ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪಕ್ಷಗಳ ನಾಯಕರ ಪ್ರಚಾರದ ಭರಾಟೆ ಜೋರಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಸೋಮವಾರ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಪ್ರವಾಸ ಕೈಗೊಂಡಿದ್ದರು. ಇಂದು ಶೃಂಗೇರಿ, ಚಿಕ್ಕಮಗಳೂರು, ಹಾಸನಕ್ಕೆ ಭೇಟಿ ನೀಡುತ್ತಿದ್ದಾರೆ. ಮತ್ತೊಂದೆಡೆ ಬಿವೈ ವಿಜಯೇಂದ್ರ ಮಂಡ್ಯ ಪ್ರವಾಸದಲ್ಲಿದ್ದು, ಪ್ರಚಾರ ನಡೆಸುತ್ತಿದ್ದಾರೆ. ಅತ್ತ ಕಾಂಗ್ರೆಸ್ನಿಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೂಡ ಮೈಸೂರು, ವರುಣಾ ಸೇರಿ ಹಲವೆಡೆ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ರಾಜಕೀಯ ನಾಯಕರ ಆರೋಪ, ಪ್ರತ್ಯಾರೋಗಳು ಬಿರುಸುಗೊಂಡಿವೆ. ರಾಜ್ಯ ರಾಜಕೀಯ ವಿದ್ಯಮಾನಗಳ ಲೈವ್ ಅಪ್ಡೇಟ್ಸ್ ಇಲ್ಲಿವೆ.
ಐಪಿಎಸ್ ಡಿ.ರೂಪಾ ಹಾಗೂ ಐಎಎಸ್ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಉನ್ನತ ಹುದ್ದೆಯ ಅಧಿಕಾರಿಗಳು ಹೀಗೆ ಕಿತ್ತಾಡುವುದು ಸರಿಯಲ್ಲ. ಹೀಗಾಗಿ ಅಧಿಕಾರಿಗಳ ವಿರುದ್ಧ ಸರ್ಕಾರ ಕ್ರಮಕೈಗೊಂಡಿದೆ. ಪ್ರಕರಣದ ಬಗ್ಗೆ ಸರ್ಕಾರ ತನಿಖೆ ನಡೆಸಲಿದೆ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಟಿವಿ9ಗೆ ತಿಳಿಸಿದ್ದಾರೆ.
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ನಡುವಣ ಸಂಘರ್ಷಕ್ಕೆ ಸಂಬಂಧಿಸಿ ಮಹತ್ವದ ನಿರ್ಧಾರ ಕೈಗೊಂಡಿರುವ ರಾಜ್ಯ ಸರ್ಕಾರ ಇಬ್ಬರನ್ನೂ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಆದರೆ, ಯಾವ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ ಎಂಬುದನ್ನು ತಿಳಿಸಿಲ್ಲ. ಜತೆಗೆ ಐಎಎಸ್ ಅಧಿಕಾರಿ, ರೂಪಾ ಅವರ ಪತಿ ಮುನೀಶ್ ಮೌದ್ಗಿಲ್ ಅವರನ್ನೂ ವರ್ಗಾವಣೆ ಮಾಡಲಾಗಿದೆ. ಇವರನ್ನು ಡಿಪಿಆರ್ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.
ಈಗ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಲೋಕಾಯುಕ್ತವನ್ನು ದುರ್ಬಲಗೊಳಿಸಿದ್ದರು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಚಿಕ್ಕಮಗಳೂರಿನಲ್ಲಿ ಟೀಕಿಸಿದ್ದಾರೆ. ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಇದ್ದಾಗ ಪವರ್ ಕಟ್ ಕಟ್ ಇತ್ತು. ಬಿಜೆಪಿ ಸರ್ಕಾರ ಬಂದ ಮೇಲೆ 24 ಗಂಟೆ ಕರೆಂಟ್ ನೀಡಲಾಯಿತು. ಪ್ರವೀಣ್ ನೆಟ್ಟಾರು ಸಾವನ್ನಪ್ಪಿದ್ದ ಪ್ರಕರಣವನ್ನು ಕಾಂಗ್ರೆಸ್ ಪಕ್ಷ ಪ್ಯಾನಿಕ್ ಮಾಡುವ ಯತ್ನ ನಡೆಸಿತ್ತು. 1600 ಪಿಎಫ್ಐ ಕಾರ್ಯಕರ್ತರ ಕೇಸ್ ವಾಪಸ್ ಪಡೆದಿದ್ದು ಸಿದ್ದರಾಮಯ್ಯ ಕೊಡುಗೆ. ಬಿಜೆಪಿ ಸರ್ಕಾರ ಇದೀಗ ಪಿಎಫ್ ಅನ್ನು ಬ್ಯಾನ್ ಮಾಡಿದೆ
ನಾನು ಕಾಂಗ್ರೆಸ್ ಪಕ್ಷಕ್ಕೆ ಹೋಗ್ತೀನಿ ಅನ್ನುವುದು ಸುಳ್ಳು. ಬಿಜೆಪಿಯಲ್ಲಿಯೇ ಮುಂದಿನ ಚುನಾವಣೆ ಎದುರಿಸುತ್ತೇನೆ. ರಾಜಕೀಯ ಬದ್ಧ ವೈರಿಗಳು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ
ಮಂಡ್ಯ ಜಿಲ್ಲೆ ಶಿವಳ್ಳಿಯಲ್ಲಿ ಬಿಜೆಪಿ ನಾಯಕ ಬಿವೈ ವಿಜಯೇಂದ್ರಗೆ ಕಬ್ಬಿನ ಹಾರ ಹಾಕಿ ಭರ್ಜರಿ ಸ್ವಾಗತ ನೀಡಲಾಯಿತು. ಮಾಚಹಳ್ಳಿಯಲ್ಲಿ ನಿರ್ಮಾಣವಾಗಿರುವ ಶಿವಕುಮಾರಸ್ವಾಮಿ ಪುತ್ಥಳಿಯನ್ನು ವಿಜಯೇಂದ್ರ ಅನಾವರಣಗೊಳಿಸಲಿದ್ದಾರೆ.
