ಕೊನೆಗೂ ವಿರೋಧ ಪಕ್ಷ ನಾಯಕನ ಆಯ್ಕೆಗೆ ಕೂಡಿಬಂತು ಮುಹೂರ್ತ, ಬಿಜೆಪಿಯಲ್ಲಿ ಯಾರಾಗ್ತಾರೆ ಪ್ರತಿಪಕ್ಷದ ನಾಯಕ?

ಕೊನೆಗೂ ಕರ್ನಾಟಕ ವಿಧಾನಸಭೆ ಪ್ರತಿಪಕ್ಷದ ನಾಯಕನ ಆಯ್ಕೆಗೆ ಮುಹೂರ್ತ ಕೂಡಿಬಂದಿದೆ. ಇದರ ನಡುವೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆಗೆ ಹೈಕಮಾಂಡ್​ ಮುಂದಾಗಿದೆ. ಹಾಗಾದ್ರೆ , ವಿರೋಧ ಪಕ್ಷದ ನಾಯಕ ಯಾರು? ರಾಜ್ಯಾಧ್ಯಕ್ಷ ಹುದ್ದೆಯಲ್ಲಿ ಯಾರೆಲ್ಲ ರೇಸ್​ನಲ್ಲಿದ್ದಾರೆ? ಇಲ್ಲಿದೆ ವಿವರ.

ಕೊನೆಗೂ ವಿರೋಧ ಪಕ್ಷ ನಾಯಕನ ಆಯ್ಕೆಗೆ ಕೂಡಿಬಂತು ಮುಹೂರ್ತ, ಬಿಜೆಪಿಯಲ್ಲಿ ಯಾರಾಗ್ತಾರೆ ಪ್ರತಿಪಕ್ಷದ ನಾಯಕ?
Follow us
|

Updated on:Jun 22, 2023 | 1:57 PM

ಚಾಮರಾಜನಗರ: ಕೊನೆಗೂ ಬಿಜೆಪಿಯಲ್ಲಿ (BJP) ವಿರೋಧ ಪಕ್ಷ ನಾಯಕನ(Karnataka assembly Opposition Leader) ಆಯ್ಕೆಗೆ ಮುಹೂರ್ತ ಕೂಡಿಬಂದಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ (Siddaramaiah) ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ತಿಂಗಳು ಕಳೆದ ಬಳಿಕ ಪ್ರತಿಪಕ್ಷ ನಾಯಕನ ಆಯ್ಕೆಗೆ ಬಿಜೆಪಿ ಮುಂದಾಗಿದೆ. ಮುಂದಿನ ತಿಂಗಳು ಅಂದರೆ ಜುಲೈ 3ರೊಳಗೆ ವಿರೋಧ ಪಕ್ಷ ನಾಯಕನ ಆಯ್ಕೆ ಮಾಡಲಾಗುತ್ತೆ ಎಂದು ಸ್ವತಃ ಸಂಸದ ಡಿವಿ ಸದಾನಂದಗೌಡ(DV Sadananda Gowda) ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಇಂದು (ಜೂನ್ 22) ಚಾಮರಾಜನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ ಸದಾನಂದಗೌಡ, ಪ್ರತಿಪಕ್ಷ ನಾಯಕನ ಆಯ್ಕೆಗೆ ನಾವು ಮಾಡುವ ತೀರ್ಮಾನ ಅಲ್ಲ. ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್​ಗೆ ಸವಾಲು ಹಾಕುವ ವ್ಯಕ್ತಿ ಬೇಕು. ಅಂತಹ ಸೂಕ್ತ ನಾಯಕನನ್ನು ಕೊಡುತ್ತೇವೆ. ಅಳೆದು ತೂಗಿ ರಾಷ್ಟ್ರೀಯ ನಾಯಕರು ವಿಪಕ್ಷ ನಾಯಕನನ್ನು ಮಾಡುತ್ತಾರೆ ಎಂದರು.

ಇದನ್ನೂ ಓದಿ: ಕೇಂದ್ರ ಗೃಹ ಅಮಿತ್​ ಶಾ ಭೇಟಿಯಾಗಿ ಒಂದು ಪ್ರಮುಖ ಬೇಡಿಕೆ ಇಟ್ಟ ಸಿದ್ದರಾಮಯ್ಯ: ಏನದು?

