ಕರ್ನಾಟಕ ವಿಧಾನಸಭೆ ಚುನಾವಣೆ 2023: ​ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಜೆಡಿಎಸ್

| Updated By: ರಮೇಶ್ ಬಿ. ಜವಳಗೇರಾ

Updated on: Oct 21, 2022 | 7:59 PM

ಕರ್ನಾಟಕ ವಿಧಾನಸಭೆ ಚುನಾವಣೆಗೆ ಜೆಡಿಎಸ್​ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗಿದೆ. ಚಾಮುಂಡೇಶ್ವರಿ ಸನ್ನಿದಿಯಲ್ಲಿ ಜಿಟಿಡಿ, ಎಚ್​ಡಿಡಿ ಬಿಡುಗಡೆ ಮಾಡಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ 2023: ​ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಜೆಡಿಎಸ್
JDS
Follow us on

ಮೈಸೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Election 2023) ಆರು ತಿಂಗಳು ಬಾಕಿ ಇರುವಾಗಲೇ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಭರ್ಜರಿ ಸಿದ್ಧತೆ ನಡೆಸಿವೆ. ಆದ್ರೆ, ಎರಡು ರಾಷ್ಟ್ರೀಯ ಪಕ್ಷಗಳಿಗಿಂತ ಪ್ರಾದೇಶಿಕ ಪಕ್ಷ ಜೆಡಿಎಸ್ ಒಂದು ಹೆಜ್ಜೆ ಮುಂದೆ ಹೋಗಿದ್ದು, 2023ರ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ.

ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ. ಟಿ. ದೇವೇಗೌಡ ಅವರು ಮೈಸೂರು ಜಿಲ್ಲೆಯ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು. ಶುಕ್ರವಾರ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಮತ್ತು ಜಿ. ಟಿ. ದೇವೇಗೌಡರು ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ಮೈಸೂರು ಜಿಲ್ಲೆಯ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು.

Karnataka Politics: ದೊಡ್ಡಗೌಡ್ರ ಪ್ಲಾನ್ ಸಕ್ಸಸ್: ಭಾರೀ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್-ಬಿಜೆಪಿಗೆ ಜಿಟಿಡಿ ಶಾಕ್!

ಜೆಡಿಎಸ್‌ ಜೊತೆ ಮುನಿಸಿಕೊಂಡು ಪಕ್ಷ ತೊರೆಯಲು ಮುಂದಾಗಿದ್ಧ ಶಾಸಕ ಜಿ.ಟಿ.ದೇವೇಗೌಡರ ಅವರನ್ನು ಗುರುವಾರ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಖುದ್ಧು ಭೇಟಿಯಾಗಿ ಮನವೊಲಿಸಿದ್ದರು. ಅವರು ನಡೆಸಿದ ಸಂಧಾನ ಯಶ್ವಸಿಯಾಗಿದ್ದು, ಜಿ.ಟಿ. ದೇವೇಗೌಡರು ಜೆಡಿಎಸ್‌ನಲ್ಲೇ ಉಳಿದಿದ್ದಾರೆ. ಇನ್ನೂ ಮೈಸೂರು ಚುನಾವಣಾ ಉಸ್ತುವಾರಿಯನ್ನು ಜಿ.ಟಿ ದೇವೇಗೌಡರಿಗೆ ನೀಡಲಾಗಿದೆ.

ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ. ಟಿ. ದೇವೇಗೌಡ ಮುಂದಿನ ಚುನಾವಣೆಗೆ ಚಾಮುಂಡೇಶ್ವರಿಯಿಂದಲೇ ಸ್ಪರ್ಧೆ ಮಾಡಲಿದ್ದಾರೆ. ಇನ್ನು ಪುತ್ರ ಜಿ. ಟಿ. ಹರೀಶ್ ಗೌಡಗೆ ಸಹ ಟಿಕೆಟ್ ಪಡೆಯುವಲ್ಲಿ ಜಿಟಿಡಿ ಯಶಸ್ವಿಯಾಗಿದ್ದಾರೆ.

ಈ ಹಿಂದೆ ಜೆಡಿಎಸ್​ ತೊರೆಯಲು ನಿರ್ಧರಿಸಿದ್ದ ಜಿಟಿ ದೇವೇಗೌಡ ಅವರು ತಮಗೆ ಹಾಗೂ ತಮ್ಮ ಪುತ್ರನಿಗೆ ಟಿಕೆಟ್ ನೀಡಿದರೆ ಮಾತ್ರ ನಿಮ್ಮ ಪಕ್ಷಕ್ಕೆ ಸೇರುವುದಾಗಿ ಬಿಜೆಪಿ ಹಾಗೂ ಕಾಂಗ್ರೆಸ್​ ನಾಯಕರಿಗೆ ಹೇಳಿದ್ದರು.  ಆದ್ರೆ, ದೇವೇಗೌಡ್ರ ತಂತ್ರದಿಂದ ಜಿಟಿಡಿ ಜೆಡಿಎಸ್​ನಲ್ಲೇ ಉಳಿದುಕೊಂಡಿದ್ದಾರೆ. ಅಲ್ಲದೇ ತಮ್ಮ ಪುತ್ರನಿಗೂ ಟಿಕೆಟ್ ಕೊಡಿಸುವಲ್ಲಿ ಸಕ್ಸಸ್ ಆಗಿದ್ದಾರೆ. ಆದ್ರೆ,  ಹುಣಸೂರು ಜೆಡಿಎಸ್ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮೈಸೂರು ಜಿಲ್ಲಾ ಜೆಡಿಎಸ್​ ಅಭ್ಯರ್ಥಿಗಳ ಪಟ್ಟಿ

* ಚಾಮುಂಡೇಶ್ವರಿ – ಜಿ. ಟಿ. ದೇವೇಗೌಡ

* ಹುಣಸೂರು – ಜಿ. ಟಿ. ಹರೀಶ್ ಗೌಡ

* ಕೆ. ಆರ್. ನಗರ – ಸಾ. ರಾ. ಮಹೇಶ್

* ಪಿರಿಯಾಪಟ್ಟಣ – ಕೆ. ಮಹದೇವ್

* ಟಿ. ನರಸೀಪುರ – ಅಶ್ವಿನ್

* ಎಚ್. ಡಿ. ಕೋಟೆ – ಜಯಪ್ರಕಾಶ್