AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ ಟಿಕೆಟ್​ಗಾಗಿ ಅರ್ಜಿ ಸಲ್ಲಿಸಿದ ನಟಿ ಭಾವನಾ, ಹಾಲಿ ಶಾಸಕರ ಕ್ಷೇತ್ರಕ್ಕೆ ನಲಪಾಡ್ ಅರ್ಜಿ

ಕಾಂಗ್ರೆಸ್​ ಟಿಕೆಟ್​ಗಾಗಿ ನಟಿ ಭಾವನಾ ಹಾಗೂ ಕರ್ನಾಟಕ ಕಾಂಗ್ರೆಸ್ ಯೂತ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಸಹ ಅರ್ಜಿ ಸಲ್ಲಿಸಿದ್ದಾರೆ. ಹಾಲಿ ಕಾಂಗ್ರೆಸ್ ಶಾಸಕರು ಇರುವ ಕ್ಷೇತ್ರದ ಟಿಕೆಟ್​ ಬೇಕೆಂದು ನಲಪಾಡ್ ಅರ್ಜಿ ಸಲ್ಲಿಸಿದ್ದು, ತೀವ್ರ ಕುತೂಹಲ ಮೂಡಿಸಿದೆ.

ಕಾಂಗ್ರೆಸ್​ ಟಿಕೆಟ್​ಗಾಗಿ ಅರ್ಜಿ ಸಲ್ಲಿಸಿದ ನಟಿ ಭಾವನಾ, ಹಾಲಿ ಶಾಸಕರ ಕ್ಷೇತ್ರಕ್ಕೆ ನಲಪಾಡ್ ಅರ್ಜಿ
Actress Bhavana And Mohammed Nalapad
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Nov 15, 2022 | 4:55 PM

Share

ಬೆಂಗಳೂರು: ಒಂದೆಡೆ ಕಾಂಗ್ರೆಸ್ ಮುಂಬರುವ ವಿಧಾನಸಭೆ ಚುನಾವಣೆಗೆ (Karnataka Assembly Election 2023) ಭರ್ಜರಿ ತಯಾರಿ ನಡೆಸಿದ್ರೆ, ಮತ್ತೊಂದೆಡೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್​ಗಾಗಿ (Congress Ticket) ಅರ್ಜಿ ಸಲ್ಲಿಕೆ ಜೋರಾಗಿದೆ. ಈಗಾಗಲೇ ಹಾಲಿ ಶಾಸಕರು, ಮಾಜಿ ಶಾಸಕರು ಸೇರಿದಂತೆ ಹಲವರು ಟಿಕೆಟ್​ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಇದೀಗ ನಟಿ ಭಾವನಾ ಹಾಗೂ ಕರ್ನಾಟಕ ಕಾಂಗ್ರೆಸ್ ಯೂತ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ (Mohammed Haris Nalapad) ಸಹ ಅರ್ಜಿ ಸಲ್ಲಿಸಿದ್ದಾರೆ.

ಕಾಂಗ್ರೆಸ್​ ಟಿಕೆಟ್​ಗೆ 400ಕ್ಕೂ ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆ: ಸಾವಿರಕ್ಕೂ ಹೆಚ್ಚು ಮಂದಿಯಿಂದ ಅರ್ಜಿ ಸ್ವೀಕಾರ

ಹೌದು….ನಟಿ ಭಾವನಾ ಯಶವಂತಪುರ ಕ್ಷೇತ್ರದ ಟಿಕೆಟ್​ ಬಯಸಿ ಅರ್ಜಿ ಸಲ್ಲಿದ್ದರೆ, ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಶಿವಾಜಿನಗರ ಕ್ಷೇತ್ರದ ಟಿಕೆಟ್​ಗೆ ಅರ್ಜಿ ಹಾಕಿದ್ದಾರೆ. ಈಗಾಗಲೇ ಶಿವಾಜಿನಗರದ ಹಾಲಿ ಶಾಸಕ ರಿಜ್ವಾನ ಅರ್ಷದ್​ ಇದ್ದಾರೆ. ಆದರೂ ನಲಪಾಡ್ ಈ ಬಾರಿ ಶಿವಾಜಿನಗರ ಟಿಕೆಟ್​ ತಮಗೆ ಬೇಕೆಂದು ಅರ್ಜಿ ಹಾಕಿದ್ದು, ಹಾಲಿ ಶಾಸಕರನ್ನು ಬಿಟ್ಟು ನಲಪಾಡ್​ಗೆ ಟಿಕೆಟ್ ಸಿಗುತ್ತಾ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ.