ಮಾರ್ಚ್ ಮೊದಲ ವಾರದಲ್ಲಿ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಫೆ. 24ರಂದು ರಾಜ್ಯ ಕಾಂಗ್ರೆಸ್ ನಾಯಕರು ದೆಹಲಿಗೆ ತೆರಳಲಿದ್ದು, ಟಿಕೆಟ್ ಹಂಚಿಕೆ ಬಗ್ಗೆ ಸಭೆ ನಡೆಸಲಿದ್ದಾರೆ. ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ ನಡೆಯಲಿದೆ.
ಮೆಡಿಕಲ್ ಕಾಲೇಜು ಸಿಬ್ಬಂದಿ ನೇಮಕಾತಿ ಆದೇಶ ಪತ್ರ ನೀಡಬೇಕಿದ್ದರೆ 40 ಲಕ್ಷ ರೂ. ಕಮಿಷನ್ ನೀಡಬೇಕಾಗುತ್ತದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಶಾಸಕ ಪ್ರಿಯಾಂಕ್ ಖರ್ಗೆ ಆರೋಪ ಮಾಡಿದ್ದಾರೆ. ನೇಮಕಾತಿ ಪ್ರಾರಂಭ ಆದರೂ ಕಾಲೇಜಿಗೆ ಆರ್ಡರ್ ಕಾಪಿ ಕೊಡುತ್ತಾ ಇಲ್ಲ. ನೇಮಕಾತಿ ಮಾಡಿಕೊಂಡವರಿಗೆ ವರ್ಕ್ ಆರ್ಡರ್, ಆದೇಶ ನೀಡುತ್ತಿಲ್ಲ ಎಂದು ಅವರು ದೂರಿದ್ದಾರೆ.
ಚಾಮರಾಜನಗರ ಜಿಲ್ಲೆಯ ಮೂರು ಕ್ಷೇತ್ರಗಳಲ್ಲಿ ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ನಡೆಯಲಿದೆ. ಬೆ.11ಕ್ಕೆ ಹನೂರು, ಮ. 2 ಕ್ಕೆ ಕೊಳ್ಳೇಗಾಲ, ಸಂಜೆ 5 ಕ್ಕೆ ಗುಂಡ್ಲುಪೇಟೆ ಯಲ್ಲಿ ಸಮಾವೇಶ ನಡೆಯಲಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಸೇರಿದಂತೆ ಜಿಲ್ಲಾ ಕೈ ಮುಖಂಡರು ಭಾಗಿಯಾಗಲಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರ ನಿವಾಸಕ್ಕೆ ಆಗಮಿಸಿದರು. ಶೋಭಾ ಕರಂದ್ಲಾಜೆ, ನಳಿನ್ ಕುಮಾರ್ ಕಟೀಲ್, ಎಂ.ಎಲ್.ಸಿ ಪ್ರಾಣೆಶ್ ಜತೆಗಿದ್ದಾರೆ.
ಶೃಂಗೇರಿ ದೇವಾಲಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ ಮಂಗಳವಾರ ಬೆಳಿಗ್ಗೆ ಭೇಟಿ ನೀಡಿ ಶಾರದಾಂಬೆಯ ದರ್ಶನ ಪಡೆದರು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ ಹಾಗೂ ಇತರ ನಾಯಕರು ಜತೆಗಿದ್ದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಬಿಜೆಪಿ ನಾಯಕರು ಇಂದು ಹಾಸನಕ್ಕೆ ಭೇಟಿ ನೀಡಲಿದ್ದಾರೆ.
ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮಾಚಹಳ್ಳಿ ಗ್ರಾಮದಲ್ಲಿ ಬಿಜೆಪಿ ನಾಯಕ ಬಿ.ವೈ ವಿಜಯೇಂದ್ರ ಡಾ.ಶಿವಕುಮಾರ ಸ್ವಾಮಿಗಳ ಪುತ್ಥಳಿ ಅನಾವರಣ ಮಾಡಲಿದ್ದಾರೆ.
Published On - 9:20 am, Tue, 21 February 23