ಜು.3ರಿಂದ 10 ದಿನ ವಿಧಾನಸಭೆ ಅಧಿವೇಶನ ನಡೆಯಲಿದ್ದು, ಜುಲೈ 7ರಂದು ಸಿದ್ದರಾಮಯ್ಯನವರು ಈ ಅವಧಿಯ ಮೊದಲ ಬಜೆಟ್ ಮಂಡಿಸಲಿದ್ದಾರೆ. ಹೀಗಾಗಿ ಅಧಿವೇಶನ ಆರಂಭಕ್ಕೂ ಮುನ್ನ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಬಿಜೆಪಿ ಹೈಕಮಾಂಡ್​ ಮುಂದಾಗಿದೆ. ಹೀಗಾಗಿ ಯಾರನ್ನು ಮಾಡಿದರೆ ಸೂಕ್ತ ಎಂದು ಬೇರೆ ಬೇರೆ ಮಾರ್ಗಗಳಲ್ಲಿ ಚಿಂತನೆ ನಡೆಸಿದೆ. ಅಲ್ಲದೇ ಪಕ್ಷದ ಇತರೆ ನಾಯಕರುಗಳ ಅಭಿಪ್ರಾಯ ಸಂಗ್ರಹಿಸುತ್ತಿದೆ ಎನ್ನಲಾಗಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಆಧಿಕಾರಕ್ಕೆ ಬಂದು ಒಂದು ತಿಂಗಳಾದರೂ ಇದುವರೆಗೆ ಬಿಜೆಪಿಯಿಂದ ವಿರೋಧ ಪಕ್ಷದ ನಾಯಕ ಆಯ್ಕೆ ಮಾಡಲಾಗಿಲ್ಲ. ವಿರೋಧ ಪಕ್ಷದ ನಾಯಕ ಯಾರು ಆಗುತ್ತಾರೆ ಎನ್ನುವ ಚರ್ಚೆ, ಗೊಂದಲಗಳು ಬಿಜೆಪಿ ಕಾರ್ಯಕರ್ತರಲ್ಲಿ ಇದೆ. ಅಲ್ಲದೇ ಈ ಬಗ್ಗೆ ಸಮಾಜಿಕ ಜಾಲತಾಣಗಳಲ್ಲಿ ನಾನಾ ರೀತಿಯ ವ್ಯಂಗ್ಯ ಪೋಸ್ಟ್​ಗಳು ಹರಿದಾಡುತ್ತಿವೆ. ಸರ್ಕಾರ ರಚನೆ ಆಗಿದ್ದು ಆಯ್ತು. ಗ್ಯಾರಂಟಿಗಳು ಘೋಷಣೆ ಮಾಡಿದ್ದಾಯ್ತು. ಆದ್ರೆ, ಬಿಜೆಪಿ ವಿರೋಧ ಪಕ್ಷ ನಾಯಕನ ಆಯ್ಕೆ ಯಾವಾಗ ಎಂದು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ನಾಯಕರನ್ನ ಕಾಲೆಳೆಯುತ್ತಿದ್ದಾರೆ.

ವಿಧಾನಸಭೆ ವಿಪಕ್ಷ ನಾಯಕನ ಸ್ಥಾನಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ‌ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೆಸರು ಪ್ರಬಲವಾಗಿ ಕೇಳಿಬರುತ್ತಿವೆ. ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಸೂಕ್ತ ಎನ್ನುವುದು ಕಾರ್ಯಕರ್ತರ ಅಭಿಪ್ರಾಯಗಳಾವೆ. ಆದ್ರೆ, ಹೈಕಮಾಂಡ್​ ಯತ್ನಾಳ್​ ಅವರಿಗೆ ಮಣೆ ಹಾಕುವುದು ಅನುಮಾನ. ಸದನದಲ್ಲಿ ಸರ್ಕಾರವನ್ನು ಎದುರಿಸಲು ಸಂಸದೀಯ ಪಟು ಆಗಿರಬೇಕು, ಹಣಕಾಸು, ನೀರಾವರಿ ಮತ್ತಿತರ ವಿಷಯಗಳ ಬಗ್ಗೆ ಆಳ ಜ್ಞಾನ ಹೊಂದಿರಬೇಕು. ಈ ಎಲ್ಲಾ ಜ್ಞಾನ ಬಸವರಾಜ್ ಬೊಮ್ಮಾಯಿ ಅವರಲ್ಲಿದೆ. ಹೀಗಾಗಿ ಹೈಕಮಾಂಡ್​ ಬೊಮ್ಮಾಯಿ ಅವರನ್ನು ಪ್ರತಿಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡುವ ಸಾಧ್ಯತೆಗಳಿವೆ.

