Karnataka Assembly Elections 2023: ಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ: 7 ಮಂದಿಗೆ ಟಿಕೆಟ್ ಘೋಷಣೆ
ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದ್ದು, 7 ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆ ಮಾಡಿದೆ.
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದ್ದು, 7 ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆ ಮಾಡಿದೆ. ಶನಿವಾರವಷ್ಟೇ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದ ಕಾಂಗ್ರೆಸ್ 43 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿತ್ತು. ಸಿದ್ದರಾಮಯ್ಯ ಅವರು ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿರುವ ಕೋಲಾರ ಕ್ಷೇತ್ರದ ಟಿಕೆಟ್ ಅನ್ನು ಕಾಂಗ್ರೆಸ್ ಬಾಕಿ ಇರಿಸಿಕೊಂಡಿದೆ. ಈ ಮಧ್ಯೆ, ಚಿಕ್ಕಮಗಳೂರಿನಲ್ಲಿ ಮೂಲ ಕಾಂಗ್ರೆಸ್ಸಿಗರ ವಿರೋಧದ ನಡುವೆಯೂ ಹೆಚ್ಡಿ ತಮ್ಮಯ್ಯ ಅವರಿಗೆ ಟಿಕೆಟ್ ನೀಡಲಾಗಿದೆ. ಇದರಿಂದಾಗಿ ಚಿಕ್ಕಮಗಳೂರಿನಲ್ಲಿ ಬಂಡಾಯದ ಬಿಸಿ ಕಾಂಗ್ರೆಸ್ಗೆ ತಟ್ಟುವ ಸಾಧ್ಯತೆಯೂ ಇದೆ.
ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಅವರಿಗೆ ನಿರೀಕ್ಷೆಯಂತೆಯೇ ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದ ಟಿಕೆಟ್ ನೀಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಶಿಗ್ಗಾಂವಿ ಕ್ಷೇತ್ರದಲ್ಲಿ ಮೊಹಮ್ಮದ್ ಯೂಸುಫ್ ಸವಣೂರು ಅವರನ್ನು ಕಣಕ್ಕಿಳಿಸಲಾಗಿದೆ.
ಕಾಂಗ್ರೆಸ್ ನಾಲ್ಕನೇ ಪಟ್ಟಿಯಲ್ಲಿ ಯಾರಿಗೆಲ್ಲ ಟಿಕೆಟ್?
ಕ್ಷೇತ್ರ – ಅಭ್ಯರ್ಥಿ
- ಲಿಂಗಸುಗೂರು ಕ್ಷೇತ್ರ – ದುರ್ಗಪ್ಪ ಎಸ್.ಹೂಲಗೇರಿ
- ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರ -ಜಗದೀಶ್ ಶೆಟ್ಟರ್
- ಹುಬ್ಬಳ್ಳಿ – ಧಾರವಾಡ ಪಶ್ಚಿಮ ಕ್ಷೇತ್ರ – ದೀಪಕ್ ಚಿಂಚೋರೆ
- ಶಿಗ್ಗಾಂವಿ ಕ್ಷೇತ್ರ – ಮೊಹಮ್ಮದ್ ಯೂಸುಫ್ ಸವಣೂರು
- ಹರಿಹರ ಕ್ಷೇತ್ರ – ನಂದಗಾವಿ ಶ್ರೀನಿವಾಸ
- ಚಿಕ್ಕಮಗಳೂರು ಕ್ಷೇತ್ರ – ಹೆಚ್.ಡಿ.ತಮ್ಮಯ್ಯ
- ಶ್ರವಣಬೆಳಗೊಳ ಕ್ಷೇತ್ರ – ಎಂ.ಎ.ಗೋಪಾಲಸ್ವಾಮಿ
4ನೇ ಪಟ್ಟಿಯಲ್ಲಿ ಲಿಂಗಾಯತ ಸಮುದಾಯದ 2, ಒಕ್ಕಲಿಗ, ಭೋವಿ, ಕುರುಬ ಹಾಗೂ ಮುಸ್ಲಿಂ ಸಮುದಾಯದ ತಲಾ ಒಬ್ಬರು ಟಿಕೆಟ್ ಪಡೆದಿದ್ದಾರೆ.
224 ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಈಗಾಗಲೇ ಮೊದಲ ಪಟ್ಟಿಯಲ್ಲಿ 166, ಎರಡನೇ ಪಟ್ಟಿಯಲ್ಲಿ 23, ಮೂರನೇ ಪಟ್ಟಿಯಲ್ಲಿ 43 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿತ್ತು. ಇದೀಗ ನಾಲ್ಕನೇ ಪಟ್ಟಿಯಲ್ಲಿ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದೆ. ಇನ್ನು 8 ಕ್ಷೇತ್ರಗಳ ಅಭ್ಯರ್ಥಿಗಳನ್ನು ಇನ್ನಷ್ಟೇ ಹೆಸರಿಸಬೇಕಿದೆ.
8 ಕ್ಷೇತ್ರಗಳ ಟಿಕೆಟ್ ಬಾಕಿ
ಬೆಂಗಳೂರಿನ ಪುಲಿಕೇಶಿನಗರ, ಸಿ.ವಿ.ರಾಮನ್ನಗರ, ಕೆ.ಆರ್.ಪುರಂ, ಹಾಸನ ಜಿಲ್ಲೆ ಅರಕಲಗೂಡು, ಕೋಲಾರ ಜಿಲ್ಲೆ ಮುಳಬಾಗಿಲು ಕ್ಷೇತ್ರ, ರಾಯಚೂರು ನಗರ ಕ್ಷೇತ್ರ, ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಕ್ಷೇತ್ರ, ಮಂಗಳೂರು ಉತ್ತರ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆಯನ್ನು ಕಾಂಗ್ರೆಸ್ ಬಾಕಿ ಉಳಿಸಿಕೊಂಡಿದೆ.
ಅಂತಿಮ ಆಗದ ಅರಕಲಗೂಡು ಕ್ಷೇತ್ರದ ಅಭ್ಯರ್ಥಿ
ನಾಲ್ಕನೇ ಪಟ್ಟಿಯಲ್ಲೂ ಹಾಸನ ಜಿಲ್ಲೆ ಅರಕಲಗೂಡು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಘೋಷಣೆ ಮಾಡಲಾಗಿಲ್ಲ. ಈ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಆಪ್ತರ ನಡುವೆ ಟಿಕೇಟ್ಗಾಗಿ ಪೈಪೋಟಿ ಏರ್ಪಟ್ಟಿದೆ. ಕ್ಷೇತ್ರದಲ್ಲಿ ಕೃಷ್ಣೇಗೌಡ ಪರ ಸಿದ್ದರಾಮಯ್ಯ ಒಲವು ಹೊಂದಿದ್ದರೆ ಮಾಜಿ ಪೊಲೀಸ್ ಅದಿಕಾರಿ ಶ್ರೀಧರ್ ಗೌಡಗೆ ಟಿಕೇಟ್ ಕೊಡಬೇಕೆಂದು ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ಪಟ್ಟುಹಿಡಿದಿದ್ದಾರೆ ಎನ್ನಲಾಗಿದೆ.
ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:50 pm, Tue, 18 April 23