BJP MLAs Suspended: ಸದನದಲ್ಲಿ ಅತಿರೇಕದ ವರ್ತನೆ; ಹತ್ತು ಮಂದಿ ಬಿಜೆಪಿ ಶಾಸಕರ ಅಮಾನತು

ಡಾ. ಅಶ್ವತ್ಥನಾರಾಯಣ, ವೇದವ್ಯಾಸ ಕಾಮತ್, ಅರವಿಂದ ಬೆಲ್ಲದ್​, ಧೀರಜ್ ಮುನಿರಾಜು, ಯಶಪಾಲ್ ಸುವರ್ಣ, ಸುನೀಲ್ ಕುಮಾರ್, ಆರ್. ಅಶೋಕ್, ಉಮಾನಾಥ್ ಕೋಟ್ಯಾನ್, ಅರಗ ಜ್ಞಾನೇಂದ್ರ ಹಾಗೂ ಭರತ್ ಶೆಟ್ಟಿ ಅಮಾನತಾಗಿರುವ ಬಿಜೆಪಿ ಶಾಸಕರಾಗಿದ್ದಾರೆ.

BJP MLAs Suspended: ಸದನದಲ್ಲಿ ಅತಿರೇಕದ ವರ್ತನೆ; ಹತ್ತು ಮಂದಿ ಬಿಜೆಪಿ ಶಾಸಕರ ಅಮಾನತು
ಸಾಂದರ್ಭಿಕ ಚಿತ್ರ
Follow us
ಪ್ರಸನ್ನ ಗಾಂವ್ಕರ್​
| Updated By: Ganapathi Sharma

Updated on:Jul 19, 2023 | 7:17 PM

ಬೆಂಗಳೂರು, ಜುಲೈ 19: ವಿಧಾನಸಭೆ ಕಲಾಪದ (Karnataka Assembly Session) ಸಂದರ್ಭ ಅತಿರೇಕದ ವರ್ತನೆ ತೋರಿದ ಹತ್ತು ಮಂದಿ ಬಿಜೆಪಿ ಶಾಸಕರನ್ನು (BJP MLAs) ಬುಧವಾರ ಅಮಾನತು ಮಾಡಲಾಗಿದೆ. ಪ್ರಸಕ್ತ ಅಧಿವೇಶನದ ಅವಧಿ ಮುಗಿಯುವ ವರೆಗೂ ಶಾಸಕರನ್ನು ಅಮಾನತು ಮಾಡಿ ಸ್ಪೀಕರ್ ಯುಟಿ ಖಾದರ್ (UT Khader) ಆದೇಶಿಸಿದ್ದಾರೆ. ಡಾ. ಅಶ್ವತ್ಥನಾರಾಯಣ, ವೇದವ್ಯಾಸ ಕಾಮತ್, ಅರವಿಂದ ಬೆಲ್ಲದ್​, ಧೀರಜ್ ಮುನಿರಾಜು, ಯಶಪಾಲ್ ಸುವರ್ಣ, ಸುನೀಲ್ ಕುಮಾರ್, ಆರ್. ಅಶೋಕ್, ಉಮಾನಾಥ್ ಕೋಟ್ಯಾನ್, ಅರಗ ಜ್ಞಾನೇಂದ್ರ ಹಾಗೂ ಭರತ್ ಶೆಟ್ಟಿ ಅಮಾನತಾಗಿರುವ ಬಿಜೆಪಿ ಶಾಸಕರಾಗಿದ್ದಾರೆ.

ಗುರುವಾರ ಮತ್ತು ಶುಕ್ರವಾರ 2 ದಿನಗಳ ಕಾಲ ಅಧಿವೇಶನ ಬಾಕಿ ಉಳಿದಿದೆ. ಸದನಕ್ಕೆ ಅಗೌರವ ತೋರಿದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರ ಅಮಾನತು ಮಾಡಲಾಗಿದೆ ಎಂದು ಖಾದರ್ ತಿಳಿಸಿದ್ದಾರೆ. ನಂತರ ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಿಕೆ ಮಾಡಲಾಗಿದೆ.

ನಂತರ ಅಮಾನತುಗೊಂಡವರನ್ನು ಸದನದಿಂದ ಹೊರಕಳಿಸಲು ಮಾರ್ಷಲ್ಸ್‌ ಒಳಬಂದರು. ಅಷ್ಟರಲ್ಲಿ ಬಿಜೆಪಿಯ ಇತರ ಶಾಸಕರು ಅಮಾನತುಗೊಂಡ ಶಾಸಕರಿಗೆ ತಡೆಗೋಡೆಯಾಗಿ ನಿಂತರು. ಅಮಾನತುಗೊಂಡ ಶಾಸಕರನ್ನು ಮಾರ್ಷಲ್​​ಗಳು ಬಲವಂತವಾಗಿ ಹೊರಗೆ ಕಳುಹಿಸದಂತೆ ತಡೆಯಲು ಬಿಜೆಪಿಯ ಇತರ ಶಾಸಕರು ಪ್ರಯತ್ನಿಸಿದರು. ಆದಾಗ್ಯೂ, ಶಾಸಕರನ್ನು ಬಲವಂತದಿಂದ ಹೊರದಬ್ಬುವಲ್ಲಿ ಮಾರ್ಷಲ್​ಗಳು ಯಶಸ್ವಿಯಾದರು.

