳನ್ನು ಇಟ್ಟಿಲ್ಲ. ಅವರಿಗೆ ಪಕ್ಷದಲ್ಲಿ ಒಳ್ಳೆಯದಾಗಲಿ ಎಂದು ಶುಭ ಹಾರೈಸಿದರು.

ಬಿಜೆಪಿ ಸೇರ್ಪಡೆಗೆ ಮುನ್ನ ಕಂದಾಯ ಸಚಿವ ಆರ್.ಅಶೋಕ್ ಅವರನ್ನು ಪದ್ಮನಾಭನಗರದಲ್ಲಿರುವ ಶಾಸಕರ ಕಚೇರಿಯಲ್ಲಿ ಭೇಟಿಯಾಗಿ ಸುಮಾರು 15 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದರು. ಇನ್ನು ಇದೀಗ ಅಧಿಕೃತವಾಗಿ ಭಾಸ್ಕರ್​ ರಾವ್ ಅವರು ಕಮಲ ಮುಡಿದಿದ್ದು, ಮುಂದೆ ಯಾವ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ.

ಭಾಸ್ಕರ್​ ರಾವ್​ ಅವರು ಬಸವನಗುಡಿ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.  ಈ ಹಿಂದೆ ಎಎಪಿಯಲ್ಲಿ ಇದ್ದಾಗಲೂ ಇದೇ ಕ್ಷೇತ್ರದಿಂದ ಸ್ಪರ್ಧೆಗೆ ತೀರ್ಮಾನಿಸಿದ್ದರು. ಆದ್ರೆಮ ಇದೀಗ ಹೇಳಿ ಕೇಳಿ ಬೆಂಗಳೂರಿನ ಬಸವನಗುಡಿ ಬಿಜೆಪಿಯ ಭದ್ರಕೋಟೆಯಾಗಿದೆ. ಈ ಕ್ಷೇತ್ರದಿಂದಲೇ ಭಾಸ್ಕರ್ ರಾವ್ ಸ್ಪರ್ಧಿಸಲು ಬಯಸಿದ್ದಾರೆ. ಆದರೆ ಬಸವನಗುಡಿಯಲ್ಲಿ ಈಗಾಗಲೇ ಬಿಜೆಪಿಯ ಹಾಲಿ ಶಾಸಕ ರವಿ ಸುಬ್ರಹ್ಮಣ್ಯ ಇರುವುದರಿಂದ ಕುತೂಹಲಕ್ಕೆ ಕಾರಣವಾಗಿದೆ. ಇನ್ನೊಂದು ಮೂಲಗಳ ಪ್ರಕಾರ ಭಾಸ್ಕರ್ ರಾವ್ ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಕಳುಹಿಸುವ ಪ್ಲಾನ್ ಇದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರಿನ ಯಾವುದಾದರೂ ಒಂದು ಕ್ಷೇತ್ರದ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಕಳಿಸಲಾಗುತ್ತದೆ ಎನ್ನಲಾಗಿದೆ.

ಭಾಸ್ಕರ್​ ರಾವ್ ಅವರು 1990ರ ಬ್ಯಾಚ್​​ನ ಐಪಿಎಸ್​ ಅಧಿಕಾರಿಯಾಗಿದ್ದಾರೆ. ಬೆಂಗಳೂರಿನ ಬಸವನಗುಡಿಯಲ್ಲಿ ಹುಟ್ಟಿ ಬೆಳೆದ ಅವರು 2019ರಿಂದ ಆಗಸ್ಟ್ 2020ರ ವರೆಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರ ನಂತರ ಎಡಿಜಿಪಿಯಾಗಿದ್ದ ಭಾಸ್ಕರ್ ರಾವ್ ಅವರು ನಿವೃತ್ತಿಗೆ ಇನ್ನೂ ಮೂರು ವರ್ಷ ಬಾಕಿ ಇರುವಾಗಲೇ ಕಳೆದ ವರ್ಷ ಸ್ವಯಂ ನಿವೃತ್ತಿ ಪಡೆದುಕೊಂಡರು. 32 ವರ್ಷಗಳ ಐಪಿಎಸ್ ಜೀವನಕ್ಕೆ ತೆರೆ ಎಳೆಯುತ್ತಿದ್ದೇನೆ. ನನ್ನ ಕುಟುಂಬಕ್ಕೆ, ಗೆಳೆಯರಿಗೆ, ಸಹೋದ್ಯೋಗಿಗಳಿಗೆ, ಹಿರಿ, ಕಿರಿಯರಿಗೆ, ಪಕ್ಷಾತೀತವಾಗಿ ಕರ್ನಾಟಕದ ಸರ್ಕಾರಗಳಿಗೆ ಧನ್ಯವಾದಗಳು ಎಂದು ಅವರು ಹೇಳಿದ್ದರು. ಬಳಿಕ ಭಾಸ್ಕರ್ ಅವರು ರಾಜಕೀಯದ ಕಡೆ ಮುಖ ಮಾಡಿ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಈಗಷ್ಟೇ ಅಂಬೆಗಾಲಿಡುತ್ತಿರುವ ಆಮ್​ ಆದ್ಮಿ ಪಕ್ಷ ಸೇರ್ಪಡೆಯಾಗಿದ್ದರು. ಆದರೆ ಈಗ ಕೇಸರಿ ಬಳಗ ಸೇರಿಸಿದ್ದು, ಸಂಚಲನ ಮೂಡಿಸಿದ್ದಾರೆ.

ಒಟ್ಟಿನಲ್ಲಿ ಮಾಜಿ ಐಪಿಎಸ್​ ಅಧಿಕಾರಿ ಭಾಸ್ಕರ್​ ರಾವ್ ಅವರು ಬಿಜೆಪಿಯ ಭ್ರಷ್ಟಾಚಾರದ ವಿರುದ್ಧ ಗುಡುಗಿ ಇದೀಗ ಅದೇ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಅಲ್ಲದೇ ಅವರು ಯಾವ ಕ್ಷೇತ್ರದಿಂದ ಕಣಕ್ಕಿಳಿಯುತ್ತಾರೆ ಎನ್ನುವುದನ್ನು ಕಾದುನೋಡಬೇಕಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:33 am, Wed, 1 March 23

‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು