AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2024ಕ್ಕೆ ಮತ್ತೆ ವಿಧಾನಸಭೆ ಚುನಾವಣೆ ಖಚಿತ; ಡಿಕೆಶಿ ತಿಹಾರ್ ಜೈಲಿಗೆ ಹೋಗುವ ಕಾಲ ಸನ್ನಿಹಿತ: ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ

ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದೇ ಮಾಡಿಕೊಂಡಿದ್ದು, ಜೆಡಿಎಸ್​ನ್ಲಲಿ ದೊಡ್ಡ ಮಟ್ಟದಲ್ಲಿ ಅಸಮಾಧಾನ ಭುಗಿಲೆದಿದೆ. ಈ ಹಿನ್ನೆಲೆಯಲ್ಲಿ ಬಂಡಾಯ ಶಮನಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಸರ್ಕಸ್ ಮಾಡುತ್ತಿದ್ದಾರೆ. ಮೊನ್ನೆ ಮೊನ್ನೆಯಷ್ಟೇ ಶಾಸಕರ, ಮುಖಂಡರ ಸಭೆ ಮಾಡಿ ಶಪಥ ಮಾಡಿಸಿದ್ದ ಹೆಚ್​ಡಿಕೆ, ನಿನ್ನೆ(ಅ,08) ತಮ್ಮ ಬಿಡದಿಯ ತೋಟದ ಮನೆಯಲ್ಲಿ ರಾಮನಗರ ಜಿಲ್ಲಾ ಮುಖಂಡರ ಸಭೆ ನಡೆಸಿದ್ರು. ಈ ವೇಳೆ ಸರ್ಕಾರ ಹಾಗೂ ಡಿಕೆ ಶಿವಕುಮಾರ್ ಬಗ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ.

2024ಕ್ಕೆ ಮತ್ತೆ ವಿಧಾನಸಭೆ ಚುನಾವಣೆ ಖಚಿತ; ಡಿಕೆಶಿ ತಿಹಾರ್ ಜೈಲಿಗೆ ಹೋಗುವ ಕಾಲ ಸನ್ನಿಹಿತ: ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ
ಹೆಚ್​ಡಿ ಕುಮಾರಸ್ವಾಮಿ-ಡಿಕೆ ಶಿವಕುಮಾರ್
Sunil MH
| Edited By: |

Updated on: Oct 09, 2023 | 8:51 AM

Share

ಬೆಂಗಳೂರು, (ಅಕ್ಟೋಬರ್ 09): ಲೋಕಸಭಾ ಚುನಾವಣೆ  (Loksabha Elections 2024)ಬಳಿಕ ಸಿದ್ದರಾಂಯ್ಯನವರ (Siddaramaiah) ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ(BJP) ನಾಯಕರು ಭವಿಷ್ಯ ನುಡಿಯುತ್ತಿದ್ದರೆ, ಇತ್ತ ಜೆಡಿಎಸ್​ ನಾಯಕ ಹೆಚ್​ಡಿ ಕುಮಾರಸ್ವಾಮಿ)(HD Kumaraswamy) ಮಾತ್ರ 2024ರಲ್ಲಿ ಮತ್ತೆ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ (Karnataka Assembly Elections) ನಡೆಯಲಿದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಅಲ್ಲದೇ ಡಿಕೆ ಶಿವಕುಮಾರ್ (DK SHivakumar) ಮತ್ತೆ ತಿಹಾರ್ ಜೈಲಿಗೆ ಹೋಗಲಿದ್ದಾರೆ ಎಂದು ಭವಿಷ್ಯ ನುಡಿದಿದ್ದು, ಇದು ರಾಜ್ಯ ರಾಜಕಾರಣದಲ್ಲಿ (Karnataka Politics) ಸಂಚಲನ ಮೂಡಿಸಿದೆ.

ನಿನ್ನೆ(ಅ,08) ತಮ್ಮ ಬಿಡದಿಯ ತೋಟದ ಮನೆಯಲ್ಲಿ ರಾಮನಗರ ಜಿಲ್ಲಾ ಮುಖಂಡರ ಸಭೆಯಲ್ಲಿ ಮಾತನಾಡಿರುವ ಕುಮಾರಸ್ವಾಮಿ, ಈ ಸರ್ಕಾರದ ಪಾಪದ ಕೊಡ ತುಂಬುತ್ತಿದೆ. ಇಷ್ಟು ಕೆಟ್ಟ ಸರ್ಕಾರವನ್ನು ನಾನು ನೋಡಿಯೇ ಇಲ್ಲ. ಆಂತರಿಕ ಕಚ್ಚಾಟದಿಂದ ಈ ಸರ್ಕಾರ ಹೋಗುತ್ತದೆ. 2024ರಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುವುದು ಖಚಿತ. ಆ ಚುನಾವಣೆಗೆ ಆ ವ್ಯಕ್ತಿ (ಡಿಕೆ ಶಿವಕುಮಾರ್) ಅಭ್ಯರ್ಥಿ ಆಗುವುದೇ ಅನುಮಾನ. ಅವರು ತಿಹಾರ್ ಗೆ ಓಡುವ ಕಾಲ ಹತ್ತಿರದಲ್ಲಿ ಇದೆ ಎಂದು ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದರು.

ಇದನ್ನೂ ಓದಿ: ಚುನಾವಣಾ ಸೋಲಿನಿಂದ ಹೊರಬಾರದ ಸೋಮಣ್ಣ: ಬಸವ ಜಯಂತಿ ಕಾರ್ಯಕ್ರಮದಲ್ಲಿ ಸ್ವಪಕ್ಷದ ನಾಯಕರ ವಿರುದ್ಧವೇ ಅಸಮಾಧಾನ

ಜೋಡೆತ್ತು ಎಂದವರು ನಡುರಸ್ತೆಯಲ್ಲಿ ಕೈ ಬಿಟ್ಟರು. ಮೈತ್ರಿ ಸರ್ಕಾರ ಹೋಗಿದ್ದು ಡಿಕೆ ಶಿವಕುಮಾನಿಂದಲೇ. ಸರ್ಕಾರದ ಪತನ ಗ್ಯಾರಂಟಿ, ಅವರು ತಿಹಾರ್ ಗೆ ಓಡುವುದು ಖಚಿತ. ನಮ್ಮನ್ನು ಹಾಸನಕ್ಕೆ ಓಡಿಸಬಹುದು, ಅವರು ತಿಹಾರ್ ಗೆ ಓಡುವ ಕಾಲ ಹತ್ತಿರದಲ್ಲಿ ಇದೆ. ಒಮ್ಮೆ ತಿಹಾರ್ ನೋಡಿಕೊಂಡು ಬಂದಿದ್ದಾರೆ. ಅವರು ಮತ್ತೆ ಅಲ್ಲಿಗೆ  ಪರಮನೆಂಟಾಗಿ ಹೋದರೂ ಅಚ್ಚರಿ ಅಲ್ಲ ಎಂದು ಹೊಸ ಬಾಂಬ್ ಸಿಡಿಸಿದರು.

ನಡು ರಸ್ತೆಯಲ್ಲಿ ಕೈ ಬಿಟ್ಟು ಎತ್ತು, ಗಾಡಿಯೊಂದಿಗೆ ಪಲಾಯನ

ಪಬ್ಲಿಕ್ ನಲ್ಲಿ ನನ್ನ ಕೈ ಮೇಲೆ ಎತ್ತಿ ಜೋಡೆತ್ತು ಎಂದು ಹೇಳಿದ ನಯವಂಚಕ ಮಾತುಗಳನ್ನು ನಂಬಿ ಮೋಸ ಹೋದೆ. ಆಮೇಲೆ ಅವರು ನನ್ನನ್ನು ನಡು ರಸ್ತೆಯಲ್ಲಿ ಕೈ ಬಿಟ್ಟು ಎತ್ತು, ಗಾಡಿಯೊಂದಿಗೆ ಪಲಾಯನ ಮಾಡಿದರು. 2018 ಸರ್ಕಾರ ಹೋಗಿದ್ದು ಡಿ.ಕೆ.ಶಿವಕುಮಾರ್ ಅವರಿಂದಲೇ ಹೊರತು ನನ್ನಿಂದ ಅಲ್ಲ ಎಂದು ಗುಡುಗಿದರು.

ನನಗೂ ರಮೇಶ್ ಜಾರಕಿಹೊಳಿ ಅವರಿಗೂ ವೈಷಮ್ಯ ಇತ್ತಾ? ಬೆಳಗಾವಿ ಡಿಸಿಸಿ ಬ್ಯಾಂಕ್ ರಾಜಕೀಯಕ್ಕೆ ನಾನು ಬಲಿಪಶುವಾದೆ. ಅವರು ಬೆಳಗಾವಿ ರಾಜಕೀಯಕ್ಕೆ ಕೈಹಾಕಿದ್ದು ಯಾಕೆ? ನಾನು ಕುಮಾರಣ್ಣನ ಸರ್ಕಾರ ಉಳಿಸೋಕೆ ಪ್ರಾಮಾಣಿಕ ಪ್ರಯತ್ನ ಮಾಡಿದೆ ಎಂದು ಮೊಸಳೆ ಕಣ್ಣೀರು ಹಾಕಿ ಪ್ರಚಾರ ತೆಗೆದುಕೊಂಡರು. ಆಮೇಲೆ ನೋಡಿದರೆ ಒಳಗೊಳಗೇ ಮಾಡುವುದೆಲ್ಲವನ್ನು ಮಾಡಿದರು. ಅವರನ್ನು ನಂಬಿ ನಾನು ಕುತ್ತಿಗೆ ಕುಯ್ದುಕೊಂಡಿದ್ದೇನೆ ಎಂದು ಕಿಡಿಕಾರಿದರು.

ಡಿಕೆ ಬ್ರದರ್ಸ್​ ವಿರುದ್ಧ ವಾಗ್ದಾಳಿ

ಕೋಟೆ ಕಟ್ಟಿ ಮೆರೆದವರೆಲ್ಲ ಏನೇನೋ ಆಗಿ ಹೋದರು. ಅದು ಇವರಿಗೂ ಅನ್ವಯ ಆಗುತ್ತದೆ. ಮಂಡ್ಯ ಚುನಾವಣೆಯಲ್ಲಿ ನಿಖಿಲ್ ಅವರಿಗೆ ಮೋಸ ಮಾಡಿದ ಹಾಗೆ ಇಲ್ಲಿಯೂ ನಾವು ಮಾಡಿದ್ದರೆ ಆ ವ್ಯಕ್ತಿ (ಡಿ.ಕೆ.ಸುರೇಶ್) ಯ ಕಥೆ ಅಂದೇ ಮುಗಿದು ಹೋಗುತ್ತಿತ್ತು. ಆದರೆ, ನಾವು ಮೈತ್ರಿ ಧರ್ಮ ಪಾಲಿಸಿದೆವು. ಅವರು ನಮಗೆ ಕೇಡು ಬಗೆದರು ಎಂದು ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್​ ವಿರುದ್ಧ ವಾಗ್ದಾಳಿ ನಡೆಸಿದರು.

ಜೀವನದಲ್ಲಿ ಅವರ (ಡಿಕೆ ಶಿವಕುಮಾರ್) ಜತೆ ಎಂದೂ ರಾಜಿ ಆಗಿಲ್ಲ. ಒಮ್ಮೆ ಅವರ ಜತೆ ಸರ್ಕಾರ ಮಾಡಿದ್ದರಿಂದ ನಾನು ಈಗಲೂ ನೋವು ಅನುಭವಿಸುತ್ತಿದ್ದೇನೆ. ನಮ್ಮನ್ನು ಹಾಸನಕ್ಕೆ ಓಡಿಸಬಹುದು, ಅವರು ತಿಹಾರ್ ಗೆ ಓಡುವ ಕಾಲ ಹತ್ತಿರದಲ್ಲಿ ಇದೆ ಎಂದು ಭವಿಷ್ಯ ನುಡಿದರು.

ಮತ್ತಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​