ಇದನ್ನೂ ಓದಿ: Karnataka Breaking News Live: ಬಿಜೆಪಿ ಸದಸ್ಯರಿಂದ ಡೆಪ್ಯುಟಿ ಸ್ಪೀಕರ್ ಮೇಲೆ ಕಾಗದ ಪತ್ರ ಎಸೆತ: ಅಸಭ್ಯ ತೋರಿದ 10 ಬಿಜೆಪಿ ಶಾಸಕರು ಅಮಾನತು

ಬಿಜೆಪಿ ಶಾಸಕರು ಸದನದ ಬಾವಿಗಿಳಿದು ಕೆಲವು ಬಿಲ್‌ಗಳು ಸೇರಿದಂತೆ ದಾಖಲೆಗಳನ್ನು ಹರಿದು ಉಪಸಭಾಪತಿ ರುದ್ರಪ್ಪ ಲಮಾಣಿ ಅವರ ಮೇಲೆ ಎಸೆದಿದ್ದರು. ಈ ವಿಚಾರವಾಗಿ ಸದನದಲ್ಲಿ ಭಾರಿ ಗದ್ದಲ ಸೃಷ್ಟಿಯಾಗಿತ್ತು. ಬಿಜೆಪಿ ಶಾಸಕರ ವಿರುದ್ಧ ಕಾಂಗ್ರೆಸ್ ಸದಸ್ಯರು ಸ್ಪೀಕರ್​ಗೆ ದೂರು ನೀಡಿದ್ದರು. ಸಣ್ಣ ವಿಚಾರಕ್ಕೆ ಬಿಜೆಪಿಯವರು ಧರಣಿ ಮಾಡುತ್ತಾರೆ. ದಲಿತ ಅಧ್ಯಕ್ಷರ ಮೇಲೆ ಪೇಪರ್ ಎಸೆಯುತ್ತಾರೆ, ಹಲ್ಲೆಗೆ ಮುಂದಾಗುತ್ತಾರೆ. ಬಿಜೆಪಿಯವರು ಕ್ಷಮೆ ಕೇಳಬೇಕು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕ‌ ಶಿವಲಿಂಗೇಗೌಡ ಆಗ್ರಹಿಸಿದ್ದರು.

ಗದ್ದಲ ಸೃಷ್ಟಿಯಾಗಿದ್ದೇಕೆ? ಆಮೇಲೇನಾಯ್ತು?

ಬೆಂಗಳೂರಿನಲ್ಲಿ ನಡೆದಿದ್ದ ಪ್ರತಿಪಕ್ಷ ನಾಯಕರ ಸಭೆಗೆ ಆಗಮಿಸಿದ ಗಣ್ಯರನ್ನು ಸ್ವಾಗತಿಸಲು ಐಎಎಸ್ ಅಧಿಕಾರಿಗಳನ್ನು ನಿಯೋಜಿಸಿದ್ದಕ್ಕೆ ಸರಕಾರ ಉತ್ತರ ನೀಡುವಂತೆ ಆಗ್ರಹಿಸಿ ಬಿಜೆಪಿ ಮುಖಂಡರು ಧರಣಿ ನಡೆಸಿದ್ದರು. ಇದಕ್ಕೆ ಉತ್ತರಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಲವು ಗಣ್ಯರನ್ನು ರಾಜ್ಯ ಅತಿಥಿಗಳೆಂದು ಪರಿಗಣಿಸಿ ಅವರನ್ನು ಬರಮಾಡಿಕೊಳ್ಳಲು ಶಿಷ್ಟಾಚಾರದ ಪ್ರಕಾರ ಐಎಎಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಹೇಳಿದ್ದರು.

ಇದರಿಂದ ಸಮಾಧಾನಗೊಳ್ಳದ ಬಿಜೆಪಿ ಶಾಸಕರು ಧರಣಿ ಮುಂದುವರಿಸಿದ್ದರು. ಕೆಲ ಹೊತ್ತಿನ ಬಳಿಕ ಉಪಸಭಾಪತಿಯವರು ಸಭಾಂಗಣದಲ್ಲಿ ಕುಳಿತು ಚರ್ಚೆ ಮುಂದುವರಿಸಿದ್ದರು. ಮಧ್ಯಾಹ್ನದ ಊಟಕ್ಕೆ ಸದನವನ್ನು ಮುಂದೂಡದಿರುವುದಕ್ಕೆ ಅಸಮಾಧಾನಗೊಂಡ ಬಿಜೆಪಿ ಮುಖಂಡರು ಕೆಲವು ಬಿಲ್‌ಗಳು ಸೇರಿದಂತೆ ದಾಖಲೆಗಳನ್ನು ಹರಿದು ಸಭಾಧ್ಯಕ್ಷರ ಪೀಠದ ಮೇಲೆ ಎಸೆದಿದ್ದರು.

ಶಾಸಕರನ್ನು ಅಮಾನತು ಮಾಡಿರುವುದನ್ನು ಬಸವರಾಜ ಬೊಮ್ಮಾಯಿ, ಆರಗ ಜ್ಞಾನೇಂದ್ರ ಸೇರಿದಂತೆ ಇತರ ಬಿಜೆಪಿ ನಾಯಕರು ಖಂಡಿಸಿದ್ದಾರೆ. ಪ್ರತಿಪಕ್ಷಗಳ ಧ್ವನಿಯನ್ನು ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:37 pm, Wed, 19 July 23

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