ಇನ್ನು ಯಶವಂತಪುರ ಟಿಕೆಟ್​ಗೆ ಅರ್ಜಿ ಸಲ್ಲಿಸಿರುವ ನಟಿ ಭಾವನಾ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಯಶವಂತಪುರ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದೇನೆ. ವರಿಷ್ಟರು ಟಿಕೆಟ್ ನೀಡುವ ವಿಶ್ವಾಸ ಇದೆ. ಈ ಹಿಂದೆಯೂ ನಾನು ಯಶವಂತಪುರ ವಿಧಾನಸಭಾ ಕ್ಷೇತ್ರದ ಟಿಕೆಟ್ ಕೇಳಿದ್ದೆ. ಪಕ್ಷದ ಎಲ್ಲಾ ನಾಯಕರ ಕೃಪಾಕಟಾಕ್ಷ ಇದೆ. ಶಾಸಕರಾದ್ರೆ ಜನರಿಗೆ ಹತ್ರ ಆಗಬಹುದು, ಜನರ ಸೇವೆ ಮಾಡಬಹುದು. ಟಿಕೆಟ್ ನೀಡಿದ್ರೆ ಜನ ಸಾಮಾನ್ಯರ ಧ್ವನಿಯಾಗಿ ಕೆಲಸ ಮಾಡ್ತೇನೆ ಎಂದರು.

500ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್​ ಪಡೆಯುವ ಸಲುವಾಗಿ 500ಕ್ಕೂ ಹೆಚ್ಚು ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಕಳೆದ 10 ದಿನಗಳಿಂದ ಸುಮಾರು 1100ಕ್ಕೂ ಹೆಚ್ಚು ಆಕಾಂಕ್ಷಿಗಳು 5 ಸಾವಿರ ರೂ. ಶುಲ್ಕ ಪಾವತಿಸಿ ಅರ್ಜಿಗಳನ್ನು ಖರೀದಿಸಿದ್ದಾರೆ. ಈ ಪೈಕಿ ಕೇವಲ 500 ನಾಯಕರು ಮಾತ್ರ ಠೇವಣಿ ಬಾಂಡ್‍ನೊಂದಿಗೆ ಅರ್ಜಿ ಸಲ್ಲಿಸಿದ್ದಾರೆ.

ದಿನಾಂಕ ವಿಸ್ತರಣೆ ಸಾಧ್ಯತೆ

ವಿಧಾನಸಭೆ ಟಿಕೆಟ್​ಗಾಗಿ ಅರ್ಜಿ ಸಲ್ಲಿಸಲು ಇಂದು(ನ.15) ಕೊನೆ ದಿನವಾಗಿದೆ. ಆದ್ರೆ, ಹಲವು ಶಾಸಕರು ಮತ್ತು ಟಿಕೆಟ್​ ಆಕಾಂಕ್ಷಿಗಳು ಸೇರಿದಂತೆ ಪ್ರಮುಖ ನಾಯಕರು ಇನ್ನೂ ಅರ್ಜಿ ಸಲ್ಲಿಸಿಲ್ಲ. ಈ ಹಿನ್ನೆಲೆಯಲ್ಲಿ ಕೊನೆಯ ದಿನಾಂಕ ವಿಸ್ತರಿಸುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಕಾಂಗ್ರೆಸ್ ಪಕ್ಷವು ಟಿಕೆಟ್​ಗಾಗಿ ಅರ್ಜಿಗೆ 5,000 ರೂ. ಶುಲ್ಕ ನಿಗದಿಪಡಿಸಿದ್ದು,. ಅರ್ಜಿಯೊಂದಿಗೆ 2 ಲಕ್ಷ ರೂ. ಡಿಡಿ ನೀಡಬೇಕು ಎಂದು ಕಾಂಗ್ರೆಸ್ ಷರತ್ತು ವಿಧಿಸಿದೆ.

Published On - 4:50 pm, Tue, 15 November 22