ನಿಕಟಪೂರ್ವ ಸಿಎಂ ಆಗಿರುವ ಕಾರಣ ವಿಪಕ್ಷ ನಾಯಕ ಸ್ಥಾನ‌ ನೀಡುವುದು ಸಂಪ್ರದಾಯವಾಗಿರುವುದು ಕೂಡಾ ಬೊಮ್ಮಾಯಿ ಅವರಿಗೆ ಪ್ಲಸ್ ಆಗಲಿದೆ. ಪಕ್ಷದ ಪದಾಧಿಕಾರಿಗಳು, ಸಂಸದರು ಮತ್ತು ಕೆಲವು ಶಾಸಕರಿಂದಲೂ ಯತ್ನಾಳ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಪ್ರಬಲ ಹಿಂದುತ್ವದ ಪ್ರತಿಪಾದನೆ ಒಂದೇ ಯತ್ನಾಳ್​ಗೆ ಪ್ಲಸ್ ಆಗಿದೆ. ಅಲ್ಲದೇ ಕಾಂಗ್ರೆಸ್ ನಾಯಕರ ಜೊತೆ ರಾಜಿಯಾಗದ ಸ್ವಭಾವವೂ ಯತ್ನಾಳ್ ಇನ್ನೊಂದು ಪ್ಲಸ್. ಈ ಮಧ್ಯೆ ತಮ್ಮ ಪ್ರಭಾವ ಬಳಸಿ ವಿಪಕ್ಷ ನಾಯಕ ಸ್ಥಾನಕ್ಕೆ ಶಾಸಕ ಅರವಿಂದ ಬೆಲ್ಲದ್ ತೀವ್ರ ಪ್ರಯತ್ನದಲ್ಲಿ ತೊಡಗಿದ್ದಾರೆ ಎಂದು ತಿಳಿದುಬಂದಿದೆ.

ವಿರೋಧ ಪಕ್ಷ ನಾಯಕನ ಆಯ್ಕೆ ನಡುವೆಯೇ ರಾಜ್ಯಾಧ್ಯಕ್ಷರ ಬದಲಾವಣೆ

ವಿರೋಧ ಪಕ್ಷದ ನಾಯಕನ ಆಯ್ಕೆ ನಡುವೆಯೇ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಮಾಡುವ ಬಗ್ಗೆ ಬಿಜೆಪಿಯಲ್ಲಿ ಚರ್ಚೆಗಳು ನಡೆದಿವೆ. ವಿಧಾನ ಮಂಡಲ ಅಧಿವೇಶನದ ಸಂದರ್ಭದಲ್ಲೇ ರಾಜ್ಯಾಧ್ಯಕ್ಷರ ಬದಲಾವಣೆ ಸಾಧ್ಯತೆ ಇದೆ ಎನ್ನಲಾಗಿದೆ. ಇದರೊಂದಿಗೆ ಹೈಕಮಾಂಡ್​ ಪ್ರತಿಪಕ್ಷದ ನಾಯಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರನ್ನು ಒಟ್ಟಿಗೆ ಆಯ್ಕೆ ಮಾಡುವ ಸಾಧ್ಯತೆಗಳಿವೆ. ಈಗಾಗಲೇ ತಮಗೆ ಅಧ್ಯಕ್ಷ ಸ್ಥಾ‌ನ ಸಾಕು ಎಂದು ನಳೀನ್ ಕುಮಾರ್ ಕಟೀಲ್ ಹೈಕಮಾಂಡ್​ ಬಳಿ ಹೇಳಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಡಾ. ಅಶ್ವಥ್ ನಾರಾಯಣ, ಸಿ.ಟಿ. ರವಿ, ಶೋಭಾ ಕರಂದ್ಲಾಜೆ ಹೆಸರುಗಳು ಕೇಳಿಬರುತ್ತಿವೆ. ಇನ್ನು ಆರ್ ಅಶೋಕ್ ಹಾಗೂ ಶಾಸಕ ಸುನೀಲ್ ಕುಮಾರ್ ಸಹ ರಾಜ್ಯಾಧ್ಯಕ್ಷ ಸ್ಥಾನಕ್ಕೆ ತೆರೆಮರೆಯಲ್ಲಿ ಕಸರತ್ತು ನಡೆಸಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 1:57 pm, Thu, 22 June 23

‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